ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನೆಗಾಗಿ ರೂ.2,800 ಕೋಟಿ ಹೂಡಿಕೆ ಮಾಡಲಿದೆ ಬಿವೈಡಿ

ಚೀನಿ ಜನಪ್ರಿಯ ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ಸಂಸ್ಥೆಯಾದ ಬಿವೈಡಿ ತನ್ನ ಬಹುಬೇಡಿಕೆಯ ಎಲೆಕ್ಟ್ರಿಕ್ ಕಾರುಗಳು ಮತ್ತು ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳನ್ನು ಭಾರತದಲ್ಲೂ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಬಂಡವಾಳ ಹೂಡಿಕೆಗೆ ಮುಂದಾಗಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನೆಗಾಗಿ ರೂ.2,800 ಕೋಟಿ ಹೂಡಿಕೆ ಮಾಡಲಿದೆ ಬಿವೈಡಿ

ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿರುವ ಬಿವೈಡಿ ಸಂಸ್ಥೆಯು ಈಗಾಗಲೇ ಬಿಡುಗಡೆಯಾಗಲಿರುವ ಹೊಸ ಎಲೆಕ್ಟ್ರಿಕ್ ವಾಹನಗಳ ಮಾಹಿತಿ ಬಹಿರಂಗಪಡಿಸಿದ್ದು, ವ್ಯಯಕ್ತಿಕ ಬಳಕೆಯ ವಾಹನಗಳ ಜೊತೆಗೆ ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

ಸದ್ಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಪ್ರಮುಖ ತಾಂತ್ರಿಕ ಅಂಶವಾಗಿರುವ ಬ್ಯಾಟರಿ ಸಾಧನವು ದುಬಾರಿ ಬೆಲೆ ಹೊಂದಿದ್ದು, ಈ ಹಿನ್ನಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆಗಾಗಿ ಬಿವೈಡಿ ಸಂಸ್ಥೆಯು ಸ್ಥಳೀಯವಾಗಿಯೇ ಸಂಪನ್ಮೂಲ ಬಳಸಿಕೊಂಡು ವಾಹನ ನಿರ್ಮಾಣ ಮಾಡಲು ಮುಂದಾಗಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನೆಗಾಗಿ ರೂ.2,800 ಕೋಟಿ ಹೂಡಿಕೆ ಮಾಡಲಿದೆ ಬಿವೈಡಿ

ಹೊಸ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಘಟಕವನ್ನು ಚೆನ್ನೈ ಬಳಿ ತೆರೆಯುವ ಸಂಬಂಧ ತಮಿಳುನಾಡು ಸರ್ಕಾರದ ಜೊತೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಲಾಗಿದ್ದು, ಅಂತಿಮವಾಗಿ ಹೊಸ ವಾಹನ ಉತ್ಪಾದನಾ ಘಟಕವು ಎಲ್ಲಿ ನಿರ್ಮಾಣವಾಗಲಿದೆ ಎನ್ನುವುದು ಕಾಯ್ದುನೋಡಬೇಕಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನೆಗಾಗಿ ರೂ.2,800 ಕೋಟಿ ಹೂಡಿಕೆ ಮಾಡಲಿದೆ ಬಿವೈಡಿ

ರೂ.2,800 ಹೂಡಿಕೆಗೆ ಬಿವೈಡಿ ಆಸಕ್ತಿ

ಹೊಸ ಎಲೆಕ್ಟ್ರಿಕ್ ವಾಹನಗಳ ಜೊತೆ ಬ್ಯಾಟರಿ ಸಾಧನವನ್ನು ಸಹ ಭಾರತದಲ್ಲೇ ಅಭಿವೃದ್ದಿಪಡಿಸಬೇಕೆಂಬ ಯೋಜನೆ ಹೊಂದಿರುವ ಬಿವೈಡಿ ಸಂಸ್ಥೆಯು, ಹೊಸ ಎಲೆಕ್ಟ್ರಿಕ್ ವಾಹನಗಳ ಉತ್ಪಾದಾನೆ ಜೊತೆಗೆ ವಿವಿಧ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳಿಗೆ ಬ್ಯಾಟರಿ ಪೂರೈಕೆ ಮಾಡುವ ಗುರಿಹೊಂದಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನೆಗಾಗಿ ರೂ.2,800 ಕೋಟಿ ಹೂಡಿಕೆ ಮಾಡಲಿದೆ ಬಿವೈಡಿ

ಬಿವೈಡಿ ಸಂಸ್ಥೆಯು ಚೀನಿ ಮಾರುಕಟ್ಟೆಯಲ್ಲಿ ವಿವಿಧ ಮಾದರಿಯ ಎಲೆಕ್ಟ್ರಿಕ್ ಬಸ್ ಮತ್ತು ವಾಣಿಜ್ಯ ವಾಹನಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಭಾರೀ ಜನಪ್ರಿಯತೆ ಸಾಧಿಸುತ್ತಿದ್ದು, ಇದೀಗ ಭಾರತೀಯ ಮಾರುಕಟ್ಟೆಯಲ್ಲೂ ತನ್ನ ಜನಪ್ರಿಯ ಎಲೆಕ್ಟ್ರಿಕ್ ಉತ್ಪನ್ನಗಳ ಮಾರಾಟಕ್ಕೆ ಸಿದ್ದತೆ ನಡೆಸಿದೆ.

ಹೊಸ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳ ಬಿಡುಗಡೆಯ ಕುರಿತಂತೆ ಮಾತನಾಡಿರುವ ಬಿವೈಡಿ ಇಂಡಿಯಾ ವಿಭಾಗದ ಮುಖ್ಯಸ್ಥ ಲೀ ಜುಲಿಂಗ್ ಅವರು ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ವಿಫುಲ ಅವಕಾಶ ಹೊಂದಿರುವ ಭಾರತೀಯ ಮಾರಾಕಟ್ಟೆಯಲ್ಲಿ ನಮ್ಮ ಹೊಸ ವಾಹನ ಉತ್ಪನ್ನಗಳು ಎಲ್ಲಾ ವರ್ಗದ ಗ್ರಾಹಕರ ಬೇಡಿಕೆ ಪೂರೈಸುವ ವಿಶ್ವಾಸವಿರುವುದಾಗಿ ತಿಳಿಸಿದ್ದಾರೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನೆಗಾಗಿ ರೂ.2,800 ಕೋಟಿ ಹೂಡಿಕೆ ಮಾಡಲಿದೆ ಬಿವೈಡಿ

ಮಾಹಿತಿಗಳ ಪ್ರಕಾರ, ಬಿವೈಡಿ ಇಂಡಿಯಾ ಸಂಸ್ಥೆಯು ಎಂಪಿವಿ(ಮಲ್ಟಿ ಪರ್ಪಸ್ ವೆಹಿಕಲ್) ಮತ್ತು ವ್ಯಾನ್ ಮಾದರಿಗಳನ್ನು ಮೊದಲ ಹಂತದಲ್ಲಿ ಬಿಡುಗಡೆ ಮಾಡಲಿದ್ದು, ತದನಂತರ ವಾಣಿಜ್ಯ ಬಳಕೆ ಎಲೆಕ್ಟ್ರಿಕ್ ಮಿನಿ ಟ್ರಕ್ ಮತ್ತು ಎಲೆಕ್ಟ್ರಿಕ್ ಬಸ್‌ಗಳನ್ನು ಸಹ ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನೆಗಾಗಿ ರೂ.2,800 ಕೋಟಿ ಹೂಡಿಕೆ ಮಾಡಲಿದೆ ಬಿವೈಡಿ

ಎಂಪಿವಿ ಮತ್ತು ವ್ಯಾನ್ ಮಾದರಿಗಳಿಗೆ ಭಾರತೀಯ ಮಾರುಕಟ್ಟೆಯಲ್ಲಿ ವಿಶೇಷ ಬೇಡಿಕೆಯಿದ್ದು, ಇವು ವ್ಯಯಕ್ತಿಕ ಬಳಕೆ ವಾಹನ ಮಾದರಿಗಳಿಂತ ವಾಣಿಜ್ಯ ಉದ್ದೇಶಕ್ಕಾಗಿ ಹೆಚ್ಚು ಬಳಕೆಯಾಗುವ ವಾಹನ ಮಾದರಿಗಳಾಗಿವೆ. ಹೀಗಾಗಿ ಹೊಸ ಎಲೆಕ್ಟ್ರಿಕ್ ವಾಹನಗಳನ್ನು ವಾಣಿಜ್ಯ ಉದ್ದೇಶಿತ ಸಂಚಾರಕ್ಕಾಗಿ ಪೂರೈಕೆ ಮಾಡಲು ನಿರ್ಧರಿಸಿರುವ ಬಿವೈಡಿ ಸಂಸ್ಥೆಯು ತದನಂತರವಷ್ಟೇ ವ್ಯಯಕ್ತಿಕ ಕಾರು ಬಳಕೆದಾರರಿಗೆ ಎಂಪಿವಿ ಮತ್ತು ವ್ಯಾನ್ ಮಾದರಿಗಳನ್ನು ಮಾರಾಟ ಮಾಡಲಿದೆ.

MOST READ: ಕಾರು ಖರೀದಿದಾರರ ನೆಚ್ಚಿನ ಬಣ್ಣ ಯಾವುದು ಗೊತ್ತಾ?

ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನೆಗಾಗಿ ರೂ.2,800 ಕೋಟಿ ಹೂಡಿಕೆ ಮಾಡಲಿದೆ ಬಿವೈಡಿ

ಸದ್ಯ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಮಟ್ಟದ ಆದ್ಯತೆ ನೀಡಲಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಅಷ್ಟೇ ಅಲ್ಲದೇ ಎಲೆಕ್ಟ್ರಿಕ್ ವಾಹನ ನಿರ್ಮಾಣ ಸಂಸ್ಥೆಗಳಿಗೂ ಹೆಚ್ಚಿನ ಮಟ್ಟದ ಸಬ್ಸಡಿ ಸೇರಿದಂತೆ ಹಲವು ವಿನಾಯ್ತಿಗಳನ್ನು ನೀಡಲಾಗುತ್ತಿದೆ.

MOST READ: ಕಲ್ಯಾಣ್ ಜ್ಯುವೆಲ್ಲರ್ಸ್ ಮಾಲೀಕನ ಬಳಿಯಿರುವ ಐಷಾರಾಮಿ ಕಾರು ಕಲೆಕ್ಷನ್ ಹೇಗಿದೆ ಗೊತ್ತಾ?

ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನೆಗಾಗಿ ರೂ.2,800 ಕೋಟಿ ಹೂಡಿಕೆ ಮಾಡಲಿದೆ ಬಿವೈಡಿ

ಈ ಹಿನ್ನಲೆಯಲ್ಲಿ ಬೃಹತ್ ಬಂಡವಾಳದೊಂದಿಗೆ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಲು ಭಾರತೀಯ ಮಾರುಕಟ್ಟೆ ಪ್ರವೇಶಿಸಿರುವ ಬಿವೈಡಿ ಸಂಸ್ಥೆಯು ಭಾರತೀಯ ಗ್ರಾಹಕರ ಬೇಡಿಕೆ ಅರಿಯಲು ವಿವಿಧ ಹಂತದ ಅಧ್ಯಯನಗಳನ್ನು ಕೂಡಾ ಕೈಗೊಂಡಿದೆ.

MOST READ: ದುಬಾರಿ ಕಾರಿನ ಟ್ಯಾಕ್ಸ್ ಉಳಿಸಲು ಈತ ಮಾಡಿದ್ದೇನು ಗೊತ್ತಾ?

ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನೆಗಾಗಿ ರೂ.2,800 ಕೋಟಿ ಹೂಡಿಕೆ ಮಾಡಲಿದೆ ಬಿವೈಡಿ

ಹೀಗಾಗಿ ಗ್ರಾಹಕರ ಬೇಡಿಕೆಯೆಂತೆ ಮೊದಲು ಎಂಪಿವಿ ಮತ್ತು ವ್ಯಾನ್ ಮಾದರಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು, ಹೊಸ ವಾಹನಗಳಿಗೆ ಟಿ3 ಎಂಪಿವಿ ಮತ್ತು ಟಿ3 ವ್ಯಾನ್ ಹೆಸರಿಸಿರುವ ಬಿವೈಡಿ ಸಂಸ್ಥೆಯು ಆಕರ್ಷಕ ಬೆಲೆ ನಿಗದಿ ಮಾಡುವ ಸುಳಿವು ನೀಡಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನೆಗಾಗಿ ರೂ.2,800 ಕೋಟಿ ಹೂಡಿಕೆ ಮಾಡಲಿದೆ ಬಿವೈಡಿ

ಹೊಸ ಟಿ3 ಎಂಪಿವಿ ಮತ್ತು ಟಿ3 ಎಲೆಕ್ಟ್ರಿಕ್ ಮಾದರಿಗಳು ಪ್ರತಿ ಚಾರ್ಜ್‌ಗೆ 300ಕಿ.ಮೀ ಮೈಲೇಜ್ ಸಾಮರ್ಥ್ಯವನ್ನು ಹೊಂದಿದ್ದು, ಬ್ಯಾಟರಿ ವೈಶಿಷ್ಟ್ಯತೆಗಳು ಮತ್ತು ಹೊಸ ವಾಹನಗಳ ವಿನ್ಯಾಸಗಳ ಕುರಿತು ಮುಂದಿನ ಕೆಲವೇ ದಿನಗಳಲ್ಲಿ ಅಧಿಕೃತ ಮಾಹಿತಿ ಹಂಚಿಕೊಳ್ಳಲಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನೆಗಾಗಿ ರೂ.2,800 ಕೋಟಿ ಹೂಡಿಕೆ ಮಾಡಲಿದೆ ಬಿವೈಡಿ

ಒಂದು ವೇಳೆ ಬೆಲೆ ವಿಚಾರವಾಗಿ ಬಿವೈಡಿ ಸಂಸ್ಥೆಯ ಎಲೆಕ್ಟ್ರಿಕ್ ವಾಹನಗಳು ಗ್ರಾಹಕರನ್ನು ಸೆಳೆದಲ್ಲಿ ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳು ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದ್ದು, ವ್ಯಯಕ್ತಿಕ ಮತ್ತು ವಾಣಿಜ್ಯ ಬಳಕೆಯ ವಾಹನಗಳ ಮಾರಾಟದಲ್ಲೂ ಬಿವೈಡಿ ಸದ್ದು ಮಾಡುವ ನೀರಿಕ್ಷೆಯಿದೆ.

Most Read Articles

Kannada
English summary
Chinese Major Brand BYD To Invest Rs.2,800 Cr in TamilNadu. Read in Kannada.
Story first published: Monday, December 2, 2019, 17:58 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X