ಎಂಜಿ ಹೆಕ್ಟರ್ ಎಫೆಕ್ಟ್ - ಕಡಿಮೆ ಸಂಖ್ಯೆಯಲ್ಲಿ ಮಾರಾಟವಾಗುತ್ತಿರುವ ಟಾಟಾ ಹ್ಯಾರಿಯರ್

ಟಾಟಾ ಮೋಟಾರ್ಸ್ ಸಂಸ್ಥೆಯು ಇದೇ ವರ್ಷದ ಮೊದಲಿನಲ್ಲಿ ತಮ್ಮ ಹ್ಯಾರಿಯರ್ ಎಸ್‍ಯುವಿ ಕಾರನ್ನು ಬಿಡುಗಡೆ ಮಾಡಿತ್ತು. ಬಿಡುಗಡೆಯ ಆರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದ ಟಾಟಾ ಹ್ಯಾರಿಯರ್ ಬರುಬರುತಾ ಕಡಿಮೆ ಸಂಖ್ಯೆಯಲ್ಲಿ ಮಾರಾಟವಾಗಲು ಶುರುವಾಗಿದೆ. ಹಾಗಂತ ಈ ಕಾರು ಚೆನ್ನಾಗಿಲ್ಲ ಅಂತ ಹೇಳೊಕ್ಕಾಗಲ್ಲ ಏಕೆಂದರೆ ಈ ಕಾರು ಉತ್ತಮವಾದ ಉತ್ಪಾನೆಯ ಗುಣಮಟ್ಟವನ್ನು ಮತ್ತು ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿದೆ.

ಎಂಜಿ ಹೆಕ್ಟರ್ ಎಫೆಕ್ಟ್ - ಕಡಿಮೆ ಸಂಖ್ಯೆಯಲ್ಲಿ ಮಾರಾಟವಾಗುತ್ತಿರುವ ಟಾಟಾ ಹ್ಯಾರಿಯರ್

ಆದರೆ ದೇಶೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ತಮ್ಮ ಎಂಜಿ ಹೆಕ್ಟರ್ ಕಾರನ್ನು ಬಿಡುಗಡೆ ಮಾಡುವುದರಿಂದ ಕಾಲಿಟ್ಟ ಎಂಜಿ ಮೋಟಾರ್ಸ್ ಸಂಸ್ಥೆಯು, ತಾವು ಬಿಡುಗಡೆ ಮಾಡಿದ ಹೆಕ್ಟರ್ ಕಾರಿನಲ್ಲಿ ವಿಶೇಶ ವಿನ್ಯಾಸ ಮತ್ತು ಹತ್ತುಹಲವಾರು ವೈಶಿಷ್ಟ್ಯತೆಗಳನ್ನು ನೀಡಿದೆ. ಹಾಗೆಯೆ ಟಾಟಾ ಹ್ಯಾರಿಯರ್ ಕೆಲ ದಿನಗಳ ಹಿಂದಷ್ಟೆ ಬೆಲೆ ಏರಿಕೆಯನ್ನು ಕಂಡಿದ್ದು, ಎಂಜಿ ಹೆಕ್ಟರ್ ಕಾರಿಗಿಂತಲೂ ಹೆಚ್ಚಿನ ಬೆಲೆಯನ್ನು ಪಡೆದುಕೊಂಡಿದೆ.

ಎಂಜಿ ಹೆಕ್ಟರ್ ಎಫೆಕ್ಟ್ - ಕಡಿಮೆ ಸಂಖ್ಯೆಯಲ್ಲಿ ಮಾರಾಟವಾಗುತ್ತಿರುವ ಟಾಟಾ ಹ್ಯಾರಿಯರ್

ಹೀಗಾಗಿ ಸಧ್ಯ ಟಾಟಾ ಹ್ಯಾರಿಯರ್ ಕಾರು ಪ್ರಾರಂಭಿಕವಾಗಿ ಎಕ್ಸ್ ಶೋರುಂ ಪ್ರಕಾರ ರೂ. 13.00 ಲಕ್ಷದ ಬೆಲೆಯನ್ನು ಪಡೆದರೆ, ಎಂಜಿನ್ ಹೆಕ್ಟರ್ ಕಾರು ರೂ. 12.18 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದೆ. ಜೂನ್ ತಿಂಗಳಿನಲ್ಲಿ ಕೇವಲ 1,216 ಯೂನಿಟ್ ಮಾರಾಟವಾಗಿದ್ದು, ಎಂಜಿ ಹೆಕ್ಟರ್ ಕಾರು ಇಲ್ಲಿಯವರೆಗೂ 13,000ಕ್ಕು ಹೆಚ್ಚಿನ ಬುಕ್ಕಿಂಗ್ ಅನ್ನು ಪಡೆದುಕೊಂಡಿದೆ.

ಎಂಜಿ ಹೆಕ್ಟರ್ ಎಫೆಕ್ಟ್ - ಕಡಿಮೆ ಸಂಖ್ಯೆಯಲ್ಲಿ ಮಾರಾಟವಾಗುತ್ತಿರುವ ಟಾಟಾ ಹ್ಯಾರಿಯರ್

ಹಾಗೆಯೆ ಜೂನ್ 2019ರಲ್ಲಿ ಮಿಡ್ ಸೈಜ್ ಎಸ್‍ಯುವಿ ಸೆಗ್ಮೆಂಟ್ ಕಾರು ಮಾರಾಟದಲ್ಲಿ 8334 ಯೂನಿಟ್ ಹ್ಯುಂಡೈ ಕ್ರೆಟಾ, 3071 ಯೂನಿಟ್ ಮಹೀಂದ್ರಾ ಸ್ಕಾರ್ಪಿಯೊ, 1359 ಯೂನಿಟ್ ಮಾರುತಿ ಸುಜುಕಿ ಎಸ್‍-ಕ್ರಾಸ್, 1129ಯೂನಿಟ್ ಮಹೀಂದ್ರಾ ಎಕ್ಸ್ಯುವಿ 500, 882 ಯೂನಿಟ್ ರೆನಾಲ್ಟ್ ಡಸ್ಟರ್ ಹಾಗು 128 ಯೂನಿಟ್ ನಿಸ್ಸಾನ್ ಕಿಕ್ಸ್ ಕಾರುಗಳು ಮಾರಾಟಗೊಂಡಿದೆ.

ಎಂಜಿ ಹೆಕ್ಟರ್ ಎಫೆಕ್ಟ್ - ಕಡಿಮೆ ಸಂಖ್ಯೆಯಲ್ಲಿ ಮಾರಾಟವಾಗುತ್ತಿರುವ ಟಾಟಾ ಹ್ಯಾರಿಯರ್

ಟಾಟಾ ಹ್ಯಾರಿಯರ್ ವಿನ್ಯಾಸ

ಇನ್ನು ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ಕಾರಿನ ವಿನ್ಯಾಸಕ್ಕೆ ಮೆರಗು ತಂದಿವೆ.

ಇಲ್ಲಿ ಇನ್ನೊಂದು ವಿಶೇಷ ಅಂದ್ರೆ, ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್" ಆರ್ಕಿಟೆಕ್ಚರ್ ತಂತ್ರವನ್ನೇ ಬಳಕೆ ಮಾಡುತ್ತಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಿರುವುದು ಹ್ಯಾರಿಯರ್ ಎಸ್‌ಯುವಿ ಮಾದರಿಯ ವಿನ್ಯಾಸಕ್ಕೆ ಐಷಾರಾಮಿ ಕಳೆ ಬಂದಿರುವುದು ಬೇಡಿಕೆ ಹೆಚ್ಚಳಕ್ಕೆ ಕಾರಣವಾಗಿದೆ.

ಎಂಜಿ ಹೆಕ್ಟರ್ ಎಫೆಕ್ಟ್ - ಕಡಿಮೆ ಸಂಖ್ಯೆಯಲ್ಲಿ ಮಾರಾಟವಾಗುತ್ತಿರುವ ಟಾಟಾ ಹ್ಯಾರಿಯರ್

ಹೊಸ ಡಿಸೈನ್ ತಂತ್ರಜ್ಞಾನದಿಂದಾಗಿ ಕಾರು ಸಾಕಷ್ಟು ಸ್ಟೈಲಿಷ್ ಆಗಿ ಕಾಣುವಂತಾಗಿದ್ದು, ಕಾರಿನ ಮುಂಭಾಗದಲ್ಲಿ ಹನಿಕೊಂಬ್ ಗ್ರೀಲ್ ಮತ್ತು ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಪಾಲಿಜೊನಲ್ ಮಾದರಿಯ ಎಲ್‌ಇಡಿ ಲೈಟ್ಸ್ ಮಾದರಿಯು ಕಾರಿಗೆ ಸ್ಪೋರ್ಟಿ ಲುಕ್ ನೀಡಿವೆ.

ಎಂಜಿ ಹೆಕ್ಟರ್ ಎಫೆಕ್ಟ್ - ಕಡಿಮೆ ಸಂಖ್ಯೆಯಲ್ಲಿ ಮಾರಾಟವಾಗುತ್ತಿರುವ ಟಾಟಾ ಹ್ಯಾರಿಯರ್

ಜೆನಾನ್ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್ ಮತ್ತು ಕಾರ್ನರಿಂಗ್ ಲೈಟ್ಸ್, ಶಾರ್ಕ್ ಫಿನ್ ಆ್ಯಂಟೆನಾ, 7 ಇಂಚಿನ ಡಿಜಿಟಲ್ ಇನ್ಸ್ಟ್ರೂಮೆಂಟ್ ಕ್ಲಸ್ಟರ್, 8.8 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, 9 ಜೆಬಿಎಲ್ ಸ್ಪೀಕರ್ಸ್‍, 60:40 ವಿಭಜಿತ ಸೀಟ್‍ಗಳು ಮತ್ತು ನಾರ್ಮಲ್, ವೆಟ್ ಮತ್ತು ರಫ್ ಎಂಬ ಮೂರು ಟೆರೈನ್ ರೆಸ್ಪಾನ್ಸ್ ಮೊಡ್ಸ್ ಸೌಲಭ್ಯವಿದೆ.

ಎಂಜಿನ್ ಸಾಮರ್ಥ್ಯ

ಹ್ಯಾರಿಯರ್ ಎಸ್‌ಯುವಿ ಕಾರು 2-ಲೀಟರ್(2 ಸಾವಿರ ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ 140-ಬಿಹೆಚ್‍ಪಿ, 350-ಎನ್ಎಂ ಶಕ್ತಿಯನ್ನು ಉತ್ಪಾದಿಸುವ ಶಕ್ತಿಯೊಂದಿಗೆ ಪರ್ಫಾಮೆನ್ಸ್ ಪ್ರಿಯರ ಗಮನಸೆಳೆಯುತ್ತವೆ.

ಎಂಜಿ ಹೆಕ್ಟರ್ ಎಫೆಕ್ಟ್ - ಕಡಿಮೆ ಸಂಖ್ಯೆಯಲ್ಲಿ ಮಾರಾಟವಾಗುತ್ತಿರುವ ಟಾಟಾ ಹ್ಯಾರಿಯರ್

ಹಾಗೆಯೇ ಸುರಕ್ಷತೆಗಾಗಿ ಹೆಚ್ಚಿನ ಆಯ್ಕೆಗಳಿದ್ದು, ಆರು ಏರ್‍‍ಬ್ಯಾಗ್‍ಗಳು, ಇಎಸ್‍ಪಿ ಮತ್ತು ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸ್ಸಿಸ್ಟ್ ಪಡೆದುಕೊಂಡಿದೆ.

Article Published On: Monday, July 8, 2019, 13:36 [IST]
English summary
1216 Unit Tata Harrier Sold In June 2019 Sales. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+