ಬಿಡುಗಡೆಗಾಗಿ ಸಜ್ಜುಗೊಳ್ಳುತ್ತಿರುವ ಮಾರುತಿ ಸುಜುಕಿ ಬಲೆನೊ ಫೇಸ್‍ಲಿಫ್ಟ್ ಕಾರು...

ದೇಶಿಯ ವಾಹನ ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿಯು ನಿರಂತರವಾಗಿ ತಮ್ಮ ಹೊಸ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುತ್ತಲೇ ಇದೆ. ಸಂಸ್ಥೆಯು ಸಿಯಾಜ್ ಫೇಸ್‍ಲಿಫ್ಟ್ ಕಾರನ್ನು ಬಿಡುಗಡೆ ಮಾಡಿದ ನಂತರ ಹೊಸ ತಲೆಮಾರಿನ ಎರ್ಟಿಗಾ ಮತ್ತು ಶೀಘ್ರವೇ ಮುಂದಿನ ತಲೆಮಾರಿನ ವ್ಯಾಗನಾರ್ ಕಾರನ್ನು ಬಿಡುಗಡೆಗೊಳಿಸಲಿದೆ.

ಬಿಡುಗಡೆಗಾಗಿ ಸಜ್ಜುಗೊಳ್ಳುತ್ತಿರುವ ಮಾರುತಿ ಸುಜುಕಿ ಬಲೆನೊ ಕಾರು...

ಇಷ್ಟಕ್ಕೆ ಮಾತ್ರ ನಿಲ್ಲದೇಯೆ ಮಾರುತಿ ಸುಜುಕಿ ಸಂಸ್ಥೆಯು 2019ರ ಹೊಸ ಬಲೆನೊ ಫೇಸ್‍ಲಿಫ್ಟ್ ಅನ್ನು ಬಿಡುಗಡೆಗೊಳಿಸುತ್ತಿದ್ದು, ಎಂಜಿನ್ ಕಾರ್ಯಕ್ಷಮತೆಯ ಕುರಿತಾಗಿ ರಸ್ತೆಗಳಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ. ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಕಾರನ್ನು ಗಮನಿಸಿದ್ದಲ್ಲಿ ಈ ಬಾರಿ ಬಲೆನೊ ಫೇಸ್‍ಲಿಫ್ಟ್ ಕಾರು ಹಲವಾರು ಗುರುತರ ಬದಲಾವಣೆಗಳನ್ನು ಪಡೆದು ಬರಲಿದೆ ಎನ್ನಬಹುದು.

ಬಿಡುಗಡೆಗಾಗಿ ಸಜ್ಜುಗೊಳ್ಳುತ್ತಿರುವ ಮಾರುತಿ ಸುಜುಕಿ ಬಲೆನೊ ಕಾರು...

ಮಾರುತಿ ಸುಜುಕಿ ಸಂಸ್ಥೆಯು ಬಲೆನೊ ಮಾದರಿಗಳನ್ನು ಮತ್ತಷ್ಟು ಉನ್ನತ ದರ್ಜೆಯಲ್ಲಿ ಪರಿಚಯಿಸಲು ಯೋಜನೆ ರೂಪಿಸಲಾಗಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಫೇಸ್‌ಲಿಫ್ಟ್ ಬಲೆನೊ ಮಾದರಿಯನ್ನು ಸಂಸ್ಥೆಯ ಹಾರ್ಟ್‍‍‍ಟೆಕ್ಟ್ ಪ್ಲಾಟ್‍ಫಾರ್ಮ್‍ನ ಅಡಿಯಲ್ಲಿ ಸಿದ್ದಗೊಳಿಸಲಾಗುತ್ತಿದೆ.

ಬಿಡುಗಡೆಗಾಗಿ ಸಜ್ಜುಗೊಳ್ಳುತ್ತಿರುವ ಮಾರುತಿ ಸುಜುಕಿ ಬಲೆನೊ ಕಾರು...

2019ರ ಹೊಸ ಬಲೆನೊ ಫೇಸ್‍ಲಿಫ್ಟ್ ಕಾರು ಪ್ರಸ್ತುತ ಮಾದರಿಯ ಕಾರಿನಂತೆಯೆ ವಿನ್ಯಾಸವನ್ನು ಪಡೆದುಕೊಳ್ಳಲಿದ್ದು, ಹೊಸ ಬಂಪರ್‍‍ನಲ್ಲಿ ರೆಕ್ಟಾಂಗ್ಯುಲರ್ ಏರ್ ಡ್ಯಾಮ್, ಹೊಸ ಫಾಗ್ ಲ್ಯಾಂಪ್ ಅನ್ನು ವಿನೂತನವಾಗಿ ಪಡೆದುಕೊಳ್ಳಲಿದೆ. ಮತ್ತು ಕಾರಿನ ಒಳಭಾಗವನ್ನು ಸಹ ಪ್ರೀಮಿಯಂ ಸೌಲಭ್ಯವನ್ನು ಒದಗಿಸುವ ಹಾಗೆ ವಿನ್ಯಾಸ ಮಾಡಲಗಿರುತ್ತದೆ ಎಂದು ಊಹಿಸಲಾಗಿದೆ.

ಬಿಡುಗಡೆಗಾಗಿ ಸಜ್ಜುಗೊಳ್ಳುತ್ತಿರುವ ಮಾರುತಿ ಸುಜುಕಿ ಬಲೆನೊ ಕಾರು...

ಇನ್ನೊಂದು ಪ್ರಮಖ ವಿಚಾರ ಅಂದ್ರೆ, ಬರಲಿರುವ ಬಲೆನೊ ಮಾದರಿಗಳು ಪೆಟ್ರೋಲ್ ಎಂಜಿನ್ ಅಷ್ಟೇ ಅಲ್ಲದೇ ಹೊಸ ಡೀಸೆಲ್ ಎಂಜಿನ್ ಮಾದರಿಗಳು ಸಹ ಖರೀದಿಗೆ ಲಭ್ಯವಾಗಲಿದ್ದು, 2019ರ ಮೊದಲ ತ್ರೈಮಾಸಿಕ ಅವಧಿಗೆ ಫೇಸ್‌ಲಿಫ್ಟ್ ಆವೃತ್ತಿಗಳು ಮಾರುಕಟ್ಟೆಗೆ ಲಗ್ಗೆಯಿಡಲಿವೆ.

ಬಿಡುಗಡೆಗಾಗಿ ಸಜ್ಜುಗೊಳ್ಳುತ್ತಿರುವ ಮಾರುತಿ ಸುಜುಕಿ ಬಲೆನೊ ಕಾರು...

ಹೀಗಾಗಿ ಫೇಸ್‌ಲಿಫ್ಟ್ ಬಲೆನೊ ಕಾರುಗಳು ಸಾಮಾನ್ಯ ಬಲೆನೊ ಕಾರುಗಳಿಂತ ತಾಂತ್ರಿಕವಾಗಿ ಮತ್ತಷ್ಟು ಬಲಿಷ್ಠವಾಗಿರಲಿದ್ದು, ಹೊಸ ನಿಯಮಾವಳಿಗೆ ಅನುಸಾರವಾಗಿ ಬಿಎಸ್ 6 ವೈಶಿಷ್ಟ್ಯತೆಗಳೊಂದಿಗೆ ಹೊಸ ಕಾರಿನ ಎಂಜಿನ್ ಅಭಿವೃದ್ಧಿ ಮಾಡಲಾಗುತ್ತಿದೆ.

ಬಿಡುಗಡೆಗಾಗಿ ಸಜ್ಜುಗೊಳ್ಳುತ್ತಿರುವ ಮಾರುತಿ ಸುಜುಕಿ ಬಲೆನೊ ಕಾರು...

ಎಂಜಿನ್ ಸಾಮರ್ಥ್ಯ

ಸದ್ಯ ಲಭ್ಯವಿರುವ 1.2-ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಮಾದರಿಗಳಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೂ, ಹಳೆಯ 1.3-ಲೀಟರ್‌ ಡೀಸೆಲ್ ಎಂಜಿನ್‌ಗೆ ಬದಲಾಗಿ 1.5-ಲೀಟರ್ ಡೀಸೆಲ್ ಎಂಜಿನ್ ಅಳವಡಿಕೆಯನ್ನು ಹೊಂದಿರಲಿವೆ ಎನ್ನಲಾಗಿದೆ.

ಬಿಡುಗಡೆಗಾಗಿ ಸಜ್ಜುಗೊಳ್ಳುತ್ತಿರುವ ಮಾರುತಿ ಸುಜುಕಿ ಬಲೆನೊ ಕಾರು...

ಹೀಗಾಗಿ 83ಬಿಎಚ್‌ಪಿ ಮತ್ತು 115ಎನ್ಎಂ ಟಾರ್ಕ್ ಉತ್ಪಾದಿಸುತ್ತಿದ್ದ 1.3-ಲೀಟರ್ ಡೀಸೆಲ್ ಎಂಜಿನ್‌ಗಳು ಮತ್ತಷ್ಟು ಪವರ್‌ಫುಲ್ ಕಾರು ಮಾದರಿಗಳಾಗಲಿದ್ದು, ಇದು ಹ್ಯಾಚ್‌ಬ್ಯಾಕ್ ಆವೃತ್ತಿಗಳಲ್ಲಿ ಅತಿಹೆಚ್ಚು ಬಿಎಚ್‌ಪಿ ಉತ್ಪಾದಿಸುವ ಮಾದರಿಯಾಗಲಿದೆ.

ಬಿಡುಗಡೆಗಾಗಿ ಸಜ್ಜುಗೊಳ್ಳುತ್ತಿರುವ ಮಾರುತಿ ಸುಜುಕಿ ಬಲೆನೊ ಕಾರು...

ಡ್ರೈವ್‍ಸ್ಪಾರ್ಕ್ ಅಭಿಪ್ರಾಯ

ತನ್ನ ವಿವಿಧ ಕಾರು ಮಾದರಿಗಳ ಮೂಲಕ ಶೇ.50ಕ್ಕಿಂತಲೂ ಹೆಚ್ಚು ಮಾರಾಟ ಪಾಲು ಹೊಂದಿರುವ ಮಾರುತಿ ಸುಜುಕಿ ಸಂಸ್ಥೆಯು ಕಾಲಕ್ಕೆ ಅನುಗುಣವಾಗಿ ಹೊಸ ಹೊಸ ಮಾದರಿಗಳನ್ನು ಪರಿಚಯಿಸುತ್ತಲೇ ಇರುತ್ತದೆ. ಇದೀಗ ಬಲೆನೊ ಮಾದರಿಯನ್ನು ಹೊಸ ಎಂಜಿನ್‌ನೊಂದಿಗೆ ಬಿಡುಗಡೆ ಮಾಡುತ್ತಿದ್ದು, 1.5-ಲೀಟರ್ ಡೀಸೆಲ್ ಆವೃತ್ತಿಯು ಹ್ಯಾಚ್‌ಬ್ಯಾಕ್ ಆವೃತ್ತಿಗಳಲ್ಲೇ ಉತ್ತಮ ಮೈಲೇಜ್ ನೀಡುವ ಕಾರು ಮಾದರಿಯಾಗುವ ನೀರಿಕ್ಷೆಯಿದೆ.

Source: Gaadiwaadi

Most Read Articles

Kannada
English summary
New 2019 Maruti Baleno Facelift First Pics Are Out. Read In Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X