ಬಹುನೀರಿಕ್ಷಿತ ಸಿಟ್ರನ್ ಸಿ5 ಏರೋಕ್ರಾಸ್ ಎಸ್‌ಯುವಿ ಅನಾವರಣ
ಸಿಟ್ರನ್ ಸಂಸ್ಥೆಯ ಬಹುನೀರಿಕ್ಷಿತ ಸಿ5 ಏರೋಕ್ರಾಸ್ ಎಸ್‌ಯುವಿ ಮಾದರಿಯು ಭಾರತದಲ್ಲಿ ಅನಾವರಣಗೊಂಡಿದ್ದು, ಸಿ ಸೆಗ್ಮೆಂಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಸಿ5 ಏರೋಕ್ರಾಸ್ ಕಾರು ಮಾದರಿಯು ಹಲವು ವಿಶೇಷತೆಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸುತ್ತಿದೆ.

ವಾಹನಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ವಿಫುಲ ಅವಕಾಶಗಳನ್ನು ತೆರೆದುಕೊಳ್ಳುತ್ತಿರುವ ದೇಶಿಯ ಮಾರುಕಟ್ಟೆಯಲ್ಲಿ ಇದೀಗ ಫ್ರೆಂಚ್ ಕಾರು ಉತ್ಪಾದನಾ ಸಂಸ್ಥೆಗಳು ಹೊಸ ಸಂಚಲನ ಸೃಷ್ಠಿಸಲು ತಮ್ಮ ವಿನೂತನ ಕಾರು ಮಾದರಿಗಳನ್ನ ಬಿಡುಗಡೆಗೊಳಿಸುತ್ತಿದ್ದು, ಜನಪ್ರಿಯ ಪಿಎಸ್ಎ ಗ್ರೂಪ್‌ನ ಅಂಗಸಂಸ್ಥೆಯಾದ ಸಿಟ್ರನ್ ಸಹ ತನ್ನ ವಿನೂತನ ವಿನ್ಯಾಸದ ಎಸ್‌ಯುವಿ ಕಾರು ಮಾದರಿಯಾದ ಸಿ5 ಏರೋಕ್ರಾಸ್ ಎಸ್‌ಯುವಿಯನ್ನು ಭಾರತಕ್ಕೆ ಪರಿಚಯಿಸಲು ಇರಾದೆಯಲ್ಲಿದೆ.

ಈ ಸಂಬಂಧ ಭಾರತೀಯ ಮಾರುಕಟ್ಟೆಯಲ್ಲಿ ಈಗಾಗಲೇ ಹಲವು ಸುತ್ತಿನ ಮಾರುಕಟ್ಟೆ ಅಧ್ಯಯನ ನಡೆಸಿರುವ ಪಿಎಸ್ಎ ಗ್ರೂಪ್ ಸಂಸ್ಥೆಯು ಮೊದಲ ಹಂತದಲ್ಲಿ ಸಿಟ್ರನ್ ಸಿ5 ಏರೋಕ್ರಾಸ್ ಮಾದರಿಯನ್ನು ಅನಾವರಣಗೊಳಿಸಿದೆ.

ಚೆನ್ನೈನ ಲೀಲಾ ಪ್ಯಾಲೇಜ್ ಹೋಟೆಲ್‌ನಲ್ಲಿ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಸಿಟ್ರನ್ ಸಿ5 ಏರೋಕ್ರಾಸ್ ಕಾರನ್ನು ಅನಾವರಣಗೊಳಿಸಿದ ಪಿಎಸ್ಎ ಗ್ರೂಪ್ ಸಂಸ್ಥೆಯು 2020ರ ಆರಂಭದಲ್ಲಿ ಹೊಸ ಕಾರನ್ನು ಬಿಡುಗಡೆ ಮಾಡುವುದಾಗಿ ಮಾಹಿತಿ ಹಂಚಿಕೊಂಡಿದೆ.

ಹೀಗಾಗಿ ಎಲ್ಲವೂ ಅಂದುಕೊಂಡಂತೆ ಆದಲ್ಲಿ ಪಿಎಸ್ಎ ಗ್ರೂಪ್ ನಿರ್ಮಾಣದ ಸಿಟ್ರನ್ ಎಸ್‌ಯುವಿ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುವುವ ನೀರಿಕ್ಷೆಯಲ್ಲಿದ್ದು, ಸಿ5 ಏರೋಕ್ರಾಸ್ ಬಿಡುಗಡೆ ನಂತರ ಫ್ರೆಂಚ್ ಮಾರುಕಟ್ಟೆಯಲ್ಲಿರುವ ಮತ್ತಷ್ಟು ಜನಪ್ರಿಯ ಕಾರುಗಳನ್ನು ಭಾರತದಲ್ಲೂ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಇದಕ್ಕಾಗಿಯೇ ಮೊದಲ ಹಂತವಾಗಿ ಬ್ರಾಂಡ್ ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಭಾರತೀಯ ಗ್ರಾಹಕರನ್ನು ಸೆಳೆಯಲು ಸಿಟ್ರನ್ ಕಾರುಗಳನ್ನು ಆಮದು ಮಾಡಿಕೊಳ್ಳುತ್ತಿರುವ ಪಿಎಸ್ಎ ಗ್ರೂಪ್ ಸಂಸ್ಥೆಯು ಜಾಹೀರಾತು ಮತ್ತು ಆಸಕ್ತ ಗ್ರಾಹಕರಿಗಾಗಿ ಟೆಸ್ಟ್ ಡ್ರೈವ್‌ಗಳನ್ನು ಕಲ್ಪಿಸಿ ಹೊಸ ಬ್ರಾಂಡ್ ಪರಿಚಯಿಸುತ್ತಿದೆ.

ಮೂಲಗಳ ಪ್ರಕಾರ, ಪಿಎಸ್ಎ ಗ್ರೂಪ್‌ನ ಸಿಟ್ರನ್ ಸಿಟ್ರನ್ ಸಿ5 ಏರೋಕ್ರಾಸ್ ಮತ್ತು ಸಿ84 ಎಸ್‌ಯುವಿ ಕಾರುಗಳನ್ನು ಮೊದಲ ಹಂತದಲ್ಲಿ ಬಿಡುಗಡೆಯಾಗಲಿದ್ದು, ಮಧ್ಯಮ ಗಾತ್ರದ ಐಷಾರಾಮಿ ಮಾದರಿಗಳಾದ ಜೀಪ್ ಕಂಪಾಸ್, ಹ್ಯುಂಡೈ ಟಕ್ಸನ್ ಮತ್ತು ಸ್ಕೋಡಾ ಕರೋಕ್ ಎಸ್‌ಯುವಿಗಳಿಗೆ ಇವು ತ್ರೀವ ಪೈಪೋಟಿ ನೀಡುವ ನೀರಿಕ್ಷೆಯಲ್ಲಿವೆ.

ಸದ್ಯ ಅನಾವರಣಗೊಳಿಸಲಾಗಿರುವ ಸಿ5 ಏರೋಕ್ರಾಸ್ ಕಾರು ಮಾದರಿಯು 1.5-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯನ್ನು ಹೊಂದಿರಲಿದ್ದರೆ ಡೀಸೆಲ್ ಎಂಜಿನ್ ಮಾದರಿಯಲ್ಲಿ 1.5-ಲೀಟರ್ ಮತ್ತು ಪರ್ಫಾಮೆನ್ಸ್ ಉದ್ದೇಶಕ್ಕಾಗಿ 2.0-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿರಲಿದೆ.
MOST READ: ಹೊಸ ಬೈಕ್‌ಗಳಿಗೆ ಹೊಸ ರೂಲ್ಸ್- ಸಿಬಿಎಸ್ ಮತ್ತು ಎಬಿಎಸ್ ಇಲ್ಲದ ಬೈಕ್ ಖರೀದಿ ಬೇಡವೇ ಬೇಡ..!

ಜೊತೆಗೆ ಹೊಸ ಕಾರುಗಳನ್ನು ಪರಿಚಯಿಸುವುದಕ್ಕೂ ಮುನ್ನ ದೇಶದ 80 ಪ್ರಮುಖ ನಗರಗಳಲ್ಲಿ 'ಎಕ್ಸ್‌ಪಿರೆನ್ಸ್ ಸ್ಟೋರ್'ಗಳನ್ನು ತೆರೆಯಲಿದ್ದು, ಈ ಮೂಲಕ ಗ್ರಾಹಕರನ್ನು ಹೊಸ ಕಾರ್ ಬ್ರಾಂಡ್‌ನತ್ತ ಸೆಳೆಯುವ ಮಾರುಕಟ್ಟೆ ತಂತ್ರಗಳನ್ನು ಬಳಸುತ್ತಿದೆ.

ಇದಲ್ಲದೇ ಬೆಲೆಗಳಲ್ಲಿ ತುಸು ದುಬಾರಿ ಎನ್ನಿಸಲಿರುವ ಪಿಎಸ್ಎ ಗ್ರೂಪ್ ಕಾರುಗಳ ಬೆಲೆ ತಗ್ಗಿಸುವ ಉದ್ದೇಶದಿಂದ ಚೆನ್ನೈನಲ್ಲಿ ಅಸೆಂಬ್ಲಿ ಯೂನಿಟ್ ಅನ್ನು ಸಹ ತೆರೆಯಲಾಗಿದ್ದು, ಸ್ಥಳೀಯವಾಗಿ ಲಭ್ಯವಾಗುವ ಸುಮಾರು ಶೇ.90ರಷ್ಟು ತಾಂತ್ರಿಕ ಬಿಡಿಭಾಗಗಳನ್ನು ಬಳಕೆ ಮಾಡಿಕೊಂಡು ಲಾಭಾಂಶ ಮತ್ತು ಕಾರಿನ ಬೆಲೆ ಇಳಿಕೆಗೆ ಸಹಕಾರಿಯಾಗುವಂತೆ ಯೋಜನೆ ಹಮ್ಮಿಕೊಂಡಿದೆ.
MOST READ: ನೋ ಪಾರ್ಕಿಂಗ್‌ನಲ್ಲಿದ್ದ ಹೋಂಡಾ ಡಿಯೋ ಸ್ಕೂಟರ್ ಪೀಸ್ ಪೀಸ್ ಮಾಡಿದ ಪೊಲೀಸ್..!

ಇನ್ನು ಭಾರತದಲ್ಲಿ ಪಿಎಸ್‌ಎ ಗ್ರೂಪ್‌ನ ಮತ್ತೊಂದು ಅಂಗಸಂಸ್ಥೆಯಾದ ಪ್ಯೂಜೊ ಕೂಡಾ ಭಾರತದಲ್ಲಿ ಈಗಾಗಲೇ ತನ್ನ ವಾಣಿಜ್ಯ ಚಟುವಟಿಕೆಗಳನ್ನು ಆರಂಭಗೊಳಿಸಿದ್ದು, 2019ರ ಮಧ್ಯಂತರದಲ್ಲಿ ಹೊಸ ಕಾರುಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಸ್ಪಾಟ್ ಟೆಸ್ಟಿಂಗ್ ನಡೆಸುವ ಮೂಲಕ ಗ್ರಾಹಕರನ್ನು ಸೆಳೆಯುವ ಪ್ರಯತ್ನದಲ್ಲಿದೆ.


Click it and Unblock the Notifications








