ಮಹೀಂದ್ರಾ ಅಲ್ಟುರಾಸ್ ಜಿ4 ಕಾರಿಗೆ ಹೊಸ ಹೆಸರು ನೀಡಿದ್ರೆ 2 ಕಾರು ಫ್ರೀ ಅಂತೆ..!

ಮಹೀಂದ್ರಾ ಸಂಸ್ಥೆಯು ಕಳೆದ ನವೆಂಬರ್‌ನಲ್ಲಿ ಐಷಾರಾಮಿ ಸೌಲಭ್ಯವುಳ್ಳ ಎಸ್‌ಯುವಿ ಮಾದರಿಯೊಂದನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಿದ್ದು, ಪ್ರೀಮಿಯಂ ಸೌಲಭ್ಯಗಳನ್ನು ಹೊತ್ತು ಬಂದಿರುವ ಅಲ್ಟುರಾಸ್ ಜಿ4 ಕಾರು ಎಸ್‌ಯುವಿ ಪ್ರಿಯರ ಕುತೂಹಲಕ್ಕೆ ಕಾರಣವಾಗಿದೆ.

ಮಹೀಂದ್ರಾ ಅಲ್ಟುರಾಸ್ ಜಿ4 ಕಾರಿಗೆ ಹೊಸ ಹೆಸರು ನೀಡಿದ್ರೆ 2 ಕಾರು ಫ್ರೀ ಅಂತೆ..!

ದಕ್ಷಿಣ ಕೊರಿಯಾದ ಮೂಲದ ಸ್ಯಾಂಗ್‌ಯಾಂಗ್‌ ಆಟೋ ಉತ್ಪಾದನಾ ಸಂಸ್ಥೆಯೊಂದಿಗೆ ಜೊತೆಗೂಡಿರುವ ಮಹೀಂದ್ರಾ ಸಂಸ್ಥೆಯು ಭಾರತದಲ್ಲಿ ಸುಧಾರಿತ ಮಾದರಿಯ ಎಸ್‌ಯುವಿ ಕಾರುಗಳ ನಿರ್ಮಾಣ ಯೋಜನೆಗೆ ಚಾಲನೆ ನೀಡಿದ್ದು, ಸ್ಯಾಂಗ್‌ಯ್ಯಾಂಗ್ ಸಂಸ್ಥೆಯ ಜಿ4 ಕಾರಿನ ಪ್ರೇರಣೆಯೊಂದಿಗೆ ಅಲ್ಟುರಾಸ್ ಜಿ4 ಎಸ್‌ಯುವಿ ಕಾರನ್ನು ನಿರ್ಮಾಣ ಮಾಡಿದೆ.

ಮಹೀಂದ್ರಾ ಅಲ್ಟುರಾಸ್ ಜಿ4 ಕಾರಿಗೆ ಹೊಸ ಹೆಸರು ನೀಡಿದ್ರೆ 2 ಕಾರು ಫ್ರೀ ಅಂತೆ..!

ಸದ್ಯ ಹೊಸ ಕಾರು ಮಾರಾಟ ಪ್ರಕ್ರಿಯೆಯನ್ನು ಆರಂಭಗೊಳಿಸಲಾಗಿದ್ದು, ಕಳೆದ 2 ದಿನಗಳ ಹಿಂದಷ್ಟೇ ಮಹೀಂದ್ರಾ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಕೂಡಾ ತಮ್ಮ ಕಾರ್ ಕಲೆಕ್ಷನ್‌ನಲ್ಲಿ ಅಲ್ಟುರಾಸ್ ಜಿ4 ಸೇರ್ಪಡೆಗೊಳಿಸಿದ್ದಾರೆ.

ಮಹೀಂದ್ರಾ ಅಲ್ಟುರಾಸ್ ಜಿ4 ಕಾರಿಗೆ ಹೊಸ ಹೆಸರು ನೀಡಿದ್ರೆ 2 ಕಾರು ಫ್ರೀ ಅಂತೆ..!

ಈ ಬಗ್ಗೆ ಸಾಮಾಜಿಕ ಜಾಣತಾಣಗಳಲ್ಲಿ ಹೊಸ ಕಾರುನ್ನು ಅಧಿಕೃತವಾಗಿ ಬಳಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಆನಂದ್ ಮಹೀಂದ್ರಾ ಅವರು, ಅಲ್ಟುರಾಸ್ ಜಿ4 ಕಾರಿನ ಹೆಸರನ್ನು ಬದಲಾವಣೆಗೊಳಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಮಹೀಂದ್ರಾ ಅಲ್ಟುರಾಸ್ ಜಿ4 ಕಾರಿಗೆ ಹೊಸ ಹೆಸರು ನೀಡಿದ್ರೆ 2 ಕಾರು ಫ್ರೀ ಅಂತೆ..!

ಸ್ಯಾಂಗ್‌ಯ್ಯಾಂಗ್ ಸಂಸ್ಥೆಯ ಕಾರಿನ ಹೆಸರು ಆನಂದ್ ಮಹೀಂದ್ರಾ ಅವರಿಗೆ ಅಷ್ಟಾಗಿ ಹಿಡಿಸಿಲ್ಲ ಎನ್ನಲಾಗಿದ್ದು, ಇದೇ ಕಾರಣಕ್ಕೆ ಹೊಸ ಕಾರನ್ನು ಪಡೆದುಕೊಂಡ ನಂತರ ಅಲ್ಟುರಾಸ್ ಜಿ4 ಕಾರಿಗೆ ಒಂದು ಆಕರ್ಷಣೆಯ ಹೆಸರು ಸೂಚಿಸುವಂತೆ ಓದುಗರ ಬಳಿ ಮನವಿ ಮಾಡಿದ್ದಾರೆ.

2 ಎರಡು ಕಾರು ಫ್ರೀ..!

ಅಲ್ಟುರಾಸ್ ಜಿ4 ಕಾರಿಗೆ ಆಕರ್ಷಣೆಯಾಗುವಂತಹ ಹೆಸರನ್ನು ಸೂಚಿಸುವವರಿಗೆ ಮಹೀಂದ್ರಾ ನಿರ್ಮಾಣದ ಎರಡು ದುಬಾರಿ ಕಾರುಗಳನ್ನು ನೀಡುವುದಾಗಿ ಆಫರ್ ನೀಡಿರುವ ಆನಂದ್ ಮಹೀಂದ್ರಾ, ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಕಾರಿಗೆ ಉತ್ತಮ ಹೆಸರನ್ನು ನಿಮ್ಮಿಂದ ನೀರಿಕ್ಷೆ ಮಾಡುತ್ತಿದ್ದೇವೆ ಎಂದಿದ್ದಾರೆ.

ಮಹೀಂದ್ರಾ ಅಲ್ಟುರಾಸ್ ಜಿ4 ಕಾರಿಗೆ ಹೊಸ ಹೆಸರು ನೀಡಿದ್ರೆ 2 ಕಾರು ಫ್ರೀ ಅಂತೆ..!

ಇನ್ನು ಮಹೀಂದ್ರಾ ಸಂಸ್ಥೆಯು ಬಿಡುಗಡೆಗೊಳಿಸಿರುವ ಅಲ್ಟುರಾಸ್ ಜಿ4 ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪ್ರಮುಖ 2 ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಿದ್ದು, ಕಾರುಗಳಲ್ಲಿ ಒದಗಿಸಲಾಗಿರುವ ತಾಂತ್ರಿಕ ಸೌಲಭ್ಯಗಳ ಆಧಾರ ಮೇಲೆ ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 26.95 ಲಕ್ಷಕ್ಕೆ ಹಾಗೂ ಟಾಪ್ ಎಂಡ್ ಮಾದರಿಯನ್ನು ರೂ. 29.95 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

ಮಹೀಂದ್ರಾ ಅಲ್ಟುರಾಸ್ ಜಿ4 ಕಾರಿಗೆ ಹೊಸ ಹೆಸರು ನೀಡಿದ್ರೆ 2 ಕಾರು ಫ್ರೀ ಅಂತೆ..!

ಮಹೀಂದ್ರಾ ಅಲ್ಟುರಾಸ್ ಜಿ4 ಕಾರು ಎಕ್ಸ್‌ಯುವಿ 500 ಕಾರಿಗಿಂತಲೂ ಹೆಚ್ಚಿನ ಮಟ್ಟದ ಐಷಾರಾಮಿ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ಧಿಗೊಂಡಿದ್ದು, ಪ್ರೀಮಿಯಂ ಸೌಲಭ್ಯಗಳೊಂದಿಗೆ 7 ಸೀಟರ್ ಐಷಾರಾಮಿ ಎಸ್‌ಯುವಿ ಕಾರು ಮಾದರಿಯಾಗಿದೆ ಮಾರಾಟಗೊಳ್ಳುತ್ತಿದೆ.

ಮಹೀಂದ್ರಾ ಅಲ್ಟುರಾಸ್ ಜಿ4 ಕಾರಿಗೆ ಹೊಸ ಹೆಸರು ನೀಡಿದ್ರೆ 2 ಕಾರು ಫ್ರೀ ಅಂತೆ..!

ಕಾರಿನ ಡಿಸೈನ್‌ನಲ್ಲಿ ಈ ಹಿಂದಿನ ಸ್ಯಾಂಗ್‌ಯಾಂಗ್ ರೆಕ್ಸ್‌ಸ್ಟಾನ್ ಜಿ4 ಕಾರಿನ ಕೆಲವು ವಿನ್ಯಾಸಗಳನ್ನು ಎರವಲು ಪಡೆಯಲಾಗಿದ್ದು, ಎಲೆಕ್ಟ್ರಿಕ್ ಸನ್ ರೂಫ್, ಪವರ್ಡ್ ಟೈಲ್‌ಗೆಟ್, ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಜೊತೆ ಎಲ್ಇಡಿ ಡಿಆರ್‌ಎಲ್, ಹೊಂದಾಣಿಕೆ ಮಾಡಿಕೊಳ್ಳಬಹುದಾದ ಹೈಬೀಮ್ ಮತ್ತು ಲೋ ಬೀಮ್ ಲೈಟ್ಸ್, 18-ಇಂಚಿನ ಫೈವ್ ಸ್ಪೋಕ್ ಅಲಾಯ್ ವೀಲ್ಹ್‌ಗಳು, ಫಾಗ್ ಲ್ಯಾಂಪ್ ಜೊತೆ ಕಾರ್ನರ್ ಲೈಟಿಂಗ್ ಸೌಲಭ್ಯ ಪಡೆದಿದೆ.

ಮಹೀಂದ್ರಾ ಅಲ್ಟುರಾಸ್ ಜಿ4 ಕಾರಿಗೆ ಹೊಸ ಹೆಸರು ನೀಡಿದ್ರೆ 2 ಕಾರು ಫ್ರೀ ಅಂತೆ..!

ಎಂಜಿನ್ ಸಾಮರ್ಥ್ಯ

ಹೊಸ ಮಹೀಂದ್ರಾ ಅಲ್ಟುರಾಸ್ ಜಿ4 ಕಾರು 2.2-ಲೀಟರ್(2,200ಸಿಸಿ) 4 ಸಿಲಿಂಡರ್, ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಪಡೆದುಕೊಂಡಿದ್ದು, 7 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ನೊಂದಿಗೆ 178-ಬಿಹೆಚ್‍‍ಪಿ ಮತ್ತು 420-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಿವೆ. ಇವುಗಳಲ್ಲಿ ಪೆಟ್ರೋಲ್ ವರ್ಷನ್ ಮುಂದಿನ ದಿನಗಳಲ್ಲಿ ಒದಗಿಸುವ ಬಗ್ಗೆ ಮಹೀಂದ್ರಾ ಸುಳಿವು ನೀಡಿದೆ.

MOST READ: ಬ್ರೇಕ್ ಫೇಲ್ ಆದಾಗ ಜೀವ ಉಳಿಸಿಕೊಳ್ಳಲು ಈ ಟಿಪ್ಸ್ ಖಂಡಿತ ನಿಮ್ಮ ಸಹಾಯಕ್ಕೆ ಬರುತ್ತೆ..!

ಮಹೀಂದ್ರಾ ಅಲ್ಟುರಾಸ್ ಜಿ4 ಕಾರಿಗೆ ಹೊಸ ಹೆಸರು ನೀಡಿದ್ರೆ 2 ಕಾರು ಫ್ರೀ ಅಂತೆ..!

ಅಲ್ಟುರಾಸ್ ಜಿ4 ಕಾರುಗಳು ಕೇವಲ ಪ್ರೀಮಿಯಂ ಎಸ್‌ಯುವಿ ಮಾದರಿಯಷ್ಟೇ ಅಲ್ಲದೇ ಆಫ್ ರೋಡ್ ವೈಶಿಷ್ಟ್ಯತೆಯನ್ನು ಸಹ ಹೊಂದಿರುವ ಈ ಕಾರುಗಳಲ್ಲಿ ಹಿಂಬದಿ ಚಕ್ರಗಳಿಗೂ ಗೇರ್‌ಬಾಕ್ಸ್ ಶಕ್ತಿ ಪೂರೈಕೆಯ ಸೌಲಭ್ಯವಿದ್ದು, ಇದು ಕಠಿಣ ಪರಿಸ್ಥಿತಿಗಳಲ್ಲೂ ಸರಾಗವಾಗಿ ನುಗ್ಗಬಲ್ಲ ಬಲಿಷ್ಠ ಕಾರು ಮಾದರಿಯಾಗಲಿದೆ.

ಮಹೀಂದ್ರಾ ಅಲ್ಟುರಾಸ್ ಜಿ4 ಕಾರಿಗೆ ಹೊಸ ಹೆಸರು ನೀಡಿದ್ರೆ 2 ಕಾರು ಫ್ರೀ ಅಂತೆ..!

ಹೀಗಾಗಿ ಗ್ರಾಹಕರು ತಮ್ಮ ಬೇಡಿಕೆ ಅನುಗುಣವಾಗಿ 4x4 ಮತ್ತು 2x4 ಡ್ರೈವ್‌ ಟೆಕ್ನಾಲಜಿ ಪ್ರೇರಿತ ಅಲ್ಟುರಾಸ್ ಜಿ4 ಕಾರನ್ನು ಆಯ್ಕೆ ಮಾಡಬಹುದಾಗಿದ್ದು, 225/60 ಆರ್18 ಟೈರ್ ಸೌಲಭ್ಯವು ಆಪ್ ರೋಡ್ ಕೌಶಲ್ಯಕ್ಕೂ ಅನುಕೂಲಕವಾಗಿವೆ.

MOST READ: ಕಾರು ಖರೀದಿದಾರರಿಗೆ ಮತ್ತಷ್ಟು ಹೊಸತನ ನೀಡಿದ ಮಾರುತಿ ಸುಜುಕಿ ಅರೆನಾ

ಮಹೀಂದ್ರಾ ಅಲ್ಟುರಾಸ್ ಜಿ4 ಕಾರಿಗೆ ಹೊಸ ಹೆಸರು ನೀಡಿದ್ರೆ 2 ಕಾರು ಫ್ರೀ ಅಂತೆ..!

ಸುರಕ್ಷಾ ಸೌಲಭ್ಯಗಳು

ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, 9 ಏರ್‍‍ಬ್ಯಾಗ್, ಎಬಿಎಸ್, ಇಬಿಡಿ, ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್, ಅಡ್ವಾನ್ಸ್ಡ್ ಎಮರ್ಜೆನ್ಸಿ ಬ್ರೇಕಿಂಗ್ ಸಿಸ್ಟಮ್, ಲೇನ್ ಡಿಪಾರ್ಚುರ್ ವಾರ್ನಿಂಗ್, ಲೇನ್ ಚೇಂಜ್ ಅಸ್ಸಿಸ್ಟ್, ಟ್ರಾಫಿಕ್ ಸೇಫ್ಟಿ ಅಸ್ಸಿಸ್ಟ್, ಐಎಸ್ಒಎಫ್ಐಎಕ್ಸ್ ಚೈಲ್ಡ್-ಸೀಟ್ ಮೌಂಟ್ ಸೀಟ್, ಹಿಲ್ ಕ್ಲೈಮ್ / ಡಿಸೆಂಟ್ ಅಸಿಸ್ಟ್ಸ್ ಮತ್ತು ಹೈ ಬೀಮ್ ಅಸ್ಸಿಸ್ಟ್ ಅನ್ನು ಅಳವಡಿಸಲಾಗಿದೆ.

ಮಹೀಂದ್ರಾ ಅಲ್ಟುರಾಸ್ ಜಿ4 ಕಾರಿಗೆ ಹೊಸ ಹೆಸರು ನೀಡಿದ್ರೆ 2 ಕಾರು ಫ್ರೀ ಅಂತೆ..!

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಅಲ್ಟುರಾಸ್ ಜಿ4 ಕಾರು ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯತೆ ಹೊಂದಿರುವ ಫಾರ್ಚೂನರ್, ಎಂಡೀವರ್ ಮತ್ತು ಇಸುಝು ಎಂಯುಎಕ್ಸ್ ಕಾರುಗಳಿಗೆ ಪೈಪೋಟಿ ನೀಡುತ್ತಿದ್ದು, ಗ್ರಾಹಕರ ಆಕರ್ಷಣೆ ಮಾಡುವಂತಹ ಹೆಸರಿನ ಅವಶ್ಯಕತೆಯಿದೆ. ಈಗಿರುವ ಅಲ್ಟುರಾಸ್ ಜಿ4 ಹೆಸರು ಭಾರತೀಯ ಗ್ರಾಹಕರ ಆಕರ್ಷಣೆ ಮಾಡುವಲ್ಲಿ ವಿಫಲವಾಗಬಹುದು ಎಂದು ಅರಿತಿರುವ ಮಹೀಂದ್ರಾ ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರಿಗೆ ಮರುನಾಮಕರಣ ಮಾಡುವ ಯೋಜನೆಯಲ್ಲಿದೆ. ಹೀಗಾಗಿ ನಿಮ್ಮ ಬಳಿ ಯಾವುದಾದರೂ ಉತ್ತಮ ಹೆಸರು ಇದ್ರೆ 2 ಹೊಸ ಕಾರು ಉಡುಗೊರೆಯಾಗಿ ಪಡೆಯಬಹುದು ಟ್ರೈ ಮಾಡಿ ನೋಡಿ.

Most Read Articles

Kannada
English summary
Anand Mahindra Adds The Alturas G4 To His Car Collection And You Can Suggest A Name For It. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X