ಅಗ್ಗದ ಬೆಲೆಯಲ್ಲಿ ದೊರೆಯುವ ಟಾಪ್ 10 ಕಾರುಗಳಿವು

ಹಿಂದಿನ ಲೇಖನದಲ್ಲಿ ನಾವು ನಿಮಗೆ ಕೈಗಟ್ಟುವ ಬೆಲೆಯಲ್ಲಿ ದೊರೆಯುವ ಅತ್ಯುತ್ತಮ ಎಎಂಟಿ ಕಾರುಗಳ ಬಗ್ಗೆ ಮತ್ತು 10 ಲಕ್ಷದೊಳಗೆ ದೊರೆಯುವ ಅತ್ಯುತ್ತಮ ಕಾರುಗಳ ಬಗ್ಗೆ ಮಾಹಿತಿ ನೀಡಿದ್ದೆವು. ಆದ್ರೆ ಇಂದು ನಾವು ನಿಮಗೆ ಭಾರತೀಯ ಮಾರುಕಟ್ಟೆಯಲ್ಲಿ ಬಜೆಟ್‌ನಲ್ಲಿ ಖರೀದಿಸಬಹುದಾದ ಅತ್ಯುತ್ತಮ ಸೌಲಭ್ಯವುಳ್ಳ ಟಾಪ್ 10 ಕಾರುಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ.

ಅಗ್ಗದ ಬೆಲೆಯಲ್ಲಿ ದೊರೆಯುವ ಬೆಸ್ಟ್ ಟಾಪ್ 10 ಕಾರುಗಳಿವು

ಸದ್ಯ ದೇಶಿಯ ಮಾರುಕಟ್ಟೆ ದಿನಕ್ಕೊಂದು ಹೊಸ ಹೊಸ ಮಾದರಿಗಳು ಮಾರುಕಟ್ಟೆಗೆ ಲಗ್ಗೆಯಿಡುತ್ತಲೇ ಇರುತ್ತವೆ. ಆದರೇ ಬಿಡುಗಡೆಯಾದ ಎಲ್ಲಾ ಕಾರುಗಳು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುವುದಿಲ್ಲ. ಅದರಲ್ಲಿ ಕೆಲವೇ ಕೆಲವು ಕಾರುಗಳು ಮಾತ್ರ ಗ್ರಾಹಕರನ್ನು ಸೆಳೆಯಬಲ್ಲವು. ಅಂತಹ ಜನಪ್ರಿಯ ಕಾರು ಮಾದರಿಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ.

ಅಗ್ಗದ ಬೆಲೆಯಲ್ಲಿ ದೊರೆಯುವ ಬೆಸ್ಟ್ ಟಾಪ್ 10 ಕಾರುಗಳಿವು

ಮಾರುತಿ ಸುಜುಕಿ ಸ್ವಿಫ್ಟ್

ಮಾರುತಿ ಸುಜುಕಿ ಸ್ವಿಫ್ಟ್ ಕಾರುಗಳು ಮಾರುತಿ ಸುಜುಕಿ ಸಂಸ್ಥೆಯಲ್ಲಿನ ಅತಿ ಹೆಚ್ಚು ಮಾರಾಟವಾಗುತ್ತಿರುವ ಕಾರಾಗಿದ್ದು, 2017ರ ಸ್ವಿಫ್ಟ್ ಕಾರಿನಲ್ಲಿ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ಸ್, 15 ಇಂಚಿನ ಅಲಾಯ್ ವ್ಹೀಲ್ಸ್ ಮತ್ತು ಆಂಡ್ರಾಯ್ಡ್ ಆಟೋ ಹಾಗು ಆಪಲ್ ಕಾರ್ ಪ್ಲೇ ಸಪೋರ್ಟ್ ಮಾಡುವ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. 1197ಸಿಸಿ ಪೆಟ್ರೋಲ್ ಎಂಜಿನ್ ಹೊಂದಿರುವ ಈ ಕಾರು ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ. 4.99 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು, ಪ್ರತೀ ಲೀಟರ್ ಪೆಟ್ರೋಲ್‍ಗೆ ಸುಮಾರು 20.4 ಕಿಲೋಮೀಟರ್ ಮೈಲೇಜ್ ನೀಡಬಲ್ಲದು.

ಅಗ್ಗದ ಬೆಲೆಯಲ್ಲಿ ದೊರೆಯುವ ಬೆಸ್ಟ್ ಟಾಪ್ 10 ಕಾರುಗಳಿವು

ಮಾರುತಿ ಸುಜುಕಿ ಬಲೆನೊ

ಪ್ರೀಮಿಯಂ ಹ್ಯಾಚ್‍ಬ್ಯಾಕ್ ಕಾರುಗಳ ಮಾರಾಟದಲ್ಲಿ ಪ್ರತೀ ತಿಂಗಲೂ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿರುವ ಮಾರುತಿ ಸುಜುಕಿ ಬಲೆನೊ ಕಾರು ರೂ. 5.55 ಲಕ್ಷದ ಪ್ರಾರಂಭಿಕ ಬಲೆಯನ್ನು ಪಡೆದುಕೊಂಡಿದೆ. ಈ ಕಾರಿನಲ್ಲಿ 16 ಇಂಚಿನ ಅಲಾಯ್ ವ್ಹೀಲ್ಸ್ ಆಟೋ ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್ಸ್ ಮತ್ತು ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್ ವೈಶಿಷ್ಟ್ಯತೆಯನ್ನು ನೀಡಲಾಗಿದೆ. ಈ ಕಾರು 1197ಸಿಸಿ ಸೆಂಜಿನ್ ಸಹಾಯದಿಂದ ಪ್ರತೀ ಲೀಟರ್‍ ಪೆಟ್ರೋಲ್‍‍ಗೆ ಸುಮಾರು 21.4 ಕಿಲೋಮೀಟರ್ ಮೈಲೇನ್ ನೀಡಬಲ್ಲದು.

ಅಗ್ಗದ ಬೆಲೆಯಲ್ಲಿ ದೊರೆಯುವ ಬೆಸ್ಟ್ ಟಾಪ್ 10 ಕಾರುಗಳಿವು

ಹ್ಯುಂಡೈ ಎಲೈಟ್ ಐ20

ಪ್ರೀಮಿಯಂ ಹ್ಯಾಚ್‍‍ಬ್ಯಾಕ್‍ನಲ್ಲಿ ಮಾರುತಿ ಸುಜುಕಿ ಬಲೆನೊ ಕರು ನಂತರ ಹ್ಯುಂಡೈ ಸಂಸ್ಥೆಯ ಎಲೈಟ್ ಐ20 ಕಾರು ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಈ ಕಾರು ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, 6 ಏರ್‍‍ಬ್ಯಾಗ್ ಓಳಗೊಂಡಂತೆ ಹಲವಾರು ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿದ್ದು, ರೂ. 5.50 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದೆ. ಈ ಕಾರು 1197ಸಿಸಿ ಎಂಜಿನ್ ಸಹಾಯದಿಂದ ಪ್ರತೀ ಲೀಟರ್ ಪೆಟ್ರೋಲ್‍‍ಗೆ ಸುಮಾರು 18.6 ಕಿಲೋಮೀಟರ್ ಮೈಲೇಜ್ ನೀಡಬಲ್ಲದು.

ಅಗ್ಗದ ಬೆಲೆಯಲ್ಲಿ ದೊರೆಯುವ ಬೆಸ್ಟ್ ಟಾಪ್ 10 ಕಾರುಗಳಿವು

ಹ್ಯುಂಡೈ ಗ್ರ್ಯಾಂಡ್ ಐ10

ಹುಂಡೈ ಗ್ರ್ಯಾಂಡ್ ಐ10 ಹೊಸ ಸ್ಯಾಂಟ್ರೊ ಮತ್ತು ಪ್ರೀಮಿಯಂ ಎಲೈಟ್ ಐ20 ನಡುವಿನ ಅಂತರವನ್ನು ತುಂಬುತ್ತದೆ. ಇದು ದೊಡ್ಡ ಎಲೈಟ್ ಐ 20 ರಂತೆಯೇ ಸುಮಾರು ಅದೇ ಮಟ್ಟದ ಮೂಲಭೂತ ಸಾಧನಗಳೊಂದಿಗೆ ಬರುತ್ತದೆ ಮತ್ತು ಹೆಚ್ಚಿನದಾಗಿ ಒಳಭಾಗದಲ್ಲಿ ಹಾಗು ಒಳಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಪಡೆದುಕೊಂಡಿದೆ. ಈ ಕಾರು 4.97 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು, ಇದೂ ಸಹ 1197ಸಿಸಿ ಎಂಜಿನ್ ಸಹಾಯದಿಂದ ಪ್ರತೀ ಲೀಟರ್ ಪೆಟ್ರೋಲ್‍‍ಗೆ 19.77 ಕಿಲೋಮೀಟರ್‍‍ನ ಮೈಲೇಜ್ ನೀಡಬಲ್ಲದು.

ಅಗ್ಗದ ಬೆಲೆಯಲ್ಲಿ ದೊರೆಯುವ ಬೆಸ್ಟ್ ಟಾಪ್ 10 ಕಾರುಗಳಿವು

ರೆನಾಲ್ಟ್ ಕ್ವಿಡ್

ರೆನಾಲ್ಟ್ ಕ್ವಿಡ್ ಕಾರುಗಳು ರೂ. 2.79 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದೆ. ಈ ಕಾರಿನಲ್ಲಿ ರಿಯರ್ ಪಾರ್ಕಿಂಗ್ ಕ್ಯಾಮೆರಾ, ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಯುಎಸ್‍ಬಿ ಮತ್ತು ಆಕ್ಸ್ ಕೇಬಲ್ ಸೇರಿದಂತೆ ಇನ್ನು ಹಲವಾರು ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿದೆ. ಈ ಕಾರು 799ಸಿಸಿ ಪೆಟ್ರೋಲ್ ಎಂಜಿನ್ ಸಹಾಯದಿಂದ ಪ್ರತೀ ಲೀಟರ್ ಪೆಟ್ರೋಲ್‍ಗೆ ಸಮಾರು 25.17 ಕಿಲೋಮೀಟರ್‍‍ನ ಮೈಲೇಜ್ ನೀಡಬಲ್ಲದು.

MOST READ: ಉತ್ತಮ ಮೈಲೇಜ್ ನೀಡುವ ಟಾಪ್ 10 ಡೀಸೆಲ್ ಕಾರುಗಳಿವು..

ಅಗ್ಗದ ಬೆಲೆಯಲ್ಲಿ ದೊರೆಯುವ ಬೆಸ್ಟ್ ಟಾಪ್ 10 ಕಾರುಗಳಿವು

ಟಾಟಾ ಟಿಯಾಗೊ

ಟಾಟಾ ಟಿಯಾಗೊ ಕಾರು ಟಾಟಾ ಸಂಸ್ಥೆಯ ಆಕರ್ಷಕವಾದ ಮತ್ತು ಹೆಚ್ಚು ಜನಪ್ರೀಯತೆಯನ್ನುಳ್ಳ ಕಾರುಗಳಲ್ಲಿ ಒಂದಾಗಿದ್ದು, ಇದು ರೂ. 3.49 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದೆ. ಇದರಲ್ಲಿ 8ಸ್ಪೀಕರ್‍‍ಗಳ ಹರ್ಮಾನ್ ಕಾರ್ಡನ್ ಮ್ಯೂಸಿಕ್ ಸಿಸ್ಟಂ, ರಿವರ್ಸ್ ಪಾರ್ಕಿಂಗ್ ಸೆನ್ಸಾರ್ಸ್, ಅಬಿಎಸ್ ಮತ್ತು ಎರ್‍‍ಬ್ಯಾಗ್‍‍ಗಳನ್ನು ಒಳಗೊಂಡಿದೆ. ಈ ಕಾರು 1199ಸಿಸಿ ಎಂಜಿನ್ ಸಹಾಯದಿಂದ ಪ್ರತೀ ಲೀಟರ್ ಪೆಟ್ರೋಲ್‍ಗೆ ಸಮರು 23 ಕಿಲೋಮೀಟರ್‍‍ನ ಮೈಲೇಜ್ ನೀಡಬಲ್ಲದು.

ಅಗ್ಗದ ಬೆಲೆಯಲ್ಲಿ ದೊರೆಯುವ ಬೆಸ್ಟ್ ಟಾಪ್ 10 ಕಾರುಗಳಿವು

ಹ್ಯುಂಡೈ ಸ್ಯಾಂಟ್ರೋ

ಹ್ಯುಂಡೈ ಸ್ಯಾಂಟ್ರೋ ಕಾರು ರೂ. 3.90 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು, ಈ ಕಾರಿನಲ್ಲಿ 17 ಇಂಚಿನ ಲಾಯ್ ವ್ಹೀಲ್ಸ್, ಪ್ರೆಜೆಕ್ಟರ್ ಹೆಡ್‍ಲ್ಯಾಂಪ್ಸ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಸಪೋರ್ಟ್ ಸಿಸ್ಟಂ, ಎಂಜಿನ್ ಸ್ಟಾರ್ಟ್/ಸ್ಟಾಪ್, ಎಬಿಎಸ್, ಏರ್‍‍ಬ್ಯಾಗ್ಸ್, ಇಎಸ್‍ಪಿ ಸೇರಿಪದಂತೆ ಹಲವಾರು ಫೀಚರ್‍‍ಗಳನ್ನು ಒಳಗೊಂಡಿದೆ. ಈ ಕಾರು 1086ಸಿಸಿ ಪೆಟ್ರೋಲ್ ಎಂಜಿನ್ ಸಹಾಯದಿಂದ ಪ್ರತೀ ಲೀಟರ್ ಪೆಟ್ರೋಲ್‍‍ಗೆ ಸುಮಾರು 20.3 ಕಿಲೋಮೀಟರ್ ಮೈಲೇಜ್ ನೀಡಬಲ್ಲದು.

ಅಗ್ಗದ ಬೆಲೆಯಲ್ಲಿ ದೊರೆಯುವ ಬೆಸ್ಟ್ ಟಾಪ್ 10 ಕಾರುಗಳಿವು

ಮಾರುತಿ ಸುಜುಕಿ ಡಿಜೈರ್

ಮಾರುತಿ ಡಿಜೈರ್ ಭಾರತದಲ್ಲೇ ಉತ್ತಮ ಮಾರಾಟವಾದ ಕಾಂಪ್ಯಾಕ್ಟ್-ಸೆಡನ್ ಅಲ್ಲ, ಆದರೆ ಅತ್ಯಂತ ಯಶಸ್ವಿ ಸೆಡನ್ ಆಗಿದೆ. ಈ ಕಾರು ರೂ. 5.69 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದೆ. ಈ ಕಾರು ಸ್ವಂತ ಬಳಕೆಗೆ ಮತ್ತು ಟ್ಯಾಕ್ಸಿ ಉಧ್ಯಮದಲ್ಲಿ ಹೆಚ್ಚು ಜನಪ್ರೀಯತೆಯನ್ನು ಪಡೆದುಕೊಂಡಿದ್ದು, ಈ ಕಾರು 1197ಸಿಸಿ ಪೆಟ್ರೋಲ್ ಎಂಜಿನ್ ಸಹಾಯದಿಂದ ಪ್ರತೀ ಲೀಟರ್ ಪೆಟ್ರೋಲ್‍‍ಗೆ ಸುಮಾರು 22 ಕಿಲೋಮೀಟರ್‍‍ನ ಮೈಲೇಜ್ ನೀಡಬಲ್ಲದು.

MOST READ: 5 ಲಕ್ಷದೊಳಗೆ ಖರೀದಿಸಬಹುದಾದ ಟಾಪ್ 10 ಕಾರುಗಳಿವು..

ಅಗ್ಗದ ಬೆಲೆಯಲ್ಲಿ ದೊರೆಯುವ ಬೆಸ್ಟ್ ಟಾಪ್ 10 ಕಾರುಗಳಿವು

ಹ್ಯುಂಡೈ ಕ್ರೆಟಾ

ಹ್ಯುಂಡೈ ಕ್ರೆಟಾ ದಕ್ಷಿಣ ಕೊರಿಯಾದ ಬ್ರ್ಯಾಂಡ್‍ನಿಂದ ಪ್ರೀಮಿಯಂ ಕೊಡುಗೆಯಾಗಿದ್ದು, ಈ ಕಾರು ರೂ. 9.6 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡುದುಕೊಂಡಿದೆ. ಈ ಕಾರು ಹಲವಾರು ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿದ್ದು, ಇದು 1591ಸಿಸಿ ಪೆಟ್ರೋಲ್ ಎಂಜಿನ್ ಸಹಾಯದಿಂದ ಪ್ರತೀ ಲೀಟರ್ ಪೆಟ್ರೋಲ್‍‍ಗೆ ಸುಮಾರು 15.8 ಕಿಲೋಮೀಟರ್‍‍ನ ಮೈಲೇಜ್ ನೀಡಬಲ್ಲದು.

ಅಗ್ಗದ ಬೆಲೆಯಲ್ಲಿ ದೊರೆಯುವ ಬೆಸ್ಟ್ ಟಾಪ್ 10 ಕಾರುಗಳಿವು

ಮಾರುತಿ ಸುಜುಕಿ ಎರ್ಟಿಗಾ

ಮಾರುತಿ ಸುಜುಕಿ ಎರ್ಟಿಗಾ ಕಾರು ಸಂಸ್ಥೆಯಲ್ಲಿನ ಮತ್ತು ಮಾರುಕಟ್ಟೆಯಲ್ಲಿನ ದಿ ಬೆಸ್ಟ್ ಎಂಪಿವಿ ಕಾರಾಗಿದ್ದು, ಈ ಕಾರು ರೂ. 7.44 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದೆ. ಈ ಕಾರು ಹಲವಾರು ಸೇಫ್ಟಿ ಮತ್ತು ಇನ್ನಿತರೆ ಫೀಚರ್‍‍ಗಳನ್ನು ಪಡೆದುಕೊಂಡಿದ್ದು, ಇದರಲ್ಲಿನ 1.4 ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು ಪ್ರತೀ ಲೀಟರ್ ಪೆಟ್ರೋಲ್‍‍ಗೆ ಸುಮಾರು 19 ಕಿಲೋಮೀಟರ್‍‍ನ ಮೈಲೇಜ್ ನೀಡಬಲ್ಲದು.

Most Read Articles

Kannada
English summary
Best Top 10 Cars Under 10 Lakhs In India. Read In Kannada
Story first published: Wednesday, April 3, 2019, 13:14 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X