2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರುಗಳೆಷ್ಟು ಗೊತ್ತಾ?

ಭಾರತದಲ್ಲಿ ನಡೆಯುವ ಅಂತರ್‍‍ರಾಷ್ಟ್ರೀಯ ಮೋಟಾರ್ ಶೋ ದೆಹಲಿಯಲ್ಲಿ ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುತ್ತದೆ. ದೆಹಲಿಯಲ್ಲಿರುವ ಪ್ರಗತಿ ಮೈದಾನದಲ್ಲಿ ಈ ಆಟೋ ಎಕ್ಸ್ ಪೋವನ್ನು ಆಯೋಜಿಸಲಾಗುತ್ತದೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರುಗಳೆಷ್ಟು ಗೊತ್ತಾ?

ಈ ಆಟೋ ಎಕ್ಸ್ ಪೋ ಮೇಳದಲ್ಲಿ ಪ್ರಮುಖ ಕಾರು, ಬೈಕ್ ಹಾಗೂ ಬಿಡಿಭಾಗ ತಯಾರಕ ಕಂಪನಿಗಳು ಭಾಗವಹಿಸಿ ತಮ್ಮ ಹೊಸ ವಾಹನಗಳನ್ನು ಅನಾವರಣಗೊಳಿಸುತ್ತವೆ. ಇನ್ನೂ ಕೆಲವು ಕಂಪನಿಗಳು ಈ ಮೇಳದಲ್ಲಿ ತಮ್ಮ ಹೊಸ ವಾಹನಗಳನ್ನು ಬಿಡುಗಡೆಗೊಳಿಸುತ್ತವೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರುಗಳೆಷ್ಟು ಗೊತ್ತಾ?

2020ರಲ್ಲಿ ನಡೆಯಲಿರುವ 15ನೇ ಅಂತರ್‍‍ರಾಷ್ಟ್ರೀಯ ಆಟೋ ಎಕ್ಸ್ ಪೋಗೆ ಸಿದ್ದತೆಗಳು ನಡೆದಿವೆ. ಈ ಮೇಳದಲ್ಲಿ ಲಕ್ಷಾಂತರ ಜನರು ಭಾಗಿಯಾಗಲಿದ್ದಾರೆ. ಇದಕ್ಕಾಗಿ ಆಟೋ ಎಕ್ಸ್ ಪೋ ಆಯೋಜಕರು ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರುಗಳೆಷ್ಟು ಗೊತ್ತಾ?

ಈ ಮೇಳವು ಫೆಬ್ರುವರಿ 5ರಿಂದ 12ರವರೆಗೆ ನಡೆಯಲಿದೆ. ಈ ಮೇಳದಲ್ಲಿ 50ಕ್ಕೂ ಹೆಚ್ಚು ಹೊಸ ಕಾರುಗಳನ್ನು ಅನಾವರಣಗೊಳಿಸಲಾಗುವುದೆಂದು ಆಟೋಮೊಬೈಲ್ ಉದ್ಯಮದ ಮೂಲಗಳು ತಿಳಿಸಿವೆ. ಇದರಿಂದಾಗಿ ಆಟೋಮೊಬೈಲ್ ಪ್ರಿಯರ ನಿರೀಕ್ಷೆಗಳು ಹೆಚ್ಚಾಗಿವೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರುಗಳೆಷ್ಟು ಗೊತ್ತಾ?

ಇದರ ಜೊತೆಗೆ ಹಲವು ಹೊಸ ಬೈಕ್‍‍ಗಳನ್ನು ಸಹ ಅನಾವರಣಗೊಳಿಸುವುದರ ಜೊತೆಗೆ ಬಿಡುಗಡೆಗೊಳಿಸಲಾಗುವುದು. ಆಟೋಮೊಬೈಲ್ ಪತ್ರಕರ್ತರು ಈ ಸಂದರ್ಭಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರುಗಳೆಷ್ಟು ಗೊತ್ತಾ?

ಈ ಆಟೋ ಎಕ್ಸ್ ಪೋ ಮೇಳದಲ್ಲಿ 26%ಗೂ ಹೆಚ್ಚು ಜನರು ತಮ್ಮ ಹೊಸ ಕಾರು ಖರೀದಿಯ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ಸಮೀಕ್ಷೆಯ ಪ್ರಕಾರ ಖರೀದಿಸುವವರು ಆಟೋ ಎಕ್ಸ್ ಪೋದಲ್ಲಿ ತಮ್ಮ ನೆಚ್ಚಿನ ಕಾರ್ ಹಾಗೂ ಬೈಕ್ ಖರೀದಿಸ ಬಯಸಿದ್ದಾರೆ ಎಂದು ಹೇಳಲಾಗಿದೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರುಗಳೆಷ್ಟು ಗೊತ್ತಾ?

ಈ ಕಾರಣಕ್ಕಾಗಿ 2020ರ ಆಟೋ ಎಕ್ಸ್ ಪೋ ಮೇಳವು ಭಾರತದ ಕಾರ್ ಹಾಗೂ ಬೈಕ್ ಪ್ರಿಯರಿಗೆ ಪ್ರಮುಖವಾದುದಾಗಿದೆ. ಪ್ರಮುಖ ವಾಹನ ತಯಾರಕ ಕಂಪನಿಗಳು ತಮ್ಮ ಹೊಸ ವಾಹನಗಳನ್ನು ಪ್ರದರ್ಶಿಸಿ ಮಾರ್ಕೆಟಿಂಗ್ ಮಾಡಲು ಬಯಸಿವೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರುಗಳೆಷ್ಟು ಗೊತ್ತಾ?

ನಿಸ್ಸಾನ್, ಜೀಪ್, ಬಿ‍ಎಂ‍‍ಡಬ್ಲ್ಯು, ಬಜಾಜ್ ಆಟೋ, ಹೀರೋ ಮೋಟೊ ಕಾರ್ಪ್ ಹಾಗೂ ಹಾರ್ಲೆ ಡೇವಿಡ್ಸನ್‍‍ನಂತಹ ಪ್ರಮುಖ ಕಂಪನಿಗಳು ಈ ಆಟೋ ಎಕ್ಸ್ ಪೋದಲ್ಲಿ ಭಾಗವಹಿಸುತ್ತಿಲ್ಲ. ಆದರೆ ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಈ ಮೇಳದಲ್ಲಿ ಪ್ರದರ್ಶಿಸಲಾಗುವುದು. ಇದರ ಜೊತೆಗೆ ಎಸ್‍‍ಯುವಿಗಳು ಹೆಚ್ಚಿನ ಪ್ರಮಾಣದಲ್ಲಿರಲಿವೆ.

Source: NDTV Auto

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರುಗಳೆಷ್ಟು ಗೊತ್ತಾ?

ಕುತೂಹಲಕ್ಕೆ ಕಾರಣವಾದ ಕಿಯಾ ಕಾರ್ನಿವಾಲ್

2020ರ ಜನವರಿ ಕೊನೆಯ ವಾರದಲ್ಲಿ ಬಿಡುಗಡೆಯಾಗಲಿರುವ ಕಿಯಾ ಮೋಟಾರ್ಸ್ ಬಹುನೀರಿಕ್ಷಿತ ಕಾರ್ನಿವಾಲ್ ಎಂಪಿವಿ ಕಾರು ಹಲವಾರು ಪ್ರೀಮಿಯಂ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಈ ಬಾರಿಯ ಆಟೋ ಎಕ್ಸ್‌ಪೋದಲ್ಲಿ ಪ್ರಮುಖ ಆಕರ್ಷಣೆಯಾಗಲಿದೆ.

MOST READ: ವಾಹನ ಡೀಲರ್‍‍ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರುಗಳೆಷ್ಟು ಗೊತ್ತಾ?

ಮಲ್ಟಿ ಪ್ಯಾಸೆಂಜರ್ ವೆಹಿಕಲ್(ಎಂಪಿವಿ) ವಿಭಾಗದಲ್ಲಿ ಅಗ್ರಸ್ಥಾನದಲ್ಲಿರುವ ಕಿಯಾ ಕಾರ್ನಿವಾಲ್ ಕಾರು ಮಾದರಿಯು ವಿದೇಶಿ ಮಾರುಕಟ್ಟೆಗಳಲ್ಲಿ ಭಾರೀ ಬೇಡಿಕೆ ಹೊಂದಿದ್ದು, ಗ್ರಾಹಕರ ಬೇಡಿಕೆಯೆಂತೆ 11 ಸೀಟರ್ ಮತ್ತು 9 ಸೀಟರ್ ಮತ್ತು 7 ಸೀಟರ್ ಆವೃತ್ತಿಗಳಲ್ಲಿ ಮಾರಾಟವಾಗುತ್ತಿದೆ. ಇದು ದೇಶಿಯ ಮಾರುಕಟ್ಟೆಯಲ್ಲಿ ಕೆಲವು ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದ್ದು, ಹೊಸ ಕಾರು 6 ಸೀಟರ್, 7 ಸೀಟರ್ ಮತ್ತು 8 ಸೀಟರ್ ಆವೃತ್ತಿಯೊಂದಿಗೆ ಮಾರಾಟಕ್ಕೆ ಲಭ್ಯವಾಗಲಿದೆ.

MOST READ: ಕಲ್ಯಾಣ್ ಜ್ಯುವೆಲ್ಲರ್ಸ್ ಮಾಲೀಕನ ಬಳಿಯಿರುವ ಐಷಾರಾಮಿ ಕಾರು ಕಲೆಕ್ಷನ್ ಹೇಗಿದೆ ಗೊತ್ತಾ?

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರುಗಳೆಷ್ಟು ಗೊತ್ತಾ?

6 ಸೀಟರ್ ಮಾದರಿಯು ಪ್ರತ್ಯೇಕವಾಗಿ 2+2+2 ಆಸನ ವ್ಯವಸ್ಥೆಯನ್ನು ಹೊಂದಿದ್ದರೆ 7 ಸೀಟರ್ ಮಾದರಿಯು 2+2+3 ಮತ್ತು 8 ಸೀಟರ್ ಮಾದರಿಯು 2+3+3 ಆಸನ ಸೌಲಭ್ಯವನ್ನು ಪಡೆದುಕೊಳ್ಳಲಿದ್ದು, ಗ್ರಾಹಕರು ತಮ್ಮ ಆದ್ಯತೆ ಮೇರೆಗೆ ವಿವಿಧ ಮಾದರಿಗಳನ್ನು ಖರೀದಿ ಮಾಡಬಹುದಾಗಿದೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರುಗಳೆಷ್ಟು ಗೊತ್ತಾ?

ಜೊತೆಗೆ ಹೊಸ ಕಾರಿನಲ್ಲಿ ಕೆಲವು ಫೀಚರ್ಸ್‌ಗಳನ್ನು ಮಾಡಿಫೈ ಕೂಡಾ ಮಾಡಿಕೊಳ್ಳಬಹುದಾಗಿದ್ದು, ಡ್ಯುಯಲ್ ಸನ್‌ರೂಫ್ ಮತ್ತು ರೂಫ್ ಬಾಕ್ಸ್ ಸೌಲಭ್ಯವನ್ನು ಹೆಚ್ಚುವರಿ ಶುಲ್ಕದೊಂದಿಗೆ ಖರೀದಿ ಮಾಡಬೇಕಾಗುತ್ತದೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರುಗಳೆಷ್ಟು ಗೊತ್ತಾ?

ಎಂಪಿವಿ ಕಾರುಗಳ ಮಾರಾಟ ವಿಭಾಗದಲ್ಲಿ ಸದ್ಯ ಭಾರೀ ಬೇಡಿಕೆ ಹೊಂದಿರುವ ಟೊಯೊಟಾ ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿರುವ ಕಿಯಾ ಕಾರ್ನಿವಾಲ್ ಎಂಪಿವಿ ಕಾರು ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 18 ಲಕ್ಷದಿಂದ ಟಾಪ್ ಎಂಡ್ ಮಾದರಿಯ ಬೆಲೆಯು ರೂ.25 ಲಕ್ಷ ಬೆಲೆ ಹೊಂದಬಹುದೆಂದು ಅಂದಾಜಿಸಲಾಗಿದೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರುಗಳೆಷ್ಟು ಗೊತ್ತಾ?

ಕಾರ್ನಿವಾಲ್ ಕಾರು 5, 115-ಎಂಎಂ ಉದ್ದ, 1,985-ಎಂಎಂ ಅಗಲ ಮತ್ತು 1,755 ಎತ್ತರವನ್ನು ಹೊಂದಿದ್ದು, ಇದ್ದು ಇನೋವಾ ಕ್ರಿಸ್ಟಾ ಕಾರಿಗಿಂತಲೂ 375-ಎಂಎಂ ಹೆಚ್ಚು ಉದ್ದ,155-ಎಂಎಂ ಹೆಚ್ಚು ಅಗಲ ಮತ್ತು 40-ಎಂಎಂ ನಷ್ಟು ಕಡಿಮೆ ಎತ್ತರವನ್ನು ಪಡೆದುಕೊಂಡಿರಲಿದೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರುಗಳೆಷ್ಟು ಗೊತ್ತಾ?

ಎಂಜಿನ್ ಸಾಮರ್ಥ್ಯ

ಕಿಯಾ ಕಾರ್ನಿವಾಲ್ ಕಾರು ಇನೋವಾ ಕ್ರಿಸ್ಟಾಗೆ ಪೈಪೋಟಿಯಾಗಿ 2.2-ಲೀಟರ್ ಟರ್ಬೋ ಡೀಸೆಲ್ ಜೊತೆ 3.3-ಲೀಟರ್ ವಿ6 ಎಂಪಿಐ ಪೆಟ್ರೋಲ್ ಎಂಜಿನ್ ಮಾದರಿಯೊಂದಿಗೆ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಮಾದರಿಯು ಬೆಲೆ ತಗ್ಗಿಸುವುದಕ್ಕಾಗಿ 2.5-ಲೀಟರ್ ಡೀಸೆಲ್ ಎಂಜಿನ್ ಮತ್ತು 2.6-ಲೀಟರ್ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರುಗಳೆಷ್ಟು ಗೊತ್ತಾ?

ಹಾಗೆಯೇ ಕಾರ್ನಿವಾಲ್ ಕಾರು ಇನೋವಾ ಕ್ರಿಸ್ಟಾಗಿಂತಲೂ ಉತ್ತಮ ಪ್ರೀಮಿಯಂ ಸೌಲಭ್ಯ ಹೊಂದಿದ್ದು, 10.1-ಇಂಚಿನ ಇನ್ಪೋಟೈನ್ ಸಿಸ್ಟಂ, ಕಿಯಾ ಯುವಿಒ ಕನೆಕ್ಟ್, ಕಾರ್ ಕನೆಕ್ಟಿವಿಟಿ ಸೂಟ್, ಲಾರ್ಜ್ ಟಚ್‌ಸ್ಕೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸನ್‌ರೂಫ್, ಪವರ್ ಅಡ್ಜೆಸ್ಟ್‌ಬಲ್ ಡ್ರೈವರ್ ಸೀಟ್, ತ್ರಿ ಕ್ಲೈಮೆಟ್ ಜೋನ್ ಕಂಟ್ರೋಲ್ ಸೌಲಭ್ಯ ಹೊಂದಿದೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರುಗಳೆಷ್ಟು ಗೊತ್ತಾ?

ಪ್ರಯಾಣಿಕರ ಸುರಕ್ಷತೆಗಾಗಿ 6 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಬ್ರೇಕ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್ ಮತ್ತು ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸಹ ಈ ಕಾರಿನಲ್ಲಿದೆ.

ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರುಗಳೆಷ್ಟು ಗೊತ್ತಾ?

ಹೀಗಾಗಿ ಇನೋವಾ ಕ್ರಿಸ್ಟಾ ಆವೃತ್ತಿಗೆ ಪ್ರತಿಹಂತದಲ್ಲೂ ಪೈಪೋಟಿ ನೀಡಬಹುದಾದ ಎಲ್ಲಾ ಗುಣಲಕ್ಷಣಗಳನ್ನು ಹೊಂದಿರುವ ಕಿಯಾ ಕಾರ್ನಿವಾಲ್ ಕಾರು ಮಾದರಿಯು ಭಾರತದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಅತ್ಯುತ್ತಮ ಫೀಚರ್ಸ್ ಪಡೆದುಕೊಂಡಿದೆ.

Most Read Articles

Kannada
English summary
50 New cars expected to unveil at auto expo 2020 - Read in Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X