ಟೊಯೊಟಾ ಹೊಚ್ಚ ಹೊಸ ಯಾರಿಸ್ ಸೆಡಾನ್ ಖರೀದಿಗಾಗಿ ಬುಕ್ಕಿಂಗ್ ಆರಂಭ...

ಡಾನ್ ಪ್ರಿಯರ ಕುತೂಹಲಕ್ಕೆ ಕಾರಣವಾಗಿರುವ ಟೊಯೊಟಾ ಯಾರಿಸ್ ಕಾರುಗಳು ಬಿಡುಗಡೆಗೆ ಸಜ್ಜುಗೊಂಡಿದ್ದು, ಇದೀಗ ಹೊಸ ಕಾರುಗಳು ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆಗಳು ಕೂಡಾ ಆರಂಭಗೊಂಡಿವೆ.

By Praveen Sannamani

2018ರ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಳ್ಳುವ ಮೂಲಕ ಸೆಡಾನ್ ಪ್ರಿಯರ ಕುತೂಹಲಕ್ಕೆ ಕಾರಣವಾಗಿರುವ ಟೊಯೊಟಾ ಯಾರಿಸ್ ಕಾರುಗಳು ಬಿಡುಗಡೆಗೆ ಸಜ್ಜುಗೊಂಡಿದ್ದು, ಇದೀಗ ಹೊಸ ಕಾರುಗಳು ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆಗಳು ಕೂಡಾ ಆರಂಭಗೊಂಡಿವೆ.

ಟೊಯೊಟಾ ಹೊಚ್ಚ ಹೊಸ ಯಾರಿಸ್ ಸೆಡಾನ್ ಖರೀದಿಗಾಗಿ ಬುಕ್ಕಿಂಗ್ ಆರಂಭ...

ಟೊಯೊಟಾ ಸಂಸ್ಥೆಯು ಯಾರಿಸ್ ಸೆಡಾನ್ ಕಾರುಗಳನ್ನು ಮೇ ಮೊದಲ ವಾರ ಇಲ್ಲವೇ ತಿಂಗಳಾಂತ್ಯಕ್ಕೆ ಬಿಡುಗಡೆಗೊಳಿಸಬಹುದು ಎನ್ನಲಾಗಿದ್ದು, ಹೊಸ ಕಾರುಗಳ ಖರೀದಿಗಾಗಿ ರೂ.50 ಸಾವಿರ ಮುಂಗಡದೊಂದಿಗೆ ಬೆಂಗಳೂರಿನ ಪ್ರಮುಖ ಡೀಲರ್ಸ್‌ಗಳಲ್ಲಿ ಬುಕ್ಕಿಂಗ್ ಮಾಡಬಹುದಾಗಿದೆ.

ಟೊಯೊಟಾ ಹೊಚ್ಚ ಹೊಸ ಯಾರಿಸ್ ಸೆಡಾನ್ ಖರೀದಿಗಾಗಿ ಬುಕ್ಕಿಂಗ್ ಆರಂಭ...

ಸೆಡಾನ್ ಕಾರುಗಳಲ್ಲೇ ವಿಶೇಷ ವಿನ್ಯಾಸಗಳನ್ನು ಹೊಂದಿರುವ ಯಾರಿಸ್ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಸಿಯಾಜ್, ಸ್ಕೋಡಾ ರ‍್ಯಾಪಿಡ್, ಫೋಕ್ಸ್‌ವ್ಯಾಗನ್ ವೆಂಟೊ ಮತ್ತು ಹೋಂಡಾ ಸಿಟಿ ಕಾರುಗಳಿಗೆ ಇದು ತೀವ್ರ ಪೈಪೋಟಿ ನೀಡಲಿದ್ದು, ಪ್ರಯಾಣಿಕ ಕಾರು ವಿಭಾಗದಲ್ಲಿ ಹೊಸ ಟ್ರೆಂಡ್ ಸೃಷ್ಠಿಸುವ ವಿಶ್ವಾಸದಲ್ಲಿದೆ.

ಟೊಯೊಟಾ ಹೊಚ್ಚ ಹೊಸ ಯಾರಿಸ್ ಸೆಡಾನ್ ಖರೀದಿಗಾಗಿ ಬುಕ್ಕಿಂಗ್ ಆರಂಭ...

ಹೊಸ ಕಾರಿನ ವೈಶಿಷ್ಟ್ಯತೆ

ವೃತ್ತಾಕಾರದ ಫುಲ್ ಎಲ್ಇಡಿ ಹೆಡ್‌ಲ್ಯಾಂಪ್ ಹೊಂದಿರುವ ಯಾರಿಸ್, ಎಲ್ಇಡಿ ಡೇ ಟೈಮ್ ಲೈಟ್, ಫ್ರಂಟ್ ಬಂಪರ್, ಫುಲ್ ಎಲ್ಇಡಿ ಟೈಲ್ ಲೈಟ್ಸ್, ಡ್ಯುಯಲ್ ಟೋನ್ ಇಂಟಿರಿಯರ್, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಸಂಜ್ಞೆಗಳ ಮೂಲಕ ನಿಯಂತ್ರಿಸಬಹುದಾದ ತಾಂತ್ರಿಕ ಪ್ರತಿಫಲಕವನ್ನು ನೀಡಲಾಗಿದೆ.

ಟೊಯೊಟಾ ಹೊಚ್ಚ ಹೊಸ ಯಾರಿಸ್ ಸೆಡಾನ್ ಖರೀದಿಗಾಗಿ ಬುಕ್ಕಿಂಗ್ ಆರಂಭ...

ಎಂಜಿನ್ ಸಾಮರ್ಥ್ಯ

ಯಾರಿಸ್ ಕಾರು ಮಾದರಿಗಳು 1.5-ಲೀಟರ್ ಪೆಟ್ರೋಲ್ ಎಂಜಿನ್ ಪರಿಚಯಿಸಲಿರುವ ಟೊಯೊಟಾ, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಸೌಲಭ್ಯ ಹೊಂದಿರಲಿವೆ.

ಟೊಯೊಟಾ ಹೊಚ್ಚ ಹೊಸ ಯಾರಿಸ್ ಸೆಡಾನ್ ಖರೀದಿಗಾಗಿ ಬುಕ್ಕಿಂಗ್ ಆರಂಭ...

ಜೊತೆಗೆ ಇಂಧನ ಕಾರ್ಯಕ್ಷಮತೆಗೂ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ಪವರ್ ಡ್ರೈವ್ ಸೀಟ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ಆಲ್ ವೀಲ್ ಡಿಸ್ಕ್ ಬ್ರೇಕ್ ಒದಗಿಸಲಾಗಿದೆ. ಹೀಗಾಗಿ ಇದೊಂದು ಉತ್ತಮ ಸೆಡಾನ್ ಮಾದರಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಟೊಯೊಟಾ ಹೊಚ್ಚ ಹೊಸ ಯಾರಿಸ್ ಸೆಡಾನ್ ಖರೀದಿಗಾಗಿ ಬುಕ್ಕಿಂಗ್ ಆರಂಭ...

ಬೆಲೆ(ಅಂದಾಜು)

ಬೆಲೆಗಳ ಬಗೆಗೆ ನಿಖರ ಮಾಹಿತಿ ಇಲ್ಲವಾದರೂ ಯಾರಿಸ್ ಬೆಲೆಯನ್ನು ರೂ.8.50 ಲಕ್ಷದಿಂದ ರೂ.12 ಲಕ್ಷದವರೆಗೆ ನಿಗದಿಪಡಿಸಬಹುದಾದ ಸಾಧ್ಯತೆಗಳಿವೆ.

ಟೊಯೊಟಾ ಹೊಚ್ಚ ಹೊಸ ಯಾರಿಸ್ ಸೆಡಾನ್ ಖರೀದಿಗಾಗಿ ಬುಕ್ಕಿಂಗ್ ಆರಂಭ...

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಎಸ್‌ಯುವಿ ಆವೃತ್ತಿಗಳಲ್ಲಿ ತನ್ನದೇ ಆದ ಬೇಡಿಕೆ ಹೊಂದಿರುವ ಟೊಯೊಟಾ ಸಂಸ್ಥೆಯು ಸೆಡಾನ್ ವಿಭಾಗದಲ್ಲಿ ಮತ್ತಷ್ಟು ಜನಪ್ರಿಯತೆ ಪಡೆಯುವ ನಿಟ್ಟಿನಲ್ಲಿ ಹೊಸ ಉತ್ಪನ್ನಗಳನ್ನು ಪರಿಚಯಿಸುತ್ತಿದ್ದು, ಯಾರಿಸ್ ಹೊಸ ಸಂಚಲನ ಉಂಟು ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ.

More from DriveSpark

Article Published On: Monday, March 19, 2018, 18:29 [IST]
English summary
Toyota Yaris Bookings Open — Launch Details, Specs, Features And Expected Price.
Read more on toyota sedan
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+