Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಬಿಡುಗಡೆಯಾಗಲಿರುವ ಸಿಟ್ರನ್ ಏರ್‍ಕ್ರಾಸ್ ಕಾರಿನ ಟೀಸರ್ ಇಲ್ಲಿದೆ ನೋಡಿ...
ಸಿಟ್ರನ್ ಸಂಸ್ಥೆಯು ಮೊನ್ನೆಯಷ್ಟೆ ತಮ್ಮ ಬಹುನೀರಿಕ್ಷಿತ ಸಿ5 ಏರೋಕ್ರಾಸ್ ಎಸ್‌ಯುವಿ ಮಾದರಿಯು ಭಾರತದಲ್ಲಿ ಅನಾವರಣಗೊಂಡಿದ್ದು, ಸಿ ಸೆಗ್ಮೆಂಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಸಿ5 ಏರೋಕ್ರಾಸ್ ಕಾರು ಮಾದರಿಯು ಹಲವು ವಿಶೇಷತೆಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸುತ್ತಿದೆ.

ಇದೀಗ ಸಿಟ್ರನ್ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ಮೊದಲನಯ ವಾನವನ್ನಾಗಿ ತಮ್ಮ ಏರ್‍ಕ್ರಾಸ್ ಎಸ್‍ಯುವಿ ಕಾರನ್ನು ಭಾರತೀಯರಿಗೆ ಮತ್ತು ಭಾರತದ ರಸ್ತೆಗಳಿಗೆ ಅನುಗುಣವಾಗಿ ತಯಾರು ಮಾಡಲಾಗಿದ್ದು, 2021ರೊಳಗೆ ಮಾರುಕಟ್ಟೆಯನ್ನು ಪ್ರವೇಶಿಸಲಿದ್ದೇವೆ ಎಂದು ಸಂಸ್ಥೆಯು ಬಿಡುಗಡೆ ಮಾಡಲಾಗಿರುವ ಹೊಸ ಟೀಸರ್‍ನಲ್ಲಿ ಹೇಳಿಕೊಂಡಿದ್ದಾರೆ.

ಇಷ್ಟೆ ಅಲ್ಲದೆಯೆ ಯುರೋಪ್ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸಿಟ್ರನ್ ಸಿ5 ಏರ್‍ಕ್ರಾಸ್ ಕಾರನ್ನು ಎನ್‍ಸಿಎಪಿಯಲ್ಲಿ ಕ್ರ್ಯಾಷ್ ಟೆಸ್ಟಿಂಗ್ ಅನ್ನು ನಡೆಸಲಾಗಿದ್ದು, ಇದರಲ್ಲಿ ಈ ಕಾರು ಗರಿಷ್ಠ ಮಟ್ಟದ ಅಂಕವನ್ನು ಪಡೆದುಕೊಂಡಿದೆ. ಕ್ರ್ಯಾಶ್ ಟೆಸ್ಟಿಂಗ್‍ನಲ್ಲಿ ಸಿಟ್ರನ್ ಸಿ5 ಏರ್‍ಕ್ರಾಸ್ ಕಾರು 5ಕ್ಕೆ 4 ಅಂಕಗಳನ್ನು ಪಡೆದುಕೊಂಡಿದ್ದು, ವಯಸ್ಕರ ಸುರಕ್ಷತೆಯಲ್ಲಿ 33.4 ಪಾಯಿಂಟ್‍ಗಳನ್ನು ಮತ್ತು ಮಕ್ಕಳ ಸುರಕ್ಷತೆಯ ಅನುಸಾರ 42.6 ಪಾಯಿಂಟ್ಸ್ ಅನ್ನು ಪಡೆದುಕೊಂಡಿದೆ.

ಪಿಎಸ್ಎ ಗ್ರೂಪ್ ನಿರ್ಮಾಣದ ಸಿಟ್ರನ್ ಎಸ್‌ಯುವಿ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುವುವ ನೀರಿಕ್ಷೆಯಲ್ಲಿದ್ದು, ಸಿ5 ಏರ್‍ಕ್ರಾಸ್ ಬಿಡುಗಡೆ ನಂತರ ಫ್ರೆಂಚ್ ಮಾರುಕಟ್ಟೆಯಲ್ಲಿರುವ ಮತ್ತಷ್ಟು ಜನಪ್ರಿಯ ಕಾರುಗಳನ್ನು ಭಾರತದಲ್ಲೂ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಇದಕ್ಕಾಗಿಯೇ ಮೊದಲ ಹಂತವಾಗಿ ಬ್ರಾಂಡ್ ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಭಾರತೀಯ ಗ್ರಾಹಕರನ್ನು ಸೆಳೆಯಲು ಸಿಟ್ರನ್ ಕಾರುಗಳನ್ನು ಆಮದು ಮಾಡಿಕೊಳ್ಳುತ್ತಿರುವ ಪಿಎಸ್ಎ ಗ್ರೂಪ್ ಸಂಸ್ಥೆಯು ಜಾಹೀರಾತು ಮತ್ತು ಆಸಕ್ತ ಗ್ರಾಹಕರಿಗಾಗಿ ಟೆಸ್ಟ್ ಡ್ರೈವ್‌ಗಳನ್ನು ಕಲ್ಪಿಸಿ ಹೊಸ ಬ್ರಾಂಡ್ ಪರಿಚಯಿಸುತ್ತಿದೆ.

ಮೂಲಗಳ ಪ್ರಕಾರ, ಪಿಎಸ್ಎ ಗ್ರೂಪ್‌ನ ಸಿಟ್ರನ್ ಸಿಟ್ರನ್ ಸಿ5 ಏರ್‍ಕ್ರಾಸ್ ಮತ್ತು ಸಿ84 ಎಸ್‌ಯುವಿ ಕಾರುಗಳನ್ನು ಮೊದಲ ಹಂತದಲ್ಲಿ ಬಿಡುಗಡೆಯಾಗಲಿದ್ದು, ಮಧ್ಯಮ ಗಾತ್ರದ ಐಷಾರಾಮಿ ಮಾದರಿಗಳಾದ ಜೀಪ್ ಕಂಪಾಸ್, ಹ್ಯುಂಡೈ ಟಕ್ಸನ್ ಮತ್ತು ಸ್ಕೋಡಾ ಕರೋಕ್ ಎಸ್‌ಯುವಿಗಳಿಗೆ ಇವು ತ್ರೀವ ಪೈಪೋಟಿ ನೀಡುವ ನೀರಿಕ್ಷೆಯಲ್ಲಿವೆ.
ಸದ್ಯ ಅನಾವರಣಗೊಳಿಸಲಾಗಿರುವ ಸಿ5 ಏರ್‍ಕ್ರಾಸ್ ಕಾರು ಮಾದರಿಯು 1.5-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯನ್ನು ಹೊಂದಿರಲಿದ್ದರೆ ಡೀಸೆಲ್ ಎಂಜಿನ್ ಮಾದರಿಯಲ್ಲಿ 1.5-ಲೀಟರ್ ಮತ್ತು ಪರ್ಫಾಮೆನ್ಸ್ ಉದ್ದೇಶಕ್ಕಾಗಿ 2.0-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿರಲಿದೆ.

ಜೊತೆಗೆ ಹೊಸ ಕಾರುಗಳನ್ನು ಪರಿಚಯಿಸುವುದಕ್ಕೂ ಮುನ್ನ ದೇಶದ 80 ಪ್ರಮುಖ ನಗರಗಳಲ್ಲಿ 'ಎಕ್ಸ್‌ಪಿರೆನ್ಸ್ ಸ್ಟೋರ್'ಗಳನ್ನು ತೆರೆಯಲಿದ್ದು, ಈ ಮೂಲಕ ಗ್ರಾಹಕರನ್ನು ಹೊಸ ಕಾರ್ ಬ್ರಾಂಡ್‌ನತ್ತ ಸೆಳೆಯುವ ಮಾರುಕಟ್ಟೆ ತಂತ್ರಗಳನ್ನು ಬಳಸುತ್ತಿದೆ.

ಇದಲ್ಲದೇ ಬೆಲೆಗಳಲ್ಲಿ ತುಸು ದುಬಾರಿ ಎನ್ನಿಸಲಿರುವ ಪಿಎಸ್ಎ ಗ್ರೂಪ್ ಕಾರುಗಳ ಬೆಲೆ ತಗ್ಗಿಸುವ ಉದ್ದೇಶದಿಂದ ಚೆನ್ನೈನಲ್ಲಿ ಅಸೆಂಬ್ಲಿ ಯೂನಿಟ್ ಅನ್ನು ಸಹ ತೆರೆಯಲಾಗಿದ್ದು, ಸ್ಥಳೀಯವಾಗಿ ಲಭ್ಯವಾಗುವ ಸುಮಾರು ಶೇ.90ರಷ್ಟು ತಾಂತ್ರಿಕ ಬಿಡಿಭಾಗಗಳನ್ನು ಬಳಕೆ ಮಾಡಿಕೊಂಡು ಲಾಭಾಂಶ ಮತ್ತು ಕಾರಿನ ಬೆಲೆ ಇಳಿಕೆಗೆ ಸಹಕಾರಿಯಾಗುವಂತೆ ಯೋಜನೆ ಹಮ್ಮಿಕೊಂಡಿದೆ.