ಮಕಾಡೆ ಮಲಗಿರುವ ಆಟೋ ಉದ್ಯಮಕ್ಕೆ ಮತ್ತೆ ಚುರುಕು ನೀಡಿದ ಕೇಂದ್ರ ಸರ್ಕಾರ..!

ಸತತ ಕುಸಿತದಿಂದ ಕಂಗೆಟ್ಟಿರುವ ಭಾರತೀಯ ಆಟೋಮೊಬೈಲ್ ಉದ್ಯಮ ಚೇತರಿಕೆಗೆ ಮುಂದಾಗಿರುವ ಕೇಂದ್ರ ಸರ್ಕಾರವು ಹಲವು ಹೊಸ ಯೋಜನೆಗಳನ್ನು ಘೋಷಣೆ ಮಾಡಿದೆ. ಆರ್ಥಿಕ ಸಚಿವಾಲಯದ ಉನ್ನತಾಧಿಕಾರಿಗಳ ಜೊತೆಗಿನ ಮಹತ್ವದ ಸಭೆ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕುಸಿಯುತ್ತಿರುವ ಆಟೋ ಉದ್ಯಮಕ್ಕಾಗಿ ಮಹತ್ವದ ಕ್ರಮ ಗಳನ್ನು ಕೈಗೊಂಡಿರುವುದಾಗಿ ಪ್ರಕಟಿಸಿದ್ದಾರೆ.

ಮಕಾಡೆ ಮಲಗಿರುವ ಆಟೋ ಉದ್ಯಮಕ್ಕೆ ಮತ್ತೆ ಚುರುಕು ನೀಡಿದ ಕೇಂದ್ರ ಸರ್ಕಾರ..!

ಆಟೋಮೊಬೈಲ್ ಕ್ಷೇತ್ರದ ಅವನತಿಯು ದೇಶದ ಒಟ್ಟಾರೆ ಆರ್ಥಿಕ ಕುಸಿತದ ಪ್ರತಿಬಿಂಬವಾಗಿದ್ದು, ಈ ಹಿನ್ನೆಲೆ ಆಟೋ ಉದ್ಯಮವನ್ನು ರಕ್ಷಿಸುವುದು ನಮ್ಮ ಮೊದಲ ಆದ್ಯತೆಯಾಗಿರುವ ಬಗ್ಗೆ ವಿವರಿಸಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂಧನ ಆಧರಿತ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ನಿರ್ಬಂಧಿಸುವ ಸಂಬಂಧ ಕಳೆದ ಕೆಲ ದಿನಗಳ ಹಿಂದೆ ಜಾರಿಗೆ ತರಲಾಗಿದ್ದ ನೋಂದಣಿ ಶುಲ್ಕ ಹೆಚ್ಚಳ, ದುಬಾರಿ ಸೆಸ್ ಸೇರಿದಂತೆ ಹಲವು ಕಠಿಣ ಕ್ರಮಗಳು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿರುವುದಾಗಿ ತಿಳಿಸಲಾಗಿದೆ.

ಮಕಾಡೆ ಮಲಗಿರುವ ಆಟೋ ಉದ್ಯಮಕ್ಕೆ ಮತ್ತೆ ಚುರುಕು ನೀಡಿದ ಕೇಂದ್ರ ಸರ್ಕಾರ..!

ಇದರೊಂದಿಗೆ ಭವಿಷ್ಯ ವಾಹನಗಳ ಮಾದರಿಯಾದ ಎಲೆಕ್ಟ್ರಿಕ್ ವಾಹನಗಳಿಗೆ ವಿಶೇಷ ಆದ್ಯತೆಯನ್ನು ಮುಂದುವರಿಸುವ ಸ್ಪಷ್ಟನೆ ನೀಡಲಾಗಿದ್ದು, ಹಂತ ಹಂತವಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ಕಡಿತಗೊಳಿಸುವುದು ನಿಶ್ಚಿತ ಎಂದಿದ್ದಾರೆ.

ಮಕಾಡೆ ಮಲಗಿರುವ ಆಟೋ ಉದ್ಯಮಕ್ಕೆ ಮತ್ತೆ ಚುರುಕು ನೀಡಿದ ಕೇಂದ್ರ ಸರ್ಕಾರ..!

ಹೀಗಾಗಿ ಸದ್ಯಕ್ಕೆ ಎಲೆಕ್ಟ್ರಿಕ್ ವಾಹನಗಳ ಜೊತೆಗೆ ಬಿಎಸ್-4 ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟ ಮುಂದುವರಿಯಲಿದ್ದು, ಭವಿಷ್ಯದಲ್ಲಿ ಇಂಧನ ಆಧಾರಿತ ವಾಹನ ಬೇಡಿಕೆಯನ್ನು ತಗ್ಗಿಸಿ ಎಲೆಕ್ಟ್ರಿಕ್ ಮಾದರಿಗಳತ್ತ ಹೆಚ್ಚು ಗಮನಹರಿಸುವುದು ಕೇಂದ್ರದ ಮೊದಲ ಗುರಿ ಎನ್ನಲಾಗಿದೆ.

ಮಕಾಡೆ ಮಲಗಿರುವ ಆಟೋ ಉದ್ಯಮಕ್ಕೆ ಮತ್ತೆ ಚುರುಕು ನೀಡಿದ ಕೇಂದ್ರ ಸರ್ಕಾರ..!

ಗುಜುರಿ ಸೇರಲಿವೆ ಹಳೆಯ ವಾಹನಗಳು?

ಹೊಸ ವಾಹನಗಳ ಜೊತೆಗೆ ಮಾಲಿನ್ಯ ಉತ್ಪಾದನೆಯನ್ನು ಪರಿಣಾಮಕಾರಿ ತಗ್ಗಿಸುವುದನ್ನು ಪ್ರಮುಖ ಯೋಜನೆಯಾಗಿ ಘೋಷಿಸುತ್ತಿರುವ ಕೇಂದ್ರ ಸರ್ಕಾರವು ಸದ್ಯದಲ್ಲೇ 15 ವರ್ಷ ಮೇಲ್ಪಟ್ಟ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ಹೊಸ ಸ್ಕ್ರಾರ್ಪಿಂಗ್ ನೀತಿ ಅಡಿ ಗುಜುರಿ ಸೇರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಬಗ್ಗೆ ಸುಳಿವು ನೀಡಿದೆ. ಇದರಿಂದ ಹೊಸ ವಾಹನಗಳ ಅಭಿವೃದ್ದಿ ಮತ್ತು ಸ್ಕ್ರಾರ್ಪಿಂಗ್‌ನಿಂದ ಬೀಡಿಭಾಗಗಳ ಮರುಬಳಕೆಯಿಂದ ವಾಹನ ಉತ್ಪಾದನಾ ವೆಚ್ಚವನ್ನು ತಗ್ಗಿಸಬಹುದು ಎನ್ನಲಾಗಿದೆ.

ಮಕಾಡೆ ಮಲಗಿರುವ ಆಟೋ ಉದ್ಯಮಕ್ಕೆ ಮತ್ತೆ ಚುರುಕು ನೀಡಿದ ಕೇಂದ್ರ ಸರ್ಕಾರ..!

ವಾಹನ ಬಡ್ಡಿದರಗಳಲ್ಲಿ ಇಳಿಕೆ

ಗ್ರಾಹಕರಿಗೆ ಹೊಸ ವಾಹನಗಳ ಖರೀದಿಗೆ ಸಹಕಾರಿಯಾಗುವಂತೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಮತ್ತು ಎಲೆಕ್ಟ್ರಿಕ್ ವಾಹನ ಮಾರಾಟದ ಮೇಲೂ ಹೆಚ್ಚು ಗಮನಹರಿಸುತ್ತಿರುವುದಾಗಿ ಹೇಳಿರುವ ಕೇಂದ್ರ ಸರ್ಕಾರವು ಭವಿಷ್ಯ ವಾಹನಗಳ ಮೇಲೆ ಗಮನಿಹರಿಸುವಂತೆ ಆಟೋ ಉತ್ಪಾದನಾ ಸಂಸ್ಥೆಗಳಿಗೆ ಮಹತ್ವದ ಸೂಚನೆ ನೀಡಿದೆ.

ಮಕಾಡೆ ಮಲಗಿರುವ ಆಟೋ ಉದ್ಯಮಕ್ಕೆ ಮತ್ತೆ ಚುರುಕು ನೀಡಿದ ಕೇಂದ್ರ ಸರ್ಕಾರ..!

ಎಲೆಕ್ಟ್ರಿಕ್ ವಾಹನಗಳ ಮೇಲಿನ ಜಿಎಸ್‌ಟಿ ಪ್ರಮಾಣವನ್ನು ಶೇ. 12ರಿಂದ ಶೇ.5ಕ್ಕೆ ಇಳಿಕೆ, ಆದಾಯ ತೆರಿಗೆ ರೂ.1.50 ಲಕ್ಷದ ತನಕ ವಿನಾಯ್ತಿ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ಘೋಷಣೆ ಮಾಡಿದ್ದು, ಸರ್ಕಾರಿ ಇಲಾಖೆಗಳಿಗೆ ಹೊಸ ವಾಹನಗಳನ್ನು ಖರೀದಿಸಲು ಮತ್ತು ಹಳೆಯ ವಾಹನಗಳನ್ನು ಬದಲಿಸಲು ಹಾಕಲಾಗಿದ್ದ ನಿಷೇಧವನ್ನು ತೆಗೆದುಹಾಕಲಾಗಿದೆ.

ಮಕಾಡೆ ಮಲಗಿರುವ ಆಟೋ ಉದ್ಯಮಕ್ಕೆ ಮತ್ತೆ ಚುರುಕು ನೀಡಿದ ಕೇಂದ್ರ ಸರ್ಕಾರ..!

ಇನ್ನು ಆಟೋ ಉತ್ಪಾದನಾ ನಿಯಮಾವಳಿಗಳಲ್ಲಿ ನಿರಂತರ ಬದಲಾವಣೆ ಮತ್ತು ಇಂಧನ ಆಧರಿತ ವಾಹನಗಳ ನೋಂದಣಿಯ ಮೇಲೆ ಗರಿಷ್ಠ ಪ್ರಮಾಣದ ಜಿಎಸ್‌ಟಿ ಶುಲ್ಕ ವಿಧಿಸುತ್ತಿರುವುದು ದೇಶಿಯ ಆಟೋ ಮಾರುಕಟ್ಟೆಯಲ್ಲಿ ಪ್ರತಿಕೂಲಕರ ವಾತಾವರಣ ಸೃಷ್ಠಿಯಾಗಿತ್ತು.

ಮಕಾಡೆ ಮಲಗಿರುವ ಆಟೋ ಉದ್ಯಮಕ್ಕೆ ಮತ್ತೆ ಚುರುಕು ನೀಡಿದ ಕೇಂದ್ರ ಸರ್ಕಾರ..!

ಜೊತೆಗೆ ಸಾಂಪ್ರಾದಾಯಿಕ ವಾಹನಗಳ ಮೇಲಿನ ಜಿಎಸ್‌ಟಿ ಹೆಚ್ಚಳದಿಂದ ಹೊಸ ವಾಹನ ಮಾರಾಟದ ಮೇಲೆ ಅಷ್ಟೇ ಅಲ್ಲದೇ ಆಟೋ ಉದ್ಯಮವನ್ನೇ ನೆಚ್ಚಿಕೊಂಡಿರುವ ಲಕ್ಷಾಂತರ ಸಣ್ಣ ಉದ್ಯಮಗಳ ಮೇಲೂ ಇದು ಪರಿಣಾಮ ಬೀರಿದೆ ಹೊಸ ವಾಹನಗಳ ಮಾರಾಟ ಪ್ರಮಾಣವು 2019ರ ಆರಂಭದಿಂದಲೇ ಕುಸಿತ ಕಾಣುತ್ತಿದ್ದು, ಕಳೆದ 19 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರಮಾಣಿಕರ ವಾಹನಗಳ ಮಾರಾಟ ಪ್ರಮಾಣವು ಶೇ.30ಕ್ಕೆ ಕುಸಿತ ಕಂಡಿದೆ.

ಮಕಾಡೆ ಮಲಗಿರುವ ಆಟೋ ಉದ್ಯಮಕ್ಕೆ ಮತ್ತೆ ಚುರುಕು ನೀಡಿದ ಕೇಂದ್ರ ಸರ್ಕಾರ..!

2018ರ ಜುಲೈ ಅವಧಿಗೂ 2019ರ ಜುಲೈ ಅವಧಿಯಲ್ಲಿನ ವಾಹನಗಳ ಮಾರಾಟ ಪ್ರಮಾಣಕ್ಕೆ ಹೋಲಿಕೆ ಮಾಡಿದ್ದಲ್ಲಿ, ಕಳೆದ ವರ್ಷದ ಜುಲೈನಲ್ಲಿ ಒಟ್ಟು 2,90,931 ಪ್ರಯಾಣಿಕ ವಾಹನಗಳು ಮಾರಾಟವಾದರೇ ಪ್ರಸಕ್ತ ವರ್ಷದ ಜುಲೈ ಅವಧಿಯಲ್ಲಿ ಕೇವಲ 2,00,790 ಪ್ರಯಾಣಿಕ ವಾಹನಗಳು ಮಾರಾಟವಾಗಿವೆ.

ಮಕಾಡೆ ಮಲಗಿರುವ ಆಟೋ ಉದ್ಯಮಕ್ಕೆ ಮತ್ತೆ ಚುರುಕು ನೀಡಿದ ಕೇಂದ್ರ ಸರ್ಕಾರ..!

ಈ ಹಿನ್ನಲೆ ಆಟೋ ಉದ್ಯಮದ ಕುಸಿತವನ್ನು ತಡೆಯಲು ಮಧ್ಯಪ್ರವೇಶಿಸಿರುವ ಕೇಂದ್ರ ಸರ್ಕಾರವು ಮಹತ್ವದ ಕ್ರಮಗಳನ್ನು ಪ್ರಕಟಿಸಿದ್ದು, ಮುಂಬರುವ ದಿನಗಳಲ್ಲಿ ಆಟೋಉದ್ಯಮವು ಮತ್ತೆ ಹಳಿಗೆ ಬರುವ ವಿಶ್ವಾಸ ವ್ಯಕ್ತವಾಗಿದೆ.

Most Read Articles

Kannada
English summary
Union Finance Minister Nirmala Sitharaman has announced new measures to revive automotive industry which included enhancing liquidity situation and clarity on BS VI registration.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X