ಹೊಸ ಕಾರುಗಳ ಉತ್ಪಾದನೆಗಾಗಿ ಒಂದಾದ ಟೊಯೊಟಾ ಮತ್ತು ಸುಜುಕಿ ಮೋಟಾರ್ಸ್

ಜಪಾನ್ ಮೂಲದ ವಾಹನ ಉತ್ಪಾದನಾ ದಿಗ್ಗಜರಾದ ಸುಜುಕಿ ಮೋಟಾರ್ಸ್ ಮತ್ತು ಟೊಯೊಟಾ ಮೋಟಾರ್ಸ್ ಹೊಸ ಕಾರುಗಳ ಉತ್ಪಾದನೆಗಾಗಿ ಕೈಜೋಡಿಸಿದ್ದು, ಸಹಭಾಗಿತ್ವ ಆಧಾರದ ಮೇಲೆ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಉತ್ಪನ್ನಗಳನ್ನು ತಯಾರಿಸಲಿವೆ.

By Praveen Sannamani

ಕಳೆದ ವರ್ಷ ಫೆಬ್ರುವರಿಯಲ್ಲಿಯೇ ಟೊಯೊಟಾ ಮತ್ತು ಸುಜುಕಿ ಮೋಟಾರ್ಸ್ ಜಂಟಿಯಾಗಿ ಕಾರು ಉತ್ಪಾದಿಸುವ ಬಗ್ಗೆ ಮಾತುಕತೆ ನಡೆಸಿದ್ದವು. ಆದ್ರೆ ಕಾರಣಾಂತರಗಳಿಂದ ಹೊಸ ಯೋಜನೆ ಬಗ್ಗೆ ತಟಸ್ಥವಾಗಿದ್ದ ಎರಡು ಸಂಸ್ಥೆಗಳು ಇದೀಗ ಮಹತ್ವದ ನಿರ್ಣಯಕ್ಕೆ ಬಂದಿದ್ದು, ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗಾಗಿ ಹೊಸ ಒಪ್ಪಂದ ಮಾಡಿಕೊಂಡಿವೆ.

ಹೊಸ ಕಾರುಗಳ ಉತ್ಪಾದನೆಗಾಗಿ ಒಂದಾದ ಟೊಯೊಟಾ ಮತ್ತು ಸುಜುಕಿ ಮೋಟಾರ್ಸ್

ಹೊಸ ಒಪ್ಪಂದದ ಪ್ರಕಾರ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮಾಡುವುದಷ್ಟೇ ಅಲ್ಲದೇ ಕಾರುಗಳ ಮಾರಾಟಕ್ಕೂ ಪರಸ್ಪರ ಸಹಾಯ ಮಾಡುವ ಮಹತ್ವದ ಒಪ್ಪಂದಕ್ಕೂ ಟೊಯೊಟಾ ಮತ್ತು ಸುಜುಕಿ ಸಂಸ್ಥೆಗಳು ಒಪ್ಪಿಗೆ ಸೂಚಿವೆ.

ಹೊಸ ಕಾರುಗಳ ಉತ್ಪಾದನೆಗಾಗಿ ಒಂದಾದ ಟೊಯೊಟಾ ಮತ್ತು ಸುಜುಕಿ ಮೋಟಾರ್ಸ್

ಹೀಗಾಗಿ ಸುಜುಕಿ ಡೀಲರ್ಸ್‌ಗಳಲ್ಲಿ ಟೊಯೊಟಾ ಉತ್ಪನ್ನಗಳು ಮತ್ತು ಟೊಯೊಟಾ ಡೀಲರ್ಸ್‌ಗಳಲ್ಲಿ ಸುಜುಕಿ ಕಾರು ಉತ್ಪನ್ನಗಳು ದೊರೆಯಲಿದ್ದು, ಇದು ಕಾರು ಮಾರಾಟ ಜಾಲವನ್ನು ವಿಸ್ತರಿಸುವ ಉದ್ದೇಶದಿಂದ ಇಂತದೊಂದು ಒಪ್ಪಂದ ಮಾಡಿಕೊಂಡಿವೆ.

ಹೊಸ ಕಾರುಗಳ ಉತ್ಪಾದನೆಗಾಗಿ ಒಂದಾದ ಟೊಯೊಟಾ ಮತ್ತು ಸುಜುಕಿ ಮೋಟಾರ್ಸ್

ಇನ್ನ ಟೊಯೊಟಾ ಸಂಸ್ಥೆಯು ಸುಜುಕಿ ನಿರ್ಮಾಣದ ವಿಟಾರಾ ಬ್ರೆಝಾ ಮತ್ತು ಬಲೆನೊ ಕಾರುಗಳನ್ನ ಮಾರಾಟ ಮಾಡಲಿದ್ದು, ಸುಜುಕಿ ಸಂಸ್ಥೆಯು ಟೊಯೊಟಾ ಕರೊಲ್ಲಾ ಸೆಡಾನ್ ಕಾರುಗಳನ್ನು ಮಾರಾಟ ಮಾಡಲು ನಿರ್ಧರಿಸಿವೆ.

ಹೊಸ ಕಾರುಗಳ ಉತ್ಪಾದನೆಗಾಗಿ ಒಂದಾದ ಟೊಯೊಟಾ ಮತ್ತು ಸುಜುಕಿ ಮೋಟಾರ್ಸ್

ಜೊತೆಗೆ ಕಾರುಗಳ ಇಂಧನ ಕಾರ್ಯಕ್ಷಮತೆ ಮತ್ತು ಕಾರುಗಳ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕಾರುಗಳ ಬಿಡಿಭಾಗಗಳನ್ನು ಸಹ ಒದಗಿಸುವ ಒಪ್ಪಂದಕ್ಕೂ ಉಭಯ ಸಂಸ್ಥೆಗಳು ಮುಂದಾಗಿದ್ದು, ಭಾರತದಲ್ಲಿ ಆರಂಭಗೊಂಡಿರುವ 'ಮೆಕ್ ಇನ್ ಇಂಡಿಯಾ' ಯೋಜನೆ ಅಡಿ ಹೊಸ ಕಾರುಗಳ ಉತ್ಪಾದನೆಯನ್ನು ಆರಂಭಿಸಲಿವೆ.

ಹೊಸ ಕಾರುಗಳ ಉತ್ಪಾದನೆಗಾಗಿ ಒಂದಾದ ಟೊಯೊಟಾ ಮತ್ತು ಸುಜುಕಿ ಮೋಟಾರ್ಸ್

2020ರ ವೇಳೆಗೆ ಹೊಸ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸುವ ಸಾಧ್ಯತೆಗಳಿದ್ದು, ಮಧ್ಯಮ ಗಾತ್ರದ ಬಜೆಟ್‌ನಲ್ಲಿ ಉತ್ತಮ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಗೊಳಿಸುವ ಬಗ್ಗೆಯು ಹೊಸ ಸಂಶೋಧನೆಗಳನ್ನು ನಡೆಸಲಿದೆ.

ಹೊಸ ಕಾರುಗಳ ಉತ್ಪಾದನೆಗಾಗಿ ಒಂದಾದ ಟೊಯೊಟಾ ಮತ್ತು ಸುಜುಕಿ ಮೋಟಾರ್ಸ್

ಒಟ್ಟಿನಲ್ಲಿ ಕಾರು ಉತ್ಪಾದಕ ದಿಗ್ಗಜರು ಇದೀಗ ಒಂದಾಗಿದ್ದು, ಹೊಸ ಉತ್ಪನ್ನಗಳ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಸದ್ದು ಮಾಡಲಿವೆ. ಜೊತೆಗೆ ಭಾರತೀಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಮತ್ತಷ್ಟು ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರುಗಳ ರಸ್ತೆಗಿಳಿಯಲಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:

01.ಇನ್ಮುಂದೆ ರಾಂಗ್ ರೂಟ್‌ನಲ್ಲಿ ಹೋದ್ರೆ ನಿಮ್ಮ ವಾಹನಗಳ ಕಥೆ ಅಷ್ಟೇ...

02. ಭಾರತದಲ್ಲಿ 7 ಸೀಟರ್ ವ್ಯಾಗನ್ ಆರ್ ಬಿಡುಗಡೆಯಾಗುವುದು ಪಕ್ಕಾ ಅಂತೆ..!!

03. ಟ್ರಾಫಿಕ್ ರೂಲ್ಸ್ ಬ್ರೇಕ್- ಮಗನನ್ನೇ ಹಿಡಿದು ದಂಡ ವಸೂಲಿ ಮಾಡಿದ ಪೊಲೀಸ್..

04. ಗ್ರಾಹಕರೇ ಎಚ್ಚರ- ಬೈಕ್ ಖರೀದಿಸುವ ಪ್ಲ್ಯಾನ್ ಇದ್ರೆ ಇತ್ತ ಗಮನಹರಿಸಿ...

05. ರಸ್ತೆ ನಿಯಮ ಉಲ್ಲಂಘಿಸುವರಿಗೆ ಕಾದಿದೆ ಮಾರಿಹಬ್ಬ- ಯಾವ ನಿಯಮ ಉಲ್ಲಂಘನೆಗೆ ಎಷ್ಟು ದಂಡ ಗೊತ್ತಾ?

Most Read Articles

Kannada
Read more on toyota suzuki
English summary
Toyota And Suzuki Join Hands To Supply Hybrid And Other Vehicles In India.
Story first published: Thursday, March 29, 2018, 16:57 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X