ಕ್ರ್ಯಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ರೇಟಿಂಗ್ ಪಡೆದ 2020ರ ಸ್ಕೋಡಾ ಆಕ್ಟೀವಿಯಾ
ಸ್ಕೊಡಾ ಆಟೋ ತನ್ನ 2020ರ ಜನಪ್ರಿಯ ಆಕ್ಟೀವಿಯಾ ಕಾರ್ ಅನ್ನು ಇತ್ತೀಚೆಗೆ ಅನಾವರಣಗೊಳಿಸಿತ್ತು. ಸ್ಕೋಡಾ ಅಕ್ಟೀವಿಯಾ ಕಾರ್ ಅನ್ನು ಭಾರತದಲ್ಲಿ ಮುಂದಿನ ವರ್ಷ ಬಿಡುಗಡೆಗೊಳಿಸಲಿದೆ. ಇದೀಗ ಸ್ಕೋಡಾ ಅಕ್ಟೀವಾ ಕ್ರ್ಯಾಶ್ ಟೆಸ್ಟ್ ನಲ್ಲಿ ಉತ್ತಮ ರೇಟಿಂಗ್ ಪಡೆದುಕೊಂಡಿದೆ.

2020ರ ಸ್ಕೋಡಾ ಆಕ್ಟೀವಿಯಾ ಹೊಸ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಯುರೋ ಎನ್‍ಸಿಎಪಿ ನಡೆಸಿದ ಕ್ರ್ಯಾಶ್ ಟೆಸ್ಟ್ ನಲ್ಲಿ ಸ್ಕೋಡಾ ಆಕ್ಟೀವಾ ಸಂಪೂರ್ಣ 5 ಸ್ಟಾರ್ ರೇಟಿಂಗ್ ಪಡೆದಿದೆ. ಜಾಗತಿಕವಾಗಿ ಮಾನ್ಯತೆ ಪಡೆದ ಏಜೆನ್ಸಿ ಕಾಂಬಿ ಸ್ಟೇಷನ್ ವ್ಯಾಗನ್ ಟೆಸ್ಟ್ ನಡೆಸಿದೆ.

ಯುರೋ ಎನ್‍ಸಿಎಪಿ ನಡೆಸಿದ ಕ್ರ್ಯಾಶ್ ಟೆಸ್ಟ್ ಆಡಲ್ಟ್ ಒಕಿಪ್ಯಾಟ್ ಪ್ರೊಟಕ್ಷನ್‍ನಲ್ಲಿ ಸ್ಕೋಡಾ ಆಕ್ಟೀವಾ ಕಾರು 35.3 ಅಂಕಗಳನ್ನು ಗಳಿಸಿದೆ, ಅಂದರೆ ಶೇ.92 ಪ್ರತಿಶತ ದಷ್ಟು ಆಗಿದೆ. ಮುಂಭಾಗದ ಆಫ್‍ಸೆಟ್ ಕ್ರ್ಯಾಶ್ ಟೆಸ್ಟ್ ನಲ್ಲಿ ಕ್ಯಾಬಿನ್ ಅನ್ನು ಸ್ಟೇಬಲ್ ಎಂದು ರೇಟಿಂಗ್ ಮಾಡಲಾಗಿದೆ.

ಸೈಡ್ ಬ್ಯಾರಿಯರ್ ಟೆಸ್ಟ್ ನಲ್ಲಿ ಕಾರಿನ ಕ್ರಿಟಿಕಲ್ ಬಾಡಿಯು ಉತ್ತಮ ರಕ್ಷಣೆಯನ್ನು ಹೊಂದಿದೆ ಎಂದು ರೇಟಿಂಗ್ ನೀಡಲಾಗಿದೆ. 2020ರ ಸ್ಕೋಡಾ ಅಕ್ಟೀವಿಯಾ ಚಿಲ್ಡ್ ಒಕಿಪ್ಯಾಡ್ ಪ್ರೊಟಕ್ಷನ್ ಟೆಸ್ಟ್ ನಲ್ಲಿ 43.2 ಅಂಕಗಳನ್ನು ಗಳಿಸಿದೆ, ಅಂದರೆ ಶೇ.92 ಪ್ರತಿಶತ ದಷ್ಟು ಆಗಿದೆ.

ಅಲ್ಲದೇ ಹೊಸ ಆಕ್ಟೀವಿಯಾ ಕಾಂಬಿ ವರ್ಷನ್ ಟೆಸ್ಟ್ ನಲ್ಲಿ 48ಕ್ಕೆ 35.3 ಅಂಕಗಳು, ಪೆಡಸ್ಟ್ರೈನ್ ಸುರಕ್ಷತಾ ಟೆಸ್ಟ್ ನಲ್ಲಿ 13ಕ್ಕೆ 10.3 ಅಂಕಗಳನ್ನು ಪಡೆದಿದೆ. ಕಂಪನಿಯ ಜನಪ್ರಿಯ ಮಾದರಿ ಹೊಸ ಆಕ್ಟೀವಿಯಾ 4,690 ಎಂಎಂ ಉದ್ದ, 1,829 ಎಂಎಂ ಅಗಲ ಮತ್ತು 1,470 ಎಂಎಂ ಎತ್ತರವನ್ನು ಹೊಂದಿದೆ.

ಈ ಕಾರು 2,686 ಎಂಎಂ ವ್ಹೀಲ್‍ಬೇಸ್ ಹೊಂದಿದೆ. ಹೊಸ ಆಕ್ಟೀವಿಯಾದ ಬೂಟ್ ಸ್ಪೇಸ್ 600 ಲೀಟರ್ ಆಗಿದ್ದು, ಹಿಂದಿನ ಕಾರಿಗೆ ಹೋಲಿಸಿದರೆ 30 ಲೀಟರ್‍ನಷ್ಟು ಹೆಚ್ಚಾಗಿದೆ. ಹೊಸ ಕಾರಿನಲ್ಲಿ ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್, ಟ್ರೆಪೆಜ್ ಆಕರಾದ ಎಕ್ಸಾಸ್ಟ್ ಟಿಪ್ಸ್ ಮತ್ತು ಮುಂಭಾಗದ ಬ್ಲ್ಯಾಕ್ ಗ್ರಿಲ್‍ನಲ್ಲಿ ಡ್ಯುಯಲ್ ಸ್ಪ್ಲಿಟ್ ಹೆಡ್‍ಲ್ಯಾಂಪ್‍ಗಳನ್ನು ಹೊಂದಿರಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಸ್ಕೋಡಾ ಆಕ್ಟೀವಿಯಾ ಬ್ಲ್ಯಾಕ್ ಗ್ರಿಲ್, ಮ್ಯಾಚಿಂಗ್ ಒಆರ್‍ವಿಎಂಗಳು ದೊಡ್ಡದಾದ ಇಂಚಿನ ಅಲಾಯ್ ವ್ಹೀಲ್‍ಗಳು, ವೈಡರ್ ಏರ್ ಡ್ಯಾಮ್‍ಗಳು ಮತ್ತು ಫ್ರಂಟ್ ಬಂಪರ್‍ಗಳನ್ನು ಹೊಂದಿದೆ.
MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!
ಇಂಟಿರಿಯರ್‍ನಲ್ಲಿ ಎಲೆಕ್ಟ್ರಾನಿಕ್ ಆಗಿ ಅಡ್ಜಸ್ಟ್ ಮಾಡಬಹುದಾದ ಫ್ರಂಟ್ ಸೀಟ್ ಮುಂಭಾಗದ ಸೀಟ್ ಅಲ್ಕಾಂಟರ್ ಲೆದರ್, ಸ್ಟ್ಯಾಂಡರ್ಡ್ ಲ್ಯಾಪ್ ಟೈಮರ್ ಮತ್ತು ಇಂಟರ್‍ನೆಟ್ ಕನೆಕ್ಟಿವಿಟಿ ಫೀಚರ್ಸ್‍ಗಳೊಂದಿಗೆ ಎಂಟು ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂ ಅನ್ನು ಅಳವಡಿಸಿದೆ.
MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಹೊಸ ಆಕ್ಟೀವಿಯಾದಲ್ಲಿ 1.0 ಲೀಟರ್ ಮೂರು ಸಿಲಿಂಡರ್ ಎಂಜಿನ್ ಅನ್ನು ಹೊಂದಿರಲಿದೆ. ಜೊತೆಗೆ 2.0 ಲೀಟರ್ ಟಿಎಸ್ಐ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಪ್ಲಗ್ ಇನ್ ಹೈಬ್ರಿಡ್ ಆಯ್ಕೆಯೂ ಸಹ ಲಭ್ಯವಿದ್ದು ಅದು 1.4 ಲೀಟರ್ ಎಂಜಿನ್ ಆಗಿರಲಿದೆ.
MOST READ: ಸದ್ದಿಲ್ಲದೇ ಕಾರುಗಳನ್ನು ರಿಕಾಲ್ ಮಾಡುತ್ತಿದೆ ಮಾರುತಿ

ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ ಸೆಡಾನ್ ಆಗಿದೆ. ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಬಹುನಿರೀಕ್ಷಿತ ಸ್ಕೋಡಾ ಆಕ್ಟೀವಿಯಾ ಕಾರು ಬಿಎಸ್-6 ಎಂಜಿನ್ ಅನ್ನು ಹೊಂದಿರಲಿದೆ. ಮುಂದಿನ ವರ್ಷ ಸ್ಕೋಡಾ ಆಕ್ಟೀವಿಯಾ ಕಾರ್ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ.


Click it and Unblock the Notifications