ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸುತ್ತಿರುವ ಡಿ‍‍ಸಿ‍ಎಂ

ಡೀಸೆಲ್ ಹಾಗೂ ಪೆಟ್ರೋಲ್ ವಾಹನಗಳಿಂದ ವಿಪರೀತ ವಾಯು ಮಾಲಿನ್ಯ ಉಂಟಾಗುತ್ತಿದ್ದು, ಅದನ್ನು ತಡೆಗಟ್ಟಲು ಸರ್ಕಾರವು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅವುಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯು ಒಂದು.

ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸುತ್ತಿರುವ ಡಿ‍‍ಸಿ‍ಎಂ

ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಿಲು ಹಲವು ಕ್ರಮಗಳನ್ನು ಕೈಗೊಂಡಿದೆ. ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಕೇಂದ್ರ ಸರ್ಕಾರವು ರಿಯಾಯಿತಿ ನೀಡುವುದು ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಎಲೆಕ್ಟ್ರಿಕ್ ವಾಹನಗಳ ಮೇಲಿನ ಜಿ‍ಎಸ್‍‍ಟಿಯನ್ನು ಕಡಿಮೆ ಮಾಡಲಾಗಿದೆ.

ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸುತ್ತಿರುವ ಡಿ‍‍ಸಿ‍ಎಂ

ಇದರ ಜೊತೆಗೆ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಫೇಮ್ ಇಂಡಿಯಾ ಯೋಜನೆಯಡಿಯಲ್ಲಿ ಸಬ್ಸಿಡಿ ನೀಡಲಾಗುತ್ತದೆ. ಕೇಂದ್ರ ಸರ್ಕಾರವು ಮಾತ್ರವಲ್ಲದೇ ಹಲವು ರಾಜ್ಯ ಸರ್ಕಾರಗಳೂ ಸಹ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುತ್ತಿವೆ.

ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸುತ್ತಿರುವ ಡಿ‍‍ಸಿ‍ಎಂ

ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳ, ಬಿಹಾರದಂತಹ ರಾಜ್ಯಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನವನ್ನು ನೀಡುತ್ತಿವೆ. ಬಿಹಾರ ವಿಧಾನಸಭೆಯ ಮುಂಗಾರು ಅಧಿವೇಶನದ ಕಲಾಪವು ಜುಲೈ ತಿಂಗಳಿನಲ್ಲಿ ನಡೆದಿತ್ತು.

ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸುತ್ತಿರುವ ಡಿ‍‍ಸಿ‍ಎಂ

ಈ ಅಧಿವೇಶನದಲ್ಲಿ ಭಾಗವಹಿಸಲು ಬಿಹಾರದ ಮುಖ್ಯಮಂತ್ರಿ ನಿತಿಶ್ ಕುಮಾರ್‍‍ರವರು ಎಲೆಕ್ಟ್ರಿಕ್ ಕಾರಿನಲ್ಲಿ ಬಂದಿದ್ದರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸುವುದನ್ನು ಉತ್ತೇಜಿಸಲು ಎಲೆಕ್ಟ್ರಿಕ್ ಕಾರಿನಲ್ಲಿ ಬಂದಿದ್ದಾಗಿ ತಿಳಿಸಿದರು.

ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸುತ್ತಿರುವ ಡಿ‍‍ಸಿ‍ಎಂ

ಈ ಬಗ್ಗೆ ಮಾತನಾಡಿದ್ದ ನಿತಿಶ್ ಕುಮಾರ್‍‍ರವರು ಈ ಕಾರಿನಲ್ಲಿ ಪ್ರಯಾಣಿಸಿರುವುದು ಖುಷಿಯನ್ನು ನೀಡಿದೆ. ಈ ಕಾರಿನಲ್ಲಿ ಯಾವುದೇ ರೀತಿಯ ಶಬ್ದವಿರಲಿಲ್ಲ. ಕಾರಿನಲ್ಲಿ ಕುಳಿತು ಪ್ರಯಾಣ ಬೆಳೆಸಿದ್ದು, ಆರಾಮದಾಯಕ ಅನುಭವವನ್ನು ನೀಡಿತು ಎಂದು ಹೇಳಿದ್ದರು.

ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸುತ್ತಿರುವ ಡಿ‍‍ಸಿ‍ಎಂ

ಬಿಹಾರದ ಮುಖ್ಯಮಂತ್ರಿಗಳನ್ನು ಅನುಸರಿಸುತ್ತಿರುವ ಅಲ್ಲಿನ ಉಪಮುಖ್ಯಮಂತ್ರಿಗಳಾದ ಸುಶೀಲ್ ಕುಮಾರ್ ಮೋದಿರವರು ರಾಜ್ಯ ಸರ್ಕಾರದ ಸಮಾರಂಭವೊಂದರಲ್ಲಿ ಭಾಗವಹಿಸಲು ಟಾಟಾ ಟಿಗೊರ್ ಎಲೆಕ್ಟ್ರಿಕ್ ಕಾರಿನಲ್ಲಿ ತೆರಳಿದ್ದರು.

MOST READ: ವಿಭಿನ್ನವಾಗಿ ಸ್ಕೂಟರ್ ಖರೀದಿಸಿದ ಗ್ರಾಹಕ - ಶೋರೂಂ ಸಿಬ್ಬಂದಿಗೆ ಸುಸ್ತೋ ಸುಸ್ತು..!

ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸುತ್ತಿರುವ ಡಿ‍‍ಸಿ‍ಎಂ

ಈ ಸಮಾರಂಭವನ್ನು ಕಳೆದ ಶನಿವಾರ ಆಯೋಜಿಸಲಾಗಿತ್ತು. ಸುಶೀಲ್ ಕುಮಾರ್‍‍ರವರು ಪರಿಸರ ಹಾಗೂ ಅರಣ್ಯ ಖಾತೆಯನ್ನು ಸಹ ಹೊಂದಿದ್ದಾರೆ. ಸುಶೀಲ್ ಕುಮಾರ್‍‍ರವರು ಇನ್ನು ಮುಂದೆ ಪಾಟ್ನಾದಲ್ಲಿರುವಾಗ ಎಲೆಕ್ಟ್ರಿಕ್ ಕಾರುಗಳಲ್ಲಿ ಸಂಚರಿಸುವುದಾಗಿ ಅವರ ಕಚೇರಿಯ ಮೂಲಗಳು ತಿಳಿಸಿವೆ.

MOST READ: ಖಾಸಗಿ ವಿಮಾನ ಹೊಂದಿರುವ ಉದ್ಯಮಿಗಳಿವರು..!

ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸುತ್ತಿರುವ ಡಿ‍‍ಸಿ‍ಎಂ

ಇ‍ಇ‍ಎಸ್‍ಎಲ್ - ಎನರ್ಜಿ ಎಫಿಶಿಯನ್ಸಿ ಸರ್ವಿಸಸ್ ಲಿಮಿಟೆಡ್ 9 ಎಲೆಕ್ಟ್ರಿಕ್ ಕಾರುಗಳನ್ನು ಬಿಹಾರ ರಾಜ್ಯಕ್ಕಾಗಿ 5 ವರ್ಷಗಳ ಅವಧಿಗೆ ನೀಡಿದೆ. ಈ ಕಾರುಗಳನ್ನು ಬಿಹಾರ ವಿಧಾನಸಭೆಯ ಸ್ಪೀಕರ್ ಹಾಗೂ ಮುಖ್ಯ ಕಾರ್ಯದರ್ಶಿಗಳು ಬಳಸಲಿದ್ದಾರೆ.

MOST READ: ವಿಮಾನಗಳೇಕೆ ಶಬ್ದ ಮಾಡುತ್ತವೆ? ವಿಮಾನದ ಕ್ಯಾಬಿನ್‍ ಬಗ್ಗೆ ನಿಮಗೆಷ್ಟು ಗೊತ್ತು?

ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸುತ್ತಿರುವ ಡಿ‍‍ಸಿ‍ಎಂ

ಇದರಿಂದಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಬಳಸುವಂತಾಗಲಿ ಎಂಬುದು ಸರ್ಕಾರದ ಉದ್ದೇಶ. ಬಿಹಾರ ಸರ್ಕಾರವು ಮುಂಬರುವ ದಿನಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸಬಹುದೆಂಬ ನಿರೀಕ್ಷೆಯಲ್ಲಿದೆ.

ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸುತ್ತಿರುವ ಡಿ‍‍ಸಿ‍ಎಂ

ಬಿಹಾರದ ಮುಖ್ಯಮಂತ್ರಿ ನಿತಿಶ್ ಕುಮಾರ್‍‍ರವರು ಎಲೆಕ್ಟ್ರಿಕ್ ಕಾರಿನಲ್ಲಿ ವಿಧಾನಸಭೆಗೆ ಹೋದ ವಿಷಯವು ಬಿಹಾರದಲ್ಲಿ ಭಾರೀ ಸಂಚಲವನ್ನು ಉಂಟು ಮಾಡಿತ್ತು. ಈಗ ಉಪಮುಖ್ಯಮಂತ್ರಿಗಳು ಎಲೆಕ್ಟ್ರಿಕ್ ಕಾರ್ ಅನ್ನು ಬಳಸುತ್ತಿರುವ ವಿಷಯವು ಮತ್ತಷ್ಟು ಸುದ್ದಿ ಮಾಡಿದೆ. ಇನ್ನು ಮುಂದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

Most Read Articles

Kannada
English summary
Bihar deputy chief minister arrives in tata tigor ev in a bid to promote electric vehicles - Read in Kannada
Story first published: Tuesday, October 29, 2019, 12:39 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X