ಹೊಸ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಎಸ್‍ಯುವಿ ಕಾರಿನ ಉತ್ಪಾದನೆ ಶುರು...

ಜನಪ್ರಿಯ ಕಾರು ಉತ್ಪಾದನಾ ಮತ್ತು ಮಾರಾಟ ಸಂಸ್ಥೆಯಾದ ಮಾರುತಿ ಸುಜುಕಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರು ಉತ್ಪನ್ನಗಳನ್ನು ಪರಿಚಯಿಸುವ ಇರಾದೆಯಲ್ಲಿದ್ದು, ಸದ್ಯ ಮಾರುಕಟ್ಟೆಲ್ಲಿರುವ ಮಧ್ಯಮ ಗಾತ್ರದ ಪ್ರಮುಖ ಎಸ್‌ಯುವಿಗಳಿಗೆ ಪೈಪೋಟಿ ನೀಡಬಲ್ಲ ವಿಟಾರಾ ಎಸ್‌ಯುವಿ ಕಾರನ್ನು ಬಿಡುಗಡೆಗಾಗಿ ಸಿದ್ದಗೊಳಿಸಲಾಗಿದೆ.

ಹೊಸ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಎಸ್‍ಯುವಿ ಕಾರಿನ ಉತ್ಪಾದನೆ ಶುರು...

ವಿಟಾರಾ ಬ್ರೆಝಾ ಕಾರುಗಳಿಂತಲೂ ವಿಭಿನ್ನವಾಗಿರುವ ವಿಟಾರಾ ಹೊಸ ಕಾರು ಎಸ್ ಕ್ರಾಸ್‌ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಐಷಾರಾಮಿ ಸೌಲಭ್ಯಗಳನ್ನು ಹೊಂದಿರಲಿದ್ದು, 2020ರ ಆರಂಭದಲ್ಲಿ ಹೊಸ ಕಾರುಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಕಾರಿನ ಉತ್ಪಾದನೆಯನ್ನು ಕೂಡಾ ಪ್ರಾರಂಭಿಸಿರುವುದಾಗಿ ಸಂಸ್ಥೆಯು ಬಹಿರಂಗಗೊಳಿಸಿದ್ದು, ಹಂಗೇರಿಯಲ್ಲಿರುವ ಸುಜುಕಿ ಸಂಸ್ಥೆಯ ಮುಖ್ಯ ಕಾರು ಉತ್ಪಾದನಾ ಘಟಕದಲ್ಲಿ ಹೊಸ ವಿಟಾರಾ ಕಾರುಗಳಿಗೆ ಫೈನಲ್ ಟಚ್ ನೀಡಲಾಗುತ್ತಿದೆ.

ಹೊಸ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಎಸ್‍ಯುವಿ ಕಾರಿನ ಉತ್ಪಾದನೆ ಶುರು...

ಹೀಗಾಗಿ ಹೊಸ ವಿಟಾರಾ ಬ್ರೆಝಾ ಕಾರಿನಲ್ಲಿ ಈ ಬಾರಿ ಮರುವಿನ್ಯಾಸ ಮಾಡಲಾದ ಗ್ರಿಲ್ ಮತ್ತು ಬಂಪರ್‍‍ನಲ್ಲಿ ಮಾರ್ಪಾಡುಗಳನ್ನು ಮಾಡಲಾಗುತ್ತಿದೆ. ಮುಂಭಾಗದಲ್ಲಿ ಎಲ್ಇಡಿ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ಸ್ ಅನ್ನು ಒದಗಿಸಲಾಗಿದ್ದು, ಹೊಸ ಸೀಟ್ ಫ್ಯಾಬ್ರಿಕ್ ಹಾಗು ಸ್ಮಾರ್ಟ್‍ಸ್ಟೂಡಿಯೋ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗುತ್ತಿದೆ.

ಹೊಸ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಎಸ್‍ಯುವಿ ಕಾರಿನ ಉತ್ಪಾದನೆ ಶುರು...

ಮಾರುತಿ ಸುಜುಕಿ ಸಂಸ್ಥೆಯು ಈ ಹಿಂದಿನ ವಿಟಾರಾ ಗ್ರ್ಯಾಂಡ್ ಮಾರಾಟದಲ್ಲಿ ಆದ ಹಿನ್ನಡೆಯನ್ನು ಹೊಸ ಕಾರಿನ ಮೂಲಕ ಸುಧಾರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದು, ಬರಲಿರುವ ಹ್ಯುಂಡೈ ಕ್ರೆಟಾ 7 ಸೀಟರ್ ಮತ್ತು ಮಾರಾಟಕ್ಕೆ ಲಭ್ಯವಿರುವ ಮಹೀಂದ್ರಾ ಎಕ್ಸ್‌ಯುವಿ500 ಕಾರುಗಳಿಗೆ ಈ ಕಾರು ತೀವ್ರ ಪೈಪೋಟಿ ನೀಡಲಿದೆ.

ಹೊಸ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಎಸ್‍ಯುವಿ ಕಾರಿನ ಉತ್ಪಾದನೆ ಶುರು...

ಮಿಡ್ ರೇಂಜ್ ಎಸ್‍ಯುವಿ ಕಾರು ಮಾದರಿ ಇದಾಗಿದ್ದು, 2020ರ ಆರಂಭದಲ್ಲಿ ಬಿಡುಗಡೆಗೊಳಿಸಲು ನಿರ್ಧರಿಸುವ ಮಾರುತಿ ಸುಜುಕಿಯ ಹೊಸ ಎಸ್‍ಯುವಿ ಕಾರು ಅನ್ನು ಈಗಾಗಲೇ ದೇಶದ ವಿವಿಧ ಕಡೆಗಳಲ್ಲಿ ಸ್ಪಾಟ್ ಟೆಸ್ಟಿಂಗ್ ವೇಳೆ ಕೂಡಾ ನಡೆಸಲಾಗಿದೆ.

ಹೊಸ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಎಸ್‍ಯುವಿ ಕಾರಿನ ಉತ್ಪಾದನೆ ಶುರು...

ಸುಜುಕಿ ವಿಟಾರಾ ಈಗಾಗಲೇ ಯೂರೋಪ್‍ನ ಮಾರುಕಟ್ಟೆಯಲ್ಲಿ ಯಶಸ್ವಿಯಾಗಿ ಮಾರಾಟಗೊಳ್ಳುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಲ್ಲಿ ದೊರೆಯುತ್ತಿದೆ. ಹೀಗಾಗಿ ಭಾರತದಲ್ಲಿ ಬಿಡುಗಡೆಯಾಗಲಿರುವ ಈ ಕಾರಿನ ಬೆಲೆಯನ್ನು ರೂ. 12 ಲಕ್ಷ ದಿಂದ ರೂ. 16 ಲಕ್ಷದೊಳಗೆ ನಿರ್ಧರಿಸಲಿದ್ದಾರೆ.

ಹೊಸ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಎಸ್‍ಯುವಿ ಕಾರಿನ ಉತ್ಪಾದನೆ ಶುರು...

ಸದ್ಯ ವಿದೇಶಿ ಮಾರುಕಟ್ಟೆಗಳಲ್ಲಿ ವಿಟಾರಾ ಕಾರಿನ ಪೆಟ್ರೋಲ್ ಆವೃತ್ತಿಯು 1.0-ಲೀಟರ್ ಮತ್ತು 1.4 ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್ ಹೊಂದಿದ್ದು, 140-ಬಿಹೆಚ್‍ಪಿ ಮತ್ತು 230-ಎನ್ಎಂ ಟಾರ್ಕ್ಅನ್ನು ಉತ್ಪಾದಿಸುತ್ತೆ.

ಹೊಸ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಎಸ್‍ಯುವಿ ಕಾರಿನ ಉತ್ಪಾದನೆ ಶುರು...

ಆದ್ರೆ ಭಾರತದಲ್ಲಿ ಬಿಡುಗಡೆಯಾಗಲಿರುವ ಕಾರುಗಳು 1.5-ಲೀಟರ್ ಪೆಟ್ರೋಲ್ ಎಂಜಿನ್ ಹೊಂದುವ ಸಾಧ್ಯತೆಗಳಿದ್ದು, ಹೊಸ ಎಂಜಿನ್ 5 ಸ್ಪೀಡ್ ಮ್ಯಾನುವಲ್ ಅಥವಾ ಆಟೋಮ್ಯಾಟಿಕ್ ಗೇರ್‍‍‍ಬಾಕ್ಸ್ ಆಯ್ಕೆಯಲ್ಲಿ ಬರಲಿದೆ ಎನ್ನಲಾಗಿದೆ.

ಹೊಸ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಎಸ್‍ಯುವಿ ಕಾರಿನ ಉತ್ಪಾದನೆ ಶುರು...

ಹಾಗೆಯೇ ವಿಟಾರಾ ಕಾರಿನ ಡೀಸೆಲ್ ಆವೃತ್ತಿಯು ಎಸ್ ಕ್ರಾಸ್ ಕಾರಿನ ಮಾದರಿಯಲ್ಲಿ 1.6-ಲೀಟರ್ ಡೀಸೆಲ್ ಎಂಜಿನ್ ಹೊಂದಿರಲಿದ್ದು, 118-ಬಿಹೆಚ್‍ಪಿ ಮತ್ತು 320-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಗೆ ಜೋಡಣೆ ಇರಲಿದೆ.

ಹೊಸ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಎಸ್‍ಯುವಿ ಕಾರಿನ ಉತ್ಪಾದನೆ ಶುರು...

ಜೊತೆಗೆ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಮಾರುತಿ ವಿಟಾರಾ ಕಾರುಗಳು ಫ್ರಂಟ್ ವೀಲ್ ಡ್ರೈವ್ ಎಸ್‍ಯುವಿ ರೂಪದಲ್ಲಿ ಬರಬಹುದು ಎಂದು ಅಂದಾಜಿಸಲಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿನ ವಿಟಾರಾ ಕಾರು ಆಲ್ ವೀಲ್ ಡ್ರೈವ್ ರೂಪದಲ್ಲಿ ದೊರೆಯುತ್ತಿದೆ.

ಹೊಸ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಎಸ್‍ಯುವಿ ಕಾರಿನ ಉತ್ಪಾದನೆ ಶುರು...

ಇದಲ್ಲದೇ ಹೊಸ ರೂಪದ ವಿಟಾರಾ ಕಾರುಗಳು ಎಸ್‌ಯುವಿ ಕಾರುಗಳಲ್ಲೇ ವಿಶೇಷ ಗುಣಲಕ್ಷಣಗಳನ್ನು ಹೊಂದಿದ್ದು, 7ಸೀಟರ್ ವಿನ್ಯಾಸದೊಂದಿಗೆ ಪ್ರಯಾಣಿಕರ ಸುರಕ್ಷತೆಗಾಗಿ ಎಬಿಎಸ್ ಮತ್ತು 6 ಏರ್‍‍ಬ್ಯಾಗ್ ಗಳನ್ನು ಬಳಸಲಾಗಿದೆ.

ಹೊಸ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಎಸ್‍ಯುವಿ ಕಾರಿನ ಉತ್ಪಾದನೆ ಶುರು...

ಇದರಿಂದಾಗಿ ಎಸ್‌ಯುವಿ ಪ್ರಿಯರನ್ನು ಸೆಳೆಯುವಲ್ಲಿ ಯಶಸ್ವಿಯಾಗಬಹುದೆಂದು ನೀರಿಕ್ಷೆ ಮಾಡಿರುವ ಮಾರುತಿ ಸುಜುಕಿ ಸಂಸ್ಥೆಯು ಪ್ರಿಮಿಯಂ ಕಾರು ಮಾರಾಟ ವಿಭಾಗದಲ್ಲಿನ ಕೊರತೆಯನ್ನು ನಿಗಿಸಲು ಈ ಕಾರನ್ನು ನಿರ್ಮಾಣಗೊಳಿಸುತ್ತಿದ್ದು, ಕ್ರೇಟಾ ಫೇಸ್‌ಲಿಫ್ಟ್, ಎಕ್ಸ್‌ಯುವಿ 500 ಮತ್ತು ಮುಂಬರುವ ಟಾಟಾ ಹ್ಯಾರಿಯರ್, ನಿಸ್ಸಾನ್ ಕಿಕ್ಸ್ ಕಾರುಗಳಿಗೂ ಇದು ಪೈಪೋಟಿ ನೀಡಲಿದೆ.

Source: Carwale

More from DriveSpark

Article Published On: Friday, March 22, 2019, 8:30 [IST]
English summary
2019 Maruti Suzuki Vitara Brezza facelift to arrive soon in India. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+