TRENDING ON ONEINDIA
-
ಪುಲ್ವಾಮಾ ದಾಳಿ: ಪ್ರಧಾನಿ ಅಧ್ಯಕ್ಷತೆಯಲ್ಲಿ ಇಂದು ಭದ್ರತಾ ಸಭೆ
-
ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್ಯುವಿ300
-
ಕಡಿಮೆ ಮೆಮೊರಿ ಮತ್ತು ರ್ಯಾಮ್ ಇರುವ ಫೋನನ್ನು ಖರೀದಿಸಲೇಬಾರದು ಏಕೆ?
-
ಡಾಲಿ ಫಸ್ಟ್ ಲುಕ್: ಮತ್ತೆ ನಟರಾಕ್ಷಸನ ಆಗಮನ
-
ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆ: ತಿಂಗಳಿಗೆ 3000 ಪಿಂಚಣಿ
-
ಪುರುಷರಲ್ಲಿ ಫಲವತ್ತತೆ ಹೆಚ್ಚಿಸಲು ಕೆಲವು ಸಲಹೆಗಳು
-
ಐಸಿಸಿ ವಿಶ್ವಕಪ್ ಕ್ರಿಕೆಟ್ 2019 ವೇಳಾಪಟ್ಟಿ ಪ್ರಕಟ
-
ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಹಾಕಿ
ಬೆಂಗಳೂರಿನಲ್ಲಿ ರಸ್ತೆಗಿಳಿಯಲು ಸಜ್ಜಾದ 3 ಸಾವಿರ ಎಲೆಕ್ಟ್ರಿಕ್ ಬಸ್‌ಗಳು..!
ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ದೇಶಾದ್ಯಂತ ಸಾರ್ವಜನಿಕ ಸಾರಿಗೆ ಇಲಾಖೆಯಲ್ಲಿ ಭಾರೀ ಬದಲಾವಣೆ ತರಲಾಗುತ್ತಿದ್ದು, ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಬೆಂಗಳೂರಿನ ರಸ್ತೆಗಳು ಎಲೆಕ್ಟ್ರಿಕ್ ಬಸ್ ಮಯವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.
ಹೌದು, ಬೆಂಗಳೂರಿನ ಜನತೆಯ ಜೀವಾಳವಾಗಿರುವ ಬಿಎಂಟಿಸಿ ಸಂಸ್ಥೆಯು ಹೊಸ ಬದಲಾವಣೆಗಳೊಂದಿಗೆ ವಿಶ್ವದರ್ಜೆ ಸೇವೆಗಳನ್ನು ನೀಡಲು ಸಜ್ಜಾಗುತ್ತಿದ್ದು, ಮಾಲಿನ್ಯ ಉತ್ಪಾದನೆಯಲ್ಲಿ ದೊಡ್ಡ ಪಾಲು ಹೊಂದಿರುವ ಸಾಂಪ್ರಾದಾಯಿಕ ಡೀಸೆಲ್ ಬಸ್‌ಗಳಿಗೆ ಗುಡ್ ಬೈ ಹೇಳುವುದು ಖಚಿತವಾಗಿದೆ.
ಈ ಸಂಬಂಧ ಕರ್ನಾಟಕ ಸರ್ಕಾರವು ಇ-ವಾಹನ ಉತ್ತೇಜನ ನೀತಿಯನ್ನು ಸಹ ಜಾರಿಗೊಳಿಸಿದ್ದು, ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಪ್ರಮಾಣವನ್ನು ಹೆಚ್ಚಳ ಮಾಡುವುದಕ್ಕಾಗಿ ಆಟೋ ಸಂಸ್ಥೆಗಳಿಗೆ ಭರ್ಜರಿ ಆಫರ್ ನೀಡುತ್ತಿದೆ.
ಕರ್ನಾಟಕದ ಯಾವುದೇ ಭಾಗದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಘಟಕಗಳನ್ನು ತೆರೆಯುವ ಆಟೋ ಸಂಸ್ಥೆಗಳಿಗೆ ಇಂತಿಷ್ಟು ವರ್ಷಗಳ ತನಕ ತೆರಿಗೆ ವಿನಾಯ್ತಿ ಮತ್ತು ಕಡಿಮೆ ಅವಧಿಯಲ್ಲಿ ಪೂರ್ಣಪ್ರಮಾಣದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಾಗಿ ಘೋಷಣೆ ಮಾಡಿದೆ.
ಬೆಂಗಳೂರಿನಲ್ಲಿ ನಿನ್ನೆಯಷ್ಟೇ ನಡೆದ 'ವಿದ್ಯುತ್ ವಾಹನಗಳ ಶೃಂಗಸಭೆ' ಉದ್ಘಾಟಿಸಿ ಮಾತನಾಡಿದ ಮಧ್ಯಮ ಮತ್ತು ಭಾರೀ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಅವರು, ಸಿಲಿಕಾನ್ ಬೆಂಗಳೂರು ದೇಶದ ಐಟಿ ರಾಜಧಾನಿಯಾಗಿದ್ದು, ಮುಂದಿನ ದಿನಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆಗೂ ದೇಶದ ರಾಜಧಾನಿಯಾಗಲಿದೆ ಎಂದಿದ್ದಾರೆ.
ಸದ್ಯ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಕ್ಷೇತ್ರಕ್ಕೆ ಸುಮಾರು ರೂ.2 ಲಕ್ಷ ಕೋಟಿ ಹೂಡಿಕೆಯಾಗಿದ್ದು, ಇದರಲ್ಲಿ ವಿಶ್ವದ ಮೂರು ಪ್ರಮುಖ ದೇಶಗಳ ದೇಶಗಳ ಪೈಕಿ ಭಾರತ ಕೂಡ ಒಂದಾಗಿದೆ ಎಂದು ಹೇಳಿರುವ ಸಚಿವ ಕೆ.ಜೆ.ಜಾರ್ಜ್ ಅವರು ವಿದ್ಯುತ್ ಚಾಲಿತ ವಾಹನಗಳ ಉತ್ಪಾದಿಸುವ ಸಂಸ್ಥೆಗಳಿಗೆ ಸರ್ಕಾರದಿಂದ ಗರಿಷ್ಠ ಪ್ರೋತ್ಸಾಹ ನೀಡಲಿದೆ ಎಂದಿದ್ದಾರೆ.
ಇನ್ನು ಉತ್ತಮ ವಾತಾವರಣ ಹಾಗೂ ಉತ್ತಮ ಪರಿಸರ ನಿರ್ಮಾಣಕ್ಕೆ ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆ ಅತ್ಯಂತ ಮುಖ್ಯವಾಗಿದ್ದು, ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಕಾದ ಚಾರ್ಜಿಂಗ್ ಸ್ಟೆಷನ್ ನಿರ್ಮಾಣಕ್ಕೂ ಹೆಚ್ಚಿನ ಒತ್ತುನೀಡಲಾಗುತ್ತಿದೆ.
ಬೆಂಗಳೂರಿನ ಪ್ರಸ್ತುತ ನಾಲ್ಕು ಕಡೆಗಳಲ್ಲಿ ಮಾತ್ರ ಸಾರ್ವಜನಿಕವಾಗಿ ಬಳಕೆ ಮಾಡಬಹುದಾದ ಚಾರ್ಜಿಂಗ್ ಸ್ಟೆಷನ್‌ಗಳನ್ನು ನಿರ್ಮಾಣ ಮಾಡಲಾಗಿದ್ದು, ಮುಂದಿನ 1 ವರ್ಷಗಳ ಅವಧಿಯೊಳಗೆ ನಗರದ ವಿವಿಧಡೆ 150 ಹೊಸ ಚಾರ್ಜಿಂಗ್ ಸ್ಟೆಷನ್‌ಗಳನ್ನು ತೆರೆಯಲು ನಿರ್ಧರಿಸಲಾಗಿದೆ.
ಇನ್ಮುಂದೆ ಅರ್ಪಾಟ್‌ಮೆಂಟ್‌ಗಳಿಗೆ ಹೊಸ ರೂಲ್ಸ್
ಹೌದು, ಇನ್ಮುಂದೆ ವಸತಿ ಸಮುಚ್ಚಯಗಳಲ್ಲಿ ಶೇ.10ರಷ್ಟು ಜಾಗವನ್ನು ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಪಾಯಿಂಟ್ ತೆರೆಯಲು ಮೀಸಲು ಇರಿಸಬೇಕೆಂಬ ಹೊಸ ನಿಯಮಗಳನ್ನು ಜಾರಿ ಮಾಡಲು ಚಿಂತಿಸಲಾಗಿದ್ದು, ಈ ಕುರಿತಂತೆ ಸದ್ಯದಲ್ಲೇ ಅಧಿಕೃತ ನಿಯಮ ಜಾರಿಯಾಗಲಿದೆ.
MOST READ: ಬದಲಾದ ತೆರಿಗೆ ನೀತಿ- ಸದ್ಯದಲ್ಲೇ ಹೊಸ ಬೈಕ್, ಸ್ಕೂಟರ್ಗಳು ಮತ್ತಷ್ಟು ದುಬಾರಿ..!
ವಸತಿ ಸಮುಚ್ಚಯಗಳಲ್ಲಿ ಶೇ.10ರಷ್ಟು ಜಾಗ ಮೀಸಲು ಇರಿಸುವ ಕುರಿತಂತೆ ಮಾತನಾಡಿರುವ ಕೈಗಾರಿಕೆ ಅಭಿವೃದ್ದಿ ನಿಗಮದ ಆಯುಕ್ತರಾದ ದರ್ಪಣ್ ಜೈನ್ ಅವರು, ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಪ್ರೋತ್ಸಾಹಿಸಲು ಕೆಲವು ಕಠಿಣ ನಿರ್ಧಾರಗಳು ಅಗತ್ಯ ಎಂದಿದ್ದಾರೆ.
ಇದೇ ಮಾತನಾಡಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಸಿ.ಶಿಖಾ ಅವರು, ಕೇವಲ ಬೆಂಗಳೂರಿನಲ್ಲಿ ಮಾತ್ರವಲ್ಲದೇ ಬೆಂಗಳೂರು-ಮೈಸೂರು ಮತ್ತು ಬೆಂಗಳೂರು-ಚೆನ್ನೈ ನಡುವೆಯು ಅಗತ್ಯ ಚಾರ್ಜಿಂಗ್ ಸ್ಟೆಷನ್‌ಗಳನ್ನು ನಿರ್ಮಾಣ ಮಾಡುವ ಯೋಜನೆಯಿದೆ ಎಂದಿದ್ದಾರೆ.
MOST READ: ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಈ ಸ್ಕೂಟರ್ ಮಾಲೀಕ ಮಾಡಿದ್ದೇನು ಗೊತ್ತಾ?
ಹೊಸ ಯೋಜನೆಯನ್ನು ಸ್ವಾಗತಿಸಿರುವ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳಾದ ಮಹೀಂದ್ರಾ ಎಲೆಕ್ಟ್ರಿಕ್, ಎಥೆರ್ ಎರ್ನಜಿ, ಇ-ಟ್ರಿಯೊ, ಸನ್ ಮೊಬಿಲಿಟಿ ಸಂಸ್ಥೆಗಳು ಕರ್ನಾಟಕ ಸರ್ಕಾರದೊಂದಿಗೆ ಕೈ ಜೋಡಿಸಿದ್ದು, ಮುಂದಿನ 2 ವರ್ಷಗಳ ಅವಧಿಯಲ್ಲಿ ಬರೋಬ್ಬರಿ 31 ಸಾವಿರ ಕೋಟಿ ಹೂಡಿಕೆ ಮಾಡುತ್ತಿರುವುದಾಗಿ ಮಾಹಿತಿ ಹಂಚಿಕೊಂಡಿವೆ.
ಒಟ್ಟಿನಲ್ಲಿ ಮಾಲಿನ್ಯವನ್ನು ಪರಿಣಾಮಕಾರಿ ತಗ್ಗಿಸಲು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವ ಕರ್ನಾಟಕ ಸರ್ಕಾರದ ಇ-ವಾಹನ ಉತ್ತೇಜನ ನೀತಿ ಯೋಜನೆಯು ಮಹತ್ವವಾಗಿದ್ದು, ಈ ಮೂಲಕ ವಿವಿಧ ಹಂತವಾಗಿ ಬರೋಬ್ಬರಿ 55 ಸಾವಿರ ಉದ್ಯೋಗ ಅವಕಾಶಗಳು ಸಹ ಸೃಷ್ಠಿಯಾಗಲಿವೆ.