ನಮ್ಮ ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಇಸುಝು ಡಿ-ಮ್ಯಾಕ್ಸ್ ವಿ-ಕ್ರಾಸ್ ಫೇಸ್‌ಲಿಫ್ಟ್

ಜಪಾನ್ ಆಟೋ ಉತ್ಪಾದನಾ ಸಂಸ್ಥೆಯಾದ ಇಸುಝು ಇಂಡಿಯಾ ತನ್ನ ಜನಪ್ರಿಯ ಡಿ-ಮ್ಯಾಕ್ಸ್ ವಿ-ಕ್ರಾಸ್ ಪಿಕ್ ಅಪ್ ಟ್ರಕ್ ಹೊಸ ಆವೃತ್ತಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಆವೃತ್ತಿಯು ಮಹತ್ವದ ಬದಲಾವಣೆಗಳೊಂದಿಗೆ ಮುಂದಿನ ತಿಂಗಳು ಜೂನ್ ಅಂತ್ಯಕ್ಕೆ ಮಾರುಕಟ್ಟೆ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ.

ನಮ್ಮ ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಇಸುಝು ಡಿ-ಮ್ಯಾಕ್ಸ್ ವಿ-ಕ್ರಾಸ್ ಫೇಸ್‌ಲಿಫ್ಟ್

ಇಸುಝು ಸಂಸ್ಥೆಯು ಡಿ-ಮ್ಯಾಕ್ಸ್ ವಿ-ಕ್ರಾಸ್ ಮಾರಾಟದಲ್ಲಿ ಈಗಾಗಲೇ ಸಾಕಷ್ಟು ಜನಪ್ರಿಯತೆ ಗಳಿಸಿದ್ದು, ಹೊಸ ಆವೃತ್ತಿಯ ಮೂಲಕ ಮತ್ತಷ್ಟು ಗ್ರಾಹಕರನ್ನು ಸೆಳೆಯುವ ತವಕದಲ್ಲಿದೆ. ಮಾಹಿತಿಗಳ ಪ್ರಕಾರ, ಹೊಸ ಪಿಕ್ ಅಪ್ ಟ್ರಕ್ ಮಾದರಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಎಂಜಿನ್ ಆಯ್ಕೆಯೊಂದಿಗೆ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಬಿಡುಗಡೆಯಾಗಲಿದೆಯೆಂತೆ.

ನಮ್ಮ ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಇಸುಝು ಡಿ-ಮ್ಯಾಕ್ಸ್ ವಿ-ಕ್ರಾಸ್ ಫೇಸ್‌ಲಿಫ್ಟ್

ಈ ಹಿನ್ನೆಲೆಯಲ್ಲಿ ಹೊಸ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಅಂತಿಮ ಹಂತದ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ನಡೆಸಿರುವ ಇಸುಝು ಸಂಸ್ಥೆಯು ನಮ್ಮ ಬೆಂಗಳೂರು ಸೇರಿದಂತೆ ದೇಶದ ವಿವಿಧ ಸ್ಪಾಟ್ ಟೆಸ್ಟಿಂಗ್ ನಡೆಸಿದ್ದು, ಈ ಹಿಂದಿನ ಮಾದರಿಗಿಂತಲೂ ಹೊಸ ಕಾರು ಸಾಕಷ್ಟು ಬದಲಾವಣೆ ಹೊತ್ತ ಬರುವುದು ಖಚಿತವಾಗಿದೆ.

ನಮ್ಮ ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಇಸುಝು ಡಿ-ಮ್ಯಾಕ್ಸ್ ವಿ-ಕ್ರಾಸ್ ಫೇಸ್‌ಲಿಫ್ಟ್

ಇನ್ನು ದೇಶಾದ್ಯಂತ 2020ರ ಏಪ್ರಿಲ್ 1ರಿಂದ ಬಿಎಸ್-6 ನಿಯಮವು ಜಾರಿಗೆ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ತಮ್ಮ ವಾಹನ ಉತ್ಪನ್ನಗಳನ್ನು ಹೊಸ ನಿಯಮಗಳಿಗೆ ಅನುಗುಣವಾಗಿ ಉನ್ನತಿಕರಿಸುತ್ತಿವೆ.

ನಮ್ಮ ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಇಸುಝು ಡಿ-ಮ್ಯಾಕ್ಸ್ ವಿ-ಕ್ರಾಸ್ ಫೇಸ್‌ಲಿಫ್ಟ್

ಇದೀಗ ಇಸುಝು ಕೂಡಾ ತನ್ನ ಡಿ-ಮ್ಯಾಕ್ಸ್ ವಿ-ಕ್ರಾಸ್ ಪಿಕ್ ಅಪ್ ಟ್ರಕ್ ಮಾದರಿಯನ್ನು ಸಹ ಬಿಎಸ್-6 ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ಧಿಗೊಳಿಸಿದ್ದು, ಹೊಸ ನಿಯಮ ಜಾರಿಯಿಂದಾಗಿ ವಾಹನ ಎಂಜಿನ್ ತಂತ್ರಜ್ಞಾನದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಇದರಿಂದ ಹೊಸ ವಾಹನಗಳಿಂದ ಉತ್ಪಾದನೆಯಾಗುವ ಮಾಲಿನ್ಯ ಪ್ರಮಾಣದಲ್ಲಿ ಗಣನೀಯವಾಗಿ ಇಳಿಕೆಯಾಗಲಿದ್ದು, ಈ ಮೂಲಕ ಮಾಲಿನ್ಯದಿಂದ ಉಂಟಾಗುತ್ತಿರುವ ಸಮಸ್ಯೆಗಳಿಗೆ ಇದು ಪರಿಹಾರವಾಗಲಿದೆ.

ನಮ್ಮ ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಇಸುಝು ಡಿ-ಮ್ಯಾಕ್ಸ್ ವಿ-ಕ್ರಾಸ್ ಫೇಸ್‌ಲಿಫ್ಟ್

ಇದಲ್ಲದೇ ಸುಪ್ರೀಂಕೋರ್ಟ್ ಆದೇಶದಂತೆ ಬಿಎಸ್-6 ನಿಯಮವನ್ನು ಕಡ್ಡಾಯವಾಗಿ ಜಾರಿಗೆ ತರುತ್ತಿರುವ ಕೇಂದ್ರ ಸರ್ಕಾರವು, ಹೊಸ ನಿಯಮವನ್ನು ಪಾಲನೆ ಮಾಡದ ಕೆಲವು ವಾಹನಗಳನ್ನು ನಿಷೇಧಿಸಲು ಪಟ್ಟಿ ಸಿದ್ದತೆ ಮಾಡಿಕೊಂಡಿದೆ.

ಇದರಿಂದ ಇಸುಝು ಕೂಡಾ ಡಿ-ಮ್ಯಾಕ್ಸ್ ವಿ-ಕ್ರಾಸ್ ಪಿಕ್ ಟ್ರಕ್ ಮಾದರಿಯನ್ನು ಬಿಎಸ್-6 ವೈಶಿಷ್ಟ್ಯತೆಗಳೊಂದಿಗೆ ಮರುನಿರ್ಮಾಣ ಮಾಡಿರುವುದಲ್ಲದೇ ಗ್ರಾಹಕರಿಗೆ ಈ ಬಾರಿ ಹೊಸ ಎಂಜಿನ್ ಆಯ್ಕೆ ನೀಡುತ್ತಿದ್ದು, ಪ್ರಸ್ತತ ಮಾರುಕಟ್ಟೆಯಲ್ಲಿರುವ 2.5-ಲೀಟರ್ ಡೀಸೆಲ್ ಎಂಜಿನ್ ಜೊತೆಗೆ ಹೊಸದಾಗಿ 1.9-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಅಭಿವೃದ್ಧಿಗೊಳಿಸಿದೆ.

ನಮ್ಮ ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಇಸುಝು ಡಿ-ಮ್ಯಾಕ್ಸ್ ವಿ-ಕ್ರಾಸ್ ಫೇಸ್‌ಲಿಫ್ಟ್

ಇಷ್ಟು ದಿನಗಳ ಕಾಲ ಡಿ-ಮ್ಯಾಕ್ಸ್ ವಿ-ಕ್ರಾಸ್ 2.5-ಲೀಟರ್ ಡೀಸೆಲ್ ವರ್ಷನ್‌ನಲ್ಲಿ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಯನ್ನು ಮಾತ್ರವೇ ಮಾರಾಟ ಮಾಡುತ್ತಿದ್ದ ಇಸುಝು ಸಂಸ್ಥೆಯು ಇದೀಗ 1.9-ಲೀಟರ್ ಡೀಸೆಲ್ ಮೂಲಕ ಮತ್ತಷ್ಟು ಆಫ್-ರೋಡ್ ಪ್ರಿಯರನ್ನು ಸೆಳೆಯುವ ನೀರಿಕ್ಷೆಯಲ್ಲಿದೆ.

MOST READ: ಶಿವಮೊಗ್ಗದಲ್ಲಿ ನಡೆದ ಅಪಘಾತದ ವೇಳೆ ತನ್ನ ಸಾಮರ್ಥ್ಯವನ್ನ ನಿರೂಪಿಸಿದ ಟಾಟಾ ಹೆಕ್ಸಾ

ನಮ್ಮ ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಇಸುಝು ಡಿ-ಮ್ಯಾಕ್ಸ್ ವಿ-ಕ್ರಾಸ್ ಫೇಸ್‌ಲಿಫ್ಟ್

ಹಾಗೆಯೇ 2.5-ಲೀಟರ್ ಡಿ-ಮ್ಯಾಕ್ಸ್ ವಿ-ಕ್ರಾಸ್ ಹೈ ಎಂಡ್ ಮಾದರಿಯಲ್ಲಿ ಈ ಬಾರಿ 4X4 ಡ್ರೈವ್ ಸೌಲಭ್ಯವನ್ನು ಪರಿಚಯಿಸಲಾಗುತ್ತಿದ್ದು, ನವೀಕರಿಸಲಾದ ಬ್ಲ್ಯಾಕ್ ಡ್ಯುಯಲ್ ಟೋನ್ ಇಂಟಿರಿಯರ್, ಸೆಂಟರ್ ಕನ್ಸೊಲ್, ಡ್ಯಾಶ್‌ಬೋರ್ಡ್, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಮರುವಿನ್ಯಾಸಗೊಳಿಸಲಾದ ಫ್ರಂಟ್ ಗ್ರಿಲ್, ಸ್ಪೋರ್ಟಿ ಮಾದರಿಯ ರಿಯರ್ ಬಂಪರ್ ಮತ್ತು ಟೈಲ್ ಲೈಟ್ ಪಡೆದುಕೊಳ್ಳಲಿದೆ.

ನಮ್ಮ ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಇಸುಝು ಡಿ-ಮ್ಯಾಕ್ಸ್ ವಿ-ಕ್ರಾಸ್ ಫೇಸ್‌ಲಿಫ್ಟ್

ಜೊತಗೆ ಪ್ರಯಾಣಿಕ ಸುರಕ್ಷತೆಗಾಗಿ ಎಬಿಎಸ್, ಇಬಿಡಿ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, 6 ಏರ್‌ಬ್ಯಾಗ್ ಸೇರಿದಂತೆ ಹಲವು ಹೊಸ ಫೀಚರ್ಸ್‌ಗಳನ್ನು ನೀಡಲಾಗುತ್ತಿದ್ದು, ಬಿಎಸ್-6 ನಿಯಮ ಪಾಲನೆಯಿಂದಾಗಿ ಹೊಸ ಪಿಕ್ ಅಪ್ ಟ್ರಕ್ ಬೆಲೆಯಲ್ಲೂ ಕೂಡಾ ತುಸು ದುಬಾರಿ ಎನ್ನಿಸಲಿವೆ.

MOST READ: ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಜೀಪ್ ರೆನೆಗೆಡ್ ಕಂಪ್ಯಾಕ್ಟ್ ಎಸ್‌ಯುವಿ

ನಮ್ಮ ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಇಸುಝು ಡಿ-ಮ್ಯಾಕ್ಸ್ ವಿ-ಕ್ರಾಸ್ ಫೇಸ್‌ಲಿಫ್ಟ್

ಮಾಲಿನ್ಯ ಪ್ರಮಾಣವನ್ನು ತಗ್ಗಿಸುವಲ್ಲಿ ಪರಿಣಾಮಕಾರಿ ಪಾತ್ರವಹಿಸುವ ಹೊಸ ಎಂಜಿನ್‌ಗಳ ಬೆಲೆಯು ಸದ್ಯ ಮಾರುಕಟ್ಟೆಯಲ್ಲಿರುವ ಎಂಜಿನ್‌ಗಳಿಂದ ರೂ.1.50 ಲಕ್ಷದಿಂದ ರೂ.2.50 ಲಕ್ಷದಷ್ಟು ದುಬಾರಿಯಾಗಲಿದ್ದು, ಡಿ-ಮ್ಯಾಕ್ಸ್ ವಿ-ಕ್ರಾಸ್ ಹೊಸ ಪಿಕ್ ಟ್ರಕ್ ಬೆಲೆ ಕೂಡಾ ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ. 12.49 ಲಕ್ಷದಿಂದ ರೂ. 14 ಲಕ್ಷಕ್ಕೆ ಏರಿಕೆಯಾಗುವ ಸಾಧ್ಯತೆಗಳಿವೆ.

More from DriveSpark

Article Published On: Sunday, April 14, 2019, 8:30 [IST]
English summary
2019 Isuzu D-Max V-Cross Facelift Spotted Testing In Bangalore. Read in Kannada.
Read more on ಇಸುಝು isuzu
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+