ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸಿದ ಸಿಟ್ರನ್

ಯುರೋಪ್ ಮಾರುಕಟ್ಟೆಯ ಎರಡನೇ ಅತಿದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿರುವ ಪಿಎಸ್‌ಎ ಗ್ರೂಪ್‌ನ ಸಿಟ್ರನ್ ಬ್ರಾಂಡ್ ಭಾರತದಲ್ಲಿ ಹೊಸ ಕಾರು ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ್ದು, 2020ರ ಮಾರ್ಚ್ ಅಂತ್ಯಕ್ಕೆ ರಸ್ತೆಗಿಳಿಯಲಿರುವ ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸಿದೆ.

ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸಿದ ಸಿಟ್ರನ್

ಸಿ ಸೆಗ್ಮೆಂಟ್ ವಿಭಾಗದಲ್ಲಿನ ಎಸ್‌ಯುವಿ ಕಾರು ಮಾದರಿಗಳಲ್ಲೇ ವಿಶೇಷ ಸೌಲಭ್ಯಗಳೊಂದಿಗೆ ಅಭಿವೃದ್ದಿಗೊಂಡಿರುವ ಎ5 ಏರ್‌ಕ್ರಾಸ್ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ರೋಡ್ ಟೆಸ್ಟಿಂಗ್ ವೇಳೆ ಹೊಸ ಕಾರು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದೆ. ಹೊಸ ಕಾರು ಜೀಪ್ ಕಂಪಾಸ್, ಹ್ಯುಂಡೈ ಟಕ್ಸನ್ ಮತ್ತು ಸ್ಕೋಡಾ ಕರೋಕ್ ಎಸ್‌ಯುವಿಗಳಿಗೆ ಇದು ತ್ರೀವ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಬಿಡುಗಡೆಯ ನಂತರ ಆಯ್ದ 10 ಪ್ರಮುಖ ನಗರಗಳಲ್ಲಿ ಮಾತ್ರವೇ ಸಿ5 ಏರ್‌ಕ್ರಾಸ್ ಮಾರಾಟಗೊಳ್ಳಲಿದೆ.

ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸಿದ ಸಿಟ್ರನ್

ಭಾರತದಲ್ಲಿ ಸಿಕೆ ಬಿರ್ಲಾ ಗ್ರೂಪ್ ಜೊತೆಗೂಡಿ ಕಾರು ಉತ್ಪಾದನಾ ಮತ್ತು ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡಿರುವ ಪಿಎಸ್ಎ ಗ್ರೂಪ್ ಸಂಸ್ಥೆಯು ಗ್ರಾಹಕರನ್ನು ಆಕರ್ಷಿಸಲು ಮುಂದಾಗಿದ್ದು, ಮೊದಲ ಹಂತದಲ್ಲಿ ಬಿಡುಗಡೆಗೊಳ್ಳಲಿರುವ ನಗರಗಳಲ್ಲಿ ವಿಶೇಷ ಕಾರ್ಯಾಗಾರಗಳನ್ನು ನಡೆಸಲಿದೆ.

ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸಿದ ಸಿಟ್ರನ್

ಇದಕ್ಕಾಗಿ ಭರ್ಜರಿ ತಯಾರಿ ನಡೆಸುತ್ತಿರುವ ಸಿಟ್ರನ್ ಸಂಸ್ಥೆಯು ಸಿ5 ಏರ್‌ಕ್ರಾಸ್ ನಂತರ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದೆ.

ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸಿದ ಸಿಟ್ರನ್

ಯುರೋಪ್ ಮಾರುಕಟ್ಟೆಯಲ್ಲಿ ಪಿಎಸ್ಎ ಗ್ರೂಪ್ ಸಂಸ್ಥೆಯು ಸಿಟ್ರನ್, ಫ್ಯೂಜೊ ಮತ್ತು ಡಿಎಸ್ ಬ್ರಾಂಡ್ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಇದರಲ್ಲಿ ಸಿಟ್ರನ್ ನಿರ್ಮಾಣದ ಸಿ5 ಏರ್‌ಕ್ರಾಸ್ ಸದ್ಯ ಭಾರತದಲ್ಲಿ ಬಿಡುಗಡೆಯಾಗುತ್ತಿದೆ. ಮೂಲಗಳ ಪ್ರಕಾರ, ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಯಾದ ಕೆಲ ದಿನಗಳ ನಂತರ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆಯಾಗಲಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಕಾರುಗಳು ಮಹತ್ವದ ಬದಲಾಣೆಗಳೊಂದಿಗೆ ಅಭಿವೃದ್ದಿಗೊಂಡಿವೆ.

ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸಿದ ಸಿಟ್ರನ್

ಸಿ5 ಏರ್‌ಕ್ರಾಸ್ ಕಾರು ಮಾದರಿಯು ಬಿಎಸ್-6 ಪ್ರೇರಿತ 1.5-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯನ್ನು ಹೊಂದಿರಲಿದ್ದರೆ ಡೀಸೆಲ್ ಎಂಜಿನ್ ಮಾದರಿಯು 1.5-ಲೀಟರ್ ಜೊತೆಗೆ ಪರ್ಫಾಮೆನ್ಸ್ ಉದ್ದೇಶಕ್ಕಾಗಿ 2.0-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿರಲಿದೆ.

ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸಿದ ಸಿಟ್ರನ್

ಜೊತೆಗೆ ಹೊಸ ಕಾರುಗಳನ್ನು ಪರಿಚಯಿಸುವುದಕ್ಕೂ ಮುನ್ನ ದೇಶದ 80 ಪ್ರಮುಖ ನಗರಗಳಲ್ಲಿ 'ಎಕ್ಸ್‌ಪಿರೆನ್ಸ್ ಸ್ಟೋರ್'ಗಳನ್ನು ತೆರೆಯಲಿದ್ದು, ಈ ಮೂಲಕ ಗ್ರಾಹಕರನ್ನು ಹೊಸ ಕಾರ್ ಬ್ರಾಂಡ್‌ನತ್ತ ಸೆಳೆಯುವ ಮಾರುಕಟ್ಟೆ ತಂತ್ರಗಳನ್ನು ರೂಪಿಸುತ್ತಿದೆ.

ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸಿದ ಸಿಟ್ರನ್

ಇದಲ್ಲದೇ ಬೆಲೆಗಳಲ್ಲಿ ತುಸು ದುಬಾರಿ ಎನ್ನಿಸಲಿರುವ ಪಿಎಸ್ಎ ಗ್ರೂಪ್ ಕಾರುಗಳ ಬೆಲೆಯನ್ನು ತಗ್ಗಿಸುವ ಉದ್ದೇಶದಿಂದ ಚೆನ್ನೈನಲ್ಲಿ ಅಸೆಂಬ್ಲಿ ಯೂನಿಟ್ ಅನ್ನು ಸಹ ತೆರೆಯಲಾಗಿದ್ದು, ಸ್ಥಳೀಯವಾಗಿ ಲಭ್ಯವಾಗುವ ತಾಂತ್ರಿಕ ಬಿಡಿಭಾಗಗಳನ್ನು ಬಳಕೆ ಮಾಡಿಕೊಂಡು ಲಾಭಾಂಶ ಮತ್ತು ಕಾರಿನ ಬೆಲೆ ಇಳಿಕೆಗೆ ಸಹಕಾರಿಯಾಗುವಂತೆ ಯೋಜನೆ ಹಮ್ಮಿಕೊಂಡಿದೆ.

ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸಿದ ಸಿಟ್ರನ್

ಇದಲ್ಲದೇ ಇತ್ತೀಚೆಗೆ ಹೊಸ ಕಾರುಗಳನ್ನು ಸ್ವಂತಕ್ಕೆ ಖರೀದಿಸುವ ಬದಲು ನಿಗದಿತ ಅವಧಿಗಾಗಿ ಕಾರುಗಳನ್ನು ಲೀಸ್ ಪಡೆಯುವ ಸೌಲಭ್ಯವು ಹೆಚ್ಚು ಜನಪ್ರಿಯವಾಗುತ್ತಿದ್ದು, ಪಿಎಸ್ಎ ಗ್ರೂಪ್ ಕೂಡಾ ತನ್ನ ಸಿಟ್ರನ್ ಕಾರುಗಳಲ್ಲಿ ಲೀಸ್ ಆಯ್ಕೆಯನ್ನು ತೆರೆಯಲು ಉತ್ಸುಕವಾಗಿದೆ.

ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸಿದ ಸಿಟ್ರನ್

ಈ ಮೂಲಕ ವಿನೂತನ ವಿನ್ಯಾಸ ಮತ್ತು ವಿಶೇಷ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಸಿಟ್ರನ್ ಎಸ್‌ಯುವಿ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುವುವ ನೀರಿಕ್ಷೆಯಲ್ಲಿದ್ದು, ಸಿ5 ಏರ್‌ಕ್ರಾಸ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 14 ಲಕ್ಷದಿಂದ ರೂ.18 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸಿದ ಸಿಟ್ರನ್

ಇನ್ನು ಸಿಟ್ರನ್ ಸಂಸ್ಥೆಯು ಸದ್ಯ ಕಾರು ಉತ್ಪಾದನಾ ಘಟಕ ನಿರ್ಮಾಣ ಯೋಜನೆಯನ್ನು ಪೂರ್ಣಗೊಳಿಸಿದ್ದು, ಸಿಬ್ಬಂದಿ ನೇಮಕ, ಮಾರುಕಟ್ಟೆ ಅಧ್ಯಯನ ಮತ್ತು ಕಾರು ಮಾರಾಟಕ್ಕೆ ಅನುಕೂಲಕರ ಪ್ರದೇಶಗಳಲ್ಲಿ ಅಧಿಕೃತ ಮಾರಾಟ ಮಳಿಗೆಗಳ ಚಾಲನೆ ಮೇಲೆ ಹೆಚ್ಚು ಹೂಡಿಕೆ ಮಾಡುತ್ತಿದೆ.

Source: Businessline

More from DriveSpark

Article Published On: Saturday, December 21, 2019, 8:45 [IST]
English summary
According to a new report, PSA Group is planning to launch Citroen C5 Aircross in India by phased manner.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+