ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರಕ್ಕೆ ಭರ್ಜರಿ ಆದಾಯ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳಿಗೆ ಯಾವುದೇ ನಿಲುಗಡೆ ಇಲ್ಲದಂತೆ ಶುಲ್ಕು ಪಾವತಿಗೆ ಅನುಕೂಲಕರವಾದ ಫಾಸ್ಟ್‌ಟ್ಯಾಗ್ ಸೌಲಭ್ಯವನ್ನು ಪರಿಚಯಿಸಿರುವ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಭಾರೀ ಪ್ರಮಾಣದ ಆದಾಯ ಸಂಗ್ರಹಿಸಿದೆ.

ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರಕ್ಕೆ ಭರ್ಜರಿ ಆದಾಯ

ಟೋಲ್ ಸಂಗ್ರಹಕ್ಕಾಗಿ ಫಾಸ್ಟ್‌ಟ್ಯಾಗ್ ಸೌಲಭ್ಯವನ್ನು ಕಡ್ಡಾಯವಾಗಿ ಜಾರಿಗೆ ತರಲು ದಿನಾಂಕ ಘೋಷಣೆ ಮಾಡಿದರೂ ಸಹ ಹೊಸ ನಿಯಮವನ್ನು ಕಡ್ಡಾಯವನ್ನು ತಾತ್ಕಾಲಿಕವಾಗಿ ಮುಂದೂಡುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಕಳೆದ ಒಂದು ತಿಂಗಳ ಅವಧಿಯಲ್ಲಿ ಗರಿಷ್ಠ ಪ್ರಮಾಣದ ಫಾಸ್ಟ್‌ಟ್ಯಾಗ್‌ಗಳನ್ನು ವಿತರಣೆ ಮಾಡಿದ್ದು, ಟೋಲ್ ಸರಾಸರಿ ಸಂಗ್ರಹದಲ್ಲೂ ಭಾರೀ ಬದಲಾವಣೆಯನ್ನು ಕಂಡುಕೊಂಡಿದೆ.

ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರಕ್ಕೆ ಭರ್ಜರಿ ಆದಾಯ

ಸದ್ಯ ಫಾಸ್ಟ್‌ಟ್ಯಾಗ್ ಸೌಲಭ್ಯವನ್ನು ಕಡ್ಡಾಯವಾಗಿ ಅಳವಡಿಕೆಗೆ ಮತ್ತೊಂದು ಅವಕಾಶ ನೀಡಿರುವ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು 2020ರ ಜನವರಿ 15ರಿಂದ ಹೊಸ ಸೌಲಭ್ಯವನ್ನು ಕಡ್ಡಾಯಗೊಳಿಸುವುದಾಗಿ ಘೋಷಿಸಿದ್ದು, ಫಾಸ್ಟ್‌ಟ್ಯಾಗ್ ಇಲ್ಲದ ವಾಹನ ಸವಾರದಿಂದ ದುಪ್ಪಟ್ಟು ಶುಲ್ಕು ವಸೂಲಿ ಮಾಡಲು ಮುಂದಾಗಿದೆ.

ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರಕ್ಕೆ ಭರ್ಜರಿ ಆದಾಯ

ಹೀಗಾಗಿ ಮುಂದಿನ ಒಂದು ತಿಂಗಳ ಅವಧಿಯಲ್ಲಿ ಫಾಸ್ಟ್‌ಟ್ಯಾಗ್ ಸೌಲಭ್ಯವನ್ನು ಕಡ್ಡಾಯವಾಗಿ ಜಾರಿ ಸಿದ್ದತೆ ನಡೆಸಿದ್ದು, ಹೊಸ ಶುಲ್ಕ ಪಾವತಿ ಸೌಲಭ್ಯ ವಿತರಣೆಯಲ್ಲಿ ದಾಖಲೆ ಪ್ರಮಾಣದ ಏರಿಕೆ ಕಂಡುಬಂದಿದೆ. ಕಳೆದ 15 ದಿನಗಳಲ್ಲಿ ಬರೋಬ್ಬರಿ 1 ಲಕ್ಷ ವಾಹನ ಮಾಲೀಕರು ಫಾಸ್ಟ್‌ಟ್ಯಾಗ್ ಸೌಲಭ್ಯವನ್ನು ಅಳವಡಿಕೆಮಾಡಿಕೊಂಡಿದ್ದು, ಡೆಡ್‌ಲೈನ್ ಹತ್ತಿರವಾಗುತ್ತಿದ್ದಂತೆ ಪ್ರತಿ ದಿನ ದೇಶಾದ್ಯಂತ ಒಂದೂವರೆಯಿಂದ ಎರಡು ಲಕ್ಷದಷ್ಟು ವಾಹನ ಮಾಲೀಕರು ಫಾಸ್ಟ್‌ಟ್ಯಾಗ್ ಖರೀದಿಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರಕ್ಕೆ ಭರ್ಜರಿ ಆದಾಯ

ಕಾಯುವಿಕೆ ಅವಧಿಯಲ್ಲಿ ಇಳಿಕೆ, ಆದಾಯದಲ್ಲಿ ಹೆಚ್ಚಳ

ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ದೇಶಾದ್ಯಂತ ಕಾರ್ಯನಿರ್ವಹಣೆಯಲ್ಲಿರುವ 530 ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆಯು ಗಣನೀಯವಾಗಿ ಇಳಿಕೆಯಾಗಿದ್ದು, ಟೋಲ್ ಶುಲ್ಕ ಪಾವತಿಯಲ್ಲಿ ಆಗುತ್ತಿದ್ದ ವಿಳಂಬವು ಹೊಸ ಸೌಲಭ್ಯದಿಂದಾಗಿ ಇಳಿಮುಖವಾಗಿದೆ.

ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರಕ್ಕೆ ಭರ್ಜರಿ ಆದಾಯ

ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದ ಆದಾಯದಲ್ಲಿ ಭಾರೀ ಪ್ರಮಾಣದ ಏರಿಕೆಯಾಗಿದ್ದು, ಕಳೆದ 15 ದಿನಗಳಲ್ಲಿ ಸಂಗ್ರಹವಾದ ಟೋಲ್ ಮೊತ್ತದಲ್ಲಿ ಪ್ರತಿದಿನ ಸರಾಸರಿಯಾಗಿ ರೂ.12 ಕೋಟಿ ಹೆಚ್ಚುವರಿ ಆದಾಯಗಳಿಸುತ್ತಿದೆ.

ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರಕ್ಕೆ ಭರ್ಜರಿ ಆದಾಯ

ಫಾಸ್ಟ್‌ಟ್ಯಾಗ್ ಅಳವಡಿಕೆಗೂ ಮುನ್ನ ಪ್ರತಿದಿನ ರೂ.68 ಕೋಟಿ ಸರಾಸರಿ ಆದಾಯ ಗಳಿಸುತ್ತಿದ್ದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರವು ಇದೀಗ ಪ್ರತಿದಿನ ರೂ.80 ಕೋಟಿಯಷ್ಟು ಆದಾಯ ಗಳಿಕೆ ಮಾಡುತ್ತಿರುವುದಾಗಿ ಅಧಿಕೃತ ಹೇಳಿಕೆ ನೀಡಿದೆ.

ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರಕ್ಕೆ ಭರ್ಜರಿ ಆದಾಯ

ಫಾಸ್ಟ್‌ಟ್ಯಾಗ್ ಪರಿಚಯಿಸುವುದಕ್ಕೂ ಮುನ್ನ ವಾಹನ ಸವಾರರು ಟೋಲ್ ಪ್ಲಾಜಾಗಳಲ್ಲಿ ಶುಲ್ಕ ಪಾವತಿಗಾಗಿ ಸರಾಸರಿಯಾಗಿ 12 ನಿಮಿಷ ಕಾಯಬೇಕಿತ್ತು. ಇದೀಗ ಅದು ಸರಾಸರಿ 10.04 ನಿಮಿಷಕ್ಕೆ ಇಳಿಕೆಯಾಗಿದ್ದು, ಪೂರ್ಣಪ್ರಮಾಣದಲ್ಲಿ ಹೊಸ ಸೌಲಭ್ಯ ಜಾರಿ ಬಂದಲ್ಲಿ ಪರಿಸ್ಥಿತಿ ಮತ್ತಷ್ಟು ಸುಧಾರಣೆಯಾಗಲಿದೆ ಎನ್ನಲಾಗಿದೆ.

MOST READ: ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರಕ್ಕೆ ಭರ್ಜರಿ ಆದಾಯ

ಇನ್ನು ಫಾಸ್ಟ್‌ಟ್ಯಾಗ್ ಸೌಲಭ್ಯವನ್ನು ಬಳಕೆ ಮಾಡುವುದರಿಂದ ವಾಹನ ಮಾಲೀಕರು ಟೋಲ್ ಗೇಟ್‌ಗಳಲ್ಲಿ ಗಂಟೆಗಟ್ಟಲೇ ಕ್ಯೂ ನಿಂತು ಶುಲ್ಕ ಪಾವತಿ ಮಾಡುವ ತಾಪತ್ರಯ ಕಡಿಮೆಯಾಗುವುದಲ್ಲದೇ ಇದರಿಂದ ಹಲವು ಪ್ರಯೋಜನಗಳಿದ್ದು, ಅತಿ ಸುಲಭವಾಗಿ ಫಾಸ್ಟ್‌ಟ್ಯಾಗ್ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

MOST READ: ವಾಹನ ಡೀಲರ್‍‍ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರಕ್ಕೆ ಭರ್ಜರಿ ಆದಾಯ

ಫಾಸ್ಟ್‌ಟ್ಯಾಗ್ ಎಂದರೇನು?

ಫಾಸ್ಟ್‌ಟ್ಯಾಗ್ ಸೌಲಭ್ಯವು ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯಾಗಿದ್ದು, ಟೋಲ್ ಪ್ಲಾಜಾ ಮೂಲಕ ಹಾದುಹೋಗುವ ವಾಹನಗಳ ಟೋಲ್ ಆಟೋಮ್ಯಾಟಿಕ್ ಆಗಿ ಕಡಿತಗೊಳ್ಳುತ್ತದೆ.

MOST READ: ಬಿಡುಗಡೆಗೂ ಮುನ್ನವೇ ಹೊಸ ಸಂಚಲನಕ್ಕೆ ಕಾರಣವಾದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್

ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರಕ್ಕೆ ಭರ್ಜರಿ ಆದಾಯ

ಈ ವ್ಯವಸ್ಥೆಯನ್ನು ಭಾರತದಲ್ಲಿ ಮೊದಲ ಬಾರಿಗೆ 2014ರಲ್ಲಿ ಪರಿಚಯಿಸಲಾಯಿತು. ಈ ಸೌಲಭ್ಯ ಹೊಂದಿರುವ ವಾಹನಗಳು ಯಾವುದೇ ಟೋಲ್ ಪ್ಲಾಜಾ ಮೂಲಕ ಹಾದುಹೋಗುವಾಗ ಗಂಟೆಗಟ್ಟಲೇ ಟೋಲ್‍‍ಗಳಲ್ಲಿ ನಿಲ್ಲುವ ಅಗತ್ಯವಿಲ್ಲ. ದೇಶದಲ್ಲಿರುವ ಅನೇಕ ಬ್ಯಾಂಕುಗಳು ಆನ್‌ಲೈನ್‌ನಲ್ಲಿ ಫಾಸ್ಟ್‌ಟ್ಯಾಗ್‍ ಖರೀದಿಸುವ ಸೌಲಭ್ಯವನ್ನು ಒದಗಿಸುತ್ತಿವೆ.

ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರಕ್ಕೆ ಭರ್ಜರಿ ಆದಾಯ

ಐಸಿಐಸಿಐ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಐಡಿಎಫ್‌ಸಿ, ಎಸ್‌ಬಿಐ, ಹೆಚ್‌ಡಿಎಫ್‌ಸಿ, ಸಿಂಡಿಕೇಟ್, ಪೇಟಿಎಂ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕ್‌ಗಳಲ್ಲಿ ಫಾಸ್ಟ್‌ಟ್ಯಾಗ್‍‍‍ಗೆ ಅರ್ಜಿ ಸಲ್ಲಿಸಬಹುದು. ನಂತರ ಫಾಸ್ಟ್‌ಟ್ಯಾಗ್‍ ಅನ್ನು ನೇರವಾಗಿ ನಿಮ್ಮ ಮನೆಗೆ ತಲುಪಿಸಲಾಗುತ್ತದೆ.

ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರಕ್ಕೆ ಭರ್ಜರಿ ಆದಾಯ

ಇದರೊಂದಿಗೆ ಫಾಸ್ಟ್‌ಟ್ಯಾಗ್‍ ಅನ್ನು ಟೋಲ್ ಪ್ಲಾಜಾ ಅಥವಾ ಅಧಿಕೃತ ಏಜೆನ್ಸಿ ಮೂಲಕವೂ ಖರೀದಿಸಬಹುದು. ಗ್ರಾಹಕರು ಆನ್‌ಲೈನ್ ಫಾರಂ ಅನ್ನು ಡೌನ್‌ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕಾಗುತ್ತದೆ.

ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರಕ್ಕೆ ಭರ್ಜರಿ ಆದಾಯ

ಫಾಸ್ಟ್‌ಟ್ಯಾಗ್‍‍‍ಗಳನ್ನು ರೀಚಾರ್ಜ್ ಮಾಡುವುದು ಹೇಗೆ?

ಚೆಕ್, ಆನ್‌ಲೈನ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಆರ್‌ಟಿಜಿಎಸ್ ಹಾಗೂ ನೆಟ್ ಬ್ಯಾಂಕಿಂಗ್ ಮೂಲಕವೂ ಫಾಸ್ಟ್‌ಟ್ಯಾಗ್‍‍‍ಗಳನ್ನು ರೀಚಾರ್ಜ್ ಮಾಡಬಹುದು.

ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರಕ್ಕೆ ಭರ್ಜರಿ ಆದಾಯ

ಗ್ರಾಹಕರು ರೂ.100ನಿಂದ ರೂ.1 ಲಕ್ಷದವರೆಗೆ ರೀಚಾರ್ಜ್ ಮಾಡಬಹುದು. ಗ್ರಾಹಕರು ಸುಲಭವಾಗಿ ರೀಚಾರ್ಜ್ ಮಾಡಲು ಬೇರೆ ಬೇರೆ ಏಜೆನ್ಸಿಗಳು ಬೇರೆ ಬೇರೆ ವಿಧಾನಗಳನ್ನು ಹಾಗೂ ಆಯ್ಕೆಗಳನ್ನು ನೀಡಲಾಗಿದೆ. ಅವುಗಳನ್ನು ಅನುಸರಿಸುವ ಮೂಲಕ ಫಾಸ್ಟ್‌ಟ್ಯಾಗ್‍‍‍ಗಳನ್ನು ರೀಚಾರ್ಜ್ ಮಾಡಬಹುದು.

ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರಕ್ಕೆ ಭರ್ಜರಿ ಆದಾಯ

ಫಾಸ್ಟ್‌ಟ್ಯಾಗ್‍‍‍ನಿಂದಾಗುವ ಪ್ರಯೋಜನಗಳು

*ಸುಲಭ ಪಾವತಿ - ಟೋಲ್ ಪ್ಲಾಜಾವನ್ನು ದಾಟುವಾಗ ನೀವು ಹಣವನ್ನು ಇಟ್ಟುಕೊಳ್ಳುವ ಅಗತ್ಯವಿಲ್ಲ.

*ಫಾಸ್ಟ್‌ಟ್ಯಾಗ್‍ ವಾಹನಗಳಲ್ಲಿದ್ದರೆ ವಾಹನಗಳನ್ನು ನಿಲ್ಲಿಸುವ ಅಗತ್ಯವಿಲ್ಲ.

*ಆನ್‌ಲೈನ್ ರೀಚಾರ್ಜ್ - ಡೆಬಿಟ್ / ಕ್ರೆಡಿಟ್ ಮತ್ತು ನೆಟ್ ಬ್ಯಾಂಕಿಂಗ್ ಬಳಸಿ ಫಾಸ್ಟ್‌ಟ್ಯಾಗ್‍ ಗ್ರಾಹಕರು ರೀಚಾರ್ಜ್ ಮಾಡಬಹುದು.

*ಎಲ್ಲಾ ಟೋಲ್ ವಹಿವಾಟುಗಳಿಗೆ ಎಸ್‍ಎಂಎಸ್ ಸಂದೇಶ ಬರಲಿದೆ.

*ಟೋಲ್ ಪಾವತಿಯ ಮೇಲೆ ಗ್ರಾಹಕರು 10%ನಷ್ಟು ರಿಯಾಯಿತಿ ಪಡೆಯಲಿದ್ದಾರೆ.

*ವೆಬ್ ಪೋರ್ಟಲ್ ಸೌಲಭ್ಯವು ವಿಶೇಷವಾಗಿ ಫಾಸ್ಟ್‌ಟ್ಯಾಗ್‍‍‍ಗಳಿವೆ ಲಭ್ಯವಿರಲಿದೆ.

*ಫಾಸ್ಟ್‌ಟ್ಯಾಗ್‍‍‍ನಿಂದಾಗಿ ಟೋಲ್‌ನಲ್ಲಿ ದಟ್ಟಣೆ ಕಡಿಮೆಯಾಗಲಿದೆ.

More from DriveSpark

Article Published On: Wednesday, December 18, 2019, 19:05 [IST]
English summary
FASTag Increase NHAI Revenue By 15 Per Cent. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+