ಟೊಯೊಟಾ ಯಾರಿಸ್ ಬಿಡುಗಡೆಯಾದ ಮೂರೇ ದಿನಕ್ಕೆ ದಾಖಲೆ ಪ್ರಮಾಣದ ಬುಕ್ಕಿಂಗ್...
ಕಳೆದ ಮೂರು ದಿನಗಳ ಹಿಂದಷ್ಟೇ ಟೊಯೊಟಾ ಇಂಡಿಯಾ ಸಂಸ್ಥೆಯು ಹೊಚ್ಚ ಹೊಸ ಯಾರಿಸ್ ಸೆಡಾನ್ ಕಾರುಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ವಿನೂತನ ತಂತ್ರಜ್ಞಾನ ಪ್ರೇರಿತ ಯಾರಿಸ್ ಕಾರುಗಳ ಖರೀದಿಗಾಗಿ ಸೆಡಾನ್ ಪ್ರಿಯರು ಮುಗಿಬಿದ್ದಿದ್ದಾರೆ.
ಕಳೆದ ಮೂರು ದಿನಗಳ ಹಿಂದಷ್ಟೇ ಟೊಯೊಟಾ ಇಂಡಿಯಾ ಸಂಸ್ಥೆಯು ಹೊಚ್ಚ ಹೊಸ ಯಾರಿಸ್ ಸೆಡಾನ್ ಕಾರುಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ವಿನೂತನ ತಂತ್ರಜ್ಞಾನ ಪ್ರೇರಿತ ಯಾರಿಸ್ ಕಾರುಗಳ ಖರೀದಿಗಾಗಿ ಸೆಡಾನ್ ಪ್ರಿಯರು ಮುಗಿಬಿದ್ದಿದ್ದಾರೆ.

ದೆಹಲಿ ಎಕ್ಸ್‌ಶೋರಂ ಪ್ರಕಾರ ಹೊಸ ಕಾರುಗಳ ಬೆಲೆಯನ್ನು ದೆಹಲಿ ಎಕ್ಸ್‌ಶೋರಂ ಪ್ರಕಾರ ಆರಂಭಿಕವಾಗಿ ರೂ.8.75 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯನ್ನು ರೂ. 14.07 ಲಕ್ಷಕ್ಕೆ ನಿಗದಿ ಮಾಡಲಾಗಿದ್ದು, ಹೊಸ ಕಾರುಗಳ ಖರೀದಿಗಾಗಿ ಇದುವರೆಗೆ ಬರೋಬ್ಬರಿ 5 ಸಾವಿರ ಗ್ರಾಹಕರು ರೂ.50 ಸಾವಿರ ಮುಂಗಡ ಪಾವತಿಸಿ ಬುಕ್ಕಿಂಗ್ ಮಾಡಿದ್ದಾರೆ. ಹೀಗಾಗಿ ಹೊಸ ಕಾರುಗಳ ಕಾಯುವಿಕೆ ಅವಧಿಯು ಹೆಚ್ಚುತ್ತಿದ್ದು, ಇಂದು ಹೊಸ ಕಾರಿಗಾಗಿ ಬುಕ್ಕಿಂಗ್ ಮಾಡಿದಲ್ಲಿ ಮುಂದಿನ 2 ತಿಂಗಳ ಕಾಲ ಕಾಯಲೇಬೇಕಾದ ಅನಿವಾರ್ಯತೆ ಉಂಟಾಗಿದೆ.

ಹೀಗಾಗಿ ಯಾರಿಸ್ ಕಾರುಗಳ ಬೇಡಿಕೆಗೆ ಅನುಗುಣವಾಗಿ ಪೂರೈಕೆ ಮಾಡಲು ಯೋಜಿಸಿರುವ ಟೊಯೊಟಾ ಸಂಸ್ಥೆಯು ಉತ್ಪಾದನಾ ಕಾರ್ಯವನ್ನು ತೀವ್ರಗೊಳಿಸಿದ್ದು, ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ನಿಗದಿತ ಅವಧಿಯಲ್ಲಿ ಹೊಸ ಕಾರುಗಳನ್ನು ವಿತರಣೆ ಮಾಡುವ ಭರವಸೆ ನೀಡಿದೆ.

ಇದಲ್ಲದೇ ಹೊಸ ಕಾರುಗಳಿಗಾಗಿ ಬುಕ್ಕಿಂಗ್ ಮಾಡುವ ಗ್ರಾಹಕರ ಸಂಖ್ಯೆ ಕೂಡಾ ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಿದ್ದು, ಗ್ರಾಹಕರ ಸ್ನೇಹಿ ವೈಶಿಷ್ಟ್ಯತೆಗಳನ್ನು ಹೊಂದಿರುವ ಯಾರಿಸ್ ಕಾರುಗಳು ಅತ್ಯುತ್ತಮ ಸೆಡಾನ್ ಮಾದರಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಬಹುದು.

ಯಾರಿಸ್ ಎಂಜಿನ್ ಸಾಮರ್ಥ್ಯ
ಟೊಯೊಟಾ ಯಾರಿಸ್ ಕಾರುಗಳು 1.5-ಲೀಟರ್ ಡ್ಯುಯಲ್ ವಿವಿಟಿ-ಐ ಪೆಟ್ರೋಲ್ ಎಂಜಿನ್ ಹೊಂದಿದ್ದು, ಈ ಮೂಲಕ 108-ಬಿಎಚ್‌ಪಿ ಮತ್ತು 140-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲವು. ಜೊತೆಗೆ ಹೊಸ ಕಾರುಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಗಳು ಆಯ್ಕೆಗೆ ಲಭ್ಯವಿರಲಿವೆ.

ಕಾರಿನ್ ಇಂಟಿರಿಯರ್ ಡಿಸೈನ್
ಟೊಯೊಟಾ ಯಾರಿಸ್ ಕಾರುಗಳು ಸ್ಮಾರ್ಟ್ ಕನೆಕ್ವಿಟಿ ಜೊತೆಗೆ ಅತ್ಯುತ್ತಮ ತಂತ್ರಜ್ಞಾನ ಪ್ರೇರಿತ ಡ್ಯಾಶ್‌ಬೋರ್ಡ್ ಹೊಂದಿದ್ದು, ಸಾಫ್ಟ್ ಟಚ್ ಕ್ಲೈಮೆಟ್ ಕಂಟ್ರೊಲರ್ ಬಟನ್‌ಗಳು, ವಾಟರ್ ಫಾಲ್ ಮಾದರಿಯ ಸೆಂಟರ್ ಕನ್‌ಸೊಲ್ ಡಿಸೈನ್‌ಗಳು ಸೆಡಾನ್ ಮಾದರಿಯ ಮತ್ತೊಂದು ವೈಶಿಷ್ಟ್ಯತೆಯಾಗಿದೆ.

ಹಾಗೆಯೇ 7-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಕೂಡಾ ಇದ್ದು, ಸಂಜ್ಞೆಯ ಮೂಲಕವೇ ಕಾರಿನ ಸ್ಮಾರ್ಟ್ ಕನೆಕ್ಟಿವಿಟಿಗಳನ್ನು ನಿಯಂತ್ರಿಸಬಹುದಾಗಿದೆ. ಅದಾಗ್ಯೂ ಯಾರಿಸ್ ಕಾರುಗಳಲ್ಲಿ ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಜೋಡಣೆ ಹೊಂದಿಲ್ಲ ಎನ್ನುವುದು ಮುಖ್ಯ ವಿಚಾರ.

ಇನ್ನು ಮ್ಯಾನುವಲ್ ಕಾರುಗಳ ಗೇರ್ ಸ್ಟೀಕ್‌ಗಳು ಪ್ರಿಮಿಯಂ ಬ್ಲ್ಯಾಕ್ ಲೆದರ್ ವ್ಯಾರ್ಪ್ಡ್ ಹೊಂದಿರಲಿದ್ದು, ಆಟೋಮ್ಯಾಟಿಕ್ ಗೇರ್ ಸ್ಟಿಕ್‌ಗಳು ಸಹ ಮೆಟಲ್ ಕ್ರೋಮ್ ಮಾದರಿಯ ಲೆದರ್ ಕಾಂಬಿನೇಷನ್ ಡಿಸೈನ್ ಪಡೆದುಕೊಂಡಿರಲಿವೆ. ಜೊತೆಗೆ ಕಪ್ ಹೋಲ್ಡರ್ ಸಹ ಕಾರಿನ ಇಂಟಿರಿಯರ್ ವಿನ್ಯಾಸಕ್ಕೆ ಮೆರಗು ತಂದಿವೆ.

ಕಾರಿನ ಮೈಲೇಜ್
ಯಾರಿಸ್ ಕಾರುಗಳು 42 ಲೀಟರ್ ಇಂಧನ ಟ್ಯಾಂಕ್ ಸೌಲಭ್ಯದೊಂದಿಗೆ ಸಿವಿಟಿ ಆವೃತ್ತಿಯು ಪ್ರತಿ ಲೀಟರ್ ಪೆಟ್ರೋಲ್‌ಗೆ 17.8 ಕಿ.ಮೀ ಮತ್ತು ಮ್ಯಾನುವಲ್ ಆವೃತ್ತಿಯು ಪ್ರತಿ ಲೀಟರ್ ಪೆಟ್ರೋಲ್‌ಗೆ 17.1 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತವೆ.

ಸುರಕ್ಷಾ ಸೌಲಭ್ಯಗಳು
ಯಾರಿಸ್ ಕಾರುಗಳಲ್ಲಿ ಏಳು ಏರ್‌ಬ್ಯಾಗ್‌ಗಳು, ಎಬಿಎಸ್ ಮತ್ತು ಇಬಿಡಿ, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಮ್, ಸ್ಟ್ಯಾಬಿಲಿಟಿ ಕಂಟ್ರೋಲ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಫೋರ್ ವೀಲ್ ಡಿಸ್ಕ್ ಬ್ರೇಕ್‌ಗಳು, ಹೈ ಸೋಲಾರ್ ಎನರ್ಜಿ ಅಬ್ ಸಾರ್ಬಿಂಗ್, ಇನ್‌ಫ್ರಾ ರೆಡ್ ಕಿರಣಗಳಿಗೆ ತಡೆಯೊಡ್ಡುವ ತಂತ್ರಜ್ಞಾನ, ವೈಬ್ರೇಷನ್ ಮುಕ್ತ ಗ್ಲಾಸ್‌ಗಳಿಂದಾಗಿ ನಿಶ್ಯಬ್ಧ ಕ್ಯಾಬಿನ್ ಸೌಲಭ್ಯ ಇದರಲ್ಲಿದೆ.

ಲಭ್ಯಲಿರುವ ಬಣ್ಣಗಳು
ಸೂಪರ್ ವೈಟ್, ಪರ್ಲ್ ವೈಟ್, ಸಿಲ್ವರ್, ವೈಲ್ಡ್‌ಫೈರ್ ರೆಡ್, ಫ್ಯಾಂತಮ್ ಬ್ರೌನ್ ಮತ್ತು ಗ್ರೇ ಬಣ್ಣಗಳಲ್ಲಿ ಯಾರಿಸ್ ಕಾರುಗಳನ್ನು ಖರೀದಿಸಬಹುದು.

ಒಟ್ಟಿನಲ್ಲಿ ವಿಶೇಷ ವಿನ್ಯಾಸಗಳನ್ನು ಹೊಂದಿರುವ ಯಾರಿಸ್ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಸಿಯಾಜ್, ಸ್ಕೋಡಾ ರ‍್ಯಾಪಿಡ್, ಫೋಕ್ಸ್‌ವ್ಯಾಗನ್ ವೆಂಟೊ ಮತ್ತು ಹೋಂಡಾ ಸಿಟಿ ಕಾರುಗಳಿಗೆ ಇದು ತೀವ್ರ ಪೈಪೋಟಿ ನೀಡಲಿದ್ದು, ಈ ಮೂಲಕ ಪ್ರಯಾಣಿಕ ಕಾರು ವಿಭಾಗದಲ್ಲಿ ಮತ್ತೊಮ್ಮೆ ಹೊಸ ಟ್ರೆಂಡ್ ಸೃಷ್ಠಿಸುವ ವಿಶ್ವಾಸದಲ್ಲಿದೆ.


Click it and Unblock the Notifications








