2020ರ ಮಧ್ಯಂತರದಲ್ಲಿ ಬಿಡುಗಡೆಯಾಗಲಿದೆ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ
ಭಾರತದಲ್ಲಿ ತನ್ನ ಮೊದಲ ಕಾರು ಮಾದರಿಯಾದ ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿರುವ ಸಿಟ್ರನ್ ಸಂಸ್ಥೆಯು ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಮೇಳದಲ್ಲಿ ಭಾಗಿ ನಂತರ ಅಧಿಕೃತ ರಸ್ತೆಗಿಳಿಯಲಿದೆ.

ಫ್ರೆಂಚ್ ಜನಪ್ರಿಯ ಆಟೋ ಉತ್ಪಾದನಾ ಸಂಸ್ಥೆಯಾದ ಪಿಎಸ್ಎ ಗ್ರೂಪ್ ಮೊದಲ ಬಾರಿಗೆ ಭಾರತದಲ್ಲಿ ತನ್ನ ಸಿಟ್ರನ್ ಬ್ರಾಂಡ್ ಕಾರು ಮಾರಾಟವನ್ನು ಆರಂಭಿಸುತ್ತಿದ್ದು, ಸಿ ಸೆಗ್ಮೆಂಟ್ ವಿಭಾಗದಲ್ಲಿನ ಎಸ್‌ಯುವಿ ಕಾರು ಮಾದರಿಗಳಲ್ಲೇ ವಿಶೇಷ ಸೌಲಭ್ಯಗಳೊಂದಿಗೆ ಎ5 ಏರ್‌ಕ್ರಾಸ್ ಹೊಸ ಸಂಚಲನಕ್ಕೆ ಕಾರಣವಾಗಲಿದೆ. ರೋಡ್ ಟೆಸ್ಟಿಂಗ್ ವೇಳೆ ಹೊಸ ಕಾರು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಜೀಪ್ ಕಂಪಾಸ್, ಹ್ಯುಂಡೈ ಟಕ್ಸನ್ ಮತ್ತು ಸ್ಕೋಡಾ ಕರೋಕ್ ಎಸ್‌ಯುವಿಗಳಿಗೆ ಇದು ತ್ರೀವ ಪೈಪೋಟಿ ನೀಡುವ ನೀರಿಕ್ಷೆಯಲ್ಲಿವೆ.

ಮೂಲಗಳ ಪ್ರಕಾರ, ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಮತ್ತು ಸಿ3 ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು ಮೊದಲ ಹಂತದಲ್ಲಿ ಬಿಡುಗಡೆಯಾಗಲಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಕಾರುಗಳು ಮಹತ್ವದ ಬದಲಾಣೆಗಳೊಂದಿಗೆ ಅಭಿವೃದ್ದಿಗೊಂಡಿವೆ.

ಸಿ5 ಏರ್‌ಕ್ರಾಸ್ ಕಾರು ಮಾದರಿಯು ಬಿಎಸ್-6 ಪ್ರೇರಿತ 1.5-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯನ್ನು ಹೊಂದಿರಲಿದ್ದರೆ ಡೀಸೆಲ್ ಎಂಜಿನ್ ಮಾದರಿಯು 1.5-ಲೀಟರ್ ಜೊತೆಗೆ ಪರ್ಫಾಮೆನ್ಸ್ ಉದ್ದೇಶಕ್ಕಾಗಿ 2.0-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿರಲಿದೆ.

ಜೊತೆಗೆ ಹೊಸ ಕಾರುಗಳನ್ನು ಪರಿಚಯಿಸುವುದಕ್ಕೂ ಮುನ್ನ ದೇಶದ 80 ಪ್ರಮುಖ ನಗರಗಳಲ್ಲಿ 'ಎಕ್ಸ್‌ಪಿರೆನ್ಸ್ ಸ್ಟೋರ್'ಗಳನ್ನು ತೆರೆಯಲಿದ್ದು, ಈ ಮೂಲಕ ಗ್ರಾಹಕರನ್ನು ಹೊಸ ಕಾರ್ ಬ್ರಾಂಡ್‌ನತ್ತ ಸೆಳೆಯುವ ಮಾರುಕಟ್ಟೆ ತಂತ್ರಗಳನ್ನು ಬಳಸುತ್ತಿದೆ. ಇದಲ್ಲದೇ ಬೆಲೆಗಳಲ್ಲಿ ತುಸು ದುಬಾರಿ ಎನ್ನಿಸಲಿರುವ ಪಿಎಸ್ಎ ಗ್ರೂಪ್ ಕಾರುಗಳ ಬೆಲೆಯನ್ನು ತಗ್ಗಿಸುವ ಉದ್ದೇಶದಿಂದ ಚೆನ್ನೈನಲ್ಲಿ ಅಸೆಂಬ್ಲಿ ಯೂನಿಟ್ ಅನ್ನು ಸಹ ತೆರೆಯಲಾಗಿದ್ದು, ಸ್ಥಳೀಯವಾಗಿ ಲಭ್ಯವಾಗುವ ಸುಮಾರು ಶೇ.90ರಷ್ಟು ತಾಂತ್ರಿಕ ಬಿಡಿಭಾಗಗಳನ್ನು ಬಳಕೆ ಮಾಡಿಕೊಂಡು ಲಾಭಾಂಶ ಮತ್ತು ಕಾರಿನ ಬೆಲೆ ಇಳಿಕೆಗೆ ಸಹಕಾರಿಯಾಗುವಂತೆ ಯೋಜನೆ ಹಮ್ಮಿಕೊಂಡಿದೆ.

ಇತ್ತೀಚೆಗೆ ಹೊಸ ಕಾರುಗಳನ್ನು ಸ್ವಂತಕ್ಕೆ ಖರೀದಿಸುವ ಬದಲು ನಿಗದಿತ ಅವಧಿಗಾಗಿ ಕಾರುಗಳನ್ನು ಲೀಸ್ ಪಡೆಯುವ ಸೌಲಭ್ಯವು ಹೆಚ್ಚು ಜನಪ್ರಿಯವಾಗುತ್ತಿದ್ದು, ಪಿಎಸ್ಎ ಗ್ರೂಪ್ ಕೂಡಾ ತನ್ನ ಸಿಟ್ರನ್ ಕಾರುಗಳಲ್ಲಿ ಲೀಸ್ ಆಯ್ಕೆಯನ್ನು ತೆರೆಯಲು ಉತ್ಸುಕವಾಗಿದೆ.

ಸದ್ಯ ಮಹೀಂದ್ರಾ ಮತ್ತು ಹ್ಯುಂಡೈ ಸಂಸ್ಥೆಗಳು ತಮ್ಮ ಜನಪ್ರಿಯ ಕಾರುಗಳನ್ನು ಲೀಸ್ ಆಧಾರದ ಮೇಲೆ ಗ್ರಾಹಕರಿಗೆ ಮಾಲೀಕತ್ವ ನೀಡುತ್ತಿದ್ದು, ಇದೀಗ ಬಿಡುಗಡೆಯ ಸನಿಹದಲ್ಲಿರುವ ಸಿ5 ಏರೋಕ್ರಾಸ್ ಕಾರನ್ನು ಸಹ ಲೀಸ್ ಆಧಾರದ ಮೇಲೆ ಹೊಸ ಕಾರಿನ ಮಾಲೀಕತ್ವ ಪಡೆದುಕೊಳ್ಳಬಹುದಾಗಿದೆ.
MOST READ: ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್

ಇನ್ನು ಕಳೆದ 5 ತಿಂಗಳು ಹಿಂದಷ್ಟೇ ಭಾರತದಲ್ಲಿ ಬಿಡುಗಡೆ ಮಾಡಲಿರುವ ತನ್ನ ಮೊದಲ ಕಾರಿನ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದ ಸಿಟ್ರನ್ ಸಂಸ್ಥೆಯು ಸದ್ಯ ಕಾರು ಉತ್ಪಾದನಾ ಘಟಕ ನಿರ್ಮಾಣ, ಸಿಬ್ಬಂದಿ ನೇಮಕ, ಮಾರುಕಟ್ಟೆ ಅಧ್ಯಯನ ಮತ್ತು ಕಾರು ಮಾರಾಟಕ್ಕೆ ಅನುಕೂಲಕರ ಪ್ರದೇಶಗಳಲ್ಲಿ ಅಧಿಕೃತ ಮಾರಾಟ ಮಳಿಗೆಗಳನ್ನು ತೆರೆಯುತ್ತಿದೆ.
MOST READ: ಕಾರು ಖರೀದಿಸಿದ ಮಾಲೀಕನ ಮೇಲೆ ಕೇಸ್ ಜಡಿದ ಎಂಜಿ ಮೋಟಾರ್..!

ಸಿಬ್ಬಂದಿ ನೇಮಕಾತಿಯನ್ನು ಪೂರ್ಣಗೊಳಿಸಲಾಗಿದ್ದು, ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ತರಬೇತಿ ನೀಡುವ ಸಂಬಂಧ ಭಾರೀ ಪ್ರಮಾಣ ಹೂಡಿಕೆಯೊಂದಿಗೆ ಟೆಕ್ನಿಕಲ್ ಟ್ರೈನಿಂಗ್ ಸೆಂಟರ್ ಆರಂಭಿಸಿದೆ. ಈ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ಈಗಾಗಲೇ ಹಲವು ಸುತ್ತಿನ ಮಾರುಕಟ್ಟೆ ಅಧ್ಯಯನ ನಡೆಸಿರುವ ಪಿಎಸ್ಎ ಗ್ರೂಪ್ ಸಂಸ್ಥೆಯು ಮೊದಲ ಹಂತದಲ್ಲಿ ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸಿದೆ.
MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ

ಈ ಮೂಲಕ ವಿನೂತನ ವಿನ್ಯಾಸ ಮತ್ತು ವಿಶೇಷ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಸಿಟ್ರನ್ ಎಸ್‌ಯುವಿ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುವುವ ನೀರಿಕ್ಷೆಯಲ್ಲಿದ್ದು, ಸಿ5 ಏರ್‌ಕ್ರಾಸ್ ಬಿಡುಗಡೆ ನಂತರ ಫ್ರೆಂಚ್ ಮಾರುಕಟ್ಟೆಯಲ್ಲಿರುವ ಮತ್ತಷ್ಟು ಜನಪ್ರಿಯ ಕಾರುಗಳನ್ನು ಭಾರತದಲ್ಲಿ ಸದ್ದು ಮಾಡುವ ನೀರಿಕ್ಷೆಗಳಿವೆ.


Click it and Unblock the Notifications








