ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿಗೆ 10 ಸಾವಿರ ಕೋಟಿ ಕೊಟ್ಟ ಕೇಂದ್ರದಿಂದ ಮಹತ್ವದ ನಡೆ..!

ಹೆಚ್ಚುತ್ತಿರುವ ಮಾಲಿನ್ಯ ತಡೆಯಲು 2030ರ ವೇಳೆಗೆ ಶೇ.100ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆಗಿಳಿಸುವ ಸಂಬಂಧ ವಿಶ್ವಾದ್ಯಂತ ಎಲ್ಲಾ ರಾಷ್ಟ್ರಗಳು ಬೃಹತ್ ಯೋಜನೆಗಳನ್ನು ರೂಪಿಸುತ್ತಿದ್ದು, ಆಟೋ ಮೊಬೈಲ್ ಉತ್ಪಾದನಾ ಸಂಸ್ಥೆಗಳು ಸಹ ಇದಕ್ಕೆ ಪೂರಕವಾಗಿ ಅತಿ ಮೈಲೇಜ್ ಪ್ರೇರಿತ ಇವಿ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ.

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿಗೆ 10 ಸಾವಿರ ಕೋಟಿ ಕೊಟ್ಟ ಕೇಂದ್ರದಿಂದ ಮಹತ್ವದ ನಡೆ..!

ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಮೇಲಿನ ಅವಲಂಬನೆ ತಗ್ಗಿಸಿ ಎಲೆಕ್ಟ್ರಿಕ್ ಕಾರುಗಳತ್ತ ಗ್ರಾಹಕರನ್ನು ಸೆಳೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ಮಾಡಿದ್ದು, ಜೊತೆಗೆ ಭಾರತದಲ್ಲೇ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಗೊಳಿಸುವ ಕಾರು ಉತ್ಪಾದನಾ ಸಂಸ್ಥೆಗಳಿಗೂ ಭರ್ಜರಿ ಆಫರ್ ನೀಡುತ್ತಿದೆ. ಆದ್ರೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ವಿದೇಶಿ ಮಾರುಕಟ್ಟೆಯಿಂದ ಆಮದು ಮಾಡಿಕೊಂಡು ಭಾರತದಲ್ಲಿ ಮಾರಾಟ ಮಾಡುತ್ತಿದ್ದು, ಕೇಂದ್ರ ಸರ್ಕಾರವು ತನ್ನ ಹೊಸ ಯೋಜನೆಯ ಲಾಭ ಬೇಕಿದ್ದಲ್ಲಿ ಕೆಲವು ಮಹತ್ವದ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕೆಂಬ ನಿಯಮ ಜಾರಿ ಮಾಡಿದೆ.

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿಗೆ 10 ಸಾವಿರ ಕೋಟಿ ಕೊಟ್ಟ ಕೇಂದ್ರದಿಂದ ಮಹತ್ವದ ನಡೆ..!

ಎಲೆಕ್ಟ್ರಿಕ್ ಕಾರುಗಳಿಗೆ ಸಬ್ಸಡಿ ಸೇರಿದಂತೆ ಇವಿ ವಾಹನ ಉತ್ಪಾದನಾ ಸಂಸ್ಥೆಗಳನ್ನು ಉತ್ತೇಜಿಸಲು 2017ರಲ್ಲಿ ಫೇಮ್(ಫಾಸ್ಟರ್ ಅಡಾಪ್ಷನ್ ಆ್ಯಂಡ್ ಮ್ಯಾನುಫ್ಯಾಚ್ಚರಿಂಗ್ ಆಫ್ ಎಲೆಕ್ಟ್ರಿಕ್ ವೆಹಿಕಲ್) ಯೋಜನೆ ಆರಂಭಿಸಿದ್ದ ಕೇಂದ್ರ ಸರ್ಕಾರವು ರೂ.795 ಕೋಟಿ ಖರ್ಚು ಮಾಡಿತ್ತು. ಇದೀಗ ಎರಡನೇ ಹಂತದ ಅಭಿವೃದ್ದಿಗಾಗಿ ಬರೋಬ್ಬರಿ ರೂ.10 ಸಾವಿರ ಕೋಟಿ ಮೀಸಲು ಇರಿಸಿದ್ದು, ವಾಹನ ಉತ್ಪಾದನಾ ಸಂಸ್ಥೆಗಳಿಗೆ ಕೆಲವು ಖಡಕ್ ಸೂಚನೆಗಳನ್ನು ನೀಡಲಾಗಿದೆ.

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿಗೆ 10 ಸಾವಿರ ಕೋಟಿ ಕೊಟ್ಟ ಕೇಂದ್ರದಿಂದ ಮಹತ್ವದ ನಡೆ..!

ಈ ಹಿಂದೆ ಕೇಂದ್ರ ಸರ್ಕಾರದ ಯೋಜನೆಯಿಂದ ಭರ್ಜರಿ ಲಾಭ ಗಳಿಸಿದ್ದ ಕೆಲವು ಆಟೋ ಉತ್ಪಾದನಾ ಸಂಸ್ಥೆಗಳು ವಿದೇಶಿ ಮಾರುಕಟ್ಟೆಯಿಂದ ಆಮದು ಮಾಡಿಕೊಂಡು ಇಲ್ಲಿ ಮಾರಾಟ ಮಾಡಿ ಸಬ್ಸಡಿ ಪಡೆದುಕೊಳ್ಳುತ್ತಿದ್ದವು. ಆದ್ರೆ ಇದೀಗ ಇದಕ್ಕೆ ಬ್ರೇಕ್ ಹಾಕಿರುವ ಕೇಂದ್ರ ಸರ್ಕಾರವು ಹೊಸ ಎಲೆಕ್ಟ್ರಿಕ್ ಕಾರಿನ ಬಿಡಿಭಾಗಗಳು ಕಡ್ಡಾಯವಾಗಿ ಶೇ.50ರಷ್ಟು ದೇಶಿಯ ಮಾರುಕಟ್ಟೆಯಲ್ಲೇ ಅಭಿವೃದ್ಧಿ ಹೊಂದಿದ್ದರೇ ಮಾತ್ರ ಕೆಲವು ತೆರಿಗೆ ವಿನಾಯ್ತಿ ಮತ್ತು ಸಬ್ಸಡಿಗೆ ಅರ್ಹ ಎಂಬ ನಿಯಮ ರೂಪಿಸಿದೆ.

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿಗೆ 10 ಸಾವಿರ ಕೋಟಿ ಕೊಟ್ಟ ಕೇಂದ್ರದಿಂದ ಮಹತ್ವದ ನಡೆ..!

ಪರಿಸರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳ ಮಾರಾಟವನ್ನು ಹೆಚ್ಚಿಸುವ ಸಂಬಂಧ ಕೇಂದ್ರ ಸರ್ಕಾರವು ಈಗಾಗಲೇ ಕೆಲವು ವಿಶೇಷ ಸೌಲಭ್ಯಗಳನ್ನು ಘೋಷಣೆ ಮಾಡಿದ್ದು, ಎಲೆಕ್ಟ್ರಿಕ್ ಕಾರುಗಳ ಖರೀದಿಸುವ ಗ್ರಾಹಕರಿಗೆ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸುವುದಲ್ಲದೇ ಪ್ರತಿ ಎಲೆಕ್ಟ್ರಿಕ್ ಕಾರಿನ ಮೇಲೂ ರೂ.50 ಸಾವಿರ ತೆರಿಗೆ ವಿನಾಯ್ತಿ ನೀಡುವುದಾಗಿ ಅಧಿಕೃತ ಸುತ್ತೋಲೆ ಹೊರಡಿಸಿದೆ.

MOST READ: ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ- ಠಾಣೆಯಲ್ಲೇ ಅನಾಥವಾಗಿ ಬಿದ್ದ ರೂ. 3 ಕೋಟಿ ಕಾರು..!

ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿಗೆ 10 ಸಾವಿರ ಕೋಟಿ ಕೊಟ್ಟ ಕೇಂದ್ರದಿಂದ ಮಹತ್ವದ ನಡೆ..!

ಸದ್ಯ ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಹಲವು ಅವಕಾಶಗಳಿದ್ದರೂ ಸಹ ಗ್ರಾಹಕರು ಮಾತ್ರ ಪೆಟ್ರೋಲ್ ಮತ್ತು ಡಿಸೇಲ್ ಕಾರುಗಳ ಮೇಲೆಯೇ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಗ್ರಾಹಕರನ್ನು ಸೆಳೆಯಲು ಕೇಂದ್ರ ಸರ್ಕಾರವು ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ.

ಜೊತೆಗೆ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿದರೂ ಹೆಚ್ಚಿನ ಪ್ರಮಾಣದ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದರಿಂದ ಇವಿ ಕಾರುಗಳ ಖರೀದಿಗೆ ಗ್ರಾಹಕರು ಹಿಂದೇಟು ಹಾಕುತ್ತಿದ್ದು, ಕೇಂದ್ರ ಸರ್ಕಾರದ ಹೊಸ ಯೋಜನೆ ಅಡಿ ಪ್ರತಿ 25 ಕಿ.ಮಿ ಗೆ ಒಂದು ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್ ತೆರೆಯಲು ನಿರ್ಧರಿಸಲಾಗಿದೆ.

Most Read Articles

Kannada
English summary
Indian Government Tighten Localisation Norms Ahead Of FAME II Scheme Implementation. Read in Kannada.
Story first published: Saturday, March 9, 2019, 17:03 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X