ಮಹಿಳೆಯರ ಸುರಕ್ಷತೆಗೆ ಹೊಸ ಕ್ರಮ ಕೈಗೊಂಡ ಸರ್ಕಾರ
ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ ಮಹಿಳೆಯರ ಸುರಕ್ಷತೆಗಾಗಿ ದೆಹಲಿ ಸಾರಿಗೆ ನಿಗಮದ ಬಸ್‌ಗಳಲ್ಲಿ ಒಟ್ಟು 13,000 ಮಾರ್ಷಲ್‌ಗಳನ್ನು ನಿಯೋಜಿಸುವುದಾಗಿ ದೆಹಲಿ ಸರ್ಕಾರ ಪ್ರಕಟಿಸಿದೆ.

ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇಂದಿನಿಂದಲೇ ಪ್ರತಿ ಬಸ್‌ನಲ್ಲಿ ಮಾರ್ಷಲ್‌ಗಳನ್ನು ನಿಯೋಜಿಸಲಾಗುವುದೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿನ್ನೆ ತಿಳಿಸಿದ್ದಾರೆ. ಈ ಮಾರ್ಷಲ್‌ಗಳು ರೋಗಿಗಳಿಗೆ ಸಹಾಯ ಮಾಡುವುದರ ಜೊತೆಗೆ ಇತರ ತುರ್ತು ಸಂದರ್ಭಗಳನ್ನು ನಿಭಾಯಿಸಲಿದ್ದಾರೆ ಎಂದು ಹೇಳಿದರು.

ಈ ಮೂಲಕ ದೆಹಲಿಯು ಬಸ್‍ಗಳಲ್ಲಿ ಮಾರ್ಷಲ್‌ಗಳನ್ನು ನಿಯೋಜಿಸಿದ ಪ್ರಥಮ ಹಾಗೂ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬಸ್‌ಗಳಲ್ಲಿ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹೊಸ ಮಾರ್ಷಲ್‍ಗಳನ್ನು ನೇಮಿಸಲಾಗಿದೆ ಎಂದು ಕೇಜ್ರಿವಾಲ್ ಹೇಳಿದರು.

ಮಹಿಳೆಯರ ಸುರಕ್ಷತೆಯ ಕರ್ತವ್ಯವನ್ನು ಮಾರ್ಷಲ್‍ಗಳಿಗೆ ವಹಿಸಲಾಗಿದೆ. ಇದರ ಜೊತೆಗೆ ಡಿಟಿಸಿ ಹಾಗೂ ಕ್ಲಸ್ಟರ್ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಸಹ ಆರಂಭಿಸಲಾಯಿತು. ಕೇಜ್ರಿವಾಲ್ ಅವರು ರಕ್ಷಾ ಬಂಧನ್ ದಿನದಂದು ಮಹಿಳೆಯರಿಗೆ ಉಚಿತ ಪ್ರಯಾಣದ ಯೋಜನೆಯನ್ನು ಘೋಷಿಸಿದ್ದರು.

ಈ ಮೂಲಕ ತಮ್ಮ ಸಹೋದರಿಯರಿಗೆ ಉಡುಗೊರೆ ನೀಡುವುದಾಗಿ ತಿಳಿಸಿದ್ದರು. ಕೇಜ್ರಿವಾಲ್‍ರವರು ತಮ್ಮನ್ನು ದೆಹಲಿ ಕುಟುಂಬದ ಹಿರಿ ಮಗ ಎಂದು ಹೇಳಿಕೊಂಡಿದ್ದಾರೆ. ತಮ್ಮ ಸರ್ಕಾರವು ತಮ್ಮ ಸಹೋದರಿಯರ, ತಾಯಂದಿರ ಹಾಗೂ ಹೆಣ್ಣುಮಕ್ಕಳ ಪ್ರಯಾಣಿಕ ವೆಚ್ಚವನ್ನು ಭರಿಸುತ್ತದೆ ಎಂದು ಹೇಳಿದರು.

ದೆಹಲಿಯಲ್ಲಿ ಅಪರಾಧ ಪ್ರಮಾಣವು ಹೆಚ್ಚಾಗಿದೆ. ಸರಗಳ್ಳತನ, ಬ್ಯಾಗ್ ಕಸಿಯುವುದು ಹಾಗೂ ಮಹಿಳೆಯರನ್ನು ಚುಡಾಯಿಸುವುದು ಸೇರಿದಂತೆ ಮಹಿಳೆಯರ ಮೇಲೆ ಹಲವು ಅಪರಾಧಗಳು ಅದರಲ್ಲೂ ವಿಶೇಷವಾಗಿ ಬಸ್‌ನಲ್ಲಿ ಪ್ರಯಾಣಿಸುವ ಮಹಿಳೆಯರ ಮೇಲೆ ಹೆಚ್ಚುತ್ತಿವೆ.

ಹೆಚ್ಚಿನ ಮಾರ್ಷಲ್‌ಗಳನ್ನು ನೇಮಿಸುವುದರಿಂದ ಈ ಅಪರಾಧಗಳನ್ನು ಮಟ್ಟಹಾಕಬಹುದು ಎಂಬುದು ಸರ್ಕಾರದ ಆಲೋಚನೆಯಾಗಿದೆ. ಈ ಕ್ರಮದಿಂದಾಗಿ ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆಗಾಗಿ ಒಂದು ನಿರ್ದಿಷ್ಟ ಮಟ್ಟವನ್ನು ಮುಟ್ಟಲು ಸಾಧ್ಯವಾಗಲಿದೆ.
MOST READ: ವಿಭಿನ್ನವಾಗಿ ಸ್ಕೂಟರ್ ಖರೀದಿಸಿದ ಗ್ರಾಹಕ - ಶೋರೂಂ ಸಿಬ್ಬಂದಿಗೆ ಸುಸ್ತೋ ಸುಸ್ತು..!

ಎಲ್ಲಾ ಹೊಸ ಬಸ್ಸುಗಳಲ್ಲಿ ಸಿಸಿಟಿವಿ ಕ್ಯಾಮೆರಾ ಹಾಗೂ ಪ್ಯಾನಿಕ್ ಬಟನ್ ಗಳನ್ನು ಅಳವಡಿಸಲಾಗಿದೆ. ಇವೆರಡೂ ಭಾರತದ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳಲ್ಲಿ ಹೆಚ್ಚು ಅಗತ್ಯವಾಗಿ ಬೇಕಾಗಿವೆ. ಇದರ ಜೊತೆಗೆ ಕೇಜ್ರಿವಾಲ್‍ರವರು ಬಸ್ಸುಗಳಲ್ಲಿ ವಿಶೇಷ ಚೇತನರಿಗಾಗಿ ಹೈಡ್ರಾಲಿಕ್ ಲಿಫ್ಟ್‌ಗಳನ್ನು ಅಳವಡಿಸಲಾಗಿದೆ ಎಂದು ಹೇಳಿದರು.
MOST READ: ಹಳೆ ವಾಹನವನ್ನು ಗುಜರಿಗೆ ಹಾಕುವ ಮಾಲೀಕರಿಗೆ ಆಫರ್

ಡ್ರೈವ್‍ಸ್ಪಾರ್ಕ್ ಅಭಿಪ್ರಾಯ
ಮಾರ್ಷಲ್‍ಗಳ ಸಂಖ್ಯೆಯನ್ನು ಹೆಚ್ಚಿಸುವುದರಿಂದ ಸಮಸ್ಯೆಯು ಪರಿಹಾರವಾಗೇ ಬಿಡುತ್ತದೆ ಎಂದು ಹೇಳಲು ಬರುವುದಿಲ್ಲ. ಸಂಚಾರ ದಟ್ಟಣೆಯ ಸಮಯದಲ್ಲಿ ಪ್ರಯಾಣಿಸುವ ಜನರ ಸಂಖ್ಯೆಯು ಅಧಿಕವಾಗಿರುವುದರಿಂದ ಈ ಸಮಸ್ಯೆಯನ್ನು ಬಗೆಹರಿಸುವುದು ಕಷ್ಟದ ಕೆಲಸವಾಗಿದೆ.
MOST READ: ಖಾಸಗಿ ವಿಮಾನ ಹೊಂದಿರುವ ಉದ್ಯಮಿಗಳಿವರು..!

ಮಾರ್ಷಲ್ಗಳನ್ನು ನೇಮಿಸುವ ಕಲ್ಪನೆಯು ನಿಜಕ್ಕೂ ಉತ್ತಮವಾಗಿದೆ. ಆರಂಭದಲ್ಲಿ ಈ ನೇಮಕಾತಿಯು ಸುರಕ್ಷತೆಯನ್ನು ಸುಧಾರಿಸುತ್ತದೆಯಾದರೂ, ದೀರ್ಘಾವಧಿಯವರೆಗೆ ಕಾರ್ಯನಿರ್ವಹಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.


Click it and Unblock the Notifications