ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಲಿದೆ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್
ಟಾಟಾ ಸಂಸ್ಥೆಯು ಮುಂಬರುವ ತಿಂಗಳು ಡಿಸೆಂಬರ್ 3ಕ್ಕೆ ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್, ನೆಕ್ಸಾನ್ ಎಲೆಕ್ಟ್ರಿಕ್ ಕಾರುಗಳನ್ನು ಅನಾವರಣಗೊಳಿಸುತ್ತಿದ್ದು, ಇದೇ ವೇಳೆ ನೆಕ್ಸಾನ್ ಫೇಸ್‌ಲಿಫ್ಟ್ ಕಾರು ಮಾದರಿಯು ಸಹ ಅನಾವರಣಗೊಳ್ಳಲಿದೆ.

ಟಾಟಾ ಸದ್ಯ ಹೊಸ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಹೊಚ್ಚ ಹೊಸ ಕಾರು ಮಾದರಿಗಳಾದ ಆಲ್‌ಟ್ರೊಜ್, ನೆಕ್ಸಾನ್ ಎಲೆಕ್ಟ್ರಿಕ್, ಗ್ರಾವಿಟಾಸ್ ಜೊತೆಗೆ ಬಿಎಸ್-6 ಕಾರುಗಳಾದ ನೆಕ್ಸಾನ್, ಹ್ಯಾರಿಯರ್, ಟಿಗೋರ್, ಟಿಯಾಗೋ ಮತ್ತು ಹೆಕ್ಸಾ ಕಾರುಗಳನ್ನು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರು ಮಾದರಿಗಳಿಂತಲೂ ಹೊಸ ವಿನ್ಯಾಸ ಮತ್ತು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗೊಳಿಸಲು ಸಜ್ಜಾಗುತ್ತಿದೆ.

ಹೊಸ ಕಾರುಗಳ ಉತ್ಪಾದನೆಗಾಗಿ ಟಾಟಾ ಸಂಸ್ಥೆಯು ಒಮೆಗಾ ಮತ್ತು ಅಲ್ಫಾ ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡುತ್ತಿದ್ದು, 2020ರ ಆರಂಭದಲ್ಲಿ ಬಿಡುಗಡೆಯಾಗಲಿರುವ ಹೊಸ ಮತ್ತು ಫೇಸ್‌ಲಿಫ್ಟ್ ಕಾರುಗಳು ಬಿಎಸ್-6 ವೈಶಿಷ್ಟ್ಯತೆಯೊಂದಿಗೆ ರಸ್ತೆಗಿಳಿಯಲಿವೆ.

ಬಿಡುಗಡೆಗಾಗಿ ಹೊಸ ಕಾರುಗಳು ಸದ್ಯ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, 2020ರ ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ನಿಯಮದಂತೆ ಹೊಸ ಕಾರುಗಳ ಎಂಜಿನ್ ಮತ್ತು ಸುರಕ್ಷಾ ಸೌಲಭ್ಯವನ್ನ ಉನ್ನತೀಕರಿಸಲಾಗಿದೆ.

ಟಾಟಾ ಸಂಸ್ಥೆಯು ಮುಂಬರುವ ಫೆಬ್ರುವರಿ ಅಂತ್ಯದವರೆಗೂ ಬಿಎಸ್-4 ಕಾರುಗಳನ್ನು ಮಾರಾಟ ಮಾಡಲಿದ್ದು, ತದನಂತರವಷ್ಟೇ ಬಿಎಸ್-6 ವೈಶಿಷ್ಟ್ಯತೆಯೊಂದಿಗೆ ಅಭಿವೃದ್ದಿ ಹೊಂದಿರುವ ಹ್ಯಾರಿಯರ್, ನೆಕ್ಸಾನ್, ಹೆಕ್ಸಾ, ಟಿಗೋರ್ ಮತ್ತು ಟಿಯಾಗೋ ಕಾರುಗಳ ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದೆ.
ಅದಕ್ಕೂ ಮುನ್ನ ಆಲ್‌ಟ್ರೊಜ್ ಕಾರನ್ನು ಇದೇ ವರ್ಷ ಡಿಸೆಂಬರ್ 3ಕ್ಕೆ ಅನಾವರಣಗೊಳಿಸಿ 2020ರ ಆರಂಭದಲ್ಲಿ ಬಿಡುಗಡೆ ನಿರ್ಧರಿಸಿರುವ ಟಾಟಾ ಸಂಸ್ಥೆಯ ತದನಂತರ 7 ಸೀಟರ್ ಎಸ್‌ಯುವಿ ಮಾದರಿಯಾದ ಗ್ರಾವಿಟಾಸ್ ಕಾರನ್ನು ಕೂಡಾ 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಿ ಮೇ ಅಥವಾ ಜೂನ್ ಅವಧಿಯಲ್ಲಿ ಬಿಡುಗಡೆ ಮಾಡಲು ಯೋಜನೆ ರೂಪಿಸಿದೆ.

ಹೀಗಾಗಿ ಮೊದಲ ಹಂತವಾಗಿ 2020ರ ಜನವರಿಯಲ್ಲಿ ಆಲ್‌ಟ್ರೋಜ್ ಕಾರು ಬಿಡುಗಡೆಯಾಗಲಿದ್ದರೆ ಫೆಬ್ರುವರಿ ಅಥವಾ ಮಾರ್ಚ್ ಅಂತ್ಯಕ್ಕೆ ಬಿಎಸ್-6 ಕಾರುಗಳು ಮತ್ತು ತದನಂತರವಷ್ಟೇ ಜೂನ್ ಆರಂಭದಲ್ಲಿ 7 ಸೀಟರ್ ಗ್ರಾವಿಟಾಸ್ ಎಸ್‌ಯುವಿ ಕಾರು ಖರೀದಿಗೆ ಲಭ್ಯವಾಗಲಿದೆ.

ಸದ್ಯ ಮಾರುಕಟ್ಟೆಯಲ್ಲಿ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿರುವ ನೆಕ್ಸಾನ್ ಕಾರು ಫೇಸ್‌ಲಿಫ್ಟ್ ಆವೃತ್ತಿಯಲ್ಲೂ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಂಜಿನ್ ಆಯ್ಕೆಗಳನ್ನೇ ಉನ್ನತೀಕರಿಸಲಾಗಿದೆ.
MOST READ: ದುಬಾರಿ ಕಾರಿನ ಟ್ಯಾಕ್ಸ್ ಉಳಿಸಲು ಈತ ಮಾಡಿದ್ದೇನು ಗೊತ್ತಾ?

ಅದರ ಹೊರತಾಗಿ ಹೊಸ ನೆಕ್ಸಾನ್ ಕಾರಿನಲ್ಲಿ ಈ ಬಾರಿ ಮರುವಿನ್ಯಾಸಗೊಳಿಸಲಾದ ಫ್ರಂಟ್ ಬ್ಯಾನೆಟ್, ಬಂಪರ್ ಡಿಸೈನ್, ಫುಲ್ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಹೊಸ ತಂತ್ರಜ್ಞಾನ ಪ್ರೇರಿತ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸೇರಿದಂತೆ ಕ್ಯಾಬಿನ್ ವಿನ್ಯಾಸದಲ್ಲಿ ಮಹತ್ವದ ಬದಲಾವಣೆ ಪಡೆದುಕೊಂಡಿದ್ದು, ಬಿಎಸ್-6 ವೈಶಿಷ್ಟ್ಯತೆಯಿಂದಾಗಿ ಹೊಸ ಕಾರಿನ ಬೆಲೆಯಲ್ಲಿ ಪ್ರಸ್ತುತ ಮಾರುಕಟ್ಟೆಗಿಂತ ರೂ.30 ಸಾವಿರದಿಂದ ರೂ.1.20 ಲಕ್ಷದ ತನಕ ದುಬಾರಿ ಬೆಲೆ ಪಡೆಯಲಿದೆ.
MOST READ: ಪ್ರತಿ ಲೀಟರ್ ನೀರಿಗೆ 35 ಕಿ.ಮಿ ಮೈಲೇಜ್ ನೀಡುವ ಕಾರ್ ಎಂಜಿನ್ ಸಿದ್ದಪಡಿಸಿದ 21 ವರ್ಷದ ಯುವಕ

ಇನ್ನು ಟಾಟಾ ಸಂಸ್ಥೆಯು ನೆಕ್ಸಾನ್ ಫೇಸ್‌ಲಿಫ್ಟ್ ಜೊತೆಗೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಸಹ ಅಭಿವೃದ್ದಿಗೊಳಿಸಿ ಬಿಡುಗಡೆಗಾಗಿ ಸಿದ್ದಪಡಿಸಿದ್ದು, ಹೊಸ ಕಾರು ಅತ್ಯುತ್ತಮ ಬ್ಯಾಟರಿ ಸೌಲಭ್ಯದೊಂದಿಗೆ 300ಕಿ.ಮೀ ಮೈಲೇಜ್ ರೇಂಜ್ ಪಡೆದುಕೊಂಡಿದೆ.
MOST READ: ಕಲ್ಯಾಣ್ ಜ್ಯುವೆಲ್ಲರ್ಸ್ ಮಾಲೀಕನ ಬಳಿಯಿರುವ ಐಷಾರಾಮಿ ಕಾರು ಕಲೆಕ್ಷನ್ ಹೇಗಿದೆ ಗೊತ್ತಾ?

ಮಾಹಿತಿ ಪ್ರಕಾರ ನೆಕ್ಸಾನ್ ಎಲೆಕ್ಟ್ರಿಕ್ ಕೂಡಾ 2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡ ಕೆಲವು ತಿಂಗಳುಗಳ ಬಳಿಕ ಬಿಡುಗಡೆಯಾಗಲಿದ್ದು, ಕಾರಿನ ಬೆಲೆಯು ರೂ.15 ಲಕ್ಷದಿಂದ ರೂ.17 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.
Source: Gaadiwaadi


Click it and Unblock the Notifications