ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಬೊಲೆರೊ

ಮಹೀಂದ್ರಾ ಆಂಡ್ ಮಹೀಂದ್ರಾ ಕಂಪನಿಯ ಎಸ್‍‍ಯುವಿ ಸರಣಿಯಲ್ಲಿ ಅತಿ ಹೆಚ್ಚು ಮಾರಾಟವಾಗುವ ವಾಹನಗಳಲ್ಲಿ ಬೊಲೆರೊ ಸಹ ಒಂದಾಗಿದೆ. ಬೊಲೆರೊ ದೇಶಿಯ ಮಾರುಕಟ್ಟೆಯಲ್ಲಿ ದೀರ್ಘಕಾಲದಿಂದ ಉತ್ತಮವಾಗಿ ಮಾರಾಟವಾಗುತ್ತಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಬೊಲೆರೊ

ಮುಂದಿನ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಮಾಲಿನ್ಯ ನಿಯಂತ್ರಿಸಲು ಕೇಂದ್ರ ಸರ್ಕಾರವು ಬಿಎಸ್-6 ಮಾಲಿನ್ಯ ನಿಯಮವನ್ನು ಜಾರಿಗೊಳಿಸುತ್ತಿದೆ. ಇದೀಗ ಜನಪ್ರಿಯ ಕಾರು ಉತ್ಪಾದಕರು ತಮ್ಮ ಸರಣಿಯಲ್ಲಿರುವ ಕಾರುಗಳನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುತ್ತಿದ್ದಾರೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಬೊಲೆರೊ

ಮಹೀಂದ್ರಾ ಕಂಪನಿಯು ಸಹ ತನ್ನ ಸರಣಿಯಲ್ಲಿನ ಪ್ರಮುಖ ಮಾದರಿಯನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುವುದರಲ್ಲಿ ನಿರತವಾಗಿದೆ. ಇದರ ಭಾಗವಾಗಿ ಕಂಪನಿಯ ಜನಪ್ರಿಯ ಎಸ್‍‍ಯುವಿಯಾದ ಬೊಲೆರೊವನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುತ್ತಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಬೊಲೆರೊ

ಮಹೀಂದ್ರಾ ಕಂಪನಿಯು ತನ್ನ ಬೊಲೆರೊ ಎಸ್‍‍ಯುವಿಯಲ್ಲಿ ಬಿಎಸ್-6 ಎಂಜಿನ್ ಅನ್ನು ಅಳವಡಿಸಿ ಸ್ಪಾಟ್ ಟೆಸ್ಟ್ ಮಾಡಿದೆ. ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಲೆಮನ್ ಗ್ರೀನ್ ಬಹಿರಂಗಪಡಿಸಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಬೊಲೆರೊ

ಬಿಎಸ್-6 ಬೊಲೆರೊ ಎಸ್‍‍ಯುವಿನಲ್ಲಿ ಹೊಸ ಕ್ರ್ಯಾಶ್ ಟೆಸ್ಟ್ ಸುರಕ್ಷತಾ ನಿಯಮಕ್ಕೆ ಅನುಗುಣವಾಗಿ ಅದರ ಮಂಭಾಗವನ್ನು ನವೀಕರಿಸಲಾಗಿದೆ. ಮುಂಭಾಗದ ಪ್ರಯಾಣಿಕರ ಸುರಕ್ಷತೆಗೆ ಈ ಹೊಸ ನವೀಕರಣವು ಸಹಕಾರಿಯಾಗಲಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಬೊಲೆರೊ

ಹೊಸ ಬಿಎಸ್-6 ಮಹೀಂದ್ರಾ ಬೊಲೆರೊ ಬಾಕ್ಸೀ ವಿನ್ಯಾಸವನ್ನು ಹೊಂದಿದೆ. ಹೊಸ ಬೊಲೆರೊ ಎಸ್‍‍ಯುವಿಯಲ್ಲಿ ಹೆಚ್ಚಿನ ಸುರಕ್ಷತೆಯನ್ನು ನೀಡುವುದರಿಂದ ದೇಶಿಯ ಮಾರುಕಟ್ಟೆಯಲ್ಲಿ ಇನ್ನಷ್ಟು ಗ್ರಾಹಕರನ್ನು ಸೆಳೆಯಬಹುದು.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಬೊಲೆರೊ

ಸ್ಪಾಟ್ ಟೆಸ್ಟ್ ನಲ್ಲಿ ಕಂಡು ಬಂದ ಬೊಲೆರೊದ ಮುಂಭಾಗದಲ್ಲಿ ನವೀಕರಿಸಿದ ಬಂಪರ್ ಮತ್ತು ನವೀಕರಿಸಿದ ಹೆಡ್‍‍ಲ್ಯಾಂಪ್‍‍ಗಳನ್ನು ಅಳವಡಿಸಲಾಗಿದೆ. ಈ ಹೊಸ ನವೀಕರಣದಿಂದ ಬೊಲೆರೊ ಮುಂಭಾಗವು ಆಕರ್ಷಕ ಲುಕ್ ಅನ್ನು ಹೊಂದಲಿದೆ.

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಬೊಲೆರೊ

ಇನ್ನು ಹೊಸ ಬೊಲೆರೊ ಎಸ್‍‍ಯುವಿಯ ಇಂಟಿರಿಯರ್‍‍ನಲ್ಲಿ ಕೆಲವು ಹೆಚ್ಚುವರಿ ಫೀಚರ್ಸ್‍‍ಗಳನ್ನು ಅಳವಡಿಸುವ ಸಾಧ್ಯತೆಗಳಿವೆ. ಬೊಲೆರೊ ಎಸ್‍‍ಯುವಿಯು 1.5 ಲೀಟರ್ ಡೀಸೆಲ್ ಎಂಜಿನ್ ಅನ್ನು ನವೀಕರಿಸುವ ಸಾಧ್ಯತೆಗಳಿವೆ.

MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬೊಲೆರೊದಲ್ಲಿರುವ 1.5 ಲೀಟರ್‍‍ನ ಎಂಜಿನ್ 70 ಬಿ‍‍ಹೆಚ್‍‍ಪಿ ಪವರ್ ಮತ್ತು 195 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 5 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಬೊಲೆರೊ

ಹೊಸ ಮಹೀಂದ್ರಾ ಬೊಲೆರೊ ಎಸ್‍‍ಯುವಿಯಲ್ಲಿ ಸುರಕ್ಷತೆಗಾಗಿ ಏರ್‍‍ಬ್ಯಾಗ್‍‍ಗಳು, ರೇರ್ ಪಾರ್ಕಿಂಗ್ ಸೆನ್ಸಾರ್ ಮತ್ತು ಆ್ಯಂಟಿ ಲಾಕ್ ಬ್ರೇಕಿಂಗ್ ಸಿಸ್ಟಂ(ಎ‍‍ಬಿಎಸ್) ಅನ್ನು ಅಳವಡಿಸಬಹುದು. ಬೊಲೆರೊ ಎಸ್‍‍ಯು‍ವಿ ವಿಭಾಗದಲ್ಲಿ ಹೆಚ್ಚು ಮಾರಾಟವಾದ ಎಸ್‍ಯುವಿಗಳಲ್ಲಿ ಒಂದಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಬಿಎಸ್-6 ಮಹೀಂದ್ರಾ ಬೊಲೆರೊ

ಬಿಎಸ್-6 ಮಾಲಿನ್ಯ ನಿಯಮ ಮುಂದಿನ ವರ್ಷದ ಏಪ್ರಿಲ್ ತಿಂಗಳಲ್ಲಿ ಜಾರಿಯಾಗುವುದರಿಂದ ಬೊಲೆರೊ ಎಸ್‍‍ಯುವಿಯನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಸಾರವಾಗಿ ನವೀಕರಿಸಲಾಗುತ್ತಿದೆ. ಇದರಿಂದ 2020ರ ಬೊಲೆರೊ ಬೆಲೆಯು ಪ್ರಸ್ತುತ ಮಾದರಿಗಿಂತ ತುಸು ಹೆಚ್ಚಾಗಿರಲಿದೆ. ಮುಂದಿನ ವರ್ಷ ಹೊಸ ಬೊಲೆರೊ ಎಸ್‍ಯುವಿಯು ಭಾರತದಲ್ಲಿ ಬಿಡುಗಡೆಯಾಗಲಿದೆ.

Source: Lemon Green Studios/YouTube

Most Read Articles

Kannada
English summary
2020 Mahindra Bolero BS6 Caught Testing With Emission Test Equipment - Read in Kannada
Story first published: Wednesday, December 11, 2019, 11:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X