ಉಡುಪಿಯಲ್ಲಿ ಭೀಕರ ಅಪಘಾತ- ಇನೋವಾ ಗುದ್ದಿದ ರಭಸಕ್ಕೆ ಗಾಳಿಯಲ್ಲಿ ತೂರಿ ಹೋದ ಪಲ್ಸರ್ ಬೈಕ್...
ಬೈಕ್ ಮತ್ತು ಟೊಯೊಟಾ ಇನೋವಾ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಡುಪಿ ಸಮೀಪದ ಉಚ್ಚಿಲ ಸಂಕೊಳಿ ಎಂಬಲ್ಲಿ ನಡೆದಿದೆ.
ದೇಶಾದ್ಯಂತ ದಿನಂಪ್ರತಿ ಹತ್ತಾರು ಅಪಘಾತ ಪ್ರಕರಣಗಳು ಸಂಭವಿಸುತ್ತಲೇ ಇರುತ್ತವೆ. ಆದರೂ ವಾಹನ ಚಾಲನೆ ವೇಳೆ ಕೆಲವರು ಮುಂಜಾಗ್ರತೆ ವಹಿಸುವುದೇ ಇಲ್ಲಾ. ಪರಿಣಾಮ ಸಣ್ಣಪುಟ್ಟ ತಪ್ಪುಗಳೇ ದುರಂತಗಳಿಗೆ ಎಡೆಮಾಡಿಕೊಡುತ್ತವೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಅತಿಯಾದ ವೇಗ ಜೀವಕ್ಕೆ ಅಪಾಯ ಅಂತಾ ಗೊತ್ತಿದ್ರು ಜನಕ್ಕೆ ಮಾತ್ರ ಸ್ಪೀಡ್ನ ಹುಚ್ಚು ಕಡಿಮೆಯಾಗುವುದೇ ಇಲ್ಲ. ಕೆಲವರಂತೂ ತಮ್ಮ ಶೋಕಿಗಾಗಿ ಹೆಚ್ಚು ಜನ ಸಂದಣಿ ಇರುವ ಪ್ರದೇಶಗಳಲ್ಲೂ ಮಿತಿ ಮೀರಿದ ವೇಗದಲ್ಲಿ ವಾಹನಗಳನ್ನ ಚಾಲನೆ ಮಾಡ್ತಾರೆ.

ಇದರ ಪರಿಣಾಮವೇ ಭೀಕರ ಅಪಘಾತಗಳು. ಹೌದು, ಪಲ್ಸರ್ 150 ಬೈಕ್ ಮತ್ತು ಟೊಯೊಟಾ ಇನೋವಾ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಡುಪಿ ಸಮೀಪದ ಉಚ್ಚಿಲ ಸಂಕೊಳಿ ಎಂಬಲ್ಲಿ ನಡೆದಿದೆ.

ಅಂದಹಾಗೆ ಈ ಘಟನೆಯು ಕಳೆದ ಜನವರಿ 14ರಂದೇ ನಡೆದಿದ್ದರೂ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇನೋವಾ ಕಾರು ಗುದ್ದಿದ ರಭಸಕ್ಕೆ ಬಜಾಜ್ ಪಲ್ಸರ್ 150 ಬೈಕಿನಲ್ಲಿ ಹೋಗುತ್ತಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಾವಳಿಗಳ ಪ್ರಕಾರ, ರಸ್ತೆ ದಾಟುತ್ತಿದ್ದ ಪಲ್ಸರ್ 150 ಬೈಕಿಗೆ ಇನೋವಾ ಕಾರು ರಭಸವಾಗಿ ಡಿಕ್ಕಿ ಹೊಡೆದಿದ್ದು, ಕಾರು ಗುದ್ದಿದ ರಭಸಕ್ಕೆ ಬೈಕ್ ಸುಮಾರು 20 ಅಡಿಗೂ ಹೆಚ್ಚು ದೂರ ಗಾಳಿಯಲ್ಲಿ ತೂರಿ ಹೋಗಿದೆ.

ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರೂ ಇಬ್ಬರ ಬೈಕ್ ಸವಾರರ ಪ್ರಾಣಪಕ್ಷಿ ಹಾರಿಹೋಗಿತ್ತು. ಅಲ್ಲದೇ ತ್ರೀವವಾಗಿ ಗಾಯಗೊಂಡಿದ್ದ ಇನ್ನೊಬ್ಬ ಬೈಕ್ ಸವಾರನು ಸಹ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾನೆ.

ಇನ್ನು ಹೈ ಸ್ಪೀಡ್‌ನಲ್ಲಿದ್ದ ಕಾರನ್ನು ದೆಹಲಿ ನೋಂದಾಯಿತ ವಾಹನ ಎಂದು ಗುರುತಿಸಲಾಗಿದ್ದು, ಪ್ರವಾಸ ನಿಮಿತ್ತ ಉಡುಪಿಗೆ ಬಂದಿತ್ತು ಎನ್ನಲಾಗಿದೆ. ಆದ್ರೆ ಹೈ ಸ್ಪೀಡ್ ಅಮಾಯಕರ ಜೀವವನ್ನೇ ತೆಗೆದಿದ್ದು, ಕಾರು ಚಾಲಕನ ವಿರುದ್ದ ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.

ಇಂಹತ ಭೀಕರ ಅಪಘಾತಗಳ ಹೊರತಾಗಿಯು ಕೆಲವರು ಜನದಟ್ಟಣೆ ಪ್ರದೇಶಗಳಲ್ಲೂ ಹೈ ಸ್ಪೀಡ್ ಕಾರು ಚಾಲನೆ ಮಾಡುತ್ತಿರುವುದು ದುರಂತಗಳಿಗೆ ಎಡೆಮಾಡಿಕೊಡುತ್ತಿದ್ದು, ಯಾವುದೇ ಕಾರಣಕ್ಕೂ ಮುಂಜಾಗ್ರತಾ ಕ್ರಮಗಳಿಲ್ಲದೇ ವೇಗದ ವಾಹನ ಚಾಲನೆ ಮಾಡಲೇಬೇಡಿ.
ಸಿಸಿಟಿವಿಯಲ್ಲಿ ಸೆರೆಯಾದ ಭೀಕರ ಅಪಘಾತದ ವಿಡಿಯೋ ಇಲ್ಲಿದೆ ನೋಡಿ..

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:
01. ಬಾಲಕಿಗೆ ಗುದ್ದಿದ ಕೆಟಿಎಂ ಬೈಕ್- ಬೈಕ್‌ರ್‌ಗಳಿಗೆ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗ ಥಳಿತ..!!
02. ಸುಖಕರ ಕಾರು ಪ್ರಯಾಣಕ್ಕೆ ಕಡ್ಡಾಯವಾಗಿ ಬೇಕು ಈ 9 ಆಕ್ಸೆಸರಿಗಳು..
03. ಕಾರಿನ ಗೇರ್ ಸ್ಕಿಪ್ ಮಾಡುವುದರಿಂದ ಗೇರ್‌ಬಾಕ್ಸ್ ಹಾಳಾಗುತ್ತಾ ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
04. 30 ಕೋಟಿಗೂ ಹೆಚ್ಚು ಬೆಲೆಬಾಳುವ ಈ ಐಷಾರಾಮಿ ಎಸ್‌ಯುವಿ ಕಾರಿನ ವಿಶೇಷತೆ ಏನು?


Click it and Unblock the Notifications








