ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ರೆನಾಲ್ಟ್ ಡಸ್ಟರ್

ರೆನಾಲ್ಟ್ ಕಂಪನಿಯು 2020ರ ಡಸ್ಟರ್ ಅನ್ನು ಪುಣೆ ಮತ್ತು ಮುಂಬೈ ಹೈವೇಗಳಲ್ಲಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ರೆನಾಲ್ಟ್ ಡಸ್ಟರ್ ಬಿಎಸ್-6 ಎಂಜಿನ್ ಅನ್ನು ಸ್ಪಾಟ್ ಟೆಸ್ಟ್ ಮಾಡಿರುವುದನ್ನು ರಶ್ಲೇನ್ ಬಹಿರಂಗಪಡಿಸಿದೆ. 2020ರ ರೆನಾಲ್ಟ್ ಡಸ್ಟರ್ ಬಿಎಸ್-6 ಎಂಜಿನ್ ಹೊಂದಿರಲಿದೆ ಎಂಬುವುದು ಖಚಿತವಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಡಸ್ಟರ್

ಸ್ಪಾಟ್ ಟೆಸ್ಟ್ ನಲ್ಲಿ ಕಂಡುಬಂದ 2020ರ ರೆನಾಲ್ಟ್ ಎಸ್‍‍ಯುವಿಯು ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿರು ಅದೇ ಮಾದರಿಯ ವಿನ್ಯಾಸವನ್ನು ಹೊಂದಿದೆ. ವಿದೇಶಿ ಮಾರುಕಟ್ಟೆಗಳಲ್ಲಿ ಮಾರಾಟವಾಗುವ ಎರಡನೇ ತಲೆಮಾರಿನ ಡಸ್ಟರ್ ಸಂಪೂರ್ಣವಾಗಿ ವಿಭಿನ್ನ ಮಾದರಿಯಾಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಎರಡನೇ ತಲೆಮಾರಿನ ಡಸ್ಟರ್ ಅನ್ನು ಬಿಡುಗಡೆಗೊಳಿಸಲಾಗಿಲ್ಲ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಡಸ್ಟರ್

ಕಂಪನಿಯು ಹೊಸ ಡಸ್ಟರ್ ಬಿಡುಗಡೆಗೊಳಿಸುವ ದಿನಾಂಕಗಳ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಹೊಸ ಡಸ್ಟರ್ ಪೆಟ್ರೋಲ್ ರೂಪಾಂತರಗಳಲ್ಲಿ ಮಾತ್ರ ಲಭ್ಯವಿರುತ್ತದೆ. ಕೇಂದ್ರ ಸರ್ಕಾರವು ಬಿಎಸ್-6 ಮಾಲಿನ್ಯ ನಿಯಮವನ್ನು ಮುಂದಿನ ವರ್ಷದ ಏಪ್ರಿಲ್ ತಿಂಗಳಲ್ಲಿ ಜಾರಿಗೊಳಿಸಲಿದೆ. ಬಿಎಸ್-6 ನಿಯಮ ಜಾರಿಗೆ ಬಂದ ನಂತರ ರೆನಾಲ್ಟ್ ಇಂಡಿಯಾ ಡೀಸೆಲ್ ಮಾದರಿಗಳನ್ನು ಸ್ಥಗಿತಗೊಳಿಸುವುದಾಗಿ ಹೇಳಿದೆ. ಕಂಪನಿಯು ಅನೇಕ ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಡಸ್ಟರ್

ದೇಶಿಯ ಮಾರುಕಟ್ಟೆಯಲ್ಲಿರುವ ಪ್ರಸುತ ಡಸ್ಟರ್ 1.5 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು 2020ರ ಆಯ್ಕೆಗಳಲ್ಲಿ ಒಂದಾಗಿದೆ. ಈ ಎಂಜಿನ್ ಪ್ರಸ್ತುತ 105 ಬಿ‍‍ಹೆಚ್‍‍ಪಿ ಪವರ್ ಮತ್ತು 142 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಡಸ್ಟರ್

ಇದರೊಂದಿಗೆ ಒಂದು ಅಥವಾ ಎರಡು ಎಂಜಿನ್‍‍ಗಳನ್ನು ಹೊಂದಿರುವ ರೆನಾಲ್ಟ್ ತನ್ನ ಡಸ್ಟರ್ ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಅದರಲ್ಲಿ 1.0 ಲೀಟರ್ ಟರ್ಬೊ ಪೆಟ್ರೋಲ್ ಮೂರು ಸಿಲಿಂಡರ್ ಎಂಜಿನ್ 98 ಬಿ‍‍ಹೆಚ್‍ಪಿ ಪವರ್ ಮತ್ತು 160 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಮತ್ತೊಂದು ಎಂಜಿನ್ 1.3 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 113 ಬಿ‍ಹೆಚ್‍ಪಿ ಪವರ್ ಮತ್ತು 270 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಡಸ್ಟರ್

ಪ್ರಸ್ತುತ ಇರುವ 1.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು 1.5 ಎಂಜಿನ್ ಆಗಿ ಬದಲಾಯಿಸಬಹುದು ಎಂಬ ವದಂತಿಗಳಿವೆ. ಪ್ರಸ್ತುತ ರೆನಾಲ್ಟ್ ಡಸ್ಟರ್ ಎಸ್‍‍ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.8 ಲಕ್ಷದಿಂದ ರೂ.12.50 ಲಕ್ಷಗಳಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಡಸ್ಟರ್

ಪ್ರಸ್ತುತ ರೆನಾಲ್ಟ್ ಈ ಎಸ್‍‍ಯುವಿಯಲ್ಲಿರುವ ಹೆಡ್‌ಲ್ಯಾಂಪ್ ಕ್ಲಸ್ಟರ್ ಅನ್ನು ಹೊಂದಿದೆ. ಈಗ ಎಲ್ಇಡಿ ಡಿಆರ್‌ಎಲ್‌ಗಳನ್ನು ಮುಖ್ಯ ಯುನಿಟ್‍‍ನಲ್ಲಿ ಇಂಟಿಗ್ರೇಟ್ ಮಾಡಲಾಗಿದೆ. ಎಸ್‍‍ಯುವಿಯಲ್ಲಿ ನವೀಕರಿಸಿದ ಫಾಗ್ ಲ್ಯಾಂಪ್, ಮುಂಭಾಗ ಹಾಗೂ ಹಿಂಭಾಗದಲ್ಲಿ ಹೊಸ ವಿನ್ಯಾಸದ ಬಂಪರ್‌, ಫಾಕ್ಸ್ ಸ್ಕಫ್ ಪ್ಲೇಟ್‌ ಹಾಗೂ ಎಲ್‌ಇಡಿ ಟೇಲ್ ಲೈಟ್‌ಗಳಿವೆ.

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಡಸ್ಟರ್

ಪ್ರಸ್ತುತ ರೆನಾಲ್ಟ್ ಡಸ್ಟರ್‍‍ನಲ್ಲಿ ನವೀಕೃತ ಎಸ್‍‍ಯುವಿಯು ಅಪ್‍‍ಡೇಟೆಡ್ ಕ್ಯಾಬಿನ್ ಅನ್ನು ಸಹ ಹೊಂದಿದೆ. ಇವುಗಳಲ್ಲಿ ಡ್ಯುಯಲ್ ಟೋನ್ ಬಣ್ಣದ ಡ್ಯಾಶ್ ಬೋರ್ಡ್, ಪರಿಷ್ಕೃತ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಹಾಗೂ ಸೆಂಟ್ರಲ್ ಕಂಸೋಲ್ ಮೇಲೆ ಹೊಸ ಟಚ್‍ ಸ್ಕ್ರೀನ್ ಇನ್ಫೋಟೇನ್‍‍ಮೆಂಟ್ ಡಿಸ್‍‍ಪ್ಲೇಗಳಿವೆ.

MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ರೆನಾಲ್ಟ್ ಡಸ್ಟರ್

ರೆನಾಲ್ಟ್ ಎಸ್‍‍ಯುವಿಯ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದೆ. ಹೊಸ ರೆನಾಲ್ಟ್ ಡಸ್ಟರ್ ಎಂಜಿನ್‍‍ಗಳ ಬಗ್ಗೆ ಯಾವುದೇ ಮಾಹಿತಿಗಳು ಇಲ್ಲ. ಆದರೆ ಬಿಎಸ್-6 ಎಂಜಿನ್ ಸ್ಪಾಟ್ ಟೆಸ್ಟ್ ನಡೆಸಿರುವುದರಿಂದ ಬಿಎಸ್-6 ಎಂಜಿನ್ ಹೊಂದಿರಲಿದೆ ಎಂಬುವುದು ಖಚಿತವಾಗಿದೆ.

Source: Rushlane

Most Read Articles

Kannada
English summary
Spy Pics: Renault Duster BS-VI Spotted Testing On Pune Mumbai Highway - Read in Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X