ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಬಂಪರ್ ಆಫರ್ ನೀಡಿದ ಕೇಂದ್ರ ಸರ್ಕಾರ

2030ರ ವೇಳೆಗೆ ದೇಶದಲ್ಲಿ ಶೇ. 100ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆಗಿಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಹಲವು ಬೃಹತ್ ಯೋಜನೆಗಳನ್ನು ರೂಪಿಸುತ್ತಿದ್ದು, ಇದೀಗ ಎಲೆಕ್ಟ್ರಿಕ್ ವಾಹನಾ ಉತ್ಪಾದನಾ ಸಂಸ್ಥೆಗಳಿಗೆ ಮತ್ತು ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಕೆಲವು ವಿಶೇಷ ಸೌಲಭ್ಯಗಳನ್ನು ನೀಡುವ ಸುಳಿವು ನೀಡಿದೆ.

ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಬಂಪರ್ ಆಫರ್ ನೀಡಿದ ಕೇಂದ್ರ ಸರ್ಕಾರ

ಹೆಚ್ಚುತ್ತಿರುವ ಜಾಗತಿಕ ತಾಪಮಾನದಿಂದ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಉತ್ಪಾದನೆಗೆ ಬ್ರೇಕ್ ಹಾಕುವ ಉದ್ದೇಶದಿಂದ ಎಲ್ಲಾ ಆಟೋ ಉತ್ಪಾದಕರು ಸಹ ಇವಿ ವಾಹನಗಳತ್ತ ಮುಖಮಾಡಿದ್ದು, ಈ ಮಧ್ಯೆ ಎಲೆಕ್ಟ್ರಿಕ್ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದೆ. ಇದು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮತ್ತಷ್ಟು ಬಲ ತುಂಬುವುದಲ್ಲದೇ ಮಾರಾಟವನ್ನು ಸಹ ಉತ್ತೇಜಿಸಲು ಈ ಯೋಜನೆಯು ಭಾರೀ ಪ್ರಾಮುಖ್ಯತೆ ಪಡೆಯಲಿದೆ.

ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಬಂಪರ್ ಆಫರ್ ನೀಡಿದ ಕೇಂದ್ರ ಸರ್ಕಾರ

ಪರಿಸರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳ ಮಾರಾಟವನ್ನು ಹೆಚ್ಚಿಸುವ ಸಂಬಂಧ ಕೇಂದ್ರ ಸರ್ಕಾರವು ಈಗಾಗಲೇ ಕೆಲವು ವಿಶೇಷ ಸೌಲಭ್ಯಗಳನ್ನು ಘೋಷಣೆ ಮಾಡಿದ್ದು, ಇದೀಗ ಎಲೆಕ್ಟ್ರಿಕ್ ಕಾರುಗಳ ಖರೀದಿಸುವ ಗ್ರಾಹಕರಿಗೆ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಸಹ ತೀರ್ಮಾನಿಸಿದೆ.

ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಬಂಪರ್ ಆಫರ್ ನೀಡಿದ ಕೇಂದ್ರ ಸರ್ಕಾರ

ಅತಿ ಕಡಿಮೆ ಬಡ್ಡಿದರವಲ್ಲದೇ ಸಾಲ ಪಡೆಯುವಿಕೆಯ ಪ್ರಕ್ರಿಯೆಯನ್ನು ಸಹ ಸಡಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಹಣಕಾಸು ಇಲಾಖೆಗೆ ಮಹತ್ವದ ಸುತ್ತೋಲೆ ಹೊರಡಿಸಿರುವ ಪ್ರಧಾನಿ ಮಂತ್ರಿ ಕಾರ್ಯಾಲಯವು ಎಲೆಕ್ಟ್ರಿಕ್ ವಾಹನ ಹೆಚ್ಚಳಕ್ಕೆ ಪೂರಕವಾದ ಅಂಶಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ನಿರ್ದೆಶನ ಮಾಡಲಾಗಿದೆ.

ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಬಂಪರ್ ಆಫರ್ ನೀಡಿದ ಕೇಂದ್ರ ಸರ್ಕಾರ

ಸದ್ಯ ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಹಲವು ಅವಕಾಶಗಳಿದ್ದರೂ ಸಹ ಗ್ರಾಹಕರು ಮಾತ್ರ ಪೆಟ್ರೋಲ್ ಮತ್ತು ಡಿಸೇಲ್ ಕಾರುಗಳ ಮೇಲೆಯೇ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಗ್ರಾಹಕರನ್ನು ಸೆಳೆಯಲು ಕೇಂದ್ರ ಸರ್ಕಾರವು ಇಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ.

ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಬಂಪರ್ ಆಫರ್ ನೀಡಿದ ಕೇಂದ್ರ ಸರ್ಕಾರ

ಇನ್ನೊಂದು ಪ್ರಮುಖ ವಿಚಾರ ಅಂದ್ರೆ, 2020ರ ವೇಳೆಗೆ ಕನಿಷ್ಠ 25ರಷ್ಟು ಆದರೂ ಎಲೆಕ್ಟ್ರಿಕ್ ಕಾರು ಮತ್ತು ಬೈಕ್‌ಗಳು ಮಾರಾಟವಾಗುವಂತೆ ಮಾಡಬೇಕೆಂಬ ಕೇಂದ್ರದ ಯೋಜನೆಯು ಸದ್ಯದ ಪರಿಸ್ಥಿತಿಯಲ್ಲಿ ಅಸಾಧ್ಯ ಎನ್ನುವಂತಾಗಿದ್ದು, ತೀವ್ರಗತಿಯ ಬೆಳವಣಿಗೆ ಕೆಲವು ಜನಪರ ಯೋಜನೆಗಳನ್ನು ಘೋಷಣೆ ಮಾಡಲೇಬೇಕಾದ ಅವಶ್ಯಕತೆಯಿದೆ.

ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಬಂಪರ್ ಆಫರ್ ನೀಡಿದ ಕೇಂದ್ರ ಸರ್ಕಾರ

ಇನ್ನು ನೀತಿ ಆಯೋಗ ಶಿಫಾರಸ್ಸು ಅನ್ವಯ ಎಲೆಕ್ಟ್ರಿಕ್ ಕಾರುಗಳಿಗೆ ಗ್ರಿನ್ ನಂಬರ್ ಪ್ಲೆಟ್ ಜೊತೆಗೆ ಟೋಲ್ ಶುಲ್ಕದಲ್ಲಿ ವಿನಾಯ್ತಿ ಸೌಲಭ್ಯವನ್ನು ಒದಗಿಸುವ ಬಗ್ಗೆ ಚಿಂತನೆ ನಡೆಸಿರುವ ಕೇಂದ್ರ ಸರ್ಕಾರವು ಸದ್ಯದಲ್ಲೇ ತನ್ನ ನಿಲವು ವ್ಯಕ್ತಪಡಿಸಲಿದ್ದು, ಇದರ ಜೊತೆಗೆ ಮತ್ತಷ್ಟು ಹೊಸ ಆಫರ್‌ಗಳನ್ನು ನೀಡುವ ಬಗ್ಗೆ ಸುಳಿವು ನೀಡಿದೆ.

ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಬಂಪರ್ ಆಫರ್ ನೀಡಿದ ಕೇಂದ್ರ ಸರ್ಕಾರ

ಕೆಲವು ಬಲ್ಲ ಮೂಲಗಳ ಪ್ರಕಾರ, ಎಲೆಕ್ಟ್ರಿಕ್ ಕಾರು ಖರೀದಿಸುವ ಮಾಲೀಕರಿಗೆ 3 ವರ್ಷದ ತನಕ ದೇಶಾದ್ಯಂತ ಪಾರ್ಕಿಂಗ್ ಶುಲ್ಕದಲ್ಲಿ ವಿನಾಯ್ತಿ ಕೂಡಾ ನೀಡಲಿದ್ದು, ಎಲೆಕ್ಟ್ರಿಕ್ ಕಾರುಗಳ ಮುಖ್ಯ ತಾಂತ್ರಿಕ ಅಂಶವಾದ ಎಲೆಕ್ಟ್ರಿಕ್ ಬ್ಯಾಟರಿಗಳ ಮೇಲಿನ ಜಿಎಸ್‌ಟಿ ತೆರಿಗೆ ಪ್ರಮಾಣವನ್ನು ತಗ್ಗಿಸಿರುವುದು ಇವಿ ಕಾರುಗಳ ಮೇಲಿನ ಬೆಲೆ ಇಳಿಕೆಗೆ ಸಹಕಾರಿಯಾಗುವುದರ ಜೊತೆಗೆ ಮಾರಾಟಕ್ಕೂ ಅನುಕೂಲವಾಗುತ್ತಿದೆ.

More from DriveSpark

Article Published On: Wednesday, February 13, 2019, 15:49 [IST]
English summary
Electric Vehicles In India To Get Easier Loan Schemes — Government’s New Initiative To Promote EVs. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+