ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮರ್ಸಿಡಿಸ್ ಬೆಂಝ್ ಜಿಎಲ್‍‍ಎ ಎಸ್‍‍ಯು‍ವಿ

ಜರ್ಮನಿಯ ಐಷಾರಾಮಿ ಕಾರು ತಯಾರಕ ಸಂಸ್ಥೆಯಾದ ಮರ್ಸಿಡಿಸ್ ಬೆಂಝ್ ತನ್ನ ಹೊಸ ಜಿಎಲ್‍‍ಎ ಎಸ್‍‍ಯು‍ವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಮುಂಬರುವ ವಾರಗಳಲ್ಲಿ ಕಂಪನಿಯು ಹೊಸ ಮಾದರಿಯನ್ನು ಬಿಡುಗಡೆ ಮಾಡಲಿದೆ ಎಂದು ವರದಿಗಳು ಪ್ರಕಟವಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮರ್ಸಿಡಿಸ್ ಬೆಂಝ್ ಜಿಎಲ್‍‍ಎ ಎಸ್‍‍ಯು‍ವಿ

ಎಂಟ್ರಿ ಲೆವೆಲ್ ಜಿಎಲ್‍ಎ ಎಸ್‍‍ಯುವಿಯು ಹೊಸ ಎಮ್‍ಎಫ್‍ಎ-2 ಪ್ಲಾಟ್‍‍‍‍ಫಾರ್ಮ್ ಅನ್ನು ಆಧರಿಸಿದೆ, ಮರ್ಸಿಡಿಸ್‍ನ ಇತರ ಕಾಂಪ್ಯಾಕ್ಟ್ ಮಾದರಿಗಳಾದ ಹೊಸ ಎ-ಕ್ಲಾಸ್, ಸಿಎಲ್‍ಎ ಮತ್ತು ಜಿ‍ಎಲ್‍‍ಬಿ ಎಸ್‍‍ಯುವಿಗಳು ಕೂಡ ಇದೆ ಪ್ಲಾಟ್‍‍ಫಾರ್ಮ್ ಆಧರಿಸಿ ತಯಾರಾಗಿವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮರ್ಸಿಡಿಸ್ ಬೆಂಝ್ ಜಿಎಲ್‍‍ಎ ಎಸ್‍‍ಯು‍ವಿ

ಹೊಸ ಜಿಎಲ್‍ಎ ಎಸ್‍‍ಯುವಿ ಕ್ರಾಸ್‌ಒವರ್ ಮಾದರಿಯ ವಿನ್ಯಾಸವನ್ನು ಹೊಂದಿದೆ. ಹೊಸ ತಲೆಮಾರಿನ ಬೆಂಝ್ ಪ್ರಸ್ತುತ ಎರಡನೇ ತಲೆಮಾರಿನ ಮಾದರಿಗಿಂತ 100 ಎಂಎಂ ಎತ್ತರ, 20 ಎಂಎಂ ಉದ್ದವನ್ನು ಇಳಿಸಿದೆ, 30 ಎಂಎಂ ವ್ಹೀಲ್‍‍ಬೇಸ್ ಹೆಚ್ಚು ಹೊಂದಿದೆ. ಕ್ಯಾಬಿನ್ ಒಳಗೆ ಹೆಚ್ಚಿನ ಸ್ಪೇಸ್ ಅನ್ನು ಹೊಂದಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮರ್ಸಿಡಿಸ್ ಬೆಂಝ್ ಜಿಎಲ್‍‍ಎ ಎಸ್‍‍ಯು‍ವಿ

ಹೊಸ ಮರ್ಸಿಡಿಸ್ ಜಿ‍ಎಲ್‍ಇ ಇನ್ಫೋಟೇನ್‍‍ಮೆಂಟ್ ಸಿಸ್ಟಂ ಹಾಗೂ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‍ ಪ್ರತ್ಯೇಕವಾಗಿ ಎರಡೂ ಸ್ಕ್ರೀನ್‍‍ಗಳನ್ನು ಹೊಂದಿರಲಿದೆ. ಸೆಂಟರ್ ಕಂಸೋಲ್‍‍ನಲ್ಲಿ ಟಚ್‍‍ಪ್ಯಾಡ್ ಹಾಗೂ ಇಂಟಿಗ್ರೇಟೆಡ್ ಗ್ರಾಬ್ ಹ್ಯಾಂಡಲ್‍‍ಗಳಿರಲಿವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮರ್ಸಿಡಿಸ್ ಬೆಂಝ್ ಜಿಎಲ್‍‍ಎ ಎಸ್‍‍ಯು‍ವಿ

ಹೊಸ ಎಸ್‍ಯುವಿಯ ಕ್ಯಾಬಿನ್‍‍‍ಗೆ ಪ್ರೀಮಿಯಂ ಅನುಭವವನ್ನು ನೀಡುವುದಕ್ಕಾಗಿ ಇಂಟಿರಿಯರ್‍‍ನಲ್ಲಿ ಕ್ಲೈಮೆಟ್ ಕಂಟ್ರೋಲ್, ಎಸಿ ವೆಂಟ್‍‍ಗಳಿವೆ. ಮರ್ಸಿಡಿಸ್ ಕಂಪನಿಯು ಹೊಸ ತಲೆಮಾರಿನ ಜಿ‍ಎಲ್‍ಇಯನ್ನು ಭಾರತದಲ್ಲಿ ಬಿಎಸ್ 6 ಎಂಜಿನ್‍‍‍ನೊಂದಿಗೆ ಬಿಡುಗಡೆಗೊಳಿಸಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮರ್ಸಿಡಿಸ್ ಬೆಂಝ್ ಜಿಎಲ್‍‍ಎ ಎಸ್‍‍ಯು‍ವಿ

ಹೊಸ ಬೆಂಝ್ ಜಿಎಲ್ಎ ಎಸ್‍‍ಯುವಿಯು ನಾಲ್ಕು ಮಾದರಿಯ ಎಂಜಿನ್ ಆಯ್ಕೆಗಳನ್ನು ಹೊಂದಿದೆ. ಇದರಲ್ಲಿ 1.3 ಲೀಟರ್ ಪೆಟ್ರೋಲ್ ಎಂಜಿನ್ 165 ಬಿ‍‍ಹೆಚ್‍‍ಪಿ ಪವರ್ ಉತ್ಪಾದಿಸಿದರೆ, 2.0 ಲೀಟರ್ ಪೆಟ್ರೋಲ್ ಎಂಜಿನ್ 228 ಬಿ‍‍ಹೆಚ್‍‍ಪಿ ಪವರ್ ಅನ್ನು ಉತ್ಪಾದಿಸುತ್ತದೆ.

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮರ್ಸಿಡಿಸ್ ಬೆಂಝ್ ಜಿಎಲ್‍‍ಎ ಎಸ್‍‍ಯು‍ವಿ

ಡೀಸೆಲ್ ಮಾದರಿಯ 1.5 ಲೀಟರ್ ಎಂಜಿನ್ 115 ಬಿ‍‍ಹೆಚ್‍‍ಪಿ ಪವರ್ ಉತ್ಪಾದಿಸಿದರೆ, 2.0 ಅದರ ಟ್ಯೂನ್‍‍‍ಗೆ ಅನುಗುಣವಾಗಿ 150 ಬಿ‍‍ಹೆಚ್‍‍ಪಿ ಪವರ್ ಮತ್ತು 190 ಬಿ‍ಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಮುಂದಿನ ವರ್ಷ ಪೆಟ್ರೋಲ್ ಪ್ಲಗ್ ಇನ್ ಹೈಬ್ರಿಡ್ 1.3 ಎಂಜಿನ್ ಅನ್ನು ಅಳವಡಿಸಲಿದ್ದು, ಈ ಎಂಜಿನ್ 218 ಬಿ‍ಹೆಚ್‍ಪಿ ಪವರ್ ಉತ್ಪಾದಿಸುತ್ತದೆ. ಹೊಸ ಎ-ಕ್ಲಾಸ್‍‍ನಂತೆಯೇ 15.6 ಕಿ.ವ್ಯಾಟ್ ಬ್ಯಾಟರಿ ಪ್ಯಾಕ್ ಅನ್ನು ಅಳವಡಿಸುವ ಸಾಧ್ಯತೆಗಳಿವೆ. ಇದು 60 ಕ್ಕೂ ಹೆಚ್ಚು ಕಿ.ಮೀ ದೂರ ಚಲಿಸುತ್ತದೆ.

MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮರ್ಸಿಡಿಸ್ ಬೆಂಝ್ ಜಿಎಲ್‍‍ಎ ಎಸ್‍‍ಯು‍ವಿ

ಫ್ರಂಟ್ ವ್ಹೀಲ್ ಡ್ರೈವ್ ಸ್ಟ್ಯಾಂಡರ್ಡ್ ಆಗಿರುತ್ತದೆ, ಮರ್ಸಿಡಿಸ್ ತನ್ನ 4 ಮ್ಯಾಟಿಕ್ ಫೋರ್ ವ್ಹೀಲ್ ಡ್ರೈವ್‍ ಅನ್ನು ನವೀಕರಿಸಿದೆ, ಮುಂಭಾಗದ ಅಥವಾ ಹಿಂಭಾಗದ ಟಯರ್‍‍ಗಳಿಗೆ ಸಂಪೂರ್ಣವಾಗಿ ವೇರಿಯಬಲ್ ಪವರ್ ಅನ್ನು ವಿಂಗಡಿಸಿದೆ. ಗೇರ್‍‍ಬಾಕ್ಸ್ ಆಯ್ಕೆಗಳಲ್ಲಿ 6 ಸ್ಪೀಡ್ ಮ್ಯಾನುವಲ್, 7 ಸ್ಪೀಡ್ ಆಟೋಮ್ಯಾಟಿಕ್ ಮತ್ತು 8 ಸ್ಪೀಡ್ ಡ್ಯುಯಲ್ ಕ್ಲಚ್ ಆಟೋ‍ವನ್ನು ಅಳವಡಿಸಲಾಗಿದೆ.

MOST READ: ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಸಚಿವ ನಿತಿನ್ ಗಡ್ಕರಿ ..!

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಮರ್ಸಿಡಿಸ್ ಬೆಂಝ್ ಜಿಎಲ್‍‍ಎ ಎಸ್‍‍ಯು‍ವಿ

ಹೊಸ ಬೆಂಝ್ ಜಿಎ‍ಲ್ಇ ಎಸ್‍‍ಯು‍ವಿಯು ಆಕರ್ಷಕ ಲುಕ್ ಮತ್ತು ಹಲವಾರು ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು. ಹೊ‍ಸ ಜಿಎಲ್ಇ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೊಸ ತಲೆಮಾರಿನ ಬಿಎಂಡಬ್ಲ್ಯು ಎಕ್ಸ್ 1, ಲ್ಯಾಂಡ್ ರೋವರ್ ಡಿಸ್ಕವರಿ, ಆಡಿ ಕ್ಯೂ 7 ಮತ್ತು ವೋಲ್ವೋ ಎಕ್ಸ್‌ಸಿ 90 ಕಾರುಗಳಿಗೆ ಪೈಪೋಟಿ ನೀಡಲಿದೆ.

Article Published On: Saturday, November 16, 2019, 17:46 [IST]
English summary
Next-gen Mercedes-Benz GLA: New details surface - Read in Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+