ಇದೇ ತಿಂಗಳು 25ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹೋಂಡಾ ಸಿಟಿ ಸೆಡಾನ್

ದೇಶಿಯ ಮಾರುಕಟ್ಟೆ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಹೋಂಡಾ ಸಿಟಿ ನೆಕ್ಸ್ಟ್ ಜನರೇಷನ್ ಆವೃತ್ತಿಯು ಮೊದಲ ಹಂತವಾಗಿ ಇದೇ ತಿಂಗಳು 25ಕ್ಕೆ ಥೈಲ್ಯಾಂಡ್‌ನಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದ್ದು, ಭಾರತದಲ್ಲಿ ತದನಂತರವಷ್ಟೇ ಅಧಿಕೃತವಾಗಿ ಖರೀದಿಗೆ ಲಭ್ಯವಾಗುವ ಸುಳಿವು ನೀಡಿದೆ.

ಇದೇ ತಿಂಗಳು 25ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹೋಂಡಾ ಸಿಟಿ ಸೆಡಾನ್

ಹೋಂಡಾ ಸಂಸ್ಥೆಯು ಭಾರತ ಸೇರಿದಂತೆ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ತನ್ನ ಜನಪ್ರಿಯ ಸಿಟಿ ಸೆಡಾನ್ ಕಾರಿನ 5ನೇ ತಲೆಮಾರಿನ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆಯನ್ನು ಅರಿಯಲು ಈಗಾಗಲೇ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಹೀಗಾಗಿ ಹೊಸ ಸಿಟಿ ಕಾರು ಭಾರತದಲ್ಲಿ 2020ರ ಫೆಬ್ರುವರಿ ಅಂತ್ಯಕ್ಕೆ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಎಂಜಿನ್ ಆಯ್ಕೆಯಲ್ಲಿ ಹೊಸ ಕಾರು ಮಹತ್ವದ ಬದಲಾವಣೆ ಪಡೆದುಕೊಂಡಿದೆ.

ಇದೇ ತಿಂಗಳು 25ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹೋಂಡಾ ಸಿಟಿ ಸೆಡಾನ್

ಹೋಂಡಾ ಸಂಸ್ಥೆಯು ಇದೇ ಮೊದಲ ಬಾರಿಗೆ ಸಿಟಿ ಸೆಡಾನ್‌ನಲ್ಲಿ ಹೈಬ್ರಿಡ್ ಎಂಜಿನ್ ಮಾದರಿಯನ್ನು ಕೂಡಾ ಬಿಡುಗಡೆಗೊಳಿಸುತ್ತಿದ್ದು, ಹೋಂಡಾ ನಿರ್ಮಾಣದ ಕಾರುಗಳಲ್ಲಿ ಅಕಾರ್ಡ್ ಸೆಡಾನ್ ನಂತರ ಹೈಬ್ರಿಡ್ ತಂತ್ರಜ್ಞಾನ ಹೊಂದಿದ 2ನೇ ಕಾರು ಮಾದರಿ ಇದಾಗಿರಲಿದೆ.

ಇದೇ ತಿಂಗಳು 25ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹೋಂಡಾ ಸಿಟಿ ಸೆಡಾನ್

ಕಳೆದ ಮಾರ್ಚ್‌ನಲ್ಲಿ ಸಿವಿಕ್ ಬಿಡುಗಡೆಯ ನಂತರ ಸಿಟಿ ಸೆಡಾನ್ ಕಾರಿನ ಮೇಲೆ ಹೆಚ್ಚಿನ ಗಮನಹರಿಸಿರುವ ಹೋಂಡಾ ಸಂಸ್ಥೆಯು 2020ರ ಫೆಬ್ರುವರಿ 7ರಿಂದ 14ರ ತನಕ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಹೊಸ ಕಾರನ್ನು ಪ್ರದರ್ಶನ ಮಾಡಿದ ನಂತರವಷ್ಟೇ ಬಿಡುಗಡೆ ಮಾಡಲಿದೆ.

ಇದೇ ತಿಂಗಳು 25ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹೋಂಡಾ ಸಿಟಿ ಸೆಡಾನ್

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸಿಟಿ ಕಾರಿಗಿಂತಲೂ ಹೊಸ ತಲೆಮಾರಿನ ಆವೃತ್ತಿಯು ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿದ್ದು, 2014ರಲ್ಲಿ 4ನೇ ತಲೆಮಾರಿನ ಸಿಟಿ ಸೆಡಾನ್ ಕಾರು ಬಿಡುಗಡೆ ಮಾಡಿದ ಬಳಿಕ ಯಾವುದೇ ಬದಲಾವಣೆ ತರದ ಹೋಂಡಾ ಸಂಸ್ಥೆಯು ಇದೇ ಮೊದಲ ಬಾರಿಗೆ ಹೈಬ್ರಿಡ್ ಎಂಜಿನ್ ಪರಿಚಯಿಸುತ್ತಿದೆ. 5ನೇ ತಲೆಮಾರಿನ ಸಿಟಿ ಸೆಡಾನ್ ಕಾರು ಪ್ರಸ್ತುತ ಮಾದರಿಗಿಂತಲೂ ತುಸು ದೊಡ್ಡ ಗಾತ್ರವನ್ನು ಹೊಂದಿದ್ದು, ಬೂಟ್ ಸ್ಪೆಸ್ ಜೊತೆಗೆ ಹಿಂಬದಿಯ ಸವಾರರಿಗೆ ವಿಸ್ತರಿತ ಲೆಗ್ ರೂಂ ಮತ್ತು ಹೆಡ್ ರೂಂ ನೀಡಿರುವುದು ಮತ್ತಷ್ಟು ಆರಾಮದಾಯಕ ಪ್ರಯಾಣಕ್ಕೆ ಅನುಕೂಲಕರವಾಗಲಿದೆ.

ಇದೇ ತಿಂಗಳು 25ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹೋಂಡಾ ಸಿಟಿ ಸೆಡಾನ್

ಸದ್ಯ ಥೈಲ್ಯಾಂಡ್‌ನಲ್ಲಿ ಹೊಸ ತಲೆಮಾರಿನ ಕಾರಿನ ಟೆಸ್ಟಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವ ಹೋಂಡಾ ಸಂಸ್ಥೆಯು ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಹೊಸ ಕಾರಿನ ಎಂಜಿನ್ ಅನ್ನು ಅಲ್ಲಿಯೇ ಅಭಿವೃದ್ಧಿಪಡಿಸಿದೆ.

ಇದೇ ತಿಂಗಳು 25ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹೋಂಡಾ ಸಿಟಿ ಸೆಡಾನ್

ಥೈಲ್ಯಾಂಡ್‌ನಲ್ಲಿರುವ ಹೋಂಡಾ ಕಾರು ಉತ್ಪಾದನಾ ಘಟಕವು ಏಷ್ಯಾದ ಅತಿದೊಡ್ಡ ಕಾರು ಉತ್ಪಾದನಾ ಘಟಕ ಎಂಬ ಹೆಗ್ಗಳಿಕೆ ಹೊಂದಿದ್ದು, ಇಲ್ಲಿಂದಲೇ ಹೊಸ ಸಿಟಿ ಸೆಡಾನ್ ಕಾರು ಅಂತಿಮ ರೂಪ ಪಡೆದುಕೊಂಡು ಭಾರತಕ್ಕೆ ಪ್ರವೇಶಿಸಲಿದೆ.

MOST READ: ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ- ಠಾಣೆಯಲ್ಲೇ ಅನಾಥವಾಗಿ ಬಿದ್ದ ರೂ. 3 ಕೋಟಿ ಕಾರು..!

ಇದೇ ತಿಂಗಳು 25ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹೋಂಡಾ ಸಿಟಿ ಸೆಡಾನ್

ಹೊಸ ಸಿಟಿ ಸೆಡಾನ್ ಕಾರಿನಲ್ಲಿ ಈ ಬಾರಿ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಮಾರುತಿ ಸುಜುಕಿ ಸಿಯಾಜ್ ಮತ್ತು ಹ್ಯುಂಡೈ ವೆರ್ನಾ ಕಾರಿಗೆ ಮಾತ್ರವಲ್ಲದೇ ಟೊಯೊಟಾ ಕರೊಲ್ಲಾ ಆಟ್ಲಿಸ್ ಕಾರಿಗೂ ಇದು ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

MOST READ: ಕಾರು ಅಪ್ಪಚ್ಚಿಯಾದರೂ ಬದುಕುಳಿದ ಕಾರು ಚಾಲಕ

ಇದೇ ತಿಂಗಳು 25ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹೋಂಡಾ ಸಿಟಿ ಸೆಡಾನ್

ಎಂಜಿನ್ ಸಾಮರ್ಥ್ಯ

ಹೊಸ ತಲೆಮಾರಿನ ಹೋಂಡಾ ಕಾರು ಈ ಬಾರಿ ಸಾಮಾನ್ಯ ಮಾದರಿಯ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನಲ್ಲಿ ಮಾತ್ರವಲ್ಲದೇ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಯು ಪರ್ಫಾಮೆನ್ಸ್ ಪ್ರಿಯರನ್ನು ಮತ್ತಷ್ಟು ಸೆಳೆಯಲಿದೆ.

MOST READ: ಸ್ಟಾರ್ ನಟಿಗೆ ಸಿಕ್ತು ಬರೋಬ್ಬರಿ 11 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಾರ್ ಗಿಫ್ಟ್

ಇದೇ ತಿಂಗಳು 25ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹೋಂಡಾ ಸಿಟಿ ಸೆಡಾನ್

ಜೊತೆಗೆ 2020ರ ಏಪ್ರಿಲ್ 1ರಿಂದ ಬಿಎಸ್-6 ನಿಯಮ ಜಾರಿಗೆ ಹಿನ್ನೆಲೆಯಲ್ಲಿ ಹೊಸ ವಾಹನ ಎಂಜಿನ್‌ನಲ್ಲಿ ಸಾಕಷ್ಟು ಬದಲಾವಣೆ ಕಂಡುಬರುತ್ತಿದ್ದು, ಶೇ.25 ರಷ್ಟು ಹೊಗೆ ಉಗುಳುವ ಪ್ರಮಾಣ ಕಡಿಮೆಯಾದಲ್ಲಿ, ಶೇ.10ರಿಂದ 15ರಷ್ಟು ಮೈಲೇಜ್ ಪ್ರಮಾಣ ಹೆಚ್ಚಳವಾಗಲಿದೆ.

ಇದೇ ತಿಂಗಳು 25ಕ್ಕೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಹೋಂಡಾ ಸಿಟಿ ಸೆಡಾನ್

ಹಾಗೆಯೇ ಹೊಸ ಎಂಜಿನ್ ಹೊತ್ತುಬರುತ್ತಿರುವ ಬಿಎಸ್-6 ವಾಹನ ಬೆಲೆಯಲ್ಲೂ ತುಸು ದುಬಾರಿಯಾಗಲಿದ್ದು, ಬೆಲೆಗಳಿಗೆ ಅನುಗುಣವಾಗಿ ರೂ.80 ಸಾವಿರದಿಂದ ರೂ.2 ಲಕ್ಷದ ತನಕ ಈಗಿರುವ ಬೆಲೆಗಳಿಂತಲೂ ಹೆಚ್ಚು ಬೆಲೆ ಪಡೆದುಕೊಳ್ಳಲಿವೆ. ಇವುಗಳಲ್ಲಿ ಭಾರೀ ಬದಲಾವಣೆ ಪಡೆದುಕೊಳ್ಳುತ್ತಿರುವ ಹೋಂಡಾ ಸಿಟಿ ಸಹ ಈಗಿರುವ ವಿನ್ಯಾಸಕ್ಕಿಂತಲೂ ಹೆಚ್ಚಿನ ವೈಶಿಷ್ಟ್ಯತೆ ಹೊಂದಲಿದ್ದು, ಬೆಲೆಯೂ ಕೂಡಾ ತುಸು ದುಬಾರಿ ಎನ್ನಿಸಲಿದೆ.

Image Source: Cardekho

Article Published On: Wednesday, November 13, 2019, 8:45 [IST]
English summary
Fifth-gen Honda City will launch on November 25. Read in Kannada.
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+