ಎಲೆಕ್ಟ್ರಿಕ್ ಕಾರುಗಳಿಗಿಂತ ಚಾರ್ಜಿಂಗ್ ಸ್ಟೆಷನ್ ನಿರ್ಮಾಣಕ್ಕಾಗಿ ಹೆಚ್ಚಿದ ಬೇಡಿಕೆ..!
ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ವಾಹನಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದರೂ ಸಹ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆ ಎದ್ದು ಕಾಣುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರವು ಹೊಸ ಎಲೆಕ್ಟ್ರಿಕ್ ವಾಹನಗಳಿಗಿಂತ ಹೆಚ್ಚು ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲು ಮುಂದಾಗಿದೆ.

2030ರ ವೇಳೆಗೆ ದೇಶದಲ್ಲಿ ಶೇ. 100ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆಗಿಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಹಲವು ಬೃಹತ್ ಯೋಜನೆಗಳನ್ನು ರೂಪಿಸುತ್ತಿದ್ದು, ಇದೀಗ ಎಲೆಕ್ಟ್ರಿಕ್ ವಾಹನಾ ಉತ್ಪಾದನಾ ಸಂಸ್ಥೆಗಳಿಗೆ ಮತ್ತು ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಕೆಲವು ವಿಶೇಷ ಸೌಲಭ್ಯಗಳನ್ನು ನೀಡುವ ಸುಳಿವು ನೀಡಿರುವುದಲ್ಲದೇ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗುವ ಚಾರ್ಜಿಂಗ್ ಸ್ಟೆಷನ್‌ಗಳಿಗೂ ಮೂಲಭೂತ ಸೌಕರ್ಯ ಒದಗಿಸುವುದರ ಜೊತೆಗೆ ಗರಿಷ್ಠ ಪ್ರಮಾಣದ ಸಬ್ಸಡಿ ಘೋಷಣೆ ಮಾಡುತ್ತಿದೆ.

ಸದ್ಯ ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಹಲವು ಅವಕಾಶಗಳಿದ್ದರೂ ಸಹ ಗ್ರಾಹಕರು ಮಾತ್ರ ಪೆಟ್ರೋಲ್ ಮತ್ತು ಡಿಸೇಲ್ ಕಾರುಗಳ ಮೇಲೆಯೇ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಗ್ರಾಹಕರನ್ನು ಸೆಳೆಯಲು ಕೇಂದ್ರ ಸರ್ಕಾರವು ಇಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ.

ಜೊತೆಗೆ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿದರೂ ಹೆಚ್ಚಿನ ಪ್ರಮಾಣದ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದರಿಂದ ಗ್ರಾಹಕರು ಹಿಂದೇಟು ಹಾಕುತ್ತಿದ್ದು, ಕೇಂದ್ರ ಸರ್ಕಾರದ ಹೊಸ ಯೋಜನೆ ಅಡಿ ಪ್ರತಿ 25 ಕಿ.ಮಿ ಗೆ ಒಂದು ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್ ತೆರೆಯಲು ನಿರ್ಧರಿಸಲಾಗಿದೆ.

ಇನ್ನೊಂದು ಪ್ರಮುಖ ವಿಚಾರ ಅಂದ್ರೆ, 2020ರ ವೇಳೆಗೆ ಕನಿಷ್ಠ ಶೇ. 25ರಷ್ಟು ಆದರೂ ಎಲೆಕ್ಟ್ರಿಕ್ ಕಾರು ಮತ್ತು ಬೈಕ್‌ಗಳು ಮಾರಾಟವಾಗುವಂತೆ ಮಾಡಬೇಕೆಂಬ ಕೇಂದ್ರದ ಯೋಜನೆಯು ಸದ್ಯದ ಪರಿಸ್ಥಿತಿಯಲ್ಲಿ ಅಸಾಧ್ಯ ಎನ್ನುವಂತಾಗಿದ್ದು, ತೀವ್ರಗತಿಯ ಬೆಳವಣಿಗೆ ಕೆಲವು ಜನಪರ ಯೋಜನೆಗಳನ್ನು ಘೋಷಣೆ ಮಾಡಲೇಬೇಕಾದ ಅವಶ್ಯಕತೆಯಿದೆ.

ಪರಿಸರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳ ಮಾರಾಟವನ್ನು ಹೆಚ್ಚಿಸುವ ಸಂಬಂಧ ಕೇಂದ್ರ ಸರ್ಕಾರವು ಈಗಾಗಲೇ ಕೆಲವು ವಿಶೇಷ ಸೌಲಭ್ಯಗಳನ್ನು ಘೋಷಣೆ ಮಾಡಿದ್ದು, ಇದೀಗ ಎಲೆಕ್ಟ್ರಿಕ್ ಕಾರುಗಳ ಖರೀದಿಸುವ ಗ್ರಾಹಕರಿಗೆ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸುವುದಲ್ಲದೇ ಪ್ರತಿ ಎಲೆಕ್ಟ್ರಿಕ್ ಕಾರಿನ ಮೇಲೂ ರೂ.50 ಸಾವಿರ ತೆರಿಗೆ ವಿನಾಯ್ತಿ ನೀಡುವುದಾಗಿ ಅಧಿಕೃತ ಸುತ್ತೋಲೆ ಹೊರಡಿಸಿದೆ.
MOST READ: ಬೆಂಗಳೂರಿನಲ್ಲಿ ಸರಣಿ ಅಪಘಾತ- 7 ಕಾರು, ಒಂದು ಸ್ಕೂಟರ್ ಜಖಂ

ಇದಲ್ಲದೇ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಪಡೆಯುವಿಕೆಯ ಪ್ರಕ್ರಿಯೆಯನ್ನು ಸಹ ಸಡಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಹಣಕಾಸು ಇಲಾಖೆಗೆ ಮಹತ್ವದ ಸುತ್ತೋಲೆ ಹೊರಡಿಸಿರುವ ಪ್ರಧಾನಿ ಮಂತ್ರಿ ಕಾರ್ಯಾಲಯವು ಎಲೆಕ್ಟ್ರಿಕ್ ವಾಹನ ಹೆಚ್ಚಳಕ್ಕೆ ಪೂರಕವಾದ ಅಂಶಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ನಿರ್ದೆಶನ ಮಾಡಲಾಗಿದೆ.

ಇನ್ನು ನೀತಿ ಆಯೋಗ ಶಿಫಾರಸ್ಸು ಅನ್ವಯ ಎಲೆಕ್ಟ್ರಿಕ್ ಕಾರುಗಳಿಗೆ ಗ್ರಿನ್ ನಂಬರ್ ಪ್ಲೆಟ್ ಜೊತೆಗೆ ಟೋಲ್ ಶುಲ್ಕದಲ್ಲಿ ವಿನಾಯ್ತಿ ಸೌಲಭ್ಯವನ್ನು ಒದಗಿಸುವ ಬಗ್ಗೆ ಚಿಂತನೆ ನಡೆಸಿರುವ ಕೇಂದ್ರ ಸರ್ಕಾರವು ಸದ್ಯದಲ್ಲೇ ತನ್ನ ನಿಲವು ವ್ಯಕ್ತಪಡಿಸಲಿದ್ದು, ಇದರ ಜೊತೆಗೆ ಮತ್ತಷ್ಟು ಹೊಸ ಆಫರ್‌ಗಳನ್ನು ನೀಡುವ ಬಗ್ಗೆ ಸುಳಿವು ನೀಡಿದೆ.
MOST READ: ಬರೋಬ್ಬರಿ 400ಕಿ.ಮಿ ಮೈಲೇಜ್ ನೀಡುತಂತೆ ಮಹೀಂದ್ರಾ ಸಂಸ್ಥೆಯ ಈ ಎಲೆಕ್ಟ್ರಿಕ್ ಕಾರು..!

ಕೆಲವು ಬಲ್ಲ ಮೂಲಗಳ ಪ್ರಕಾರ, ಎಲೆಕ್ಟ್ರಿಕ್ ಕಾರು ಖರೀದಿಸುವ ಮಾಲೀಕರಿಗೆ 3 ವರ್ಷದ ತನಕ ದೇಶಾದ್ಯಂತ ಪಾರ್ಕಿಂಗ್ ಶುಲ್ಕದಲ್ಲಿ ವಿನಾಯ್ತಿ ಕೂಡಾ ನೀಡಲಿದ್ದು, ಎಲೆಕ್ಟ್ರಿಕ್ ಕಾರುಗಳ ಮುಖ್ಯ ತಾಂತ್ರಿಕ ಅಂಶವಾದ ಎಲೆಕ್ಟ್ರಿಕ್ ಬ್ಯಾಟರಿಗಳ ಮೇಲಿನ ಜಿಎಸ್‌ಟಿ ತೆರಿಗೆ ಪ್ರಮಾಣವನ್ನು ತಗ್ಗಿಸಿರುವುದು ಇವಿ ಕಾರುಗಳ ಮೇಲಿನ ಬೆಲೆ ಇಳಿಕೆಗೆ ಸಹಕಾರಿಯಾಗುವುದರ ಜೊತೆಗೆ ಮಾರಾಟಕ್ಕೂ ಅನುಕೂಲವಾಗುತ್ತಿದೆ.


Click it and Unblock the Notifications








