Just In
- 10 hrs ago
ಎಲೆಕ್ಟ್ರಿಕ್ ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- 100 ಹೊಸ ಮಾರಾಟ ಮಳಿಗೆಗಳನ್ನು ತೆರೆಯಲಿದೆ ಟಾಟಾ
- 24 hrs ago
ನೆಚ್ಚಿನ ವಾಹನದ 50ನೇ ಹುಟ್ಟುಹಬ್ಬವನ್ನು ಆಚರಿಸಿದ ಅಪ್ಪ-ಮಗ
- 1 day ago
ಗ್ರಾಹಕರ ಕೈಸೇರಲು ಸಿದ್ದವಾದ ಬಿಎಸ್-6 ಎಂಜಿನ್ ಪ್ರೇರಿತ ಯಮಹಾ ಆರ್15 ವಿ3.0
- 1 day ago
ಆಟೋ ಮಾರುಕಟ್ಟೆ ಕುಸಿತದ ನಡುವೆಯೂ ಭರ್ಜರಿ ಮಾರಾಟವಾದ ಮಹೀಂದ್ರಾ ಸ್ಕಾರ್ಪಿಯೋ
Don't Miss!
- Movies
ವಂಚನೆ ಆರೋಪದ ಬಗ್ಗೆ ಸ್ಪಷ್ಟನೆ ನೀಡಿದ 'ಲವ್ ಗುರು' ನಿರ್ದೇಶಕ
- News
ಫೋನ್ ನಂಬರ್ ಶೇರ್ ಮಾಡುವಾಗ ಹುಷಾರ್: ಭಾಸ್ಕರ್ ರಾವ್ ಟ್ವೀಟ್
- Finance
ಸಾವಯವ ಬೆಲ್ಲದ ಬಿಜಿನೆಸ್ ಹೇಗಿದೆ, ಎಷ್ಟು ಬೇಕು ಬಂಡವಾಳ?
- Technology
ಆನ್ಲೈನ್ ಜಾಹೀರಾತುಗಳಿಂದ ಬೇಸರವಾಗಿದ್ದೀರಾ..? ಇಲ್ಲಿದೆ ಪರಿಹಾರ..!
- Sports
ಮತ್ತೆ ಅಂತರಾಷ್ಟ್ರೀಯ ಕ್ರಿಕೆಟ್ಗೆ ಮರುಳುತ್ತಾರಾ ಎಬಿ ಡಿವಿಲಿಯರ್ಸ್?
- Lifestyle
ವಾರ ಭವಿಷ್ಯ- ಡಿಸೆಂಬರ್ 15ರಿಂದ ಡಿಸೆಂಬರ್ 21ರ ತನಕ
- Education
KSP: ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಇಟಿ- ಪಿಎಸ್ಟಿ ಪ್ರವೇಶ ಪತ್ರ ಬಿಡುಗಡೆ
- Travel
ಹಳ್ಳಿಗಾಡಿನ ಸೊಗಡನ್ನು ಅನುಭವಿಸಲು ಬೆಂಗಳೂರಿನ ಸುತ್ತಮುತ್ತ ಇರುವ ಈ ಸುಂದರ ಗ್ರಾಮಗಳಿಗೆ ಹೋಗಿ ಬನ್ನಿ
ಮತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಬಿಎಸ್-6 ಎಕ್ಸ್‌ಯುವಿ 500
ಮಹೀಂದ್ರಾ ಕಂಪನಿಯು ತನ್ನ ಎಕ್ಸ್‌ಯುವಿ 500 ಅನ್ನು ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಹಲವಾರು ನವೀಕರಣಗಳೊಂದಿಗೆ ಮುಂದಿನ ವರ್ಷ ದೇಶಿಯ ಮಾರುಕಟ್ಟೆಯಲ್ಲಿ ಎಕ್ಸ್‌ಯುವಿ 500 ಅನ್ನು ಬಿಡುಗಡೆಗೊಳಿಸಲಿದೆ.

2020ರ ಮಹೀಂದ್ರಾ ಎಕ್ಸ್‌ಯುವಿ 500 ಎಸ್‍ಯುವಿಯು ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲ್ಲಿರುವ 2020ರ ಆಟೋ ಎಕ್ಸ್ ಪೋದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದೆ. ಹೊಸ ಎಕ್ಸ್‌ಯುವಿ 500 ನಲ್ಲಿ ಹಲವಾರು ನವೀಕರಣಗಳನ್ನು ನಡೆಸಲಾಗಿದೆ. ಹೊಸ ಎಕ್ಸ್‌ಯುವಿ 500 ಮೊನೊಕೊಕ್ ಪ್ಲಾಟ್‌ಫಾರಾಂ ಅನ್ನು ಆಧರಿಸಿದೆ.

ಸ್ಪಾಟ್ ಟೆಸ್ಟ್ ನಡೆಸುತ್ತಿರುವ ವೇಳೆಯಲ್ಲಿ ಅಲಾಯ್ ವ್ಹೀಲ್‍ಗಳನ್ನು ಅಳವಡಿಸಿರಲಿಲ್ಲ. ಆದರೆ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿರುವ ಎಸ್‍ಯುವಿನಲ್ಲಿ ಅಲಾಯ್ ವ್ಹೀಲ್‍ಗಳು ಹೊಂದಿರಲಿದೆ. ಸ್ಪಾಟ್ ಟೆಸ್ಟ್ ನಲ್ಲಿ ಕಂಡು ಬಂದ ಹೆಡ್ ಲೈಟ್ ಮತ್ತು ಟೇಲ್ ಲೈಟ್‍ಗಳು ಸಹ ನಕಲಿಯಾಗಿದೆ. ಆದರೆ ಮುಂದಿನ ದಿನಗಳಲ್ಲಿ ಇದನ್ನು ಬಹಿರಂಗಗೊಳಿಸುವ ಸಾಧ್ಯತೆಗಳಿವೆ.

ಇಂಟಿರಿಯರ್‍ನಲ್ಲಿ ಹಲವಾರು ಉನ್ನತ ಮಟ್ಟದ ನೂತನ ಫೀಚರ್ಸ್‍ಗಳನ್ನು ಅಳವಡಿಸಲಾಗಿದೆ. ಅಮೇರಿಕಾದ ಸಾಂಗ್‍ಯಾಂಗ್ ಕೊರಂಡೊದಿಂದ ಹಲವಾರು ಫೀಚರ್ಸ್‍ಗಳನ್ನು ಎರವಲು ಪಡೆಯಲಾಗಿದೆ.

ಹೊಸ ಕಾರಿನಲ್ಲಿ ಹಲವಾರು ಹೊಸ ಸುರಕ್ಷಾ ಸೌಲಭ್ಯಗಳನ್ನು ನೀಡಲಾಗಿದ್ದು, ಇದರಲ್ಲಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳಿವೆ.

ಹಾಗೆಯೇ 6 ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರೇರ್ ಎಸಿ ವೆಂಟ್ಸ್, ಲೆದರ್ ಸೀಟುಗಳು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೇನ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

ಪ್ರಸ್ತುತ ಎಕ್ಸ್‌ಯುವಿ 500, 2.2 ಲೀಟರ್ ಎಮ್ಹಾಕ್ ಟರ್ಬೊ ಜಾರ್ಜ್ಡ್ ಪೆಟ್ರೋಲ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಡೀಸೆಲ್ ಎಂಜಿನ್ 155 ಬಿಹೆಚ್‍ಪಿ ಪವರ್ ಮತ್ತು 360 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಪೆಟ್ರೋಲ್ ಎಂಜಿನ್ 140 ಬಿಹೆಚ್‍ಪಿ ಪವರ್ ಮತ್ತು 320 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಸದ್ದಿಲ್ಲದೇ ಕಾರುಗಳನ್ನು ರಿಕಾಲ್ ಮಾಡುತ್ತಿದೆ ಮಾರುತಿ

2020 ಮಹೀಂದ್ರಾ 500 ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಸಾರವಾಗಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಹೊಸ 2.0 ಲೀಟರ್ ಡೀಸೆಲ್ ಎಂಜಿನ್ 180 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಎಂಜಿನ್‍ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಹೊಂದಿರಲಿದೆ.
MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ ಸಂಸ್ಥೆಯು ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ಎಸ್‍ಯುವಿಗಳ ಮೂಲಕ ಭಾರೀ ಜನಪ್ರಿಯತೆ ಗಳಿಸಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಹೊಸ ವಿನ್ಯಾಸದ ಮತ್ತು ಪವರ್‍ಫುಲ್ ಸ್ಕಾರ್ಪಿಯೋ ಮತ್ತು ಥಾರ್ ನ್ಯೂ ಜನರೇಷನ್ ಆವೃತ್ತಿಗಳೊಂದಿಗೆ ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದೆ.
MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಎಕ್ಸ್‌ಯುವಿ 500 ಹೋಲಿಸಿದರೆ ಹೊಸ ಬಿಎಸ್-6 ಮಾದರಿಯು ಹೆಚ್ಚಿನ ಬೆಲೆಯನ್ನು ಹೊಂದಿರಲಿದೆ. ದೇಶಿಯ ಮಾರುಕಟ್ಟೆಯಲ್ಲಿ ಎಕ್ಸ್‌ಯುವಿ 500 ಬಿಡುಗಡೆಯಾದ ಬಳಿಕ ಎಂಜಿ ಹೆಕ್ಟರ್, ಜೀಪ್ ಕಂಪಾಸ್, ಟಾಟಾ ಹ್ಯಾರಿಯರ್ ಮತ್ತು ಕಿಯಾ ಸೆಲ್ಟೋಸ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡಲಿದೆ.
Source: Motorbeam