ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಫಾಸ್ಟ್‌ಟ್ಯಾಗ್ ಬಗ್ಗೆ ನಿಮಗೆಷ್ಟು ಗೊತ್ತು?

ನೀವು ಕಾರುಗಳನ್ನು ಬಳಸುತ್ತಿದ್ದರೆ, ಫಾಸ್ಟ್‌ಟ್ಯಾಗ್ ಎಂದರೇನು ಎಂಬ ಪ್ರಶ್ನೆಯು ನಿಮ್ಮ ಮನಸ್ಸಿಗೆ ಬಂದಿರಬಹುದು. ಸರ್ಕಾರವು ಫಾಸ್ಟ್‌ಟ್ಯಾಗ್ ಅನ್ನು ಏಕೆ ಹಾಗೂ ಹೇಗೆ ಜಾರಿಗೆ ತರಲಿದೆ ಎಂಬ ಪ್ರಶ್ನೆಗಳು ಏಳುವುದು ಸಹಜ.

ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಫಾಸ್ಟ್‌ಟ್ಯಾಗ್ ಬಗ್ಗೆ ನಿಮಗೆಷ್ಟು ಗೊತ್ತು?

ಈ ಲೇಖನದಲ್ಲಿ ಫಾಸ್ಟ್‌ಟ್ಯಾಗ್ ಹಾಗೂ ಅದಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀಡಲಿದ್ದೇವೆ. ಫಾಸ್ಟ್‌ಟ್ಯಾಗ್ ರೀಚಾರ್ಜ್, ಬ್ಯಾಲೆನ್ಸ್ ಚೆಕ್, ಕಸ್ಟಮರ್ ಕೇರ್ ನಂಬರ್ ಎಲ್ಲವನ್ನೂ ಈ ಲೇಖನದಲ್ಲಿ ನೋಡೋಣ.

ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಫಾಸ್ಟ್‌ಟ್ಯಾಗ್ ಬಗ್ಗೆ ನಿಮಗೆಷ್ಟು ಗೊತ್ತು?

ಫಾಸ್ಟ್‌ಟ್ಯಾಗ್ ಎಂದರೇನು?

ಭಾರತದ ಟೋಲ್‍ಗಳಲ್ಲಿ ಉಂಟಾಗುವ ಟ್ರಾಫಿಕ್ ಜಾಮ್ ಕಡಿಮೆ ಮಾಡಲು ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಫಾಸ್ಟ್‌ಟ್ಯಾಗ್ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯಾಗಿದ್ದು, ಟೋಲ್ ಪ್ಲಾಜಾ ಮೂಲಕ ಹಾದುಹೋಗುವ ವಾಹನಗಳ ಟೋಲ್ ಆಟೋಮ್ಯಾಟಿಕ್ ಆಗಿ ಕಡಿತಗೊಳ್ಳುತ್ತದೆ.

ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಫಾಸ್ಟ್‌ಟ್ಯಾಗ್ ಬಗ್ಗೆ ನಿಮಗೆಷ್ಟು ಗೊತ್ತು?

ಈ ವ್ಯವಸ್ಥೆಯನ್ನು ಭಾರತದಲ್ಲಿ ಮೊದಲ ಬಾರಿಗೆ 2014ರಲ್ಲಿ ಪರಿಚಯಿಸಲಾಯಿತು. ಇದನ್ನು ಭಾರತದೆಲ್ಲೆಡೆ ಜಾರಿಗೆ ತರಲಾಗುತ್ತಿದ್ದು, ಡಿಸೆಂಬರ್ 1ರಿಂದ ಕಡ್ಡಾಯಗೊಳಿಸಲಾಗಿದೆ. ಈ ಸೌಲಭ್ಯ ಹೊಂದಿರುವ ವಾಹನಗಳು ಯಾವುದೇ ಟೋಲ್ ಪ್ಲಾಜಾ ಮೂಲಕ ಹಾದುಹೋಗುವಾಗ ಗಂಟೆಗಟ್ಟಲೇ ಟೋಲ್‍‍ಗಳಲ್ಲಿ ನಿಲ್ಲುವ ಅಗತ್ಯವಿಲ್ಲ.

ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಫಾಸ್ಟ್‌ಟ್ಯಾಗ್ ಬಗ್ಗೆ ನಿಮಗೆಷ್ಟು ಗೊತ್ತು?

ಫಾಸ್ಟ್‌ಟ್ಯಾಗ್‍‍ಗಳನ್ನು ಎಲ್ಲಿ ಖರೀದಿಸಬೇಕು?

ಇದಕ್ಕಾಗಿ ನೀವು ಎಲ್ಲಿಯೂ ಹೋಗಬೇಕಾಗಿಲ್ಲ. ಮನೆಯಲ್ಲಿ ಕುಳಿತೇ ಫಾಸ್ಟ್‌ಟ್ಯಾಗ್ ಅನ್ನು ಖರೀದಿಸಬಹುದು. ದೇಶದಲ್ಲಿರುವ ಅನೇಕ ಬ್ಯಾಂಕುಗಳು ಆನ್‌ಲೈನ್‌ನಲ್ಲಿ ಫಾಸ್ಟ್‌ಟ್ಯಾಗ್‍ ಖರೀದಿಸುವ ಸೌಲಭ್ಯವನ್ನು ಒದಗಿಸುತ್ತಿವೆ.

ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಫಾಸ್ಟ್‌ಟ್ಯಾಗ್ ಬಗ್ಗೆ ನಿಮಗೆಷ್ಟು ಗೊತ್ತು?

ಐಸಿಐಸಿಐ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಐಡಿಎಫ್‌ಸಿ, ಎಸ್‌ಬಿಐ, ಹೆಚ್‌ಡಿಎಫ್‌ಸಿ, ಸಿಂಡಿಕೇಟ್, ಪೇಟಿಎಂ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕ್‌ಗಳಲ್ಲಿ ಫಾಸ್ಟ್‌ಟ್ಯಾಗ್‍‍‍ಗೆ ಅರ್ಜಿ ಸಲ್ಲಿಸಬಹುದು. ನಂತರ ಫಾಸ್ಟ್‌ಟ್ಯಾಗ್‍ ಅನ್ನು ನೇರವಾಗಿ ನಿಮ್ಮ ಮನೆಗೆ ತಲುಪಿಸಲಾಗುತ್ತದೆ.

ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಫಾಸ್ಟ್‌ಟ್ಯಾಗ್ ಬಗ್ಗೆ ನಿಮಗೆಷ್ಟು ಗೊತ್ತು?

ಇದರೊಂದಿಗೆ, ಫಾಸ್ಟ್‌ಟ್ಯಾಗ್‍ ಅನ್ನು ಟೋಲ್ ಪ್ಲಾಜಾ ಅಥವಾ ಅಧಿಕೃತ ಏಜೆನ್ಸಿ ಮೂಲಕವೂ ಖರೀದಿಸಬಹುದು. ಗ್ರಾಹಕರು ಆನ್‌ಲೈನ್ ಫಾರಂ ಅನ್ನು ಡೌನ್‌ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕಾಗುತ್ತದೆ.

ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಫಾಸ್ಟ್‌ಟ್ಯಾಗ್ ಬಗ್ಗೆ ನಿಮಗೆಷ್ಟು ಗೊತ್ತು?

ಫಾಸ್ಟ್‌ಟ್ಯಾಗ್‍‍ಗಳನ್ನು ಎಲ್ಲಿ ಬಳಸಬೇಕು?

ರಾಷ್ಟ್ರೀಯ ಹೆದ್ದಾರಿ ಹಾಗೂ ಹಲವಾರು ರಾಜ್ಯ ಹೆದ್ದಾರಿಗಳು ಸೇರಿದಂತೆ ದೇಶಾದ್ಯಂತವಿರುವ 500ಕ್ಕೂ ಹೆಚ್ಚು ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್‌ಟ್ಯಾಗ್‍‍‍ಗಳನ್ನು ಬಳಸಬಹುದು. ಡಿಸೆಂಬರ್ 1ರಿಂದ ಬಸ್, ಟ್ರಕ್, ಟ್ರಾಕ್ಟರ್ ಹಾಗೂ ಇತರ ಕಮರ್ಶಿಯಲ್ ವಾಹನಗಳು ಸೇರಿದಂತೆ ಎಲ್ಲಾ ನಾಲ್ಕು ಚಕ್ರಗಳಿಗೆ ಫಾಸ್ಟ್‌ಟ್ಯಾಗ್‍ ಅನ್ನು ಕಡ್ಡಾಯಗೊಳಿಸಲಾಗುವುದು.

ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಫಾಸ್ಟ್‌ಟ್ಯಾಗ್ ಬಗ್ಗೆ ನಿಮಗೆಷ್ಟು ಗೊತ್ತು?

ಫಾಸ್ಟ್‌ಟ್ಯಾಗ್‍‍‍ಗಳನ್ನು ರೀಚಾರ್ಜ್ ಮಾಡುವುದು ಹೇಗೆ?

ಚೆಕ್, ಆನ್‌ಲೈನ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ನೆಫ್ಟ್, ಆರ್‌ಟಿಜಿಎಸ್ ಹಾಗೂ ನೆಟ್ ಬ್ಯಾಂಕಿಂಗ್ ಮೂಲಕ ಫಾಸ್ಟ್‌ಟ್ಯಾಗ್‍‍‍ಗಳನ್ನು ರೀಚಾರ್ಜ್ ಮಾಡಬಹುದು.

ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಫಾಸ್ಟ್‌ಟ್ಯಾಗ್ ಬಗ್ಗೆ ನಿಮಗೆಷ್ಟು ಗೊತ್ತು?

ಗ್ರಾಹಕರು ರೂ.100ನಿಂದ ರೂ.1 ಲಕ್ಷದವರೆಗೆ ರೀಚಾರ್ಜ್ ಮಾಡಬಹುದು. ಗ್ರಾಹಕರು ಸುಲಭವಾಗಿ ರೀಚಾರ್ಜ್ ಮಾಡಲು ಬೇರೆ ಬೇರೆ ಏಜೆನ್ಸಿಗಳು ಬೇರೆ ಬೇರೆ ವಿಧಾನಗಳನ್ನು ಹಾಗೂ ಆಯ್ಕೆಗಳನ್ನು ನೀಡಲಾಗಿದೆ. ಅವುಗಳನ್ನು ಅನುಸರಿಸುವ ಮೂಲಕ ಫಾಸ್ಟ್‌ಟ್ಯಾಗ್‍‍‍ಗಳನ್ನು ರೀಚಾರ್ಜ್ ಮಾಡಬಹುದು.

ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಫಾಸ್ಟ್‌ಟ್ಯಾಗ್ ಬಗ್ಗೆ ನಿಮಗೆಷ್ಟು ಗೊತ್ತು?

ಫಾಸ್ಟ್‌ಟ್ಯಾಗ್‍ ಬ್ಯಾಲೆನ್ಸ್ ಚೆಕ್ ಮಾಡುವುದು ಹೇಗೆ?

ಫಾಸ್ಟ್‌ಟ್ಯಾಗ್‍ ಬ್ಯಾಲೆನ್ಸ್ ಪರಿಶೀಲಿಸಲು, ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಇದರೊಂದಿಗೆ, ಪ್ರತಿ ಟೋಲ್ ವಹಿವಾಟಿನ ನಂತರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‍ಎಂ‍ಎಸ್ ಸಂದೇಶ ವನ್ನು ಕಳುಹಿಸಲಾಗುತ್ತದೆ.

ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಫಾಸ್ಟ್‌ಟ್ಯಾಗ್ ಬಗ್ಗೆ ನಿಮಗೆಷ್ಟು ಗೊತ್ತು?

ಫಾಸ್ಟ್‌ಟ್ಯಾಗ್‍‍‍ನಿಂದಾಗುವ ಪ್ರಯೋಜನಗಳು

ಹೆದ್ದಾರಿಯಲ್ಲಿ ಚಾಲನೆ ಮಾಡುವಾಗ ಫಾಸ್ಟ್‌ಟ್ಯಾಗ್‍‍‍ನಿಂದ ಹಲವಾರು ಪ್ರಯೋಜನಗಳಾಗುತ್ತವೆ. ಅವುಗಳೆಂದರೆ

ಸುಲಭ ಪಾವತಿ - ಟೋಲ್ ಪ್ಲಾಜಾವನ್ನು ದಾಟುವಾಗ ನೀವು ಹಣವನ್ನು ಇಟ್ಟುಕೊಳ್ಳುವ ಅಗತ್ಯವಿಲ್ಲ.

ಫಾಸ್ಟ್‌ಟ್ಯಾಗ್‍ ವಾಹನಗಳಲ್ಲಿದ್ದರೆ ವಾಹನಗಳನ್ನು ನಿಲ್ಲಿಸುವ ಅಗತ್ಯವಿಲ್ಲ.

ಆನ್‌ಲೈನ್ ರೀಚಾರ್ಜ್ - ಡೆಬಿಟ್ / ಕ್ರೆಡಿಟ್ ಮತ್ತು ನೆಟ್ ಬ್ಯಾಂಕಿಂಗ್ ಬಳಸಿ ಫಾಸ್ಟ್‌ಟ್ಯಾಗ್‍ ಗ್ರಾಹಕರು ರೀಚಾರ್ಜ್ ಮಾಡಬಹುದು.

ಎಲ್ಲಾ ಟೋಲ್ ವಹಿವಾಟುಗಳಿಗೆ ಎಸ್‍ಎಂಎಸ್ ಸಂದೇಶ ಬರಲಿದೆ.

ಟೋಲ್ ಪಾವತಿಯ ಮೇಲೆ ಗ್ರಾಹಕರು 10%ನಷ್ಟು ರಿಯಾಯಿತಿ ಪಡೆಯಲಿದ್ದಾರೆ.

ವೆಬ್ ಪೋರ್ಟಲ್ ಸೌಲಭ್ಯವು ವಿಶೇಷವಾಗಿ ಫಾಸ್ಟ್‌ಟ್ಯಾಗ್‍‍‍ಗಳಿವೆ ಲಭ್ಯವಿರಲಿದೆ.

ಫಾಸ್ಟ್‌ಟ್ಯಾಗ್‍‍‍ನಿಂದಾಗಿ ಟೋಲ್‌ನಲ್ಲಿ ದಟ್ಟಣೆ ಕಡಿಮೆಯಾಗಲಿದೆ.

ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಫಾಸ್ಟ್‌ಟ್ಯಾಗ್ ಬಗ್ಗೆ ನಿಮಗೆಷ್ಟು ಗೊತ್ತು?

ಫಾಸ್ಟ್‌ಟ್ಯಾಗ್‍ ಕಸ್ಟಮರ್ ಕೇರ್ ನಂಬರ್ ಹಾಗೂ ಹೆಲ್ಪ್ ಲೈನ್ ನಂಬರ್

ಈಗಾಗಲೇ ಹೇಳಿದಂತೆ, ಫಾಸ್ಟ್‌ಟ್ಯಾಗ್‍‍‍ಗಳನ್ನು ಹಲವು ಬ್ಯಾಂಕುಗಳ ಮೂಲಕ ಖರೀದಿಸಬಹುದು. ಫಾಸ್ಟ್‌ಟ್ಯಾಗ್‍ ಸಂಬಂಧಿತ ಸಮಸ್ಯೆಗಳಿಗಾಗಿ ಈ ಕೆಳಗಿನ ಟೋಲ್ ಫ್ರೀ ಸಂಖ್ಯೆಗಳನ್ನು ಸಂಪರ್ಕಿಸಬಹುದು :

1. ಐಸಿಐಸಿಐ ಬ್ಯಾಂಕ್: 1860 210 1014

2. ಎಚ್‌ಡಿಎಫ್‌ಸಿ ಬ್ಯಾಂಕ್: 1800 120 1243

3. ಆಕ್ಸಿಸ್ ಬ್ಯಾಂಕ್: 1800 103 5577

4. ಎಸ್‌ಬಿಐ ಬ್ಯಾಂಕ್: 1800 110 018

5. ಸಿಂಡಿಕೇಟ್ ಬ್ಯಾಂಕ್: 1800 425 0585

ಇತರ ಬ್ಯಾಂಕುಗಳ ಟೋಲ್ ಫ್ರೀ ಸಂಖ್ಯೆಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ಪಡೆಯಿರಿ.

ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಫಾಸ್ಟ್‌ಟ್ಯಾಗ್ ಬಗ್ಗೆ ನಿಮಗೆಷ್ಟು ಗೊತ್ತು?

ಡ್ರೈವ್‍‍ಸ್ಪಾರ್ಕ್ ಅಭಿಪ್ರಾಯ

ಡಿಸೆಂಬರ್ 1ರಿಂದ ಭಾರತದಲ್ಲಿ ಫಾಸ್ಟ್‌ಟ್ಯಾಗ್‍‍‍ಗಳನ್ನು ಕಡ್ಡಾಯಗೊಳಿಸಲಾಗಿದೆ. ಎಲ್ಲಾ ವಾಹನ ತಯಾರಕ ಕಂಪನಿಗಳು ವಾಹನ ಮಾರಾಟದ ಸಮಯದಲ್ಲಿ ಫಾಸ್ಟ್‌ಟ್ಯಾಗ್‍ ಐಡಿಯನ್ನು ವಾಹನದಲ್ಲಿ ಅಳವಡಿಸುವುದನ್ನು ಸರ್ಕಾರವು ಕಡ್ಡಾಯಗೊಳಿಸಿದೆ.

ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಫಾಸ್ಟ್‌ಟ್ಯಾಗ್ ಬಗ್ಗೆ ನಿಮಗೆಷ್ಟು ಗೊತ್ತು?

ಹೊಸ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‍ಗಳನ್ನು ಈಗಾಗಲೇ ಅಳವಡಿಸಲಾಗಿದೆ. ಗ್ರಾಹಕರು ಇದಕ್ಕಾಗಿ ರೂ.500 ಹೆಚ್ಚುವರಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ಫಾಸ್ಟ್‌ಟ್ಯಾಗ್‍‍‍ಗಳು ದೇಶದ್ಯಾಂತ ಲಭ್ಯವಿರುವ 500 ಕ್ಕೂ ಹೆಚ್ಚು ಟೋಲ್ ಪ್ಲಾಜಾಗಳಿಗೆ ಅನ್ವಯಿಸಲಿದೆ.

Most Read Articles

Kannada
English summary
Fastag benefits how to get use recharge check balance customer care number and more - Read in Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X