ಹೊಸ ಕಾರುಗಳ ನೋಂದಣಿ ಮೇಲಿನ ಶುಲ್ಕ ಹೆಚ್ಚಳಕ್ಕೆ ಕೊನೆಗೂ ಬ್ರೇಕ್..!

ಭಾರತೀಯ ಆಟೋ ಉದ್ಯಮವು ಕಳೆದ 19 ವರ್ಷಗಳಲ್ಲೇ ಮೊದಲ ಬಾರಿಗೆ ತೀವ್ರ ಹಿನ್ನಡೆ ಅನುಭಿಸಿದ್ದು, ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳನ್ನು ತಗ್ಗಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ಹೊಸ ನೀತಿ ನಿಯಮಗಳು ಆಟೋ ಉದ್ಯಮದ ಮೇಲೆ ಪ್ರತಿಕೂಲಕರ ಪರಿಣಾಮ ಬೀರಿದೆ.

ಹೊಸ ಕಾರುಗಳ ನೋಂದಣಿ ಮೇಲಿನ ಶುಲ್ಕ ಹೆಚ್ಚಳಕ್ಕೆ ಕೊನೆಗೂ ಬ್ರೇಕ್..!

ಆಟೋ ಉದ್ಯಮದಲ್ಲಿನ ಕೆಲವು ಮಹತ್ವದ ಬದಲಾವಣೆಯಿಂದಾಗಿ ಹೊಸ ವಾಹನಗಳ ಮಾರಾಟ ಪ್ರಮಾಣವು ಮಂದಗತಿಯಲ್ಲಿ ಸಾಗಿದ್ದು, ಬಹುತೇಕ ಆಟೋ ಉತ್ಪಾದನಾ ಕಂಪನಿಗಳು ಹೊಸ ವಾಹನಗಳ ಮಾರಾಟದಲ್ಲಿ ತಿಂಗಳಿನಿಂದ ತಿಂಗಳಿಗೆ ತೀವ್ರ ಹಿನ್ನಡೆ ಅನುಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಆಟೋ ಉದ್ಯಮವು ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದ್ದು, ಲಕ್ಷಾಂತರ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವಂತಾಗಿದೆ.

ಹೊಸ ಕಾರುಗಳ ನೋಂದಣಿ ಮೇಲಿನ ಶುಲ್ಕ ಹೆಚ್ಚಳಕ್ಕೆ ಕೊನೆಗೂ ಬ್ರೇಕ್..!

ಆಟೋ ಉದ್ಯಮದಲ್ಲಿನ ಹಿನ್ನಡೆಯನ್ನು ಸರಿದೂಗಿಸಲು ಮುಂದಾಗಿರುವ ಕೇಂದ್ರ ಸರ್ಕಾರವು ಹೊಸ ಕಾರುಗಳ ಮೇಲಿನ ನೋಂದಣಿ ಶುಲ್ಕ ಏರಿಕೆಯನ್ನು ಹಿಂದಕ್ಕೆ ಪಡೆದಿದ್ದು, ರೂ.5 ಸಾವಿರಕ್ಕೆ ಏರಿಕೆಯಾಗಿದ್ದ ಕಾರು ನೋಂದಣಿ ಶುಲ್ಕುವನ್ನು ಈ ಹಿಂದೆ ಇದ್ದ ರೂ.600ಕ್ಕೆ ಪುನಃ ಇಳಿಕೆ ಮಾಡಿದೆ.

ಹೊಸ ಕಾರುಗಳ ನೋಂದಣಿ ಮೇಲಿನ ಶುಲ್ಕ ಹೆಚ್ಚಳಕ್ಕೆ ಕೊನೆಗೂ ಬ್ರೇಕ್..!

ಎಲೆಕ್ಟ್ರಿಕ್ ಕಾರುಗಳ ಮಾರಾಟವನ್ನು ಹೆಚ್ಚಿಸುವ ಸಂಬಂಧ ಡೀಸೆಲ್ ಮತ್ತು ಪೆಟ್ರೋಲ್ ಕಾರುಗಳ ಮೇಲಿನ ನೋಂದಣಿ ಶುಲ್ಕವನ್ನು ಏರಿಕೆ ಮಾಡಿದ್ದ ಕೇಂದ್ರ ಸರ್ಕಾರದ ಲೆಕ್ಕಾಚಾರವು ಆಟೋ ಉದ್ಯಮ ಮೇಲೆ ಪ್ರತಿಕೂಲಕರ ಪರಿಣಾಮ ಬೀರಿದ್ದು, ಶುಲ್ಕ ಹೆಚ್ಚಳದಿಂದಾಗಿ ವಾಹನ ಮಾರಾಟವು ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿರುವುದಲ್ಲದೇ ಉದ್ಯೋಗ ಪ್ರಮಾಣದ ಮೇಲೂ ಹೊಡೆತ ಕೊಟ್ಟಿದೆ.

ಹೊಸ ಕಾರುಗಳ ನೋಂದಣಿ ಮೇಲಿನ ಶುಲ್ಕ ಹೆಚ್ಚಳಕ್ಕೆ ಕೊನೆಗೂ ಬ್ರೇಕ್..!

ಸದ್ಯ ಮಾರುಕಟ್ಟೆಯಲ್ಲಿ ಹೊಸ ವಾಹನಗಳ ಮಾರಾಟ ಪ್ರಮಾಣವು ದಿನದಿಂದ ದಿನಕ್ಕೆ ಕುಸಿಯುತ್ತಲೇ ಇದ್ದು, ಬಹುತೇಕ ಆಟೋ ಕಂಪನಿಗಳು ಕನಿಷ್ಠ ಪ್ರಮಾಣದ ವಾಹನಗಳ ಮಾರಾಟ ಮಾಡಲು ಕೂಡಾ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಇದರಿಂದ ಅರೆಕಾಲಿಕ ಉದ್ಯೋಗಿಗಳ ಪ್ರಮಾಣವನ್ನು ಗಣನೀಯವಾಗಿ ಕಡಿತಗೊಳಿಸುತ್ತಿರುವ ಕಾರು ಮತ್ತು ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆಯುಗಳು ದಿನದ ಮೂರು ಶಿಫ್ಟ್‌ಗಳ ಬದಲಾಗಿ ಒಂದೇ ಶಿಫ್ಟ್ ಮೂಲಕ ವಾಹನಗಳ ಉತ್ಪಾದನೆಯನ್ನು ಮುಂದುವರಿಸುತ್ತಿವೆ.

ಹೊಸ ಕಾರುಗಳ ನೋಂದಣಿ ಮೇಲಿನ ಶುಲ್ಕ ಹೆಚ್ಚಳಕ್ಕೆ ಕೊನೆಗೂ ಬ್ರೇಕ್..!

ಹೆಚ್ಚುತ್ತಿರುವ ಡೀಸೆಲ್ ಮತ್ತು ಪೆಟ್ರೋಲ್ ಎಂಜಿನ್ ವಾಹನಗಳ ಸಂಖ್ಯೆಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರವು ಕೆಲವು ಕಠಿಣ ಕ್ರಮಗಳನ್ನು ಜಾರಿಗೆ ತರುತ್ತಿದ್ದು, ಜಿಎಸ್‌ಟಿ ಹೆಚ್ಚಳ, ನೋಂದಣಿ ಶುಲ್ಕದಲ್ಲಿ ಹೆಚ್ಚಳ, ಸೆಸ್ ಹೆಚ್ಚಳ ಮಾಡಿ ಹೊಸ ವಾಹನ ಖರೀದಿದಾರರಿಗೆ ಶಾಕ್ ಕೊಟ್ಟಿದೆ.

ಹೊಸ ಕಾರುಗಳ ನೋಂದಣಿ ಮೇಲಿನ ಶುಲ್ಕ ಹೆಚ್ಚಳಕ್ಕೆ ಕೊನೆಗೂ ಬ್ರೇಕ್..!

ಇದೀಗ ನೋಂದಣಿ ಶುಲ್ಕವನ್ನು ತಗ್ಗಿಸಿರುವುದು ಹೊಸ ಕಾರು ಖರೀದಿದಾರರಿಗೆ ತುಸು ರೀಲಿಫ್ ನೀಡಬಹುದಾದರೂ ಜಿಎಸ್‌ಟಿ ಪ್ರಮಾಣದಲ್ಲಿ ಹೆಚ್ಚಳವು ಭಾರೀ ಪ್ರಮಾಣದ ಹಿನ್ನಡೆಗೆ ಕಾರಣವಾಗುತ್ತಿದೆ.

MOST READ: ವ್ಯಾಟ್ ಪ್ರಮಾಣದಲ್ಲಿ ಹೆಚ್ಚಳ- ಒಂದೇ ಬಾರಿಗೆ ಗಗನಕ್ಕೇರಿದ ಪೆಟ್ರೋಲ್ ಬೆಲೆ

ಹೊಸ ಕಾರುಗಳ ನೋಂದಣಿ ಮೇಲಿನ ಶುಲ್ಕ ಹೆಚ್ಚಳಕ್ಕೆ ಕೊನೆಗೂ ಬ್ರೇಕ್..!

ತಿಂಗಳ ಹಿಂದಷ್ಟೇ ಡೀಸೆಲ್ ಮತ್ತು ಪೆಟ್ರೋಲ್ ಎಂಜಿನ್ ವಾಹನಗಳ ಮೇಲೆ ಶೇ.18ರಷ್ಟಿದ್ದ ಜಿಎಸ್‌ಟಿ ಪ್ರಮಾಣವನ್ನು ಶೇ.28ಕ್ಕೆ ಏರಿಕೆ ಮಾಡಲಾಗಿದ್ದು, ಹೊಸ ವಾಹನಗಳ ಬೆಲೆಯು ಸತತ ಏರಿಕೆಯಿಂದಾಗಿ ಮಾರಾಟ ಪ್ರಮಾಣವು ಕೂಡಾ ಅಷ್ಟೇ ವೇಗದಲ್ಲಿ ಕುಸಿತ ಕಾಣುತ್ತಿದೆ.

MOST READ: ಜನಪ್ರಿಯ ಡೀಸೆಲ್ ಕಾರುಗಳ ಮೇಲೆ ಭರ್ಜರಿ ಆಫರ್ ಘೋಷಿಸಿದ ಮಾರುತಿ ಸುಜುಕಿ

ಹೊಸ ಕಾರುಗಳ ನೋಂದಣಿ ಮೇಲಿನ ಶುಲ್ಕ ಹೆಚ್ಚಳಕ್ಕೆ ಕೊನೆಗೂ ಬ್ರೇಕ್..!

ಜೊತೆಗೆ ಸಾಂಪ್ರಾದಾಯಿಕ ವಾಹನಗಳ ಮೇಲಿನ ಜಿಎಸ್‌ಟಿ ಹೆಚ್ಚಳದಿಂದ ಹೊಸ ವಾಹನ ಮಾರಾಟದ ಮೇಲೆ ಅಷ್ಟೇ ಅಲ್ಲದೇ ಆಟೋ ಉದ್ಯಮವನ್ನೇ ನೆಚ್ಚಿಕೊಂಡಿರುವ ಲಕ್ಷಾಂತರ ಸಣ್ಣ ಉದ್ಯಮಗಳ ಮೇಲೂ ಇದು ಪರಿಣಾಮ ಬೀರುತ್ತಿದೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಹೊಸ ಕಾರುಗಳ ನೋಂದಣಿ ಮೇಲಿನ ಶುಲ್ಕ ಹೆಚ್ಚಳಕ್ಕೆ ಕೊನೆಗೂ ಬ್ರೇಕ್..!

ಹೊಸ ವಾಹನಗಳ ಮಾರಾಟ ಪ್ರಮಾಣವು 2019ರ ಆರಂಭದಿಂದಲೇ ಕುಸಿತ ಕಾಣುತ್ತಿದ್ದು, ಕಳೆದ 19 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರಮಾಣಿಕರ ವಾಹನಗಳ ಮಾರಾಟ ಪ್ರಮಾಣವು ಶೇ.30ಕ್ಕೆ ಕುಸಿತ ಕಂಡಿದೆ.

ಹೊಸ ಕಾರುಗಳ ನೋಂದಣಿ ಮೇಲಿನ ಶುಲ್ಕ ಹೆಚ್ಚಳಕ್ಕೆ ಕೊನೆಗೂ ಬ್ರೇಕ್..!

2018ರ ಜುಲೈ ಅವಧಿಗೂ 2019ರ ಜುಲೈ ಅವಧಿಯಲ್ಲಿನ ವಾಹನಗಳ ಮಾರಾಟ ಪ್ರಮಾಣಕ್ಕೆ ಹೋಲಿಕೆ ಮಾಡಿದ್ದಲ್ಲಿ, ಕಳೆದ ವರ್ಷದ ಜುಲೈನಲ್ಲಿ ಒಟ್ಟು 2,90,931 ಪ್ರಯಾಣಿಕ ವಾಹನಗಳು ಮಾರಾಟವಾದರೇ ಪ್ರಸಕ್ತ ವರ್ಷದ ಜುಲೈ ಅವಧಿಯಲ್ಲಿ ಕೇವಲ 2,00,790 ಪ್ರಯಾಣಿಕ ವಾಹನಗಳು ಮಾರಾಟವಾಗಿವೆ.

Most Read Articles

Kannada
English summary
Car registration fee hike put on hold. Read in Kannada.
Story first published: Wednesday, August 21, 2019, 17:46 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X