ಬಿಎಸ್-6 ಎಂಜಿನ್ ಪ್ರೇರಿತ ಟೊಯೊಟಾ ಇನೋವಾ ಕ್ರಿಸ್ಟಾ ಖರೀದಿಗೆ ಬುಕ್ಕಿಂಗ್ ಶುರು

2020ರ ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ನಿಯಮ ಅನುಸಾರ ಬಹುತೇಕ ವಾಹನ ಉತ್ಪಾದನಾ ಸಂಸ್ಥೆಗಳು ನವೀಕೃತ ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಟೊಯೊಟಾ ಸಹ ತನ್ನ ಜನಪ್ರಿಯ ಕಾರು ಮಾದರಿಗಳನ್ನು ಹೊಸ ನಿಯಮ ಅನುಸಾರ ಬಿಡುಗಡೆಗೆ ಭರ್ಜರಿ ಸಿದ್ದತೆ ನಡೆಸಿದೆ.

ಬಿಎಸ್-6 ಎಂಜಿನ್ ಪ್ರೇರಿತ ಟೊಯೊಟಾ ಇನೋವಾ ಕ್ರಿಸ್ಟಾ ಖರೀದಿಗೆ ಬುಕ್ಕಿಂಗ್ ಶುರು

ಮೊದಲ ಹಂತದಲ್ಲಿ ಜನಪ್ರಿಯ ಎಂಪಿವಿ ಕಾರು ಮಾದರಿಯಾದ ಇನೋವಾ ಕ್ರಿಸ್ಟಾ ಬಿಡುಗಡೆ ಮಾಡಲು ನಿರ್ಧರಿಸಿರುವ ಟೊಯೊಟಾ ಸಂಸ್ಥೆಯು ಹೊಸ ಕಾರು ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸಿದ್ದು, 2020ರ ಜನವರಿ ಕೊನೆಯಲ್ಲಿ ಹೊಸ ಎಂಜಿನ್ ಪ್ರೇರಿತ ಇನೋವಾ ಕ್ರಿಸ್ಟಾ ಬಿಡುಗಡೆಯಾಗಲಿದೆ. ಸುದ್ದಿ ಮೂಲಗಳ ಪ್ರಕಾರ 2020ರ ಇನೋವಾ ಕ್ರಿಸ್ಟಾದಲ್ಲಿ ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಹೊರತುಪಡಿಸಿ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಕೂಡಾ ಬಿಡುಗಡೆಯಾಗಲಿದೆಯೆಂತೆ.

ಬಿಎಸ್-6 ಎಂಜಿನ್ ಪ್ರೇರಿತ ಟೊಯೊಟಾ ಇನೋವಾ ಕ್ರಿಸ್ಟಾ ಖರೀದಿಗೆ ಬುಕ್ಕಿಂಗ್ ಶುರು

ಬಿಎಸ್-6 ನಿಯಮ ಪಾಲನೆಗಾಗಿ ಕಡಿಮೆ ಸಾಮಾರ್ಥ್ಯದ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಕೈಬಿಡುತ್ತಿರುವ ಕಾರು ಉತ್ಪಾದನಾ ಸಂಸ್ಥೆಗಳು ಹೈಬ್ರಿಡ್ ಮತ್ತು ಎಲೆಕ್ಟ್ರಿಕ್‌ ಎಂಜಿನ್ ಆಯ್ಕೆಯತ್ತ ಮುಖ ಮಾಡುತ್ತಿದ್ದು, ಟೊಯೊಟಾ ಕೂಡಾ ಇದೇ ಮೊದಲ ಬಾರಿಗೆ ಇನೋವಾ ಕ್ರಿಸ್ಟಾದಲ್ಲೂ ಹೈಬ್ರಿಡ್ ವರ್ಷನ್ ಪರಿಚಯಿಸುತ್ತಿದೆ.

ಬಿಎಸ್-6 ಎಂಜಿನ್ ಪ್ರೇರಿತ ಟೊಯೊಟಾ ಇನೋವಾ ಕ್ರಿಸ್ಟಾ ಖರೀದಿಗೆ ಬುಕ್ಕಿಂಗ್ ಶುರು

ಟೊಯೊಟಾ ಸಂಸ್ಥೆಯು ಹೈಬ್ರಿಡ್ ತಂತ್ರಜ್ಞಾನದಲ್ಲಿ ಈಗಾಗಲೇ ಮುಂಚೂಣಿ ಸಾಧಿಸುತ್ತಿದ್ದು, ಕ್ಯಾಮ್ರಿ ಸೆಡಾನ್ ಆವೃತ್ತಿಯಲ್ಲಿ 2.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮಾದರಿಯನ್ನು ಮಾರಾಟ ಮಾಡುತ್ತಿದೆ.

ಬಿಎಸ್-6 ಎಂಜಿನ್ ಪ್ರೇರಿತ ಟೊಯೊಟಾ ಇನೋವಾ ಕ್ರಿಸ್ಟಾ ಖರೀದಿಗೆ ಬುಕ್ಕಿಂಗ್ ಶುರು

ಇದೀಗ ಬಿಎಸ್-6 ನಿಯಮದಂತೆ ಎಂಜಿನ್ ಆಯ್ಕೆಯಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಟೊಯೊಟಾ ಸಂಸ್ಥೆಯು ಪೆಟ್ರೋಲ್ ಮಾದರಿಯಲ್ಲಿ ಹೈಬ್ರಿಡ್ ವರ್ಷನ್ ಪರಿಚಯಿಸುವ ಸಾಧ್ಯತೆಗಳಿದ್ದು, 2.7-ಲೀಟರ್ ಎಂಜಿನ್‌ನಲ್ಲಿಯೇ ಹೈಬ್ರಿಡ್ ಆಯ್ಕೆಯನ್ನು ನೀಡುತ್ತಾ ಅಥವಾ ಹೊಸ ಎಂಜಿನ್ ಬಿಡುಗಡೆ ಮಾಡಲಿದೆಯಾ ಎನ್ನುವುದು ಇನ್ನು ಸ್ಪಷ್ಟವಾಗಿಲ್ಲ. ಆದರೆ ಹೊಸ ಕಾರಿನಲ್ಲಿ ಅಗತ್ಯ ಬದಲಾವಣೆ ಅವಶ್ಯಕತೆಯಿದ್ದು, ಗ್ರಾಹಕರ ಮತ್ತೊಮ್ಮೆ ಮುಂಚೂಣಿ ಸಾಧಿಸುವುದಲ್ಲಿ ಯಾವುದೇ ಅನುಮಾನವಿಲ್ಲ.

ಬಿಎಸ್-6 ಎಂಜಿನ್ ಪ್ರೇರಿತ ಟೊಯೊಟಾ ಇನೋವಾ ಕ್ರಿಸ್ಟಾ ಖರೀದಿಗೆ ಬುಕ್ಕಿಂಗ್ ಶುರು

ಬಿಎಸ್-6 ನಿಯಮದಿಂದಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಹಲವು ಡೀಸೆಲ್ ಎಂಜಿನ್ ಕಾರುಗಳಿಗೆ ಸಂಕಷ್ಟ ಎದುರಾಗಿದ್ದು, ಹೊಸ ನಿಯಮಗಳಿಗೆ ಅನುಗುಣವಾಗಿ ಎಂಜಿನ್ ಉನ್ನತಿಕರಿಸಬೇಕು ಇಲ್ಲವೇ ಮಾರಾಟವನ್ನು ಸ್ಥಗಿತಗೊಳಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಬಿಎಸ್-6 ಎಂಜಿನ್ ಪ್ರೇರಿತ ಟೊಯೊಟಾ ಇನೋವಾ ಕ್ರಿಸ್ಟಾ ಖರೀದಿಗೆ ಬುಕ್ಕಿಂಗ್ ಶುರು

ಸದ್ಯ ಇನೋವಾ ಕ್ರಿಸ್ಟಾ ಕಾರು ಟೂರಿಸ್ಟ್ ಮತ್ತು ವ್ಯಯಕ್ತಿಯ ಬಳಕೆ ಕಾರುಗಳಲ್ಲಿ ಅತಿಹೆಚ್ಚು ಜನಪ್ರಿಯತೆ ಹೊಂದಿದ್ದು, ಗ್ರಾಹಕರ ಬೇಡಿಕೆಯಂತೆ 2.4-ಲೀಟರ್ ಡೀಸೆಲ್, 2.8-ಲೀಟರ್ ಡಿಸೇಲ್ ಮತ್ತು 2.7-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಇವುಗಳಲ್ಲಿ 2.4-ಲೀಟರ್ ಡಿಸೇಲ್ ಎಂಜಿನ್ ಮಾದರಿಯು ಟೂರಿಸ್ಟ್ ವಿಭಾಗದ ಬಳಕೆಯಲ್ಲಿ ಅತಿಹೆಚ್ಚು ಮಾರಾಟವಾಗುವ ದುಬಾರಿ ಕಾರು ಮಾದರಿಯಾಗಿದೆ.

ಬಿಎಸ್-6 ಎಂಜಿನ್ ಪ್ರೇರಿತ ಟೊಯೊಟಾ ಇನೋವಾ ಕ್ರಿಸ್ಟಾ ಖರೀದಿಗೆ ಬುಕ್ಕಿಂಗ್ ಶುರು

ಮತ್ತಷ್ಟು ದುಬಾರಿಯಾಗಲಿವೆ ಕಾರು ಬೆಲೆ..!

ಸದ್ಯ ಮಾರುಕಟ್ಟೆಯಲ್ಲಿ ಇನೋವಾ ಕ್ರಿಸ್ಟಾ ಕಾರು ಆನ್‌ರೋಡ್ ಬೆಲೆ ಪ್ರಕಾರ ಆರಂಭಿಕವಾಗಿ ರೂ. 18.88 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.29.65 ಲಕ್ಷ ಬೆಲೆ ಹೊಂದಿದ್ದು, ಬಿಎಸ್-6 ಎಂಜಿನ್ ಜೋಡಣೆಯ ನಂತರ ಮತ್ತಷ್ಟು ದುಬಾರಿಯಾಗಲಿದೆ.

ಬಿಎಸ್-6 ಎಂಜಿನ್ ಪ್ರೇರಿತ ಟೊಯೊಟಾ ಇನೋವಾ ಕ್ರಿಸ್ಟಾ ಖರೀದಿಗೆ ಬುಕ್ಕಿಂಗ್ ಶುರು

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬೆಲೆಗಿಂತಲೂ ಪೆಟ್ರೋಲ್ ಕಾರಿನ ಬೆಲೆಯಲ್ಲಿ ರೂ.50 ಸಾವಿರದಿಂದ ರೂ.80 ಸಾವಿರ ದುಬಾರಿಯಾದಲ್ಲಿ, ಡೀಸೆಲ್ ಎಂಜಿನ್ ಕಾರಿನ ಬೆಲೆಯು ರೂ.1.50 ಲಕ್ಷದಿಂದ ರೂ.2.50 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.

ಬಿಎಸ್-6 ಎಂಜಿನ್ ಪ್ರೇರಿತ ಟೊಯೊಟಾ ಇನೋವಾ ಕ್ರಿಸ್ಟಾ ಖರೀದಿಗೆ ಬುಕ್ಕಿಂಗ್ ಶುರು

ಬಿಎಸ್-6 ಡೀಸೆಲ್ ಎಂಜಿನ್ ಉನ್ನತೀಕರಣದ ಕುರಿತು ಮಾತನಾಡಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ ಉಪಾಧ್ಯಕ್ಷ ಶೇಖರ್ ವಿಶ್ವನಾಥನ್ ಅವರು, ಬಿಎಸ್-6 ಜಾರಿ ನಂತರವೂ ಪೆಟ್ರೋಲ್ ಜೊತೆಗೆ ಹೊಸ ನಿಯಮದ್ವನ ಉನ್ನತೀಕರಣಗೊಂಡ ಡೀಸೆಲ್ ಎಂಜಿನ್ ಕಾರುಗಳ ಆಯ್ಕೆಯು ಮುಂದುವರೆಯಲಿದೆ ಎಂದಿದ್ದಾರೆ.

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

ಎಂಪಿವಿ ಕಾರುಗಳ ಮಾರಾಟ ವಿಭಾಗದಲ್ಲಿ ಸದ್ಯ ಭಾರೀ ಬೇಡಿಕೆ ಹೊಂದಿರುವ ಟೊಯೊಟಾ ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿರುವ ಕಿಯಾ ಕಾರ್ನಿವಾಲ್ ಎಂಪಿವಿ ಕಾರು ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 18 ಲಕ್ಷದಿಂದ ಟಾಪ್ ಎಂಡ್ ಮಾದರಿಯ ಬೆಲೆಯು ರೂ.25 ಲಕ್ಷ ಬೆಲೆ ಹೊಂದಬಹುದೆಂದು ಅಂದಾಜಿಸಲಾಗಿದೆ.

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

ಮಲ್ಟಿ ಪ್ಯಾಸೆಂಜರ್ ವೆಹಿಕಲ್(ಎಂಪಿವಿ) ವಿಭಾಗದಲ್ಲಿ ಅಗ್ರಸ್ಥಾನದಲ್ಲಿರುವ ಕಿಯಾ ಕಾರ್ನಿವಾಲ್ ಕಾರು ಮಾದರಿಯು ವಿದೇಶಿ ಮಾರುಕಟ್ಟೆಗಳಲ್ಲಿ ಭಾರೀ ಬೇಡಿಕೆ ಹೊಂದಿದ್ದು, ಗ್ರಾಹಕರ ಬೇಡಿಕೆಯೆಂತೆ 11 ಸೀಟರ್ ಮತ್ತು 9 ಸೀಟರ್ ಮತ್ತು 7 ಸೀಟರ್ ಆವೃತ್ತಿಗಳಲ್ಲಿ ಮಾರಾಟವಾಗುತ್ತಿದೆ. ಇದು ದೇಶಿಯ ಮಾರುಕಟ್ಟೆಯಲ್ಲಿ ಕೆಲವು ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದ್ದು, ಹೊಸ ಕಾರು 6 ಸೀಟರ್, 7 ಸೀಟರ್ ಮತ್ತು 8 ಸೀಟರ್ ಆವೃತ್ತಿಯೊಂದಿಗೆ ಮಾರಾಟಕ್ಕೆ ಲಭ್ಯವಾಗಲಿದೆ.

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

6 ಸೀಟರ್ ಮಾದರಿಯು ಪ್ರತ್ಯೇಕವಾಗಿ 2+2+2 ಆಸನ ವ್ಯವಸ್ಥೆಯನ್ನು ಹೊಂದಿದ್ದರೆ 7 ಸೀಟರ್ ಮಾದರಿಯು 2+2+3 ಮತ್ತು 8 ಸೀಟರ್ ಮಾದರಿಯು 2+3+3 ಆಸನ ಸೌಲಭ್ಯವನ್ನು ಪಡೆದುಕೊಳ್ಳಲಿದ್ದು, ಗ್ರಾಹಕರು ತಮ್ಮ ಆದ್ಯತೆ ಮೇರೆಗೆ ವಿವಿಧ ಮಾದರಿಗಳನ್ನು ಖರೀದಿ ಮಾಡಬಹುದಾಗಿದೆ.

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

ಜೊತೆಗೆ ಹೊಸ ಕಾರಿನಲ್ಲಿ ಕೆಲವು ಫೀಚರ್ಸ್‌ಗಳನ್ನು ಮಾಡಿಫೈ ಕೂಡಾ ಮಾಡಿಕೊಳ್ಳಬಹುದಾಗಿದ್ದು, ಡ್ಯುಯಲ್ ಸನ್‌ರೂಫ್ ಮತ್ತು ರೂಫ್ ಬಾಕ್ಸ್ ಸೌಲಭ್ಯವನ್ನು ಹೆಚ್ಚುವರಿ ಶುಲ್ಕದೊಂದಿಗೆ ಖರೀದಿ ಮಾಡಬೇಕಾಗುತ್ತದೆ.

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

ಕಾರ್ನಿವಾಲ್ ಕಾರು 5, 115-ಎಂಎಂ ಉದ್ದ, 1,985-ಎಂಎಂ ಅಗಲ ಮತ್ತು 1,755 ಎತ್ತರವನ್ನು ಹೊಂದಿದ್ದು, ಇದ್ದು ಇನೋವಾ ಕ್ರಿಸ್ಟಾ ಕಾರಿಗಿಂತಲೂ 375-ಎಂಎಂ ಹೆಚ್ಚು ಉದ್ದ,155-ಎಂಎಂ ಹೆಚ್ಚು ಅಗಲ ಮತ್ತು 40-ಎಂಎಂ ನಷ್ಟು ಕಡಿಮೆ ಎತ್ತರವನ್ನು ಪಡೆದುಕೊಂಡಿರಲಿದೆ.

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

ಎಂಜಿನ್ ಸಾಮರ್ಥ್ಯ

ಕಿಯಾ ಕಾರ್ನಿವಾಲ್ ಕಾರು ಇನೋವಾ ಕ್ರಿಸ್ಟಾಗೆ ಪೈಪೋಟಿಯಾಗಿ 2.2-ಲೀಟರ್ ಟರ್ಬೋ ಡೀಸೆಲ್ ಜೊತೆ 3.3-ಲೀಟರ್ ವಿ6 ಎಂಪಿಐ ಪೆಟ್ರೋಲ್ ಎಂಜಿನ್ ಮಾದರಿಯೊಂದಿಗೆ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಮಾದರಿಯು ಬೆಲೆ ತಗ್ಗಿಸುವುದಕ್ಕಾಗಿ 2.5-ಲೀಟರ್ ಡೀಸೆಲ್ ಎಂಜಿನ್ ಮತ್ತು 2.6-ಲೀಟರ್ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

ಹಾಗೆಯೇ ಕಾರ್ನಿವಾಲ್ ಕಾರು ಇನೋವಾ ಕ್ರಿಸ್ಟಾಗಿಂತಲೂ ಉತ್ತಮ ಪ್ರೀಮಿಯಂ ಸೌಲಭ್ಯ ಹೊಂದಿದ್ದು, 10.1-ಇಂಚಿನ ಇನ್ಪೋಟೈನ್ ಸಿಸ್ಟಂ, ಕಿಯಾ ಯುವಿಒ ಕನೆಕ್ಟ್, ಕಾರ್ ಕನೆಕ್ಟಿವಿಟಿ ಸೂಟ್, ಲಾರ್ಜ್ ಟಚ್‌ಸ್ಕೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎರಡು ಸನ್‌ರೂಫ್, ಪವರ್ ಅಡ್ಜೆಸ್ಟ್‌ಬಲ್ ಡ್ರೈವರ್ ಸೀಟ್, ತ್ರಿ ಕ್ಲೈಮೆಟ್ ಜೋನ್ ಕಂಟ್ರೋಲ್ ಸೌಲಭ್ಯ ಹೊಂದಿದೆ.

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್

ಪ್ರಯಾಣಿಕರ ಸುರಕ್ಷತೆಗಾಗಿ 6 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಬ್ರೇಕ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್ ಮತ್ತು ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸಹ ಈ ಕಾರಿನಲ್ಲಿವೆ.

Most Read Articles

Kannada
Read more on ಟೊಯೊಟಾ toyota
English summary
Upcoming BS6 Toyota Innova Crysta MPV Bookings Open - Details. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X