ಟ್ಯಾಕ್ಸಿ ಚಾಲಕರಿಗಾಗಿ ಹೊಸ ಮಾದರಿಯಲ್ಲಿ ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಎಂಪಿವಿ ಕಾರು ವಿಭಾಗದಲ್ಲಿ ಹಿಂದಿನಿಂದಲೂ ಹೆಚ್ಚು ಜನಪ್ರೀಯತೆಯನ್ನು ಪಡೆಯುತ್ತಿರುವ ಮಾರುತಿ ಸುಜುಕಿ ಎರ್ಟಿಗಾ ಕಾರು, ಕೇವಲ ಸ್ವಂತ ಬಳಕೆಗೆ ಮಾತ್ರವಲ್ಲದೆಯೆ ಟ್ಯಾಕ್ಸಿ ಚಾಲಕರಿಗು ಸಹ ಅಚ್ಚುಮೆಚ್ಚು. ಈ ನಿಟ್ಟಿನಲ್ಲಿ ಮಾರುತಿ ಸುಜುಕಿ ಸಂಸ್ಥೆಯು ವಿಶೇಷವಾಗಿ ಟ್ಯಾಕ್ಸಿ ಆಪರೇಟರ್‍‍ಗಳಿಗಾಗಿಯೇ ಎರ್ಟಿಗಾ ಟೂರ್ ಎಂ ಎಂಬ ಮಾದರಿಯನ್ನು ಬಿಡುಗಡೆ ಮಾಡಲಾಗಿದೆ.

ಟ್ಯಾಕ್ಸಿ ಚಾಲಕರಿಗಾಗಿ ಹೊಸ ಮಾದರಿಯಲ್ಲಿ ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಮಾರುತಿ ಸುಜುಕಿ ಸಂಸ್ಥೆಯು ಬಿಡುಗಡೆ ಮಾಡಲಾದ ಎರ್ಟಿಗಾ ಎಂ ಆವೃತ್ತಿಯು ಎಕ್ಸ್ ಶೋರುಂ ಪ್ರಕಾರ ರೂ. 7.99 ಲಕ್ಷಕ್ಕೆ ನಿಗದಿ ಮಾಡಲಾಗಿದ್ದು, ಸಾಧಾರಣ ಎರ್ಟಿಗಾ ಕಾರಿನ ವಿಎಕ್ಸ್ಐ ಟ್ರಿಮ್ ಮಾದರಿಯಲ್ಲಿ ಮಾತ್ರ ಲಭ್ಯವಿದೆ. ಈ ಕಾರು 1.5 ಲೀಟರ್ ಪೆಟ್ರೋಲ್ ಎಂಜಿನ್ ಸಹಾಯದಿಂದ 105 ಬಿಹೆಚ್‍ಪಿ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಿದ್ದು, ಪ್ರತೀ ಲೀಟರ್‍‍ಗೆ ಸುಮಾರು 18.8 ಕಿಲೋಮೀಟರ್ ಮೈಲೇಜ್ ನೀಡಬಲ್ಲದು.

ಟ್ಯಾಕ್ಸಿ ಚಾಲಕರಿಗಾಗಿ ಹೊಸ ಮಾದರಿಯಲ್ಲಿ ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಟ್ಯಾಕ್ಸಿ ಚಾಲಕರಿಗಾಗಿ ಬಿಡುಗಡೆಯಾದ ವಿಶೇಷ ಮಾರುತಿ ಸುಜುಕಿ ಎರ್ಟಿಗಾ ಟೂರ್ ಎಂ ಆವೃತ್ತಿಯಲ್ಲಿ ಡ್ಯುಯಲ್ ಫ್ರಂಟ್ ಏರ್‍‍ಬ್ಯಾಗ್ಸ್, ಎಬಿಎಸ್, ರಿವರ್ಸ್ ಪಾರ್ಕಿಂಗ್ ಸೆನ್ಸಾರ್ಸ್, ಆಂಟಿ ಲಾಕ್ ಬ್ರೇಕಿಂಗ್ ಸಿಸ್ಟಂ, ಸ್ಪೀಡ್ ಲಿಮಿಟ್ ಫಂಕ್ಷನ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್ ಹಾಗು ಟಿಎಫ್‍ಟಿ ಮಲ್ಟಿ ಇನ್ಫರ್ಮೆಷನ್ ಡಿಸ್ಪ್ಲೇ, ವಿದ್ಯುತ್‍ನಿಂದ ಹೊಂದಾಣಿಕೆ ಮಾಡಬಹುದಾದ ಒಆರ್‍‍ವಿಎಂ, ರಿಯರ್ ಎಸಿ ವೆಂಟ್ಸ್ ಮತ್ತು ಡ್ಯುಯಲ್ ಟೋನ್ ಇಂಟೀರಿಯರ್ ಅನ್ನು ನೀಡಲಾಗಿದೆ.

ಟ್ಯಾಕ್ಸಿ ಚಾಲಕರಿಗಾಗಿ ಹೊಸ ಮಾದರಿಯಲ್ಲಿ ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಮೇಲೆ ಹೇಳಿರುವ ವೈಶಿಷ್ಟ್ಯತೆಗಳನ್ನು ಹೊರತು ಪಡಿಸಿ ಮಾರುತಿ ಸುಜುಕಿ ಎರ್ಟಿಗಾ ಟೂರ್ ಎಂ ಮಾದರಿಯಲ್ಲಿ ಬೇರಾವ ಮಾರ್ಪಾಡುಗಳನ್ನು ಮಾಡಲಿಲ್ಲ. ಪ್ರತೀ ತಿಂಗಳೂ ಸುಮಾರು 8 ಸಾವಿರಕ್ಕು ಅಧಿಕ ಸಂಖ್ಯೆಯಲ್ಲಿ ಮಾರಾಟವಾಗುತ್ತಿರುವ ಮರುತಿ ಸುಜುಕಿ ಎರ್ಟಿಗಾ ಕಾರುಗಳು ಮಾರುಕಟ್ಟೆಯಲ್ಲಿರುವ ಮಹೀಂದ್ರಾ ಮರಾಜೊ ಮತ್ತು ಟೊಯೊಟಾ ಇನೊವಾ ಕ್ರಿಸ್ಟಾ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತಿದೆ.

ಟ್ಯಾಕ್ಸಿ ಚಾಲಕರಿಗಾಗಿ ಹೊಸ ಮಾದರಿಯಲ್ಲಿ ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಇನ್ನು ಸಾಧಾರಣ ನೆಕ್ಸ್ಟ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ವಿಶ್ವದರ್ಜೆ ಕಾರು ಉತ್ಪಾದನಾ ಮಾದರಿಯಾದ 'ಹಾರ್ಟ್‍ಟೆಕ್ಟ್' ಪ್ಲಾಟ್‍‍ಫಾರ್ಮ್‍ನ ಅಡಿಯಲ್ಲಿ ವಿನ್ಯಾಸ ಮಾಡಲಾಗಿದ್ದು, ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರ ಆಸನ ವಿನ್ಯಾಸವನ್ನು ಈ ಬಾರಿ ತುಸು ವಿಸ್ತರಿಸಲಾಗಿದೆ.

ಟ್ಯಾಕ್ಸಿ ಚಾಲಕರಿಗಾಗಿ ಹೊಸ ಮಾದರಿಯಲ್ಲಿ ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ನೆಕ್ಸ್ಟ್ ಜನರೇಷನ್ ಎರ್ಟಿಗಾ ಎಂ‍ಪಿವಿ ಕಾರಿನ ಮುಂಭಾಗದಲ್ಲಿ ಕ್ರೋಮ್ ಸ್ಟ್ರಿಪ್‍‍ನೊಂದಿಗೆ ಜೋಡಿಸಲಾದ ಹೊಸ ಗ್ರಿಲ್ ಮತ್ತು ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್‍‍ಗಳನ್ನು ಪಡೆದುಕೊಂಡಿದ್ದು, ಹಾಗೆಯೇ ಕಾರಿನ ಸೈಡ್‍‍ನಲ್ಲಿ ಫ್ಲೋಟಿಂಗ್ ರೂಫ್ ವಿನ್ಯಾಸ, 15-ಇಂಚಿನ ಅಲಾಯ್ ಚಕ್ರಗಳು ಮತ್ತು ಕಾರಿನ ಹಿಂಭಾಗದಲ್ಲಿ 'ಎಲ್' ಆಕಾರದ ಟೈಲ್ ಲೈಟ್ ಅನ್ನು ಪಡೆದಿದೆ.

ಟ್ಯಾಕ್ಸಿ ಚಾಲಕರಿಗಾಗಿ ಹೊಸ ಮಾದರಿಯಲ್ಲಿ ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ತಾಂತ್ರಿಕ ವೈಶಿಷ್ಟ್ಯತೆಗಳು

ಮಾರುತಿ ಸುಜುಕಿ ಡಿಜೈರ್ ಕಾರಿನಲ್ಲಿರುವ 7-ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಅನ್ನು ಹೊಸ ಎರ್ಟಿಗಾದಲ್ಲೂ ಬಳಕೆ ಮಾಡಲಾಗಿದ್ದು, ಆಂಡ್ರಾಯ್ಡ್ ಆಟೋ, ಆ್ಯಪಲ್ ಕಾರ್ ಪ್ಲೇ ಮತ್ತು ಬ್ಲೂಟೂಥ್ ಕನೆಕ್ಟಿವಿಟಿಯನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೇ ಕಪ್ ಹೋಲ್ಡರ್ಸ್ ಅನ್ನೂ ಕೂಡಾ ನೀಡಲಾಗುತ್ತಿದ್ದು, ಇನ್ಫೋಟೈನ್ಮೆಂಟ್ ಸಿಸ್ಟಮ್‍‍‍ಗೆ ಸಹಾಯವಾಗುವ ಹಲವಾರು ಬಟನ್‍‍ಗಳೊಂದಿಗೆ ಲೆದರ್‍ ಹೊದಿಕೆಯಿಂದ ಸಜ್ಜುಗೊಂಡ ಸ್ಟೀರಿಂಗ್ ವ್ಹೀಲ್ ಜೋಡಿಸಲಾಗಿದೆ.

MOST READ: ಸ್ಮಾರ್ಟ್ ಹೈಬ್ರಿಡ್ ಟೆಕ್ನಾಲಜಿಯೊಂದಿಗೆ ಮಾರಾಟದಲ್ಲಿ ಮಿಂಚುತ್ತಿದೆ ಮಾರುತಿ ಬಲೆನೊ

ಟ್ಯಾಕ್ಸಿ ಚಾಲಕರಿಗಾಗಿ ಹೊಸ ಮಾದರಿಯಲ್ಲಿ ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಸುರಕ್ಷಾ ವೈಶಿಷ್ಟ್ಯತೆಗಳು

ಹೊಸ ಎರ್ಟಿಗಾ ಕಾರಿನಲ್ಲಿ ಈ ಬಾರಿ ಪ್ರಯಾಣಿಕರ ಸುರಕ್ಷತೆಗಾಗಿ ಹೆಚ್ಚಿನ ಒತ್ತು ನೀಡಲಾಗಿದ್ದು, ಎಬಿಎಸ್, ಇಬಿಡಿ, ಡ್ಯುಯಲ್ ಏರ್‌ಬ್ಯಾಗ್, ಐಎಸ್‍ಓಫಿಕ್ಸ್ ಚೈಲ್ಡ್ ಸೀಟ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಕಾರಿನ ಎಲ್ಲಾ ಮಾದರಿಗಳಲ್ಲಿ ನೀಡಲಾಗಿದೆ. ಇದಲ್ಲದೆ ಹೈ ಎಂಡ್ ಮಾದರಿಗಳಲ್ಲಿ ಸೇಫ್ಟಿ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ವಾರ್ನಿಂಗ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಒದಗಿಸಲಾಗಿದೆ.

MOST READ: ರಾಜ್ಯದೆಲ್ಲೆಡೆ ಎಂಬತ್ತೊಂಬತ್ತು ಸಾವಿರಕ್ಕು ಹೆಚ್ಚಿನ ಡ್ರೈವಿಂಗ್ ಲೈಸೆನ್ಸ್ ರದ್ದು

ಟ್ಯಾಕ್ಸಿ ಚಾಲಕರಿಗಾಗಿ ಹೊಸ ಮಾದರಿಯಲ್ಲಿ ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಎಂಜಿನ್ ಸಾಮರ್ಥ್ಯ

ಹೊಸ ಎರ್ಟಿಗಾ ಕಾರಿನಲ್ಲಿ ಪ್ರಮುಖ ಎರಡು ಎಂಜಿನ್ ಆಯ್ಕೆಗಳನ್ನು ನೀಡಲಾಗಿದ್ದು, ಈ ಹಿಂದಿನ 1.4-ಲೀಟರ್ ಪೆಟ್ರೋಲ್ ಎಂಜಿನ್ ಬದಲಾಗಿ 1.5-ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಜೋಡಿಸಲಾಗಿದೆ. ಹಾಗೆಯೇ ಡೀಸೆಲ್ ಕಾರು 1.3-ಲೀಟರ್ ಎಂಜಿನ್ ಪಡೆದಿದ್ದು, ಇಂಧನ ದಕ್ಷತೆ ಹೆಚ್ಚಿಸಲು ಎಸ್‍‍ಹೆಚ್‍‍ವಿಎಸ್ ಮೈಲ್ಡ್-ಹೈಬ್ರಿಡ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ. ಜೊತೆಗೆ ಬೇಡಿಕೆಗೆ ಅನುಗುಣವಾಗಿ 4-ಸ್ಪೀಡ್ ಆಟೋಮ್ಯಾಟಿಕ್ ಮತ್ತು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಪಡೆದಿದೆ.

MOST READ: ಪೋಷಕರ ವಿವಾಹ ವಾರ್ಷಿಕೋತ್ಸವಕ್ಕೆ ಮರೆಯಾಲಾಗದ ಉಡುಗೊರೆ ನೀಡಿದ ಮಗ

ಟ್ಯಾಕ್ಸಿ ಚಾಲಕರಿಗಾಗಿ ಹೊಸ ಮಾದರಿಯಲ್ಲಿ ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಮೈಲೇಜ್ ಮಾರುತಿ ಸುಜುಕಿ ಸಂಸ್ಥೆಯು ಹೇಳಿಕೊಂಡಿರುವ ಪ್ರಕಾರ, ಡಿಸೇಲ್ ವರ್ಷನ್‌ಗಳು ಪ್ರತಿ ಲೀಟರ್‌ಗೆ 25 ಕಿ.ಮಿ ಮೈಲೇಜ್ ನೀಡಿದ್ದಲ್ಲಿ ಪೆಟ್ರೋಲ್ ಮಾದರಿಯ ಮ್ಯಾನುವಲ್ ಆವೃತ್ತಿಯು ಪ್ರತಿ ಲೀಟರ್‌ಗೆ 19 ಕಿ.ಮಿ ಮತ್ತು ಆಟೋಮ್ಯಾಟಿಕ್ ಆವೃತ್ತಿಯು ಪ್ರತಿ ಲೀಟರ್‌ಗೆ 18 ಕಿ.ಮಿ ಮೈಲೇಜ್ ಹಿಂದಿರುಗಿಸಲಿದೆ.

ಟ್ಯಾಕ್ಸಿ ಚಾಲಕರಿಗಾಗಿ ಹೊಸ ಮಾದರಿಯಲ್ಲಿ ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ

ಲಭ್ಯವಿರುವ ಬಣ್ಣಗಳು

ಹೊಸ ಎರ್ಟಿಗಾ ಕಾರುಗಳು ಒಟ್ಟು ಐದು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ಪರ್ಲ್ ಮೆಟಾಲಿಕ್ ಅಬರ್ನ್ ರೆಡ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಆಕ್ಸ್ಫಾರ್ಡ್ ಬ್ಲೂ, ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಮೆಟಾಲಿಕ್ ಸಿಲ್ಕಿ ಗ್ರೇ ಬಣ್ಣಗಳನ್ನು ಆಯ್ಕೆ ಮಾಡಬಹುದು.

Most Read Articles

Kannada
English summary
All New Maruti Suzuki Ertiga Tour M Launched For Fleet Operators. Read In Kannada
Story first published: Friday, May 31, 2019, 12:30 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X