ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹ್ಯುಂಡೈ ಎಲೈಟ್ ಐ20
ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ ತನ್ನ ಎಲೈಟ್ ಐ20 ಕಾರನ್ನು ಮತ್ತೊಮ್ಮೆ ಸ್ಪಾಟ್ ಟೆಸ್ಟ್ ಮಾಡಿದೆ. ಈ ಕಾರ್ ಅನ್ನು ಮುಂದಿನ ವರ್ಷದ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿರುವ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಲು ಕಂಪನಿಯು ಸಜ್ಜಾಗುತ್ತಿದೆ.

ಉತ್ಪಾದನೆ ಪೂರ್ಣ ಪ್ರಮಾಣದಲ್ಲಿ ಮುಗಿದು ಮಾರುಕಟ್ಟೆಗೆ ಲಗ್ಗೆ ಇಡುವ ಮೊದಲು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರವನ್ನು ಗಾಡಿವಾಡಿ ಬಹಿರಂಗಪಡಿಸಿದೆ. 2020ರ ಹ್ಯುಂಡೈ ಎಲೈಟ್ ಐ20 ಕಾರಿನ ವಿನ್ಯಾಸದಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಹೊಸ ಎಲೈಟ್ ಐ20 ಕಾರು ಆಕರ್ಷಕ ಲುಕ್ ಅನ್ನು ಹೊಂದಿದೆ.

ಹ್ಯುಂಡೈ ಐ20 ಕಾರ್ ಅನ್ನು ಯುವ ಖರೀದಿದಾರರು ಹಾಗೂ ಕುಟುಂಬ ಆಧಾರಿತ ಗ್ರಾಹಕರನ್ನು ಗುರಿಯಾಗಿಸಿಕೊಂಡು ಅಭಿವೃದ್ದಿಪಡಿಸಲಾಗಿದೆ. 2020ರ ಹ್ಯುಂಡೈ ಕಾರಿನಲ್ಲಿ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ ಅನ್ನು ಅಳವಡಿಸಲಾಗಿದೆ. ಟಾಪ್ ಎಂಡ್ ಮಾದರಿಯಲ್ಲಿ ಎಲ್‍ಇಡಿ ಡೇಟೈಮ್ ರನ್ನಿಂಗ್ ಲೈಟ್, ಕ್ಯಾಸ್ಕೇಡಿಂಗ್ ಫ್ರಂಟ್ ಗ್ರಿಲ್, ಎಲ್‍ಇಡಿ ಟೇಲ್‍ಲ್ಯಾಂಪ್, ಇಂಡಿಕೇಟರ್ ಮತ್ತು ಸೆನ್ಸರಿಂಗ್ ವೈಪರ್‍ಗಳಿವೆ .

ಹೊಸ ಕಾರಿನ ಇಂಟಿರಿಯರ್‍ನಲ್ಲಿ ಕಾರ್‍ಪ್ಲೇ ಮತ್ತು ಆಂಡಾಯ್ಡ್ ಆಟೋ ಕನೆಕ್ಟಿವಿಟಿ, ಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ವೈರ್‍ಲೆಸ್ ಚಾರ್ಜಿಂಗ್ ಸೌಲಭ್ಯ, ಸ್ಟೀಯರಿಂಗ್ ಮೌಟಂಡ್ ಕಂಟ್ರೋಲ್ , ಹೆಚ್ಚಿನ ಸ್ಪೇಸ್ ಇರುವ ಕ್ಯಾಬಿನ್, ಹೊಸ ಡ್ಯಾಶ್‍ಬೋರ್ಡ್ ಮತ್ತು ಕಂಟ್ರೋಲ್ಸ್, ಪ್ರೀಮಿಯಂ ಸೀಟ್ ಫ್ಯಾಬ್ರಿಕ್ ಮತ್ತು ದೊಡ್ದ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂಗಳನ್ನು ಅಳವಡಿಸಲಾಗಿದೆ.

2020ರ ಹ್ಯುಂಡೈ ಎಲೈಟ್ ಐ20 ಕಾರ್ ಅನ್ನು ಬಿಎಸ್-6 ಪ್ರೆಟ್ರೋಲ್ ಮತ್ತು ಡೀಸೆಲ್ ಎಂಜಿನ್‍ಗಳೊಂದಿಗೆ ಬಿಡುಗಡೆಗೊಳಿಸಲಾಗುವುದು. ಈ ಕಾರಿನಲ್ಲಿ ತನ್ನದೆ ಸರಣಿಯ ವೆನ್ಯೂ ಎಸ್‍ಯುವಿನಲ್ಲಿರುವ 1.0 ಲೀಟರ್ ಟರ್ಬೊ ಜಿಡಿಐ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸುವ ಸಾಧ್ಯತೆಗಳಿದೆ.

ಡಿಸಿಟಿ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಹೈ-ಸ್ಪೆಕ್ ರೂಪಾಂತರಗಳಲ್ಲಿ ಅಳವಡಿಸಬಹುದು. ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಎಲೈಟ್ ಐ20 ಕಾರಿನಲ್ಲಿ 1.4 ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 89 ಬಿಹೆಚ್‍ಪಿ ಪವರ್ ಮತ್ತು 219 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಡೀಸೆಲ್ ಆವೃತ್ತಿಯು ಪ್ರತಿ ಗಂಟೆಗೆ 165 ಕಿಲೋಮೀಟರ್ ಟಾಪ್ ಸ್ಪೀಡ್ ಹೊಂದಿದೆ. ಹ್ಯುಂಡೈ ಇಂಡಿಯಾ ಕಂಪನಿಯು 2020ರ ಹೊಸ ವೆನ್ಯೂ ಮತ್ತು ಗ್ರ್ಯಾಂಡ್ ಐ10 ನಿಯೊಸ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.
MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಆಟೋಮೊಬೈಲ್ ಕ್ಷೇತ್ರ ಕಳೆದ ಹಲವು ತಿಂಗಳುಗಳಿಂದ ಕುಸಿದ ಕಾರಣ ಕಾರುಗಳ ಮಾರಾಟದ ಮೇಲೆ ಪರಿಣಾಮ ಬೀರಿತ್ತು. ಇಂತಹ ಸಂದರ್ಭದಲ್ಲಿ ದಕ್ಷಿಣ ಕೊರಿಯಾದ ಕಂಪನಿಯ ವೆನ್ಯೂ ಕಾರು ಉತ್ತಮವಾಗಿ ಮಾರಾಟವಾಗಿದ್ದರಿಂದಾಗಿ ಕಂಪನಿಯ ಮೇಲೆ ದೊಡ್ಡ ಮಟ್ಟದ ಪರಿಣಾಮ ಬೀರಲಿಲ್ಲ.
MOST READ: ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಸಚಿವ ನಿತಿನ್ ಗಡ್ಕರಿ ..!

ಹ್ಯುಂಡೈ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಸಾಕಷ್ಟು ಕಾರುಗಳನ್ನು ಬಿಡುಗಡೆಗೊಳಿಸುವತ್ತ ನಿರತವಾಗಿದೆ. ಇವುಗಳಲ್ಲಿ ಹೊಸ ಒರಾ ಸೆಡಾನ್ ಕಾರ್ ಸೇರಿದಂತೆ ಹಲವಾರು ಹೊಸ ಕಾರುಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.
MOST READ: ಸದ್ದಿಲ್ಲದೇ ಕಾರುಗಳನ್ನು ರಿಕಾಲ್ ಮಾಡುತ್ತಿದೆ ಮಾರುತಿ

ಹ್ಯುಂಡೈ ಎಲೈಟ್ ಐ20 ಕಾರ್ ಅನ್ನು ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಹ್ಯುಂಡೈ ಎಲೈಟ್ ಐ20 ಕಾರು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಾರುತಿ ಬಲೆನೊ, ಹೋಂಡಾ ಜಾಝ್ ಮತ್ತು ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿರುವ ಟಾಟಾ ಆಲ್‍ಟ್ರೊಜ್ ಕಾರುಗಳಿಗೆ ಪೈಪೋಟಿ ನೀಡಲಿದೆ.


Click it and Unblock the Notifications








