ಬಿಡುಗಡೆಗಾಗಿ ಸಿದ್ದವಾಗಿರುವ ಮಾರುತಿ ಸುಜುಕಿ ಹೊಸ ಕಾರುಗಳು..

ಈ ವರ್ಷ ಬಿಡುಗಡೆಯಾದ ಬಹುತೇಕ ಹೊಸ ಕಾರುಗಳು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಪ್ಯಾಸೆಂಜರ್ ಕಾರು ಸರಣಿಯಲ್ಲಿ ಮಾರುತಿ ಸುಜುಕಿ ನಿರ್ಮಾಣದ ಕಾರುಗಳು ಮುಂಚೂಣಿ ಸಾಧಿಸಿವೆ.

By Praveen Sannamani

ಈ ವರ್ಷ ಬಿಡುಗಡೆಯಾದ ಬಹುತೇಕ ಹೊಸ ಕಾರುಗಳು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಪ್ಯಾಸೆಂಜರ್ ಕಾರು ಸರಣಿಯಲ್ಲಿ ಮಾರುತಿ ಸುಜುಕಿ ನಿರ್ಮಾಣದ ಕಾರುಗಳು ಮುಂಚೂಣಿ ಸಾಧಿಸಿವೆ. ಈ ಹಿನ್ನೆಲೆ ಗ್ರಾಹಕ ಸ್ನೇಹಿಯಾಗಿರುವ ಮತ್ತಷ್ಟು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆಗೊಳಿಸಲು ಮಾರುತಿ ಸುಜುಕಿ ಸಜ್ಜಾಗಿದೆ.

ಬಿಡುಗಡೆಗಾಗಿ ಸಿದ್ದವಾಗಿರುವ ಮಾರುತಿ ಸುಜುಕಿ ಹೊಸ ಕಾರುಗಳು..

ಮಾರುತಿ ಸುಜುಕಿ ಬಿಡುಗಡೆ ಮಾಡಿರುವ ಬಹುತೇಕ ಕಾರುಗಳು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಸದ್ಯ ದೇಶದಲ್ಲಿ ಮಾರಾಟವಾಗುತ್ತಿರುವ ಟಾಪ್ 10 ಕಾರುಗಳ ಪೈಕಿ ಮೊದಲ ಆರು ಸ್ಥಾನಗಳು ಮಾರುತಿ ಸುಜುಕಿ ಪಾಲಾಗಿವೆ ಅಂದ್ರೆ ನೀವು ನಂಬಲೇಬೇಕು. ಹೀಗಾಗಿ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸುತ್ತಿದ್ದು, ಹೊಸ ಕಾರುಗಳ ಮಾಹಿತಿ ಇಲ್ಲಿದೆ ನೋಡಿ.

ಬಿಡುಗಡೆಗಾಗಿ ಸಿದ್ದವಾಗಿರುವ ಮಾರುತಿ ಸುಜುಕಿ ಹೊಸ ಕಾರುಗಳು..

ಸಿಯಾಜ್ ಫೇಸ್‌ಲಿಫ್ಟ್

ಮಾರುತಿ ಸುಜುಕಿ ಸಂಸ್ಥೆಯು ತನ್ನ ಹೊಸ ಸಿಯಾಜ್ ಫೇಸ್‍ಲಿಫ್ಟ್ ಕಾರನ್ನು ಇದೇ ವರ್ಷ ಆಗಸ್ಟ್‌ನಲ್ಲಿ ಬಿಡುಗಡೆಗೊಳಿಸಲು ಮುಂದಾಗಿದ್ದು, ಹತ್ತು ಹಲವು ವಿಶೇಷತೆಗಳನ್ನು ಹೊಂದಿರುವ ಹೊಸ ಫೇಸ್‌ಲಿಫ್ಟ್ ಕಾರುಗಳು ಮತ್ತೊಮ್ಮೆ ಗ್ರಾಹಕರನ್ನು ಮೋಡಿ ಮಾಡುವ ತವಕದಲ್ಲಿದೆ.

ಬಿಡುಗಡೆಗಾಗಿ ಸಿದ್ದವಾಗಿರುವ ಮಾರುತಿ ಸುಜುಕಿ ಹೊಸ ಕಾರುಗಳು..

ಹೊಸ ಎಂಜಿನ್ ಅನ್ನು ವಿನ್ಯಾಸಗೊಳಿಸಿರುವುದು ಮಾರುತಿ ಸಿಯಾಜ್ ಫೇಸ್‍ಲಿಫ್ಟ್ ಕಾರಿನ ಪ್ರಮುಖ ಬದಲಾವಣೆಯಾಗಿದ್ದು, ಬಿಡುಗಡೆಗು ಮುನ್ನ ದೇಶದ ಪ್ರಮುಖ ರಸ್ತೆಗಳಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುವ ವೇಳೆ ಸೆಡಾನ್ ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ. ಡೀಸೆಲ್ ಮತ್ತು ಪೆಟ್ರೋಲ್ ಆವೃತ್ತಿಗಳಲ್ಲಿ ಲಭ್ಯವಿರಲಿರುವ ಸಿಯಾಜ್ ಫೇಸ್‌ಲಿಫ್ಟ್ ಕಾರುಗಳು ಈ ಬಾರಿ ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆಗೆ ಪ್ರವೇಶ ಪಡೆಯುತ್ತಿವೆ.

ಬಿಡುಗಡೆಗಾಗಿ ಸಿದ್ದವಾಗಿರುವ ಮಾರುತಿ ಸುಜುಕಿ ಹೊಸ ಕಾರುಗಳು..

ಪ್ರಸ್ತುತ ಮಾರುಕಟ್ಟೆಯಲ್ಲಿ ಸಿಯಾಜ್ ಕಾರುಗಳು 1.4-ಲೀಟರ್ ಪೆಟ್ರೋಲ್ ಮತ್ತು 1.3-ಲೀಟರ್ ಡೀಸೆಲ್ ಎಂಜಿನ್‍‌ಗಳಲ್ಲಿ ಲಭ್ಯವಿದ್ದು, ವರದಿಗಳ ಪ್ರಕಾರ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ 1.3-ಲೀಟರ್ ಡಿಸೇಲ್ ಎಂಜಿನ್ ಬದಲಾಗಿ 1.5-ಲಿಟರ್ ಡೀಸೆಲ್ ಎಂಜಿನ್ ಬಳಕೆ ಮಾಡಲಾಗುತ್ತಿದೆ.

ಬೆಲೆಗಳು(ಅಂದಾಜು): ರೂ.8 ಲಕ್ಷದಿಂದ ರೂ.12 ಲಕ್ಷ

ಈ ವರ್ಷ ಬಿಡುಗಡೆಗೊಳ್ಳುತ್ತಿರುವ ಅತ್ಯುತ್ತಮ ಕಾರುಗಳು ಯಾವವು ಗೊತ್ತಾ?

ಎರ್ಟಿಗಾ ಫೇಸ್‌ಲಿಫ್ಟ್

ಸದ್ಯ ಇಂಡೋನೇಷ್ಯಾ ಅಂತಾರಾಷ್ಟ್ರೀಯ ಮೋಟಾರ್ ಮೇಳದಲ್ಲಿ ಪ್ರದರ್ಶನಗೊಂಡಿರುವ ಮಾರುತಿ ಸುಜುಕಿ ಎರ್ಟಿಗಾ ಫೇಸ್‌ಲಿಫ್ಟ್ ಆವೃತ್ತಿಗಳು ಎಂಪಿವಿ ಕಾರು ಪ್ರಿಯರನ್ನು ತನ್ನತ್ತ ಸೆಳೆಯುತ್ತಿದ್ದು, ಈ ಹಿಂದಿನ ಕಾರು ಮಾದರಿಗಿಂತ ಸಾಕಷ್ಟು ಬದಲಾವಣೆಯೊಂದಿಗೆ ಮಾರುಕಟ್ಟೆಗೆ ಪ್ರವೇಶ ಪಡೆಯುತ್ತಿದೆ.

ಈ ವರ್ಷ ಬಿಡುಗಡೆಗೊಳ್ಳುತ್ತಿರುವ ಅತ್ಯುತ್ತಮ ಕಾರುಗಳು ಯಾವವು ಗೊತ್ತಾ?

ಈ ಹಿಂದಿನ ಮಾದರಿಗಿಂತ ಉದ್ದಳತೆಯಲ್ಲಿ ಹೆಚ್ಚಿನ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿರುವ ಎರ್ಟಿಗಾ ಫೇಸ್‌ಲಿಫ್ಟ್ ಕಾರುಗಳ ಕ್ಯಾಬಿನ್ ಸ್ಪೆಸ್ ಕೂಡಾ ಮೂಲ ಮಾದರಿಗಿಂತ ಹೆಚ್ಚಿರಲಿವೆ ಎನ್ನಲಾಗಿದೆ. ಜೊತೆಗೆ ಕಾರಿನ ವಿಂಡ್‌ಸ್ಕ್ರೀನ್ ಅಳತೆಯಲ್ಲೂ ಬದಲಾವಣೆ ತರಲಾಗಿದ್ದು, ಹೊಸ ವಿನ್ಯಾಸದ ಅಲಾಯ್ ಚಕ್ರಗಳು ಮತ್ತು ಗುರುತರ ಬಾಡಿ ವಿನ್ಯಾಸಗಳು ಎರ್ಟಿಗಾ ಫೇಸ್‌ಲಿಫ್ಟ್ ಎಂಪಿವಿ ಕಾರಿನ ಲುಕ್ ಹೆಚ್ಚಿಸಿವೆ.

ಈ ವರ್ಷ ಬಿಡುಗಡೆಗೊಳ್ಳುತ್ತಿರುವ ಅತ್ಯುತ್ತಮ ಕಾರುಗಳು ಯಾವವು ಗೊತ್ತಾ?

ಸದ್ಯ ಎರ್ಟಿಗಾ ಮಾದರಿಗಳು 1.4-ಲೀಟರ್ ಪೆಟ್ರೋಲ್ ಮತ್ತು 1.3-ಲೀಟರ್ ಡೀಸೆಲ್ ಎಂಜಿನ್‌ನಲ್ಲಿ ಲಭ್ಯವಿದ್ದು, ಎರ್ಟಿಗಾ ಫೇಸ್‌ಲಿಫ್ಟ್ ಮಾದರಿಗಳು ಹೊಸದಾಗಿ ಮೈಲ್ಡ್ ಹೈಬ್ರಿಡ್ ಟೆಕ್ನಾಲಜಿ ಪ್ರೇರಿತ 1.5-ಲೀಟರ್ ಡೀಸೆಲ್ ಎಂಜಿನ್ ಪಡೆಯಲಿವೆ.

ಈ ವರ್ಷ ಬಿಡುಗಡೆಗೊಳ್ಳುತ್ತಿರುವ ಅತ್ಯುತ್ತಮ ಕಾರುಗಳು ಯಾವವು ಗೊತ್ತಾ?

ಸುರಕ್ಷಾ ಸೌಲಭ್ಯಗಳು

ನೆಕ್ಸ್ಟ್ ಜನರೇಷನ್ ವೈಶಿಷ್ಟ್ಯತೆಗಳನ್ನು ಹೊಂದಿರುವ ಹೊಸ ಎರ್ಟಿಗಾದಲ್ಲಿ ಸುರಕ್ಷಾ ಸೌಲಭ್ಯಗಳಿಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಪ್ರೋಗ್ರಾಂ, ಎಬಿಎಸ್, ಇಬಿಡಿ, ISOFIX ಚೈಲ್ಡ್ ಸೀಟ್ ಮೌಂಟ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸಾರ್ ಸೇರಿಸಲಾಗಿದೆ.

ಬಿಡುಗಡೆಯ ಅವಧಿ : 2018ರ ಆಗಸ್ಟ್

ಕಾರಿನ ಬೆಲೆ (ಅಂದಾಜು): ರೂ.7 ಲಕ್ಷದಿಂದ ರೂ.10 ಲಕ್ಷ

ಈ ವರ್ಷ ಬಿಡುಗಡೆಗೊಳ್ಳುತ್ತಿರುವ ಅತ್ಯುತ್ತಮ ಕಾರುಗಳು ಯಾವವು ಗೊತ್ತಾ?

2018ರ ವ್ಯಾಗನ್ ಆರ್

ವಿಶೇಷ ಎಂಜಿನ್ ಆಯ್ಕೆ ನೀಡುವ ಮೂಲಕ ಸಿಎನ್‍ಜಿ ಮತ್ತು ಎಲ್‌ಪಿಜಿ ಎರಡನ್ನು ಬಳಕೆ ಮಾಡಬಹುದಾದ ವ್ಯವಸ್ಥೆಯನ್ನು ಹೊಸ ಮಾದರಿಯ ವ್ಯಾಗನ್ ಆರ್ ಕಾರುಗಳಲ್ಲಿ ಒದಗಿಸಲಾಗಿದ್ದು, ಅಕ್ಟೋಬರ್ ಇಲ್ಲವೇ ನವೆಂಬರ್‌ನಲ್ಲಿ ಹೊಸ ವ್ಯಾಗನ್ ಆರ್ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.

ಈ ವರ್ಷ ಬಿಡುಗಡೆಗೊಳ್ಳುತ್ತಿರುವ ಅತ್ಯುತ್ತಮ ಕಾರುಗಳು ಯಾವವು ಗೊತ್ತಾ?

ಈ ಹಿಂದೆ ಬಿಡುಗಡೆಯಾದ ನ್ಯೂ ಜನರೇಷನ್ ಸ್ವಿಫ್ಟ್ ಫ್ಯಾಟ್‌ಫಾರ್ಮ್ ಅಡಿಯಲ್ಲೇ ವ್ಯಾಗನ್ ಆರ್ ಕೂಡಾ ಅಭಿವೃದ್ಧಿಗೊಂಡಿದ್ದು, ವ್ಯಾರ್ಪ್ ಮಾದರಿಯ ಹೆಡ್‌ಲ್ಯಾಂಪ್, ತ್ರಿ ಸ್ಲೈಟ್ ಕ್ರೋಮ್ ಗ್ರಿಲ್, ಸ್ಟೀಲ್ ಚಕ್ರಗಳು, ಎಲ್ಇಡಿ ಟೈಲ್ ಲೈಟ್ಸ್‌ಗಳನ್ನು ಹೊಂದಿದೆ.

ಈ ವರ್ಷ ಬಿಡುಗಡೆಗೊಳ್ಳುತ್ತಿರುವ ಅತ್ಯುತ್ತಮ ಕಾರುಗಳು ಯಾವವು ಗೊತ್ತಾ?

ಎಂಜಿನ್ ಸಾಮರ್ಥ್ಯ

1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿರುವ ವ್ಯಾಗನ್ ಆರ್ ಕಾರುಗಳು 67-ಬಿಎಚ್‌ಪಿ ಮತ್ತು 90-ಎನ್ಎಂ ಟಾರ್ಕ್ ಉತ್ಪಾದನಾ ಶಕ್ತಿ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಮಾಡಬಹುದು.

ಈ ವರ್ಷ ಬಿಡುಗಡೆಗೊಳ್ಳುತ್ತಿರುವ ಅತ್ಯುತ್ತಮ ಕಾರುಗಳು ಯಾವವು ಗೊತ್ತಾ?

ಈ ಮೂಲಕ ಹೊಸ ವ್ಯಾಗನ್ ಆರ್ ಕಾರುಗಳಲ್ಲಿ ಸುರಕ್ಷತೆ ಮತ್ತು ಮತ್ತು ವಿನ್ಯಾಸಗಳಿಗೆ ಹೆಚ್ಚಿನ ಒತ್ತುನೀಡಲಾಗಿದ್ದು, ಉತ್ತಮ ಮಾದರಿಯ ಎಂಟ್ರಿ ಲೆವಲ್ ಕಾರು ಖರೀದಿಸುವ ಗ್ರಾಹಕರಿಗೆ ಇದು ಮತ್ತಷ್ಟು ಆಕರ್ಷಣೆಯಾಗಲಿದೆ.

ಬೆಲೆ(ಅಂದಾಜು): ರೂ. 4.50 ಲಕ್ಷದಿಂದ 5 ಲಕ್ಷ

ಈ ವರ್ಷ ಬಿಡುಗಡೆಗೊಳ್ಳುತ್ತಿರುವ ಅತ್ಯುತ್ತಮ ಕಾರುಗಳು ಯಾವವು ಗೊತ್ತಾ?

ನ್ಯೂ ಜನರೇಷನ್ ಆಲ್ಟೊ

ಕಳೆದ ಎರಡು ದಶಕಗಳಿಂದ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯುತ್ತಮ ಮಾರಾಟ ದಾಖಲೆ ಕಾಣುತ್ತಿರುವ ಆಲ್ಟೋ ಕಾರುಗಳು ಬಿಡುಗಡೆ ನಂತರ ಹಲವು ಬದಲಾವಣೆಗಳ ಜೊತೆ ಜೊತೆಗೆ ಇದುವರೆಗೆ ಬರೋಬ್ಬರಿ 35 ಲಕ್ಷ ಕಾರುಗಳು ಮಾರಾಟವಾಗುವ ಮೂಲಕ ಹೊಸ ದಾಖಲೆಗೆ ಕಾರಣವಾಗಿದ್ದು, ಇದೇ ಉದ್ದೇಶದಿಂದಲೇ ಮತ್ತಷ್ಟು ಹೊಸತನವನ್ನು ಪಡೆದುಕೊಂಡಿರುವ ಆಲ್ಟೊ ಕಾರುಗಳನ್ನು ಪರಿಚಯಿಸುವ ಬೃಹತ್ ಯೋಜನೆಗೆ ಮಾರುತಿ ಸುಜುಕಿ ಚಾಲನೆ ನೀಡಿದೆ.

ಈ ವರ್ಷ ಬಿಡುಗಡೆಗೊಳ್ಳುತ್ತಿರುವ ಅತ್ಯುತ್ತಮ ಕಾರುಗಳು ಯಾವವು ಗೊತ್ತಾ?

ಎಲ್ಲವೂ ಅಂದುಕೊಂಡಂತೆ ಆದಲ್ಲಿ 2019ರ ಫೆಬ್ರುವರಿ ಮೊದಲ ವಾರವೇ ಹೊಸ ಆಲ್ಟೊ ಕಾರುಗಳು ಖರೀದಿಗೆ ಲಭ್ಯವಾಗಲಿದ್ದು, ಮಾಲಿನ್ಯ ತಡೆಗೆ ಪರಿಣಾಮಕಾರಿ ಮಾರ್ಗವಾದ ಬಿಎಸ್ 6 ವೈಶಿಷ್ಟ್ಯತೆಗಳು ಈ ಕಾರಿನಲ್ಲಿ ಅಳವಡಿಸಲಾಗಿದೆ.

ಈ ವರ್ಷ ಬಿಡುಗಡೆಗೊಳ್ಳುತ್ತಿರುವ ಅತ್ಯುತ್ತಮ ಕಾರುಗಳು ಯಾವವು ಗೊತ್ತಾ?

ಹೊಸ ಕಾರಿನ ವಿಶೇಷತೆ ಏನು?

ಹೌದು, ಈ ಹಿಂದಿನ ಆಲ್ಟೊ ಕಾರುಗಳಿಂತಲೂ ನ್ಯೂ ಜನರೇಷನ್ ಆಲ್ಟೊ ಕಾರುಗಳು ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶ ಪಡೆಯುತ್ತಿದ್ದು, ಭಾರತ್ ನ್ಯೂ ವೆಹಿಕಲ್ ಅಸೆಸ್ಮೆಂಟ್ ಪ್ರೋಗ್ರಾಂ(ಬಿಎನ್‌ವಿಎಸ್ಎಪಿ) ಆಧಾರದ ಮೇಲೆ ಹೊಸ ಕಾರು ಅಭಿವೃದ್ಧಿಯಾಗಿದೆ.

ಈ ವರ್ಷ ಬಿಡುಗಡೆಗೊಳ್ಳುತ್ತಿರುವ ಅತ್ಯುತ್ತಮ ಕಾರುಗಳು ಯಾವವು ಗೊತ್ತಾ?

ಎಂಜಿನ್ ಸಾಮರ್ಥ್ಯ

ಸದ್ಯ ಮಾರುಕಟ್ಟೆಯಲ್ಲಿ ಮಾರಾಟಾವಾಗುತ್ತಿರುವ ಆಲ್ಟೊ ಕೆ10 ಮಾದರಿಯಲ್ಲೇ 1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಲಿರುವ ಹೊಸ ಆಲ್ಟೊ ಕಾರುಗಳು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 67-ಬಿಎಚ್‌ಪಿ ಮತ್ತು 91-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲವು.

ಕಾರಿನ ಬೆಲೆ(ಅಂದಾಜು): ರೂ. 4 ಲಕ್ಷದಿಂದ ರೂ.5.20 ಲಕ್ಷ

ಈ ವರ್ಷ ಬಿಡುಗಡೆಗೊಳ್ಳುತ್ತಿರುವ ಅತ್ಯುತ್ತಮ ಕಾರುಗಳು ಯಾವವು ಗೊತ್ತಾ?

ವಿಟಾರಾ ಬ್ರೇಝಾ ಪೆಟ್ರೋಲ್

ಅಧಿಕವಾಗಿ ಮಾರಾಟಗೊಂಡ ದೇಶದ ಬೆಸ್ಟ್ ಸೆಲ್ಲಿಂಗ್ ಕಾಂಪ್ಯಾಕ್ಟ್ ಎಸ್‍‍ಯುವಿಗಳಲ್ಲಿ ವಿಟಾರಾ ಬ್ರೇಝಾ ಕೂಡಾ ಒಂದು. ಇತ್ತೀಚೆಗಷ್ಟೆ ಆಟೋಮ್ಯಾಟಿಕ್ ಟ್ರಾನ್ಸ್ ಮಿಷನ್ ಆಯ್ಕೆಯಲ್ಲಿ ಬಿಡುಗಡೆಗೊಂಡಿದ್ದು, ಹೊಸದಾಗಿ ಗ್ರಾಹಕರಿಗೆ ಹೊಸ ಅನುಭವವನ್ನು ನೀಡಲು ವಿನೂತನ ಪೆಟ್ರೋಲ್ ಎಂಜಿನ್ ಅನ್ನು ಹೊತ್ತು ಬರಲಿದೆ.

ಈ ವರ್ಷ ಬಿಡುಗಡೆಗೊಳ್ಳುತ್ತಿರುವ ಅತ್ಯುತ್ತಮ ಕಾರುಗಳು ಯಾವವು ಗೊತ್ತಾ?

ಸ್ಮಾರ್ಟ್ ಹೈಬ್ರಿಡ್ ಟೆಕ್ನಾಲಜಿಯನ್ನು ಪಡೆದ ಕಾರುಗಳು ಸಾಧಾರಣ ಕಾರುಗಳಿಗಿಂತ ಹೆಚ್ಚು ಮೈಲೇಜ್ ನೀಡಲಿದ್ದು, ಮಾರುತಿ ಸುಜುಕಿ ಸಂಸ್ಥೆಯಲ್ಲಿನ ಹೈಬ್ರಿಡ್ ಟೆಕ್ನಾಲಜಿಯನ್ನು ಅಳವಡಿಸಿರುವ ಕಾರುಗಳಿಗೆ ಹೆಚ್ಚು ಬೇಡಿಕೆ ಇದೆ. ಈ ನಿಟ್ಟಿನಲ್ಲಿ ಸಂಸ್ಥೆಯು ವಿಟಾರಾ ಬ್ರೆಝಾ ಪೆಟ್ರೋಲ್ ಎಂಜಿನ್ ಕಾರುಗಳಿಗು ಕೂಡ ಹೈಬ್ರಿಡ್ ಟೆಕ್ನಾಲಜಿಯನ್ನು ಅಳವಡಿಸಲಾಗಿದೆ.

ಈ ವರ್ಷ ಬಿಡುಗಡೆಗೊಳ್ಳುತ್ತಿರುವ ಅತ್ಯುತ್ತಮ ಕಾರುಗಳು ಯಾವವು ಗೊತ್ತಾ?

ಇನ್ನು ಈ ಕಾರುನ್ನು 2019ರ ಮೊದಲ ತ್ರೈಮಾಸಿಕ ವೇಳೆಗೆ ಬಿಡುಗಡೆಗೊಳಿಸುವ ಸಾಧ್ಯತೆಗಳಿದ್ದು, ಕಾರಿನ ಬೆಲೆಗಳು ಎಕ್ಸ್‌ಶೋರಂ ಪ್ರಕಾರ ರೂ.8 ಲಕ್ಷದಿಂದ ರೂ.12 ಲಕ್ಷ ಇರಬಹುದೆಂದು ನೀರಿಕ್ಷಿಸಲಾಗಿದೆ.

Most Read Articles

Kannada
English summary
upcoming maruthi suzuki cars.
Story first published: Saturday, June 23, 2018, 18:36 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X