ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಯಾರಿಸ್‌ಗೆ 5 ಸ್ಟಾರ್ ರೇಟಿಂಗ್

ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ಸುರಕ್ಷಾ ಕೌಶಲ್ಯಗಳನ್ನು ಪ್ರದರ್ಶಿಸುವ ಮೂಲಕ ಯಾರಿಸ್ ಕಾರುಗಳು 5 ಸ್ಟಾರ್ ರೇಟಿಂಗ್ ಗಿಟ್ಟಿಸಿಕೊಂಡಿವೆ.

By Praveen Sannamani

ಇದೇ ತಿಂಗಳು 18ಕ್ಕೆ ಭಾರತದಲ್ಲಿ ಟೊಯೊಟಾ ಸಂಸ್ಥೆಯ ಹೊಸ ಸೆಡಾನ್ ಕಾರು ಯಾರಿಸ್ ಬಿಡುಗಡೆಯಾಗುತ್ತಿದ್ದು, ಬಿಡುಗಡೆಗೂ ಮುನ್ನ ಹೊಸ ಕಾರುಗಳು ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ಸುರಕ್ಷಾ ಕೌಶಲ್ಯಗಳನ್ನು ಪ್ರದರ್ಶಿಸುವ ಮೂಲಕ 5 ಸ್ಟಾರ್ ರೇಟಿಂಗ್ ಗಿಟ್ಟಿಸಿಕೊಂಡಿವೆ.

ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಯಾರಿಸ್‌ಗೆ 5 ಸ್ಟಾರ್ ರೇಟಿಂಗ್

ಹೊಸ ಕಾರುಗಳಲ್ಲಿ ಒದಗಿಸಲಾಗಿರುವ ಸುರಕ್ಷಾ ವಿಚಾರವಾಗಿ ನಡೆಸಲಾಗುವ ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಟೊಯೊಟಾ ಯಾರಿಸ್ ಸೆಡಾನ್ ಕಾರುಗಳು ಪೂರ್ಣ ಪ್ರಮಾಣದ ಸುರಕ್ಷಾ ರೇಟಿಂಗ್ ಪಡೆದುಕೊಂಡಿದ್ದು, ರಸ್ತೆ ಅಪಘಾತಗಳ ಸಂದರ್ಭದಲ್ಲಿ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ಸುರಕ್ಷೆ ನೀಡುವ ಬಗ್ಗೆ ಭರವಸೆ ಹುಟ್ಟುಹಾಕಿವೆ.

ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಯಾರಿಸ್‌ಗೆ 5 ಸ್ಟಾರ್ ರೇಟಿಂಗ್

ಕಾರುಗಳು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಪಡೆದರೆ ಅದು ಹೆಚ್ಚು ಸುರಕ್ಷಿತ ಕಾರು ಎಂದರ್ಥ. ಜೊತೆಗೆ 4, 3, 2, 1, 0 ಸ್ಟಾರ್ ರೇಟಿಂಗ್ ಬಂದಲ್ಲಿ ಅನುಕ್ರಮವಾಗಿ ಉತ್ತಮ, ಖರೀದಿಗೆ ಯೋಗ್ಯ, ಸಾಧರಣ, ಅಸುರಕ್ಷಿತ ಕಾರು ಮಾದರಿ ಎಂದು ಕರೆಯಲಾಗುತ್ತದೆ.

ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಯಾರಿಸ್‌ಗೆ 5 ಸ್ಟಾರ್ ರೇಟಿಂಗ್

ಇದೀಗ ಟೊಯೊಟಾ ಯಾರಿಸ್ ಸಹ 5 ಸ್ಟಾರ್ ರೇಟಿಂಗ್ ಪಡೆಯುವ ಮೂಲಕ ಹೊಸ ಭಾರೀ ನೀರಿಕ್ಷೆ ಹುಟ್ಟುಹಾಕಿದ್ದು, ಅಪಘಾತ ಸಂದರ್ಭಗಳಲ್ಲಿ ಚಾಲಕನಿಗೆ ಹೆಚ್ಚಿನ ಸುರಕ್ಷತೆ ನೀಡುವಲ್ಲಿ ಶಕ್ತವಾಗಿದೆ. ಜೊತೆಗೆ ತನ್ನ ಪ್ರತಿಸ್ಪರ್ಧಿ ಕಾರುಗಳಿಗೆ ತೀವ್ರ ಪೈಪೋಟಿ ನೀಡಲು ಇದು ಮತ್ತಷ್ಟು ಸಹಕಾರಿಯಾಗಲಿದೆ.

ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಯಾರಿಸ್‌ಗೆ 5 ಸ್ಟಾರ್ ರೇಟಿಂಗ್

ಪ್ರತಿ ಹೊಸ ಕಾರು ಮಾದರಿಗಳಿಗೂ ಸುರಕ್ಷೆ ವಿಚಾರವಾಗಿ ಜಾಗತಿಕ ಪ್ರಮಾಣ ಪತ್ರದ ಅವಶ್ಯಕತೆಯಿದ್ದು, ಟೊಯೊಟಾ ಯಾರಿಸ್ ಕಾರುಗಳು ಪಡೆದುಕೊಂಡಿರುವ ಉತ್ತಮ ರೇಟಿಂಗ್‌ನಿಂದಾಗಿ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಎಂಬುವುದು ಖಾತ್ರಿಯಾಗಿದೆ. ಜೊತೆಗೆ ಹೊಸ ಕಾರಿನಲ್ಲಿ ಒದಗಿಸಲಾಗಿರುವ ಸುರಕ್ಷಾ ಸೌಲಭ್ಯಗಳು ಸಹ ಈಗಾಗಲೇ ಸದ್ದು ಮಾಡುತ್ತಿರುವುದು ಬಹುತೇಕ ಕಾರು ಪ್ರಿಯರಿಗೆ ಗೊತ್ತಿರುವ ವಿಚಾರ.

ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಯಾರಿಸ್‌ಗೆ 5 ಸ್ಟಾರ್ ರೇಟಿಂಗ್

ಯಾರಿಸ್ ಕಾರುಗಳಲ್ಲಿ ಏಳು ಏರ್‌ಬ್ಯಾಗ್‌ಗಳು, ಎಬಿಎಸ್ ಮತ್ತು ಇಬಿಡಿ, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಮ್, ಸ್ಟ್ಯಾಬಿಲಿಟಿ ಕಂಟ್ರೋಲ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಫೋರ್ ವೀಲ್ ಡಿಸ್ಕ್ ಬ್ರೇಕ್‌ಗಳು, ಹೈ ಸೋಲಾರ್ ಎನರ್ಜಿ ಅಬ್ ಸಾರ್ಬಿಂಗ್, ಇನ್‌ಫ್ರಾ ರೆಡ್ ಕಿರಣಗಳಿಗೆ ತಡೆಯೊಡ್ಡುವ ತಂತ್ರಜ್ಞಾನ, ವೈಬ್ರೇಷನ್‌ ಮುಕ್ತ ಗ್ಲಾಸ್‌ಗಳಿಂದಾಗಿ ನಿಶ್ಯಬ್ಧ ಕ್ಯಾಬಿನ್ ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ.

ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಯಾರಿಸ್‌ಗೆ 5 ಸ್ಟಾರ್ ರೇಟಿಂಗ್

ಹೀಗಾಗಿ ಏಷಿಯನ್ ಕ್ರ್ಯಾಶ್ ಟೆಸ್ಟ್‌ನಲ್ಲಿ ಒಟ್ಟು 100 ಅಂಕಗಳಿಗೆ 79.93 ಅಂಕಗಳನ್ನು ಗಿಟ್ಟಿಸಿಕೊಳ್ಳುವಲ್ಲಿ ಶಕ್ತವಾಗಿರುವ ಯಾರಿಸ್ ಕಾರುಗಳು ಸೇಫ್ಟಿ ಅಸಿಸ್ಟಂಟ್ ಟೆಕ್ನಾಲಜಿ ಬಳಕೆಯ ವಿಚಾರದಲ್ಲಿ 20 ಅಂಕಗಳಿಗೆ 15.28 ಅಂಕ ಪಡೆದುಕೊಂಡು ಉತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿದೆ.

ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಯಾರಿಸ್‌ಗೆ 5 ಸ್ಟಾರ್ ರೇಟಿಂಗ್

ಇನ್ನು ಟೊಯೊಟಾ ಯಾರಿಸ್ ಕಾರುಗಳು ಜೆ, ಜಿ, ವಿ ಹಾಗೂ ವಿಎಕ್ಸ್ ವೇರಿಯಂಟ್‍‍ಗಳಲ್ಲಿ ಮಾರುಕಟ್ಟೆಗೆ ಬರಲಿದ್ದು, ಎಲ್ಲಾ ವೇರಿಯಂಟ್‍‌ಗಳು ಸಹ 1.5 ಲೀಟರ್ ಪೆಟ್ರೋಲ್ ಎಂಜಿನ್ ಸಹಾಯದಿಂದ 108 ಬಿಹೆಚ್‍ಪಿ ಹಾಗು 140ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿವೆ.

ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಯಾರಿಸ್‌ಗೆ 5 ಸ್ಟಾರ್ ರೇಟಿಂಗ್

ಗ್ರಾಹಕರ ನೀರಿಕ್ಷೆಯಂತೆಯೇ ಪ್ಯಾಂಥಮ್ ಬ್ರೌನ್, ವೈಲ್ಡ್ ಫೈರ್ ರೆಡ್, ಗ್ರೇ ಮೆಟಾಲಿಕ್, ಸಿಲ್ವರ್ ಮೆಟಾಲಿಕ್, ವೈಟ್ ಪರ್ಲ್ ಕ್ರಿಸ್ಟಲ್ ಶೈನ್ ಮತ್ತು ಸೂಪರ್ ವೈಟ್ ಬಣ್ಣಗಳಲ್ಲಿ ಯಾರಿಸ್ ಕಾರುಗಳನ್ನು ಪರಿಚಯಸಲಿರುವ ಟೊಯೊಟಾ ಸಂಸ್ಥೆಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಒದಗಿಸಲಿದೆ.

ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಯಾರಿಸ್‌ಗೆ 5 ಸ್ಟಾರ್ ರೇಟಿಂಗ್

ಜೆ ವೆರಿಯಂಟ್ ಯಾರಿಸ್ ಕಾರುಗಳು ಆರಂಭಿಕವಾಗಿ ರೂ.8.75 ಲಕ್ಷ ಬೆಲೆ ಹೊಂದಿದ್ದರೇ ವಿಎಕ್ಸ್ ವೆರಿಯೆಂಟ್ ಟಾಪ್ ಎಂಡ್ ಮಾದರಿಯು ಎಕ್ಸ್‌ಶೋರಂ ಪ್ರಕಾರ ರೂ.14.07 ಲಕ್ಷಕ್ಕೆ ಬೆಲೆ ನಿಗದಿಯಾಗಿದ್ದು, ಹಲವು ವಿಶೇಷ ಸೌಲಭ್ಯಗಳೊಂದಿಗೆ ಸೆಡಾನ್ ಮಾದರಿಯಲ್ಲೇ ಅತ್ಯುತ್ತಮ ಎನ್ನಿಸಲಿದೆ.

ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಯಾರಿಸ್‌ಗೆ 5 ಸ್ಟಾರ್ ರೇಟಿಂಗ್

ಈ ಮೂಲಕ ಯಾರಿಸ್ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಸಿಯಾಜ್, ಸ್ಕೋಡಾ ರ‍್ಯಾಪಿಡ್, ಫೋಕ್ಸ್‌ವ್ಯಾಗನ್ ವೆಂಟೊ ಮತ್ತು ಹೋಂಡಾ ಸಿಟಿ ಕಾರುಗಳಿಗೆ ಇದು ತೀವ್ರ ಪೈಪೋಟಿ ನೀಡಲಿದ್ದು, ಈ ಮೂಲಕ ಪ್ರಯಾಣಿಕ ಕಾರು ವಿಭಾಗದಲ್ಲಿ ಹೊಸ ಟ್ರೆಂಡ್ ಸೃಷ್ಠಿಸುವ ವಿಶ್ವಾಸದಲ್ಲಿದೆ.

ಯಾರಿಸ್ ಸುರಕ್ಷಾ ತಂತ್ರಜ್ಞಾನ ಕುರಿತು ನಡೆಸಲಾದ ಏಷಿಯನ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ವಿಡಿಯೋ ಇಲ್ಲಿದೆ ವೀಕ್ಷಿಸಿ...

Most Read Articles

Kannada
Read more on crash test toyota sedan
English summary
Toyota Yaris Crash Test: Scores 5-Star ASEAN NCAP Safety Rating.
Story first published: Wednesday, May 16, 2018, 18:49 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X