ಆಟೋ ಉತ್ಪಾದನಾ ಸಂಸ್ಥೆಗಳಿಗೆ ಬಿಸಿತುಪ್ಪವಾದ ಎಲೆಕ್ಟ್ರಿಕ್ ವಾಹನಗಳ ಮಾರಾಟ..!

ವಿಶ್ವಾದ್ಯಂತ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ವಾಹನ ಮಾರಾಟವನ್ನು ತಗ್ಗಿಸಿ ಎಲೆಕ್ಟ್ರಿಕ್ ವಾಹನಗಳತ್ತ ಹೆಚ್ಚು ಗಮನಹರಿಸಲಾಗುತ್ತಿದ್ದು, ಭಾರತದಲ್ಲೂ ಈ ಕುರಿತಂತೆ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ. ಆದ್ರೆ ಮಹತ್ವದ ಯೋಜನೆ ಬಗೆಗೆ ಇರಬೇಕಾದ ದೂರದೃಷ್ಠಿ ಕೊರತೆಯಿಂದಾಗಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಕೆಲವು ವಾಹನ ಉತ್ಪಾದನಾ ಸಂಸ್ಥೆಗಳಿಗೆ ಆರ್ಥಿಕವಾಗಿ ಹೊರೆಯಾಗಿ ಪರಿಣಮಿಸಿದೆ.

ಆಟೋ ಉತ್ಪಾದನಾ ಸಂಸ್ಥೆಗಳಿಗೆ ಬಿಸಿತುಪ್ಪವಾದ ಎಲೆಕ್ಟ್ರಿಕ್ ವಾಹನಗಳ ಮಾರಾಟ..!

ಭಾರತದಲ್ಲಿ ಈಗಾಗಲೇ ಹಲವು ಆಟೋ ಉತ್ಪಾದನಾ ಸಂಸ್ಥೆಗಳು ತಮ್ಮ ಬಹನೀರಿಕ್ಷಿತ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ಧಿಗೊಳಿಸುತ್ತಿದ್ದು, ಇನ್ನು ಕೆಲವು ವಾಹನ ಉತ್ಪಾದನಾ ಸಂಸ್ಥೆಗಳು ಈಗಾಗಲೇ ತಮ್ಮ ಎಲೆಕ್ಟ್ರಿಕ್ ವಾಹನಗಳ ಮಾದರಿಗಳನ್ನು ಮಾರಾಟ ಮಾಡುತ್ತಿವೆ. ಹೀಗಿರುವಾಗ ಭವಿಷ್ಯದಲ್ಲಿ ಹೆಚ್ಚು ಸದ್ದು ಮಾಡಲಿರುವ ಎಲೆಕ್ಟ್ರಿಕ್ ವಾಹನಗಳಿಗೆ ಭರ್ಜರಿ ಬೇಡಿಕೆ ನೀರಿಕ್ಷೆಯಲ್ಲಿದ್ದ ವಾಹನ ಉತ್ಪಾದನಾ ಸಂಸ್ಥೆಗಳು ಭಾರೀ ಹಿನ್ನಡೆ ಅನುಭವಿಸುತ್ತಿವೆ.

ಆಟೋ ಉತ್ಪಾದನಾ ಸಂಸ್ಥೆಗಳಿಗೆ ಬಿಸಿತುಪ್ಪವಾದ ಎಲೆಕ್ಟ್ರಿಕ್ ವಾಹನಗಳ ಮಾರಾಟ..!

ಹೌದು, ಎಲೆಕ್ಟ್ರಿಕ್ ವಾಹನ ಮಾರಾಟಕ್ಕಾಗಿ ದೇಶದ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ತುದಿಗಾಲ ಮೇಲೆ ನಿಂತಿದ್ದು, ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾದ ವಾತಾವರಣ ಇಲ್ಲದಿರುವುದು ಮಹತ್ವದ ಯೋಜನೆಯು ಹಿನ್ನಡೆ ಅನುಭವಿಸುವಂತಾಗಿದೆ. ಇದಕ್ಕೆ ಕಾರಣ, ಸಾಕಷ್ಟು ಸಂಖ್ಯೆಯಲ್ಲಿ ಚಾರ್ಜಿಂಗ್ ಸ್ಟೆಷನ್ ಇಲ್ಲದಿರುವುದು ಮತ್ತು ಎಲೆಕ್ಟ್ರಿಕ್ ವಾಹನಗಳು ದುಬಾರಿಯಾಗಿರುವುದು ಪ್ರಮುಖ ಕಾರಣವಾಗಿದೆ.

ಆಟೋ ಉತ್ಪಾದನಾ ಸಂಸ್ಥೆಗಳಿಗೆ ಬಿಸಿತುಪ್ಪವಾದ ಎಲೆಕ್ಟ್ರಿಕ್ ವಾಹನಗಳ ಮಾರಾಟ..!

ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಈಗಾಗಲೇ ಕೇಂದ್ರ ಸರ್ಕಾರವು ಸಬ್ಸಡಿ ಯೋಜನೆಯನ್ನು ಘೋಷಣೆ ಮಾಡಿದ್ದರೂ ಸಹ ಅಗತ್ಯ ಪ್ರಮಾಣದ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದು ಎಲೆಕ್ಟ್ರಿಕ್ ವಾಹನಗಳ ಮಾರಾಟ ಮೇಲೆ ಪರಿಣಾಮ ಬೀರಿದ್ದು, 2019ರ ಅವಧಿಯಲ್ಲಿ ಶೇ.20 ಎಲೆಕ್ಟ್ರಿಕ್ ವಾಹನಗಳು ಮಾರಾಟವು ನೆಲಕಚ್ಚಿದೆ.

ಆಟೋ ಉತ್ಪಾದನಾ ಸಂಸ್ಥೆಗಳಿಗೆ ಬಿಸಿತುಪ್ಪವಾದ ಎಲೆಕ್ಟ್ರಿಕ್ ವಾಹನಗಳ ಮಾರಾಟ..!

ಕಳೆದ ವರ್ಷ ಸಬ್ಸಡಿ ಇಲ್ಲದ್ದಿದರೂ ಸಹ ಖರೀದಿಯಾಗಿದ್ದ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಗಿಂತಲೂ ಈ ಬಾರಿ ಸಬ್ಸಡಿ ಲಭ್ಯಿವಿದ್ದರೂ ಕೂಡಾ ಶೇ. 40ರಷ್ಟು ಬೇಡಿಕೆ ಕುಸಿದ್ದು, ಭವಿಷ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳು ಇರುವುದಿಲ್ಲ ಎನ್ನುವ ಕಲ್ಪನೆ ಇದ್ದರೂ ಸಹ ಗ್ರಾಹಕರು ಮಾತ್ರ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಪ್ರೇರಿತ ವಾಹನಗಳನ್ನೇ ಹೆಚ್ಚಿನ ಪ್ರಮಾಣದಲ್ಲಿ ಖರೀದಿ ಮಾಡುತ್ತಿರುವುದು ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಇದರ ಪರಿಣಾಮವಾಗಿ ಕಳೆದ ಒಂದೂವರೆ ವರ್ಷಗಳ ವರ್ಷದಲ್ಲಿ ಶೇ.20ರಷ್ಟು ಎಲೆಕ್ಟ್ರಿಕ್ ವಾಹನಗಳ ಡೀಲರ್ಸ್‌ಗಳನ್ನು ಬಂದ್ ಮಾಡಲಾಗಿದ್ದು, ಪರಿಸ್ಥಿತಿ ಹೀಗೆ ಮುಂದುವರಿದಲ್ಲಿ 2030ರ ವೇಳೆಗೆ ಶೇ.100ರಷ್ಟು ಎಲೆಕ್ಟ್ರಿಕ್ ವಾಹನಗಳ ರಸ್ತೆಗಿಳಿಸಬೇಕು ಎನ್ನುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಗೆ ಹಿನ್ನಡೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಆಟೋ ಉತ್ಪಾದನಾ ಸಂಸ್ಥೆಗಳಿಗೆ ಬಿಸಿತುಪ್ಪವಾದ ಎಲೆಕ್ಟ್ರಿಕ್ ವಾಹನಗಳ ಮಾರಾಟ..!

ಹೀಗಾಗಿ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಹೆಚ್ಚಿಸಲು ಅಗತ್ಯ ಕ್ರಮಕೈಗೊಳ್ಳಬೇಕಿರುವ ಕೇಂದ್ರ ಸರ್ಕಾರವು ಹೊಸ ನೀತಿ ರೂಪಿಸುವುದಕ್ಕೂ ಮುನ್ನ ವಾಹನ ಸವಾರರಿಗೆ ಅನುಕೂಲಕರವಾಗುವಂತೆ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳನ್ನು ಮತ್ತು ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಗರಿಷ್ಠ ಪ್ರಮಾಣದ ಸಬ್ಸಡಿ ಯೋಜನೆಗಳನ್ನು ಜಾರಿಗೊಳಿಸುವಂತೆ ಆಟೋ ಸಂಸ್ಥೆಗಳು ಒತ್ತಾಯಿಸುತ್ತಿವೆ.

ಆಟೋ ಉತ್ಪಾದನಾ ಸಂಸ್ಥೆಗಳಿಗೆ ಬಿಸಿತುಪ್ಪವಾದ ಎಲೆಕ್ಟ್ರಿಕ್ ವಾಹನಗಳ ಮಾರಾಟ..!

ಇದಲ್ಲದೇ ಪೆಟ್ರೋಲ್ ಮತ್ತು ಡೀಸೆಲ್ ವಾಹನ ನೋಂದಣಿ ಮೇಲೆ ಅಧಿಕ ಪ್ರಮಾಣದ ಶುಲ್ಕಗಳ ಜೊತೆಗೆ ಎಲೆಕ್ಟ್ರಿಕ್ ವಾಹನಗಳ ನೋಂದಣಿಗೆ ವಿನಾಯ್ತಿ ನೀಡಿದ್ದಲ್ಲಿ ಮಾತ್ರವೇ ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕೆ ಸಾಧ್ಯವಾಗಲಿದ್ದು, ಇದರ ಹೊರತಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವನ್ನು ತಗ್ಗಿಸಲು ಸಾಧ್ಯವಿಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಆಟೋ ಉತ್ಪಾದನಾ ಸಂಸ್ಥೆಗಳಿಗೆ ಬಿಸಿತುಪ್ಪವಾದ ಎಲೆಕ್ಟ್ರಿಕ್ ವಾಹನಗಳ ಮಾರಾಟ..!

ಇನ್ನು ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿಗಾಗಿ ಸಬ್ಸಡಿ ಮತ್ತು ಕೆಲವು ವಿಶೇಷ ಸಾಲಸೌಲಭ್ಯಗಳನ್ನು ನೀಡಿದೆಯಾದರೂ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಂದ ಎಲೆಕ್ಟ್ರಿಕ್ ವಾಹನಗಳತ್ತ ಗ್ರಾಹಕರು ಆಕರ್ಷಣೆಯಾಗುವಂತೆ ಕೆಲವು ಕಠಿಣ ನಿಯಮಗಳನ್ನು ರೂಪಿಸುವುದು ಸದ್ಯದ ಪರಿಸ್ಥಿತಿಯಲ್ಲಿ ಅವಶ್ಯಕವಾಗಿದೆ.

ಆಟೋ ಉತ್ಪಾದನಾ ಸಂಸ್ಥೆಗಳಿಗೆ ಬಿಸಿತುಪ್ಪವಾದ ಎಲೆಕ್ಟ್ರಿಕ್ ವಾಹನಗಳ ಮಾರಾಟ..!

ಹಾಗೆಯೇ ನಗರದ ಪ್ರಮುಖ ಜನದಟ್ಟಣೆ ಪ್ರದೇಶಗಳಲ್ಲಿ ಬೇಡಿಕೆ ಅನುಸಾರವಾಗಿ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣವು ಸರ್ಕಾರದಿಂದಲೇ ಆಗಬೇಕಿದ್ದು, ತದನಂತರವಷ್ಟೇ ಎಲೆಕ್ಟ್ರಿಕ್ ವಾಹನಗಳ ಮಾರಾಟಕ್ಕೆ ಉತ್ತೇಜನ ನೀಡಿದ್ದಲ್ಲಿ ಮಾತ್ರವೇ ಹೆಚ್ಚಿನ ಮಟ್ಟದ ಗ್ರಾಹಕರನ್ನು ಸೆಳೆಯಲು ಸಾಧ್ಯವಿದೆ.

ಆಟೋ ಉತ್ಪಾದನಾ ಸಂಸ್ಥೆಗಳಿಗೆ ಬಿಸಿತುಪ್ಪವಾದ ಎಲೆಕ್ಟ್ರಿಕ್ ವಾಹನಗಳ ಮಾರಾಟ..!

ಮತ್ತೊಂದು ಪ್ರಮುಖ ವಿಚಾರ ಏನೆಂದರೆ, ಭಾರತವು ಎಲೆಕ್ಟ್ರಿಕ್ ವಾಹನಗಳ ಮಾರಾಟಕ್ಕೆ ಉತ್ತಮ ಮಾರಾಕಟ್ಟೆಯಾಗಿದ್ದರೂ ಸಹ ಸ್ಥಳೀಯವಾಗಿ ಎಲೆಕ್ಟ್ರಿಕ್ ನಿರ್ಮಾಣ ಘಟಕಗಳು ಇಲ್ಲದಿರುವುದು ಸದ್ಯ ಇವಿ ವಾಹನಗಳ ಬೆಲೆ ತುಸು ದುಬಾರಿ ಎನ್ನಿಸುತ್ತಿದೆ. ಚೀನಿ ಮತ್ತು ತೈವಾನ್ ಮಾರುಕಟ್ಟೆಯಿಂದಲೇ ಪೂರ್ಣ ಪ್ರಮಾಣದ ಲೀಥಿಯಂ ಬ್ಯಾಟರಿಗಳನ್ನು ಆಮದು ಮಾಡಿಕೊಳ್ಳಬೇಕಿದ್ದು, ಇದು ಸಹಜವಾಗಿಯೇ ಗ್ರಾಹಕರಿಗೆ ಹೊರೆಯಾಗಲಿದೆ.

ಆಟೋ ಉತ್ಪಾದನಾ ಸಂಸ್ಥೆಗಳಿಗೆ ಬಿಸಿತುಪ್ಪವಾದ ಎಲೆಕ್ಟ್ರಿಕ್ ವಾಹನಗಳ ಮಾರಾಟ..!

ಈ ನಿಟ್ಟಿನಲ್ಲಿ ಮಾರುತಿ ಸುಜುಕಿ ಮತ್ತು ಟೊಯೊಟಾ ಸೇರಿದಂತೆ ಹಲವು ಖಾಸಗಿ ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಸ್ಥಳೀಯವಾಗಿ ಗುಣಮಟ್ಟದ ಬ್ಯಾಟರಿ ಉತ್ಪಾದನೆಗಾಗಿ ಈಗಾಗಲೇ ಚಾಲನೆ ನೀಡಿದ್ದು, ಹೊಸ ಯೋಜನೆಯ ಫಲಕ್ಕಾಗಿ ಮುಂದಿನ ಕೆಲವು ದಿನಗಳ ಕಾಲ ಕಾಯಲೇಬೇಕು. ಅದರ ಹೊರತಾಗಿ ಎಲೆಕ್ಟ್ರಿಕ್ ವಾಹನಗಳ ಮಾರಾಟಕ್ಕೆ ಪೂರಕವಾದ ವಾತಾವರಣವನ್ನು ಒದಗಿಸುವ ಕೆಲಸವು ಕೇಂದ್ರ ಸರ್ಕಾರದ ಮೇಲಿದೆ.

Article Published On: Thursday, July 4, 2019, 14:11 [IST]
English summary
EV Dealers Shutting Down Due To Low Sales. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+