ಬೆಂಗಳೂರು ನಂತರ ಚೆನ್ನೈನಲ್ಲೂ ಬೈಕ್ ಮಾರಾಟ ಮಳಿಗೆಯನ್ನು ತೆರೆದ ಅಥೆರ್

ಅತ್ಯುತ್ತಮ ಮೈಲೇಜ್ ಪ್ರೇರಿತ ಎಲೆಕ್ಟ್ರಿಕ್ ಸ್ಕೂಟರ್‌ಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ಅಥೆರ್ ಎನರ್ಜಿ ಸಂಸ್ಥೆಯು ತನ್ನ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟವನ್ನು ಇದೇ ಮೊದಲ ಬಾರಿಗೆ ಕರ್ನಾಟಕದಿಂದ ಹೊರ ರಾಜ್ಯಗಳಿಗೂ ವಿಸ್ತರಣೆ ಮಾಡಿದ್ದು, ಚೆನ್ನೈನಲ್ಲೂ ಇದೀಗ ಅತಿ ದೊಡ್ಡ ಮಾರಾಟ ಮಳಿಗೆ ತೆರೆಯುವ ಮೂಲಕ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಬೆಂಗಳೂರು ನಂತರ ಚೆನ್ನೈನಲ್ಲೂ ಬೈಕ್ ಮಾರಾಟ ಮಳಿಗೆಯನ್ನು ತೆರೆದ ಅಥೆರ್

ಬೆಂಗಳೂರಿನಲ್ಲಿ ಈಗಾಗಲೇ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟದಲ್ಲಿ ಸಾಕಷ್ಟು ಮುನ್ನಡೆ ಸಾಧಿಸಿರುವ ಅಥೆರ್ ಎನರ್ಜಿ ಸಂಸ್ಥೆಯು ಹೊರ ರಾಜ್ಯಗಳಲ್ಲೂ ತನ್ನ ಮಾರಾಟ ಮಳಿಗೆಗಳನ್ನು ತೆರೆಯುತ್ತಿದ್ದು, ಚೆನ್ನೈನಲ್ಲಿ ಇದೀಗ ಹೊಸ ಮಾರಾಟ ಮಳಿಗೆಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಮುಂಬರುವ ದಿನಗಳಲ್ಲಿ ದೆಹಲಿ, ಹೈದ್ರಾಬಾದ್, ಪುಣೆ, ಮುಂಬೈ ಮತ್ತು ದೆಹಲಿಯಲ್ಲೂ ತನ್ನ ಹೊಸ ಮಾರಾಟ ಮಳಿಗೆಗಳಿಗೆ ಚಾಲನೆ ನೀಡಲು ಸಿದ್ದತೆ ನಡೆಸಲಾಗುತ್ತಿದ್ದು, ಅಥೆರ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಈಗಾಗಲೇ ಸಾವಿರಾರು ಗ್ರಾಹಕರು ಬೇಡಿಕೆ ಸಲ್ಲಿಸಿದ್ದಾರೆ.

ಬೆಂಗಳೂರು ನಂತರ ಚೆನ್ನೈನಲ್ಲೂ ಬೈಕ್ ಮಾರಾಟ ಮಳಿಗೆಯನ್ನು ತೆರೆದ ಅಥೆರ್

ಇದಲ್ಲದೇ ಅಥೆರ್ ಎನರ್ಜಿ ಸಂಸ್ಥೆಯು ಫೇಮ್ 2 ಯೋಜನೆ ಅಡಿ ಸಬ್ಸಡಿಗೆ ಅರ್ಹವಾಗಿರುವ ಕೆಲವೇ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದು, ಅತ್ಯುತ್ತಮ ಬ್ಯಾಟರಿ ಬಳಕೆಯೊಂದಿಗೆ ಗ್ರಾಹಕರ ಸ್ನೇಹಿಯಾಗಿರುವ ಈ ಸ್ಕೂಟರ್‌ ಖರೀದಿ ಮೇಲೆ ಭರ್ಜರಿ ಆಫರ್‌ಗಳನ್ನು ನೀಡಲಾಗುತ್ತಿದೆ.

ಬೆಂಗಳೂರು ನಂತರ ಚೆನ್ನೈನಲ್ಲೂ ಬೈಕ್ ಮಾರಾಟ ಮಳಿಗೆಯನ್ನು ತೆರೆದ ಅಥೆರ್

ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳ ಜೊತೆಗೆ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೂ ಬಂಪರ್ ಆಫರ್ ನೀಡುತ್ತಿದ್ದು, ಇದರಲ್ಲಿ ಅಥೆರ್ ಎನರ್ಜಿ ಸಂಸ್ಥೆಯು ಫೇಮ್ 2 ಯೋಜನೆ ಅಡಿ ಸಬ್ಸಡಿ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವುದರಿಂದ ಗ್ರಾಹಕರಿಗೆ ಕಡಿಮೆ ದರದಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಖರೀದಿ ಮಾಡಬಹುದಾಗಿದೆ.

ಬೆಂಗಳೂರು ನಂತರ ಚೆನ್ನೈನಲ್ಲೂ ಬೈಕ್ ಮಾರಾಟ ಮಳಿಗೆಯನ್ನು ತೆರೆದ ಅಥೆರ್

ಫೇಮ್ 2 ಸಬ್ಸಡಿ ಪಡೆದುಕೊಂಡ ನಂತರ ಅಥೆರ್ ಸ್ಕೂಟರ್‌ಗಳ ಬೆಲೆಯು ಎಸ್ 340 ಮಾದರಿಗೆ ರೂ. 1.13 ಲಕ್ಷ ಮತ್ತು ರೂ. 1.24 ಲಕ್ಷ ನಿಗದಿ ಮಾಡಲಾಗಿದ್ದು, ಉತ್ತಮ ಮೈಲೇಜ್ ನೀಡಬಲ್ಲ ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯ ಹೊಂದಿರುವುದು ಸಬ್ಸಡಿ ಯೋಜನೆಗೆ ಅರ್ಹವಾಗಲು ಪ್ರಮುಖ ಕಾರಣವಾಗಿದೆ. ಈ ಹಿಂದೆ ಫೇಮ್ ಯೋಜನೆಯ ಮೊದಲ ಹಂತವನ್ನು ಪರಿಚಯಿಸಿದ್ದ ವೇಳೆ ಎಲ್ಲಾ ಮಾದರಿಯ ಎಲೆಕ್ಟ್ರಿಕ್ ವಾಹನಗಳಿಗೂ ಸಬ್ಸಡಿ ಘೋಷಣೆ ಮಾಡಿದ್ದ ಕೇಂದ್ರ ಸರ್ಕಾರವು ಈ ಬಾರಿ 2ನೇ ಹಂತದ ಯೋಜನೆಯನ್ನು ಪರಿಚಯಿಸುವಾಗ ಕೆಲವು ಬದಲಾವಣೆಗಳನ್ನು ತಂದಿದೆ.

ಬೆಂಗಳೂರು ನಂತರ ಚೆನ್ನೈನಲ್ಲೂ ಬೈಕ್ ಮಾರಾಟ ಮಳಿಗೆಯನ್ನು ತೆರೆದ ಅಥೆರ್

ಹೋಂಡಾ ಸಿಟಿ ಮತ್ತು ಮಾರುತಿ ಸುಜುಕಿ ಸಿಯಾಜ್‌ಗೆ ಟಕ್ಕರ್ ನೀಡುತ್ತಿರುವ ಟೊಯೊಟಾ ಯಾರಿಸ್ ಖರೀದಿಗೆ ಈಗಲೇ ಟೆಸ್ಟ್ ಡ್ರೈವ್ ಮಾಡಿ..!

ಫೇಮ್ 2 ಯೋಜನೆ ಅಡಿ ಸಬ್ಸಡಿ ಪಡೆದುಕೊಳ್ಳಲು ಕಡ್ಡಾಯವಾಗಿ ಲೀಥಿಯಂ ಅಯಾನ್ ಬ್ಯಾಟರಿ ಹೊಂದಿರುವ ಎಲೆಕ್ಟ್ರಿಕ್ ವಾಹನ ಮಾದರಿಗಳಿಗೆ ಮಾತ್ರವೇ ಸಬ್ಸಡಿ ಎಂದಿರುವ ಕೇಂದ್ರ ಸರ್ಕಾರವು 2019-21ರ ಅವಧಿಗೆ ಬರೋಬ್ಬರಿ 10 ಸಾವಿರ ಕೋಟಿ ಬಿಡುಗಡೆ ಮಾಡಿದ್ದು, ಹೊಸ ಮಾರ್ಗಸೂಚಿಯನ್ನು ಪಾಲನೆ ಮಾಡಿರುವ ಅಥೆರ್ ಸಂಸ್ಥೆಯು ಫೇಮ್ 2 ಗಿಟ್ಟಿಸಿಕೊಂಡಿರುವುದು ಗ್ರಾಹಕರನ್ನು ಆಕರ್ಷಿಸುತ್ತಿದೆ.

ಬೆಂಗಳೂರು ನಂತರ ಚೆನ್ನೈನಲ್ಲೂ ಬೈಕ್ ಮಾರಾಟ ಮಳಿಗೆಯನ್ನು ತೆರೆದ ಅಥೆರ್

ಈ ಹಿನ್ನೆಲೆಯಲ್ಲಿ ಆಟೋ ಉತ್ಪಾದನಾ ಸಂಸ್ಥೆಗಳು ತಮ್ಮ ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗಾಗಿ ಸಜ್ಜುಗೊಳ್ಳುತ್ತಿದ್ದು, ಚಾರ್ಜಿಂಗ್ ಸ್ಟೆಷನ್ ನಿರ್ಮಾಣ ಕಾರ್ಯವು ಇದೀಗ ಜೋರಾಗಿದೆ. ಅಥೆರ್ ಎನರ್ಜಿ ಕೂಡಾ ಈ ನಿಟ್ಟಿನಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ಕೇಂದ್ರ ಸರ್ಕಾರದ ಸಬ್ಸಡಿ ಯೋಜನೆಯನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳಲು ಮುಂದಾಗಿದೆ.

ಬೆಂಗಳೂರು ನಂತರ ಚೆನ್ನೈನಲ್ಲೂ ಬೈಕ್ ಮಾರಾಟ ಮಳಿಗೆಯನ್ನು ತೆರೆದ ಅಥೆರ್

ಅಥೆರ್ ಸಂಸ್ಥೆಯು ವರ್ಷಾಂತ್ಯಕ್ಕೆ 200 ಚಾರ್ಜಿಂಗ್ ಸ್ಪೆಷನ್‌ಗಳನ್ನು ದೇಶದ ವಿವಿಧಡೆ ತೆರೆಯಲು ನಿರ್ಧರಿಸಿದ್ದು, ಹಾಗೆಯೇ 2022ರ ವೇಳೆಗೆ ಬರೋಬ್ಬರಿ 6,500 ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣ ಗುರಿ ಹೊಂದಿದೆ. ಇದಕ್ಕಾಗಿ ರೂ.130 ಕೋಟಿ ಮೀಸಲಿಟ್ಟಿರುವ ಅಥೆರ್ ಎನರ್ಜಿ ಸಂಸ್ಥೆಯು ಕೇಂದ್ರ ಸರ್ಕಾರದಿಂದ ಭಾರೀ ಪ್ರಮಾಣದ ಸಬ್ಸಡಿ ಪಡೆದುಕೊಳ್ಳಲಿದೆ.

ಬೆಂಗಳೂರು ನಂತರ ಚೆನ್ನೈನಲ್ಲೂ ಬೈಕ್ ಮಾರಾಟ ಮಳಿಗೆಯನ್ನು ತೆರೆದ ಅಥೆರ್

ಇದರೊಂದಿಗೆ ಅಥೆರ್ ಎನರ್ಜಿ ಸಂಸ್ಥೆಯು ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಹೊರತರಲು ನಿರ್ಧರಿಸಲಾಗಿದ್ದು, ಇದರಲ್ಲಿ ಅಗ್ಗದ ಬೆಲೆಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಸಹ ಪರಿಚಯಿಸಲಿದೆ. ಇದಕ್ಕೆ ಕಾರಣ, ಸದ್ಯ ಮಾರುಕಟ್ಟೆಯಲ್ಲಿರುವ ಅಥೆರ್ ಸ್ಕೂಟರ್‌ಗಳು ಬೆಲೆಯಲ್ಲಿ ತುಸು ದುಬಾರಿ ಎನ್ನಿಸಲಿದ್ದು, ಮುಂಬರುವ ದಿನಗಳಲ್ಲಿ ರೂ.60 ಸಾವಿರದಿಂದ ರೂ.80 ಸಾವಿರದೊಳಗೆ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

Most Read Articles

Kannada
English summary
Ather Space Now in Chennai. Read in Kannada.
Story first published: Wednesday, July 24, 2019, 18:54 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X