ಸ್ವಿಫ್ಟ್ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾದ ಫೋರ್ಡ್ ಫಿಗೋ ಫೇಸ್‌ಲಿಫ್ಟ್

ಫೋರ್ಡ್ ಇಂಡಿಯಾ ಸಂಸ್ಥೆಯು ತನ್ನ ಜನಪ್ರಿಯ ಫಿಗೋ ಹ್ಯಾಚ್‌ಬ್ಯಾಕ್ ಫೇಸ್‌ಲಿಫ್ಟ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹಲವು ಹೊಸ ಸೌಲಭ್ಯಗಳನ್ನು ಪಡೆದುಕೊಂಡಿರುವ ಫೇಸ್‌ಲಿಫ್ಟ್ ಆವೃತ್ತಿಯ ಮಾರುತಿ ಸುಜುಕಿ ಸ್ವಿಫ್ಟ್ ಮತ್ತು ಹ್ಯುಂಡೈ ಗ್ರ್ಯಾಂಡ್ ಐ10 ಕಾರುಗಳಿಗೆ ಭರ್ಜರಿ ಪೈಟೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

ಸ್ವಿಫ್ಟ್ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾದ ಫೋರ್ಡ್ ಫಿಗೋ ಫೇಸ್‌ಲಿಫ್ಟ್

ಭಾರತೀಯ ಮಾರುಕಟ್ಟೆಯಲ್ಲಿ ಫಿಗೋ ಹ್ಯಾಚ್‌ಬ್ಯಾಕ್ ಮಾದರಿಗಳಿಗೆ ಅಷ್ಟಾಗಿ ಬೇಡಿಕೆ ಇಲ್ಲದ್ದಿದ್ದರೂ ಉತ್ತಮ ಎಂಜಿನ್ ಮತ್ತು ವಿನ್ಯಾಸಗಳು ನಿರ್ದಿಷ್ಟ ಮಟ್ಟದ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಈ ಬಾರಿ ಗ್ರಾಹಕರ ಆದ್ಯತೆಗೆ ತಕ್ಕಂತೆ ಕೆಲವು ಮಹತ್ವದ ಬದಲಾವಣೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿರುವುದು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದೆ.

ಸ್ವಿಫ್ಟ್ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾದ ಫೋರ್ಡ್ ಫಿಗೋ ಫೇಸ್‌ಲಿಫ್ಟ್

ಫೋರ್ಡ್ ಸಂಸ್ಥೆಯು ಫಿಗೋ ಕಾರುಗಳನ್ನು ಡೀಸೆಲ್ ಮತ್ತು ಪೆಟ್ರೋಲ್ ಎರಡು ಆವೃತ್ತಿಯಲ್ಲೂ ಪರಿಚಯಿಸಿದ್ದು, ಡಿಸೇಲ್ ಆವೃತ್ತಿಯಲ್ಲಿ ಮೂರು ವೆರಿಯೆಂಟ್‌ಗಳು ಖರೀದಿ ಲಭ್ಯವಿದ್ದಲ್ಲಿ ಪೆಟ್ರೋಲ್ ವೆರಿಯೆಂಟ್‌ಗಳಲ್ಲಿ ಒಟ್ಟು ನಾಲ್ಕು ವೆರಿಯೆಂಟ್‌ಗಳನ್ನು ಆಯ್ಕೆ ಮಾಡಬಹುದು.

ಸ್ವಿಫ್ಟ್ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾದ ಫೋರ್ಡ್ ಫಿಗೋ ಫೇಸ್‌ಲಿಫ್ಟ್

ಈ ಫೇಸ್‌ಲಿಫ್ಟ್ ಆವೃತ್ತಿಯ ಮತ್ತೊಂದು ವಿಶೇಷ ಅಂದ್ರೆ, ಪ್ರತಿ ಬಾರಿಯೂ ಕಾರು ಉತ್ಪಾದನಾ ಸಂಸ್ಥೆಗಳು ಹೊಸ ಕಾರುಗಳನ್ನು ಬಿಡುಗಡೆ ಮಾಡಿದಾಗ ಇಲ್ಲವೇ ಉನ್ನತಿಕರಿಸಿದಾಗ ಬೆಲೆ ಹೆಚ್ಚಳ ಮಾಡುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದ್ರೆ ಫೋರ್ಡ್ ಸಂಸ್ಥೆಯು ಈ ಬಾರಿ ಹೊಸ ಕಾರಿನ ಬೆಲೆಯನ್ನು ರೂ.70 ಸಾವಿರ ಕಡಿತಗೊಳಿಸಿ ಫೇಸ್‌ಲಿಫ್ಟ್ ಆವೃತ್ತಿಯನ್ನು ಹೊರತಂದಿದೆ.

ಸ್ವಿಫ್ಟ್ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾದ ಫೋರ್ಡ್ ಫಿಗೋ ಫೇಸ್‌ಲಿಫ್ಟ್

ಹೌದು, ಫೋರ್ಡ್ ಸಂಸ್ಥೆಯು ಫೇಸ್‌ಲಿಫ್ಟ್ ಆವೃತ್ತಿಯ ಬೆಲೆಯನ್ನು ಭಾರೀ ಪ್ರಮಾಣದಲ್ಲಿ ಕಡಿತ ಮಾಡಿದ್ದು, ಹೊಸ ಕಾರಿನ ಬೆಲೆಗಳನ್ನು ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ, ರೂ.5.15 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಆವೃತ್ತಿಯ ಬೆಲೆಯನ್ನು ಎಕ್ಸ್‌ಶೋರೂಂ ಪ್ರಕಾರ ರೂ.8.09ಲಕ್ಷಕ್ಕೆ ನಿಗದಿ ಮಾಡಲಾಗಿದೆ.

ಸ್ವಿಫ್ಟ್ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾದ ಫೋರ್ಡ್ ಫಿಗೋ ಫೇಸ್‌ಲಿಫ್ಟ್

ಫಿಗೋ ಫೇಸ್‌ಲಿಫ್ಟ್ ಕಾರಿನ ವೆರಿಯೆಂಟ್‌ಗಳು ಮತ್ತು ಬೆಲೆಗಳು(ಎಕ್ಸ್‌ಶೋರೂಂ ಪ್ರಕಾರ)

ವೆರಿಯೆಂಟ್‌ಗಳು ಪೆಟ್ರೋಲ್ ಕಾರಿನ ಬೆಲೆಗಳು ಡೀಸೆಲ್ ಕಾರಿನ ಬೆಲೆಗಳು
ಆ್ಯಂಬಿಯೆಂಟ್ ರೂ. 5,15,000

ರೂ. 5,95,000

ಟೈಟಾನಿಯಂ ರೂ. 6,39,000

ರೂ. 7,19,000

ಟೈಟಾನಿಯಂ ಬ್ಲೂ ರೂ. 6,49,000

ರೂ. 7,74,000

ಟೈಟಾನಿಯಂ 1.5-ಲೀಟರ್

ರೂ. 8,09,000

ಸ್ವಿಫ್ಟ್ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾದ ಫೋರ್ಡ್ ಫಿಗೋ ಫೇಸ್‌ಲಿಫ್ಟ್

ಇನ್ನು ಹೊಸ ಫಿಗೋ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಈ ಬಾರಿ ಕೆಲವು ಗುರತರ ಬದಲಾವಣೆಗಳನ್ನು ತರಲಾಗಿದ್ದು, ನವೀಕರಿಸಲಾದ ಫ್ರಂಟ್ ಮತ್ತು ರಿಯರ್ ಬಂಪರ್, ಹೊಸ ಹನಿಕೊಂಬ ಫ್ರಂಟ್ ಗ್ರೀಲ್, 15-ಇಂಚಿನ ಸ್ಪೋರ್ಟಿ ಲುಕ್ ಅಲಾಯ್ ಚಕ್ರಗಳು ಮತ್ತು ಟಾಪ್ ಎಂಡ್ ಆವೃತ್ತಿಯಾದ ಬ್ಲೂ ವೆರಿಯೆಂಟ್‌ನಲ್ಲಿ ಕಪ್ಪು ಮಿಶ್ರಿತ ರಿಯರ್ ವ್ಯೂ ಮಿರರ್, ಡೋರ್ಸ್ ಮತ್ತು ಬೂಟ್ ಲಿಪ್ ಸೌಲಭ್ಯವನ್ನು ಪಡೆದಿದೆ.

ಸ್ವಿಫ್ಟ್ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾದ ಫೋರ್ಡ್ ಫಿಗೋ ಫೇಸ್‌ಲಿಫ್ಟ್

ಹಾಗೆಯೇ ಕಾರಿನ ಒಳಭಾಗದ ವಿನ್ಯಾಸವು ಈ ಬಾರಿ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಕೀ ಲೆಸ್ ಎಂಟ್ರಿ, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್ ಮತ್ತು ವೈಪರ್ಸ್, ಪಾರ್ಕಿಂಗ್ ಕ್ಯಾಮೆರಾ, 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ ಪ್ರೇರಣೆ ಹೊಂದಿದೆ.

MOST READ: ವಾಹನ ಚಾಲಕರೇ ಇತ್ತ ಗಮನಿಸಿ - ಅಕ್ಟೋಬರ್ 1 ರಿಂದ ಜಾರಿಯಾಗಲಿದೆ ಹೊಸ ರೂಲ್ಸ್

ಸ್ವಿಫ್ಟ್ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾದ ಫೋರ್ಡ್ ಫಿಗೋ ಫೇಸ್‌ಲಿಫ್ಟ್

ಫೇಸ್‌ಲಿಫ್ಟ್ ಆವೃತ್ತಿಯು ಈ ಸುರಕ್ಷತೆಯಲ್ಲಿ ಮತ್ತಷ್ಟು ಬಲಿಷ್ಠತೆ ಪಡೆದಿದ್ದು, ಪ್ರತಿಯೊಂದು ವೆರಿಯೆಂಟ್‌ನಲ್ಲೂ ಕೂಡಾ ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಮತ್ತು ಇಬಿಡಿ, ರಿಯರ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಸ್ಪೀಡ್ ಅಲರ್ಟ್ ಸಿಸ್ಟಂ ಮತ್ತು ಟಾಪ್ ಎಂಡ್ ಆವೃತ್ತಿಯಲ್ಲಿ ಹೋಂದಾಣಿಕೆ ಮಾಡಬಹುದಾದ ರಿಯರ್ ಹೆಡ್ ರೆಸ್ಟ್, ಆರ್ ಏರ್‌ಬ್ಯಾಗ್‌ಗಳು, ಟ್ರಾನ್ಷನ್ ಕಂಟ್ರೋಲ್ ಮತ್ತು ಹಿಲ್-ಸ್ಟಾರ್ಟ್ ಅಸಿಸ್ಟ್ ಸೌಲಭ್ಯ ನೀಡಲಾಗಿದೆ.

ಸ್ವಿಫ್ಟ್ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾದ ಫೋರ್ಡ್ ಫಿಗೋ ಫೇಸ್‌ಲಿಫ್ಟ್

ಎಂಜಿನ್ ಸಾಮರ್ಥ್ಯ ಮತ್ತು ಪರ್ಫಾಮೆನ್ಸ್

ಫಿಗೋ ಫೇಸ್‌ಲಿಫ್ಟ್ ಆವೃತ್ತಿಗಳು ಈ ಹಿಂದಿನಂತೆಯೇ 1.2-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಮುಂದುವರಿಸಿರುವ ಫೋರ್ಡ್ ಸಂಸ್ಥೆಯು ಈ ಬಾರಿ ಹೊಸದಾಗಿ ಟಾಪ್ ಎಂಡ್ ಆವೃತ್ತಿಯಾದ ಬ್ಲೂ ವೆರಿಯೆಂಟ್‌ನಲ್ಲಿ ಮಾತ್ರವೇ 1.5-ಲೀಟರ್ ಪೆಟ್ರೋಲ್ ಎಂಜಿನ್ ಬಳಕೆ ಮಾಡಿರುವುದು ಪ್ರಮುಖ ಬದಲಾವಣೆಯಾಗಿದೆ.

MOST READ: ಪ್ರತಿ ಚಾರ್ಜ್‌ಗೆ 10 ಸಾವಿರ ಕಿ.ಮಿ ಮೈಲೇಜ್ ನೀಡುತ್ತೆ ಟೊಯೊಟಾದ ಈ ವಿಶೇಷ ವಾಹನ..!

ಸ್ವಿಫ್ಟ್ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾದ ಫೋರ್ಡ್ ಫಿಗೋ ಫೇಸ್‌ಲಿಫ್ಟ್

ಹೀಗಾಗಿ 1.2-ಲೀಟರ್ ಪೆಟ್ರೋಲ್ ಎಂಜಿನ್‌ನಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್, 1.5-ಲೀಟರ್ ಪೆಟ್ರೋಲ್ ಎಂಜಿನ್‌ನಲ್ಲಿ 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ನೀಡಿರುವ ಫೋರ್ಡ್ ಸಂಸ್ಥೆಯು ಈ ಬಾರಿ ಮಾರುತಿ ಸುಜುಕಿ ಸ್ವಿಫ್ಟ್, ಹ್ಯುಂಡೈ ಗ್ರ್ಯಾಂಡ್ ಐ10 ಮತ್ತು ಫೋಕ್ಸ್‌ವ್ಯಾಗನ್ ಪೋಲೊ ಕಾರುಗಳಿಗೆ ತೀವ್ರ ಪೈಪೋಟಿ ನೀಡುವ ವಿಶ್ವಾಸದಲ್ಲಿದೆ.

Most Read Articles

Kannada
Read more on ಫೋರ್ಡ್ ford
English summary
2019 Ford Figo facelift launched in India, priced from Rs 5.15 lakh. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X