ಇವಿ ಚಾರ್ಜಿಂಗ್ ಸ್ಟೆಷನ್‌ಗಳಾಗಿ ಬದಲಾಗಲಿವೆ ಶೆಲ್ ಪೆಟ್ರೋಲ್ ಬಂಕ್‌ಗಳು..!

2020ರಿಂದ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಶೇ.30ರಷ್ಟು ಎಲೆಕ್ಟ್ರಿಕ್ ಕಾರುಗಳನ್ನು ಕಡ್ಡಾಯವಾಗಿ ಮಾರಾಟ ಮಾಡಲು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಕಾರು ಉತ್ಪಾದನಾ ಸಂಸ್ಥೆಗಳ ಹೊಸ ಯೋಜನೆಗಳಿಗೆ ಅನುಗುಣವಾಗಿ ಶೆಲ್ ಪೆಟ್ರೋಲಿಯಂ ಸಂಸ್ಥೆಯು ಸಹ ಬೇಡಿಕೆಗೆ ಅನುಗುಣವಾಗಿ ಇವಿ ಚಾರ್ಜಿಂಗ್ ಸ್ಟೆಷನ್‌ಗಳನ್ನು ತೆರಯುವ ಇರಾದೆಯಲ್ಲಿದೆ.

ಇವಿ ಚಾರ್ಜಿಂಗ್ ಸ್ಟೆಷನ್‌ಗಳಾಗಿ ಬದಲಾಗಲಿವೆ ಶೆಲ್ ಪೆಟ್ರೋಲ್ ಬಂಕ್‌ಗಳು..!

2030ರ ಹೊತ್ತಿಗೆ ಜಗತ್ತಿನಾದ್ಯಂತ ಶೇ.100ರಷ್ಟು ಎಲೆಕ್ಟ್ರಿಕ್ ಎಂಜಿನ್ ಪ್ರೇರಿತ ವಾಹನಗಳನ್ನು ರಸ್ತೆಗಿಳಿಸುವ ಉದ್ದೇಶದಿಂದ ಈಗಾಗಲೇ ಬೃಹತ್ ಯೋಜನೆಗಳೊಂದಿಗೆ ಹೊಸ ಬದಲಾವಣೆಗೆ ನಾಂದಿಹಾಡಿದ್ದು, ಭಾರತದಲ್ಲೂ ಕೂಡಾ ಈ ನಿಟ್ಟಿನಲ್ಲಿ ಪ್ರಮುಖ ವಾಹನ ಸಂಸ್ಥೆಗಳು ಎಲೆಕ್ಟ್ರಿಕ್ ವರ್ಷನ್‌ಗಳನ್ನು ಬಿಡುಗಡೆ ಮಾಡುತ್ತಿವೆ.

ಇವಿ ಚಾರ್ಜಿಂಗ್ ಸ್ಟೆಷನ್‌ಗಳಾಗಿ ಬದಲಾಗಲಿವೆ ಶೆಲ್ ಪೆಟ್ರೋಲ್ ಬಂಕ್‌ಗಳು..!

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಉತ್ತಮ ಬೇಡಿಕೆ ಇದ್ದರೂ ಸಹ ಸಾಕಷ್ಟು ಪ್ರಮಾಣದಲ್ಲಿ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆ ಹಿನ್ನೆಲೆ ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಹಿನ್ನಡೆಯಾಗುತ್ತಿದ್ದು, ಇದೇ ಉದ್ದೇಶದಿಂದ ಶೆಲ್ ಪೆಟ್ರೋಲಿಯಂ ಸಂಸ್ಥೆಯು ವಾಹನ ಉತ್ಪಾದನಾ ಸಂಸ್ಥೆಗಳ ಜೊತೆಗೂಡಿ ಹೊಸ ಪ್ಲ್ಯಾನ್ ಮಾಡುತ್ತಿದೆ.

ಇವಿ ಚಾರ್ಜಿಂಗ್ ಸ್ಟೆಷನ್‌ಗಳಾಗಿ ಬದಲಾಗಲಿವೆ ಶೆಲ್ ಪೆಟ್ರೋಲ್ ಬಂಕ್‌ಗಳು..!

ಸದ್ಯ ಕಾರ್ಯನಿರ್ವಹಣೆಯಲ್ಲಿರುವ ಪೆಟ್ರೋಲ್ ಬಂಕ್‌ಗಳನ್ನೇ ಕಾಲ ಕ್ರಮೇಣ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳನ್ನಾಗಿ ಪರಿವರ್ತನೆ ಮಾಡಲು ನಿರ್ಧರಿಸಲಾಗಿದ್ದು, ಮೊದಲ ಹಂತವಾಗಿ ನಗರ ಪ್ರದೇಶಗಳಲ್ಲಿ ಆಯಕಟ್ಟಿನಲ್ಲಿರುವ ಪೆಟ್ರೋಲ್ ಬಂಕ್‌ಗಳಲ್ಲಿ ಹೊಸ ಸೌಲಭ್ಯವನ್ನು ತೆರೆಯಲಿದೆ.

ಇವಿ ಚಾರ್ಜಿಂಗ್ ಸ್ಟೆಷನ್‌ಗಳಾಗಿ ಬದಲಾಗಲಿವೆ ಶೆಲ್ ಪೆಟ್ರೋಲ್ ಬಂಕ್‌ಗಳು..!

ಮಾಹಿತಿಗಳ ಪ್ರಕಾರ 2030ರ ವೇಳೆಗೆ ವಿಶ್ವಾದ್ಯಂತ 125 ಮಿಲಿಯನ್ ಎಲೆಕ್ಟ್ರಿಕ್ ಕಾರುಗಳು ರಸ್ತೆಗಿಳಿಯುವ ಸಾಧ್ಯತೆಗಳಿದ್ದು, ಇದಕ್ಕೆ ಪೂರಕವಾಗಿ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣ ಮತ್ತು ನಿರ್ವಹಣೆ ಒಂದು ದೊಡ್ಡ ಸವಾಲು ಎಂದ್ರೆ ತಪ್ಪಾಗಲಾರದು.

ಇವಿ ಚಾರ್ಜಿಂಗ್ ಸ್ಟೆಷನ್‌ಗಳಾಗಿ ಬದಲಾಗಲಿವೆ ಶೆಲ್ ಪೆಟ್ರೋಲ್ ಬಂಕ್‌ಗಳು..!

ಇದರಿಂದ ಬಹುತೇಕ ಪೆಟ್ರೋಲಿಯಂ ಮಾರಾಟ ಸಂಸ್ಥೆಗಳು ಸದ್ಯ ಕಾರ್ಯನಿರ್ವಹಣೆಯಲ್ಲಿರುವ ಬಂಕ್‌ಗಳನ್ನೇ ಇವಿ ಚಾರ್ಜಿಂಗ್ ಸ್ಟೆಷನ್‌ಗಳನ್ನಾಗಿ ಬದಲಾವಣೆ ಮಾಡುವ ಬಗ್ಗೆ ಯೋಜನೆ ರೂಪಿಸುತ್ತಿದ್ದು, 2020ರ ಅಂತ್ಯಕ್ಕೆ ಪ್ರತಿ ಪೆಟ್ರೋಲ್ ಬಂಕ್‌ಗಳಲ್ಲೂ ನಿರ್ದಿಷ್ಟ ಪ್ರಮಾಣದ ಚಾರ್ಜಿಂಗ್ ಸ್ಟೆಷನ್‌ಗಳು ಕಾರ್ಯನಿರ್ವಹಿಸಲಿವೆ.

ಇವಿ ಚಾರ್ಜಿಂಗ್ ಸ್ಟೆಷನ್‌ಗಳಾಗಿ ಬದಲಾಗಲಿವೆ ಶೆಲ್ ಪೆಟ್ರೋಲ್ ಬಂಕ್‌ಗಳು..!

ಶೆಲ್ ಪೆಟ್ರೋಲಿಯಂ ಸಂಸ್ಥೆಯು ಸಹ ಇದೇ ಕಾರಣಕ್ಕಾಗಿ ವೊಲ್ವೊ ಮತ್ತು ಫೋಕ್ಸ್‌ವ್ಯಾಗನ್ ಕಾರು ಉತ್ಪಾದನಾ ಸಂಸ್ಥೆಗಳ ಜೊತೆ ಸೇರಿ ಅಗತ್ಯಕ್ಕೆ ಅನುಸಾರವಾಗಿ ಇವಿ ಚಾರ್ಜಿಂಗ್ ಸ್ಟೆಷನ್‌ಗಳನ್ನು ಸಿದ್ದಗೊಳಿಸಲು ಯೋಜಿಸಿದ್ದು, ಯುರೋಪ್‌ನಲ್ಲಿ ಈಗಾಗಲೇ ಬಹುತೇಕ ಪೆಟ್ರೋಲ್ ಬಂಕ್‌ಗಳನ್ನು ಚಾರ್ಜಿಂಗ್ ಸ್ಟೆಷನ್‌ಗಳನ್ನಾಗಿ ಪರಿವರ್ತನೆ ಮಾಡಿದೆ.

ಇವಿ ಚಾರ್ಜಿಂಗ್ ಸ್ಟೆಷನ್‌ಗಳಾಗಿ ಬದಲಾಗಲಿವೆ ಶೆಲ್ ಪೆಟ್ರೋಲ್ ಬಂಕ್‌ಗಳು..!

ಜೊತೆಗೆ ವೊಲ್ವೊ ಮತ್ತು ಫೋಕ್ಸ್‌ವ್ಯಾಗನ್ ಎಲೆಕ್ಟ್ರಿಕ್ ಕಾರು ಮಾಲೀಕರಿಗೆ ಪ್ರತ್ಯೇಕ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳನ್ನು ಸಹ ಎಕ್ಸ್‌ಕ್ಲೂಸಿವ್ ಆಗಿ ತೆರಲಿರುವ ಸಂಬಂಧ ಹೊಸ ಒಪ್ಪಂದಕ್ಕೆ ಸಹಿ ಹಾಕಿರುವ ಶೆಲ್ ಸಂಸ್ಥೆಯು ಎಲೆಕ್ಟ್ರಿಕ್ ಕಾರು ಮಾರಾಟದಿಂದಲೂ ಲಾಭ ಗಳಿಕೆ ಮಾಡಲಿದೆ.

ಇವಿ ಚಾರ್ಜಿಂಗ್ ಸ್ಟೆಷನ್‌ಗಳಾಗಿ ಬದಲಾಗಲಿವೆ ಶೆಲ್ ಪೆಟ್ರೋಲ್ ಬಂಕ್‌ಗಳು..!

ಒಪ್ಪಂದದ ಪ್ರಕಾರ, ಇತರೆ ಎಲೆಕ್ಟ್ರಿಕ್ ಕಾರುಗಳಿಂತಲೂ ವೊಲ್ವೊ ಮತ್ತು ಫೋಕ್ಸ್‌ವ್ಯಾಗನ್ ಕಾರುಗಳಿಗೆ ಪ್ರತ್ಯೇಕವಾಗಿ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳನ್ನು ತೆರೆಯುವುದರಿಂದ ವೊಲ್ವೊ ಮತ್ತು ಫೋಕ್ಸ್‌ವ್ಯಾಗನ್ ಎಲೆಕ್ಟ್ರಿಕ್ ಕಾರುಗಳನ್ನೇ ಖರೀದಿಸಲು ಗ್ರಾಹಕರ ಕೂಡಾ ಹೆಚ್ಚಿನ ಮಟ್ಟದಲ್ಲಿ ಆಕರ್ಷಣೆ ಕಾರಣವಾಗಲಿದೆ ಎನ್ನುವುದು ಹೊಸ ಒಪ್ಪಂದದ ಲೆಕ್ಕಾಚಾರವಾಗಿದೆ.

MOST READ: ಟೊಯೊಟಾ ಇನೋವಾ ಜನಪ್ರಿಯತೆಗೆ ಇದಕ್ಕಿಂತ ಮತ್ತೊಂದು ಸಾಕ್ಷಿ ಬೇಕಾ?

ಇವಿ ಚಾರ್ಜಿಂಗ್ ಸ್ಟೆಷನ್‌ಗಳಾಗಿ ಬದಲಾಗಲಿವೆ ಶೆಲ್ ಪೆಟ್ರೋಲ್ ಬಂಕ್‌ಗಳು..!

ಇನ್ನು 2019ರ ಚುನಾವಣಾ ಹೊತ್ತಿನಲ್ಲೇ ಕೇಂದ್ರದ ಮಧ್ಯಂತರ ಬಜೆಟ್ ಮಂಡನೆಯಾಗಿರುವುದರಿಂದ ಜನತೆಯ ನೀರಿಕ್ಷೆಗೆ ತಕ್ಕಂತೆ ಹಲವು ಜನಪರ ಯೋಜನೆಗಳನ್ನು ಘೋಷಣೆ ಮಾಡಲಾಗಿದ್ದು, ಮಾಲಿನ್ಯವನ್ನು ತಡೆಗಟ್ಟು ಸಂಬಂಧ ಎಲೆಕ್ಟ್ರಿಕ್ ಕಾರುಗಳ ನಿರ್ಮಾಣ ಮತ್ತು ಮಾರಾಟಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಇವಿ ಚಾರ್ಜಿಂಗ್ ಸ್ಟೆಷನ್‌ಗಳಾಗಿ ಬದಲಾಗಲಿವೆ ಶೆಲ್ ಪೆಟ್ರೋಲ್ ಬಂಕ್‌ಗಳು..!

ಇದರಲ್ಲಿ ಪ್ರಮುಖವಾಗಿ ಎಲೆಕ್ಟ್ರಿಕ್ ಕಾರುಗಳ ಮುಖ್ಯ ತಾಂತ್ರಿಕ ಅಂಶವಾದ ಬ್ಯಾಟರಿ ಆಮದು ಮೇಲಿನ ಸುಂಕಗಳನ್ನು ಕಡಿತ ಮಾಡಿರುವುದಲ್ಲದೇ ಎಲೆಕ್ಟ್ರಿಕ್ ಕಾರು ಖರೀದಿಸಿರುವ ಗ್ರಾಹಕರಿಗೆ ಹೆಚ್ಚು ಅನುಕೂಲಕರವಾಗುವಂತಹ ಕೆಲವು ಜನಪರ ಯೋಜನೆಗಳನ್ನು ಸಿದ್ದಪಡಿಸಿಲಾಗಿದೆ.

MOST READ: ನ್ಯಾನೋ ಬರುವುದಕ್ಕೂ ಮುನ್ನ ಬಂದು ಹೋದ 'ಮೀರಾ' ಕಾರಿನ ಕಥೆ ಗೊತ್ತಾ?

ಇವಿ ಚಾರ್ಜಿಂಗ್ ಸ್ಟೆಷನ್‌ಗಳಾಗಿ ಬದಲಾಗಲಿವೆ ಶೆಲ್ ಪೆಟ್ರೋಲ್ ಬಂಕ್‌ಗಳು..!

ನೀತಿ ಆಯೋಗ ಶಿಫಾರಸ್ಸು ಅನ್ವಯ ಎಲೆಕ್ಟ್ರಿಕ್ ಕಾರುಗಳಿಗೆ ಗ್ರಿನ್ ನಂಬರ್ ಪ್ಲೆಟ್ ಜೊತೆಗೆ ಟೋಲ್ ಶುಲ್ಕದಲ್ಲಿ ವಿನಾಯ್ತಿ ಸೌಲಭ್ಯವನ್ನು ಒದಗಿಸುವ ಬಗ್ಗೆ ಚಿಂತನೆ ನಡೆಸಿರುವ ಕೇಂದ್ರ ಸರ್ಕಾರವು ಸದ್ಯದಲ್ಲೇ ತನ್ನ ನಿಲವು ವ್ಯಕ್ತಪಡಿಸಲಿದ್ದು, ಇದರ ಜೊತೆಗೆ ಮತ್ತಷ್ಟು ಹೊಸ ಆಫರ್‌ಗಳನ್ನು ನೀಡುವ ಬಗ್ಗೆ ಸುಳಿವು ನೀಡಿದೆ.

ಇವಿ ಚಾರ್ಜಿಂಗ್ ಸ್ಟೆಷನ್‌ಗಳಾಗಿ ಬದಲಾಗಲಿವೆ ಶೆಲ್ ಪೆಟ್ರೋಲ್ ಬಂಕ್‌ಗಳು..!

ಕೆಲವು ಬಲ್ಲ ಮೂಲಗಳ ಪ್ರಕಾರ, ಎಲೆಕ್ಟ್ರಿಕ್ ಕಾರು ಖರೀದಿಸುವ ಮಾಲೀಕರಿಗೆ 3 ವರ್ಷದ ತನಕ ದೇಶಾದ್ಯಂತ ಪಾರ್ಕಿಂಗ್ ಶುಲ್ಕದಲ್ಲಿ ವಿನಾಯ್ತಿ ಕೂಡಾ ನೀಡಲಿದ್ದು, ಎಲೆಕ್ಟ್ರಿಕ್ ಕಾರುಗಳ ಮುಖ್ಯ ತಾಂತ್ರಿಕ ಅಂಶವಾದ ಎಲೆಕ್ಟ್ರಿಕ್ ಬ್ಯಾಟರಿಗಳ ಮೇಲಿನ ಜಿಎಸ್‌ಟಿ ತೆರಿಗೆ ಪ್ರಮಾಣವನ್ನು ತಗ್ಗಿಸಿರುವುದು ಇವಿ ಕಾರುಗಳ ಮೇಲಿನ ಬೆಲೆ ಇಳಿಕೆಗೆ ಸಹಕಾರಿಯಾಗುವುದರ ಜೊತೆಗೆ ಮಾರಾಟಕ್ಕೂ ಅನುಕೂಲವಾಗುತ್ತಿದೆ.

Most Read Articles

Kannada
English summary
Shell Petroleum To Move Towards EV Charging Space — Open To Partner With Car Brands. Read in Kannada.
Story first published: Monday, February 4, 2019, 13:07 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more