ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

ದೇಶಿಯ ಮಾರುಕಟ್ಟೆಯಲ್ಲಿ ಆಟೋ ಉದ್ಯಮವು ಸತತ ಹಿನ್ನಡೆ ಅನುಭವಿಸುತ್ತಿದ್ದರೂ ಸಹ ವಾಹನ ಉತ್ಪಾದನಾ ಸಂಸ್ಥೆಗಳು ಗ್ರಾಹಕರನ್ನು ಸೆಳೆಯುವ ಉದ್ದೇಶದಿಂದ ವಿವಿಧ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ದೀಪಾವಳಿ ಹೊತ್ತಿಗೆ ಮತ್ತಷ್ಟು ಹೊಸ ಕಾರು ಮಾದರಿಗಳು ಬಿಡುಗಡೆಗಾಗಿ ಸಿದ್ದಗೊಂಡಿವೆ.

ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

ಹೊಸ ವಾಹನಗಳ ಮಾರಾಟದಲ್ಲಿ ಸತತ ಇಳಿಕೆಯ ನಡುವೆಯೂ ಕೆಲವು ಹೊಸ ಕಾರು ಮಾದರಿಗಳು ಉತ್ತಮ ಬೇಡಿಕೆಯೊಂದಿಗೆ ಮುನ್ನುಗ್ಗುತ್ತಿದ್ದು, ಮಾರುತಿ ಸುಜುಕಿ, ಟಾಟಾ ಮೋಟಾರ್ಸ್, ಹ್ಯುಂಡೈ ಸೇರಿದಂತೆ ಹಲವು ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಗಳು ತನ್ನ ಬಹುನೀರಿಕ್ಷಿತ ಕಾರುಗಳನ್ನು ಮಾರಾಟ ಮಾಡುತ್ತಿವೆ. ಇವುಗಳಲ್ಲಿ ಬಿಡುಗಡೆಯ ನೀರಿಕ್ಷೆಯಲ್ಲಿರುವ ಟಾಪ್ 5 ಕಾರುಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

01. ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಮಾರುತಿ ಸುಜುಕಿ ಬಹುನೀರಿಕ್ಷಿತ ಎಸ್-ಪ್ರೆಸ್ಸೊ ಆವೃತ್ತಿಯು ಎಂಟ್ರಿ ಲೆವಲ್ ಕಾರುಗಳಲ್ಲಿ ಭಾರೀ ಸದ್ದು ಮಾಡುವ ನೀರಿಕ್ಷೆಯಲ್ಲಿದ್ದು, ಇದೇ ತಿಂಗಳು 30ರಂದು ಬಿಡುಗಡೆಯಾಗಲಿರುವ ಹೊಸ ಕಾರು 3,565-ಎಂಎಂ ಉದ್ದ, 1,520-ಎಂಎಂ ಅಗಲ, 1,564-ಎಂಎಂ ಎತ್ತರ, 2,380-ಎಂಎಂ ವೀಲ್ಹ್‌ಬೆಸ್, 180-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಮತ್ತು 165/70 ಆರ್14 ಟೈರ್ ಸೌಲಭ್ಯವನ್ನು ಹೊಂದಿಯೆಂತೆ.

ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

ಎಸ್-ಪ್ರೆಸ್ಸೊ ಮಾದರಿಯು ಮೈಕ್ರೋ ಎಸ್‍ಯುವಿ ವೈಶಿಷ್ಟ್ಯತೆಗಳೊಂದಿಗೆ ಕೇಂದ್ರ ಸರ್ಕಾರವು 2020ರ ಎಪ್ರಿಲ್ 1ರಿಂದ ಜಾರಿಗೆ ತರುತ್ತಿರುವ ಬಿಎಸ್-6 ಹೊಸ ನಿಯಮಾವಳಿ ಪ್ರಕಾರ ಹೊಸ ಎಂಜಿನ್ ಅನ್ನು ಹೊತ್ತು ಬರಲಿದ್ದು, 1.2-ಲೀಟರ್(1,200 ಸಿಸಿ) ಪೆಟ್ರೋಲ್ ಎಂಜಿನ್ ಅನ್ನು ಪಡೆದುಕೊಳ್ಳಲಿದೆ. ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅಥವಾ 5- ಸ್ಪೀಡ್ ಆಟೋಮ್ಯಾಟಿಕ್ ಎಎಂಟಿ ಗೇರ್‍‍ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿರಲಿದೆ.

ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

ನಗರ ಪ್ರದೇಶಗಳಲ್ಲಿನ ಟ್ರಾಫಿಕ್ ದಟ್ಟಣೆಯಲ್ಲೂ ಸಲೀಸಾಗಿ ಸಾಗಬಲ್ಲ ಗುಣಹೊಂದಿರುವ ಎಸ್-ಪ್ರೆಸ್ಸೊ ಎಸ್‌ಯುವಿ ಮಾದರಿಯು ಸ್ಪೋರ್ಟಿ ಕಾರು ಪ್ರಿಯರನ್ನು ಸೆಳೆಯಬಹುದಾದ ಅಲಾಯ್ ಚಕ್ರಗಳು, ಹೈ ಮೌಟೆಂಡ್ ಲೈಟ್ಸ್ ಒದಗಿಸಿರುವುದು ಕಾರಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ಹೊಸ ಕಾರು ಒಟ್ಟು ನಾಲ್ಕು ವೆರಿಯೆಂಟ್‍‌ಗಳ ಮೂಲಕ ದೆಹಲಿ ಎಕ್ಸ್‌ಶೋರಂ ಪ್ರಕಾರ ಆರಂಭಿಕವಾಗಿ ರೂ. 4.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 5.50 ಲಕ್ಷಕ್ಕೆ ಖರೀದಿಗೆ ಲಭ್ಯವಾಗಬಹುದು ಎನ್ನಲಾಗಿದೆ.

ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

02. ಟಾಟಾ ಆಲ್‌ಟ್ರೊಜ್

ಟಾಟಾ ವಿನೂತನ ವಿನ್ಯಾಸದ ಆಲ್‌ಟ್ರೊಜ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಸದ್ಯ ಭಾರತೀಯ ಆಟೋ ಉದ್ಯಮದಲ್ಲಿ ಪ್ರಮುಖ ಆಕರ್ಷಣೆಯಾಗಿದ್ದು, ಬಿಡುಗಡೆಯ ಉದ್ದೇಶದಿಂದ ದೇಶದ ವಿವಿಧಡೆ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸುತ್ತಿದೆ. ಎಂಜಿನ್ ಕಾರ್ಯಕ್ಷಮತೆಯಲ್ಲಿ ಹ್ಯಾಚ್‌ಬ್ಯಾಕ್ ಕಾರು ಮಾಲೀಕರ ಆಕರ್ಷಣೆಗೆ ಕಾರಣವಾಗಿರುವ ಹೊಸ ಕಾರು ದೀಪಾವಳಿ ಹೊತ್ತಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಹ್ಯಾಚ್‌ಬ್ಯಾಕ್ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದೆ.

ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

ಮಾರುತಿ ಸುಜುಕಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಪ್ರಬಲ ಪೈಪೋಟಿಯಾಗಿ ಮಾರುಕಟ್ಟೆಗೆ ಪ್ರವೇಶ ಪಡೆಯುವುದು ಬಹುತೇಕ ಖಚಿತವಾಗಿದ್ದು, ಪೆಟ್ರೋಲ್ ಆವೃತ್ತಿಯಲ್ಲಿ ಎರಡು ಎಂಜಿನ್ ಆಯ್ಕೆಗಳನ್ನು ಮತ್ತು ಡೀಸೆಲ್‌ ಆವೃತ್ತಿಯಲ್ಲಿ ಒಂದು ಆಯ್ಕೆ ಮಾತ್ರ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಪೆಟ್ರೋಲ್ ಆವೃತ್ತಿಯಲ್ಲಿ 1.2-ಲೀಟರ್ ಮತ್ತು 1.5-ಲೀಟರ್ ಎಂಜಿನ್ ಮಾದರಿಗಳು ಅಭಿವೃದ್ಧಿಯಾಗುತ್ತಿದ್ದು, ಡೀಸೆಲ್ ಮಾದರಿಯಲ್ಲಿ 1.5-ಲೀಟರ್ ಎಂಜಿನ್ ಲಭ್ಯವಾಗಲಿದೆ.

ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

ಟಾಟಾ ಮೋಟಾರ್ಸ್ ಸಂಸ್ಥೆಯು ಆಲ್‌ಟ್ರೊಜ್ ಕಾರನ್ನು ಅಕ್ಟೋಬರ್ ಮಧ್ಯಂತರದಲ್ಲಿ ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಹೊಸ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.7.50 ಲಕ್ಷಕ್ಕೆ ನಿಗದಿಯಾಗಬಹುದು ಎಂದು ಅಂದಾಜಿಸಲಾಗಿದೆ.

ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

03. ರೆನಾಲ್ಟ್ ಕ್ವಿಡ್ ಫೇಸ್‌ಲಿಫ್ಟ್

ಟ್ರೈಬರ್ ಎಂಪಿವಿ ಬಿಡುಗಡೆಗೊಳಿಸಿರುವ ರೆನಾಲ್ಟ್ ಇಂಡಿಯಾ ಸಂಸ್ಥೆಯು ಸದ್ಯಕ್ಕೆ ಕ್ವಿಡ್ ಫೇಸ್‌ಲಿಫ್ಟ್ ಆವೃತ್ತಿಯನ್ನು ರಸ್ತೆಗಿಳಿಸುವ ಯೋಜನೆಯಲ್ಲಿದ್ದು, ಇದೇ ತಿಂಗಳಾಂತ್ಯಕ್ಕೆ ಇಲ್ಲವೇ ಅಕ್ಟೋಬರ್‌ ಆರಂಭದಲ್ಲಿ ಬಿಡುಗಡೆಯಾಗಲಿರುವ ಕ್ವಿಡ್ ಫೇಸ್‌ಲಿಫ್ಟ್ ಕಾರು ಹಲವಾರು ಪ್ರೀಮಿಯಂ ಫೀಚರ್ಸ್ ಹೊತ್ತ ಬರುವುದು ಬಹುತೇಕ ಖಚಿತವಾಗಿದೆ.

ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

ಫೇಸ್‌ಲಿಫ್ಟ್ ಕ್ವಿಡ್ ಮಾದರಿಯು ಹೊಸ ನಿಯಮಗಳಿಗೆ ಅನುಸಾರವಾಗಿ ಮತ್ತಷ್ಟು ಹೊಸ ಪ್ರಯಾಣಿಕರ ಸುರಕ್ಷಾ ಕ್ರಮಗಳನ್ನು ಹೊತ್ತುಬರಲಿದ್ದು, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್, ಇಬಿಡಿ, ಹೊಸ ಮಾದರಿಯ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ವಿಸ್ತರಿತ ಇನ್ಪೋಟೈನ್‌ಮೆಂಟ್ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ಹೊಂದಿರಲಿದೆ.

ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

ಈ ಮೂಲಕ ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಮಾದರಿಗಳಲ್ಲೇ ವಿಶೇಷ ಎನ್ನಿಸುವ ಮೂಲಕ ಗ್ರಾಹಕರನ್ನು ಸೆಳೆಯಲಿರುವ ಫೇಸ್‌ಲಿಫ್ಟ್ ಕ್ವಿಡ್ ಮಾದರಿಯು ಹೊಸ ಫೀಚರ್ಸ್‌ಗಳಿಂದಾಗಿ ಕಾರಿನ ಬೆಲೆಯು ತುಸು ದುಬಾರಿಯಾಗಿರಲಿದ್ದು, ಪ್ರಸ್ತುತ ಬೆಲೆಗಳಿಂತ ರೂ.20 ಸಾವಿರದಿಂದ ರೂ.40 ಸಾವಿರ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ.

ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

04. ಹ್ಯುಂಡೈ ಎಲಾಂಟ್ರಾ ಫೇಸ್‌ಲಿಫ್ಟ್

ಹ್ಯುಂಡೈ ಇಂಡಿಯಾ ಸಂಸ್ಥೆಯು ತನ್ನ ಎಕ್ಸಿಕ್ಯೂಟಿವ್ ಸೆಡಾನ್ ಆವೃತ್ತಿಯಾದ ಎಲಾಂಟ್ರಾ ಫೇಸ್‍‍ಲಿಫ್ಟ್ ಕಾರನ್ನು ದೇಶಿಯ ಮಾರುಕಟ್ಟೆಯಲ್ಲಿ ಇದೇ ತಿಂಗಳಾಂತ್ಯಕ್ಕೆ ಬಿಡುಗಡೆ ಮಾಡಲಿದ್ದು, ಹೊಸ ಕಾರಿನಲ್ಲಿ ಈ ಬಾರಿ ಹಲವು ಬದಲಾವಣೆಗಳನ್ನು ತರಲಾಗುತ್ತಿದೆ. ಬಿಎಸ್-6 ನಿಯಮ ಜಾರಿಯಾಗುತ್ತಿರುವ ಹಿನ್ನಲೆಯಲ್ಲಿ ಡೀಸೆಲ್ ಎಂಜಿನ್ ಆಯ್ಕೆ ಕೈಬಿಟ್ಟಿರುವ ಹ್ಯುಂಡೈ ಸಂಸ್ಥೆಯು ಪೆಟ್ರೋಲ್ ಆಯ್ಕೆಯನ್ನು ಮಾತ್ರ ನೀಡಲು ನಿರ್ಧರಿಸಿದೆ ಎನ್ನಲಾಗಿದೆ.

ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

ಪ್ರಸ್ತುತ ಮಾರುಕಟ್ಟೆಯಲ್ಲಿ ಎಲಾಂಟ್ರಾ ಪೆಟ್ರೋಲ್ ಮಾದರಿಗಳಿಗೆಯೇ ಹೆಚ್ಚು ಬೇಡಿಕೆಯಿದ್ದು, ಡೀಸೆಲ್ ಆಯ್ಕೆಯಲ್ಲಿ ಲಭ್ಯವಿದ್ದರೂ ಕನಿಷ್ಠ ಬೇಡಿಕೆಯನ್ನು ಬೇಡಿಕೆ ಪಡೆದುಕೊಳ್ಳುವಲ್ಲಿ ವಿಫಲವಾಗಿದೆ. ಹೀಗಾಗಿ ಫೇಸ್‌ಲಿಫ್ಟ್ ಮಾದರಿಯು ಪೆಟ್ರೋಲ್ ಆಯ್ಕೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಾಗಲಿದ್ದು, ಪೆಟ್ರೋಲ್ ಮಾದರಿಯು 2.0-ಲೀಟರ್ ಎಂಜಿನ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.15 ಲಕ್ಷದಿಂದ ರೂ.18 ಲಕ್ಷ ಇರಬಹುದೆಂದು ನೀರಿಕ್ಷಿಸಲಾಗಿದೆ.

ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

05. ಟಾಟಾ ಟಿಯಾಗೋ ಫೇಸ್‌ಲಿಫ್ಟ್

ಎಂಟ್ರಿ ಲೆವೆಲ್ ಹ್ಯಾಕ್‌ಬ್ಯಾಕ್ ಕಾರುಗಳಲ್ಲಿ ಉತ್ತಮ ಬೇಡಿಕೆ ಹೊಂದಿರುವ ಕಾರುಗಳಲ್ಲಿ ಟಿಯಾಗೋ ಕೂಡಾ ಪ್ರಮುಖವಾಗಿದೆ. ಗ್ರಾಹಕರ ಬೇಡಿಕೆಯೆಂತೆ ಕಾಲಕಾಲಕ್ಕೆ ಹಲವಾರು ಬದಲಾವಣೆ ಪಡೆದುಕೊಂಡಿರುವ ಟಿಯಾಗೋ ಕಾರು ದೀಪಾವಳಿ ಹೊತ್ತಿಗೆ ಫೇಸ್‌ಲಿಫ್ಟ್ ಆವೃತ್ತಿಯೊಂದಿಗೆ ಮಾರುಕಟ್ಟೆ ಪ್ರವೇಶಿಸುವ ನೀರಿಕ್ಷೆಯಿದೆ.

ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

ಟಾಟಾ ಟಿಯಾಗೋ ಕಾರು ಒಟ್ಟು ಎರಡು ಎಂಜಿನ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, 1.2-ಲೀಟರ್ 3 ಸಿಲೆಂಡರ್ ಪೆಟೋಲ್ ಎಂಜಿನ್ ಮಾದರಿಯು 84 ಬಿಹೆಚ್‍ಪಿ ಮತ್ತು 114 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದ್ದರೆ 1.05-ಲೀಟರ್ 3 ಸಿಲೆಂಡರ್ ಡೀಸೆಲ್ ಎಂಜಿನ್ ಮಾದರಿಯು 69 ಬಿಹೆಚ್‍ಪಿ ಮತ್ತು 140 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದೆ.

Most Read Articles

Kannada
English summary
Cars Launching Before Diwali 2019. Read in Kannada.
Story first published: Wednesday, September 18, 2019, 18:58 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X