ಮಾರುಕಟ್ಟೆಗೆ ಹೊಸ ಎಸ್‌ಯುವಿ ಕಾರುಗಳು- ಟಾಟಾ ಹ್ಯಾರಿಯರ್‌‌ಗೆ ತೀವ್ರ ಪೈಪೋಟಿ..!

ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ವಾಹನಗಳ ಮಾರಾಟ ಪ್ರಮಾಣವು ಇಳಿಕೆಯಲ್ಲಿದ್ದರೂ ಸಹ ವಿವಿಧ ಆಟೋ ಉತ್ಪಾದನಾ ಸಂಸ್ಥೆಗಳು ತಮ್ಮ ಬಹುನೀರಿಕ್ಷಿತ ಕಾರು ಉತ್ಪನ್ನಗಳನ್ನು ಬಿಡುಗಡೆ ಮಾಡುತ್ತಿದ್ದು, ಪ್ರಸಕ್ತ ವರ್ಷದಲ್ಲಿ ಬಿಡುಗಡೆಯಾಗಲಿರುವ ಬಹುತೇಕ ಕಾರುಗಳು ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಭಾರೀ ಸದ್ದು ಮಾಡುವ ನೀರಿಕ್ಷೆಯಲ್ಲಿವೆ.

ಮಾರುಕಟ್ಟೆಗೆ ಹೊಸ ಎಸ್‌ಯುವಿ ಕಾರುಗಳು- ಟಾಟಾ ಹ್ಯಾರಿಯರ್‌‌ಗೆ ತೀವ್ರ ಪೈಪೋಟಿ..!

ಹ್ಯಾಚ್‌ಬ್ಯಾಕ್ ಕಾರುಗಳ ನಂತರ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಬೇಡಿಕೆಯಲ್ಲಿ ಹೆಚ್ಚುತ್ತಿರುವ ಕಾರಣ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಕೈಗೆಟುಕುವ ಬೆಲೆಗಳಲ್ಲಿ ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಎಸ್‌ಯುವಿ ವಿಭಾಗದಲ್ಲಿ ಜನಪ್ರಿಯತೆ ಸಾಧಿಸುತ್ತಿರುವ ಟಾಟಾ ಹ್ಯಾರಿಯರ್‌ಗೆ ಪೈಪೋಟಿಯಾಗಿ ಕಿಯಾ ಮೋಟಾರ್ಸ್, ಹೋಂಡಾ, ಮಾರುತಿ ಸುಜುಕಿ ಮತ್ತು ಸ್ಕೋಡಾ ಸಂಸ್ಥೆಗಳು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆ ಮಾಡುತ್ತಿವೆ.

ಮಾರುಕಟ್ಟೆಗೆ ಹೊಸ ಎಸ್‌ಯುವಿ ಕಾರುಗಳು- ಟಾಟಾ ಹ್ಯಾರಿಯರ್‌‌ಗೆ ತೀವ್ರ ಪೈಪೋಟಿ..!

01. ಕಿಯಾ ಸೆಲ್ಟೊಸ್

ದಕ್ಷಿಣ ಕೊರಿಯಾದ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾದ ಕಿಯಾ ಮೋಟಾರ್ಸ್ ಭಾರೀ ನೀರಿಕ್ಷೆಗಳೊಂದಿಗೆ ಭಾರತೀಯ ಮಾರುಕಟ್ಟೆಯಲ್ಲೂ ತನ್ನ ಕಾರ್ಯಾಚರಣೆ ಆರಂಭಿಸಿದ್ದು, ಇದೇ ತಿಂಗಳು 22ರಂದು ತನ್ನ ಮೊದಲ ಕಾರು ಸೆಲ್ಟೊಸ್ ಬಿಡುಗಡೆ ಮಾಡುತ್ತಿದೆ. ಸೆಲ್ಟೊಸ್ ಮಾದರಿಯು ಟೆಕ್-ಲೈನ್ ಮತ್ತು ಜಿಟಿ-ಲೈನ್ ಎನ್ನುವ ಪ್ರಮುಖ ಎರಡು ಮಾದರಿಯಲ್ಲಿ ಮಾರಾಟವಾಗಲಿದ್ದು, ಡೀಸೆಲ್ ಮತ್ತು ಪೆಟ್ರೋಲ್ ಎರಡೂ ಎಂಜಿನ್‌ ಮಾದರಿಗಳಲ್ಲೂ ಖರೀದಿ ಲಭ್ಯವಾಗಲಿದೆ.

ಮಾರುಕಟ್ಟೆಗೆ ಹೊಸ ಎಸ್‌ಯುವಿ ಕಾರುಗಳು- ಟಾಟಾ ಹ್ಯಾರಿಯರ್‌‌ಗೆ ತೀವ್ರ ಪೈಪೋಟಿ..!

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲಿ ಅತ್ಯುತ್ತಮ ಮಾದರಿಯಾಗಲಿರುವ ಕಿಯಾ ಸೆಲ್ಟೊಸ್ ಕಾರು ಹ್ಯುಂಡೈ ಕ್ರೆಟಾ, ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಎಸ್‌ಯುವಿ ಮಾದರಿಗೂ ಈ ಕಾರು ಉತ್ತಮ ಪೈಪೋಟಿಯಾಗುವ ನೀರಿಕ್ಷೆಯಲ್ಲಿದ್ದು, ಹೊಸ ಕಾರಿನಲ್ಲಿ ಒದಗಿಸಲಾಗಿರುವ ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಸೆಲ್ಟೊಸ್ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.99 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ.14.99 ಲಕ್ಷಕ್ಕೆ ಖರೀದಿಗೆ ಲಭ್ಯವಾಗಬಹುದು ಎನ್ನಲಾಗಿದೆ.

ಮಾರುಕಟ್ಟೆಗೆ ಹೊಸ ಎಸ್‌ಯುವಿ ಕಾರುಗಳು- ಟಾಟಾ ಹ್ಯಾರಿಯರ್‌‌ಗೆ ತೀವ್ರ ಪೈಪೋಟಿ..!

02. ಮಾರುತಿ ಸುಜುಕಿ ವಿಟಾರಾ

ವಿಟಾರಾ ಬ್ರೆಝಾ ಕಾರುಗಳಿಂತಲೂ ವಿಭಿನ್ನವಾಗಿರುವ ವಿಟಾರಾ ಕಾರು ಎಸ್ ಕ್ರಾಸ್‌‌ಗಿಂತಲೂ ಹೆಚ್ಚಿನ ಮಟ್ಟದ ಐಷಾರಾಮಿ ಸೌಲಭ್ಯಗಳನ್ನು ಹೊಂದಿರಲಿದ್ದು, 2020ರ ಮೊದಲ ತ್ರೈಮಾಸಿಕ ಅವಧಿಗೆ ಭಾರತದಲ್ಲಿ ಬಿಡುಗಡೆಗೊಳಿಸುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಕಾರಿನ ಉತ್ಪಾದನಾ ಆವೃತ್ತಿಯನ್ನು ಭಾರತದಲ್ಲಿ ರೋಡ್ ಟೆಸ್ಟಿಂಗ್ ನಡೆಸಲಾಗಿದ್ದು, ಹೊಸ ಕಾರಿನ ಡಿಸೈನ್‌ಗಳು ಎಸ್‌ಯುವಿ ಪ್ರಿಯರನ್ನು ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಮಾರುಕಟ್ಟೆಗೆ ಹೊಸ ಎಸ್‌ಯುವಿ ಕಾರುಗಳು- ಟಾಟಾ ಹ್ಯಾರಿಯರ್‌‌ಗೆ ತೀವ್ರ ಪೈಪೋಟಿ..!

1.4-ಲೀಟರ್ ಬೂಸ್ಟರ್‌ಜೆಟ್ ಟರ್ಬೋ ಪೆಟ್ರೋಲ್ ಎಂಜಿನ್ ಜೊತೆ ಬಿಎಸ್-6 ವರ್ಷನ್ 1.6-ಲೀಟರ್ ಡೀಸೆಲ್ ಟರ್ಬೋ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಹೊಸ ಕಾರಿನ ಬೆಲೆಯು ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.13.50 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಮಾರುಕಟ್ಟೆಗೆ ಹೊಸ ಎಸ್‌ಯುವಿ ಕಾರುಗಳು- ಟಾಟಾ ಹ್ಯಾರಿಯರ್‌‌ಗೆ ತೀವ್ರ ಪೈಪೋಟಿ..!

03. ನ್ಯೂ ಜನರೇಷನ್ ಹ್ಯುಂಡೈ ಕ್ರೆಟಾ

ಹ್ಯುಂಡೈ ಸಂಸ್ಥೆಯು ಸದ್ಯ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಎರಡನೇ ಸ್ಥಾನದಲ್ಲಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆ ಮಾಡಲಾಗುತ್ತಿರುವ ನ್ಯೂ ಜನರೇಷನ್ ಕ್ರೆಟಾ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕ್ರೆಟಾಗಿಂತಲೂ ಹಲವು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಯೋಜನೆಯಲ್ಲಿದೆ.

MOST READ: 15 ವರ್ಷ ಮೇಲ್ಪಟ್ಟ ಹಳೆಯ ವಾಹನ ಹೊಂದಿರೋ ಮಾಲೀಕರಿಗೆ ಸದ್ಯದಲ್ಲೇ ಶಾಕಿಂಗ್ ನ್ಯೂಸ್..!?

ಮಾರುಕಟ್ಟೆಗೆ ಹೊಸ ಎಸ್‌ಯುವಿ ಕಾರುಗಳು- ಟಾಟಾ ಹ್ಯಾರಿಯರ್‌‌ಗೆ ತೀವ್ರ ಪೈಪೋಟಿ..!

ನ್ಯೂ ಜನರೇಷನ್ ಕ್ರೆಟಾ ಆವೃತ್ತಿಯಲ್ಲಿ ಬಿಎಸ್-6 ಪ್ರೇರಿತ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡುವ ಬಗ್ಗೆ ಸುಳಿವು ನೀಡಲಾಗಿದ್ದು, 2020ರ ಆರಂಭದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.11 ಲಕ್ಷದಿಂದ ರೂ.16 ಲಕ್ಷ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

MOST READ: ಕೇಂದ್ರದಿಂದ ಮಹತ್ವದ ಯೋಜನೆ- ಶೀಘ್ರದಲ್ಲೇ ಸಂಚಾರ ಆರಂಭಿಸಲಿವೆ 5,559 ಎಲೆಕ್ಟ್ರಿಕ್ ಬಸ್‌ಗಳು

ಮಾರುಕಟ್ಟೆಗೆ ಹೊಸ ಎಸ್‌ಯುವಿ ಕಾರುಗಳು- ಟಾಟಾ ಹ್ಯಾರಿಯರ್‌‌ಗೆ ತೀವ್ರ ಪೈಪೋಟಿ..!

ಹೋಂಡಾ ಹೆಚ್ಆರ್-ವಿ

ಹೋಂಡಾ ಇಂಡಿಯಾ ಸಂಸ್ಥೆಯು ಮುಂಬರುವ ದಿನಗಳಲ್ಲಿ ಭಾರತೀಯ ಮಾರುಕಟ್ಟೆಗಾಗಿ ಕೆಲವು ಹೊಸ ಕಾರು ಉತ್ಪನ್ನಗಳನ್ನು ಪರಿಚಯಿಸುವ ಇರಾದೆಯಲ್ಲಿದ್ದು, ಯುರೋಪ್ ಮಾರುಕಟ್ಟೆಯಲ್ಲಿ ಜನಪ್ರಿಯಗೊಳ್ಳತ್ತಿರುವ 5 ಆಸನವುಳ್ಳ ಹೆಚ್‍ಆರ್-ವಿ ಪ್ರೀಮಿಯಂ ಕ್ರಾಸ್ ಓವರ್ ಎಸ್‍‍ಯುವಿ ಕಾರನ್ನು ಬಿಡುಗಡೆಗೊಳಿಸುವ ಸಂಬಂಧ ಸ್ಪಾಟ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ.

MOST READ: ಅತ್ಯುತ್ತಮ ಮೈಲೇಜ್ ಹೊಂದಿರುವ ಟಾಪ್ 10 ಡೀಸೆಲ್ ಕಾರುಗಳಿವು..!

ಮಾರುಕಟ್ಟೆಗೆ ಹೊಸ ಎಸ್‌ಯುವಿ ಕಾರುಗಳು- ಟಾಟಾ ಹ್ಯಾರಿಯರ್‌‌ಗೆ ತೀವ್ರ ಪೈಪೋಟಿ..!

ಹೆಚ್‍ಆರ್-ವಿ ಕಾರು ಪ್ರೀಮಿಯಂ ವೈಶಿಷ್ಟ್ಯತೆಗಳಿಂದಾಗಿ ಹ್ಯುಂಡೈ ಕ್ರೆಟಾ, ರೆನಾಲ್ಟ್ ಕ್ಯಾಪ್ಚರ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ತೀವ್ರ ಪೈಪೋಟಿ ನೀಡುವ ಗುಣಲಕ್ಷಣಗಳನ್ನು ಹೊಂದಿದ್ದು, ಇದೇ ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.13 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17 ಲಕ್ಷ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಮಾರುಕಟ್ಟೆಗೆ ಹೊಸ ಎಸ್‌ಯುವಿ ಕಾರುಗಳು- ಟಾಟಾ ಹ್ಯಾರಿಯರ್‌‌ಗೆ ತೀವ್ರ ಪೈಪೋಟಿ..!

05. ಸ್ಕೋಡಾ ಕಾಮಿಕ್

ಫೋಕ್ಸ್‌ವ್ಯಾಗನ್ ಜೊತೆಗಿನ 'ಇಂಡಿಯಾ 2.0 ಪ್ರೋಜೆಕ್ಟ್' ಮೂಲಕ ಭಾರತೀಯ ಗ್ರಾಹಕರನ್ನು ಗುರಿಯಾಗಿಸಿ ಅಗ್ಗದ ಬೆಲೆಯ ಕಾರುಗಳನ್ನು ಅಭಿವೃದ್ಧಿಪಡಿಸಲು ಒಪ್ಪಿಗೆ ಸೂಚಿಸಿರುವ ಸ್ಕೋಡಾ ಇಂಡಿಯಾ ಸಂಸ್ಥೆಯು ಟಾಟಾ ಹ್ಯಾರಿಯರ್, ಹ್ಯುಂಡೈ ಕ್ರೆಟಾ ಮತ್ತು ಮಹೀಂದ್ರಾ ಎಕ್ಸ್‌ಯುವಿ500 ಕಾರುಗಳಿಗೆ ಪ್ರತಿಸ್ಪರ್ಧಿಯಾಗಿ ಕಾಮಿಕ್ ಕಾರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ.

ಮಾರುಕಟ್ಟೆಗೆ ಹೊಸ ಎಸ್‌ಯುವಿ ಕಾರುಗಳು- ಟಾಟಾ ಹ್ಯಾರಿಯರ್‌‌ಗೆ ತೀವ್ರ ಪೈಪೋಟಿ..!

2020ರ ಫೆಬ್ರುವರಿಯಲ್ಲಿ ನಡೆಯಲಿರುವ ಇಂಡಿಯನ್ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡ ನಂತರವಷ್ಟೇ ಭಾರತದಲ್ಲಿ ಕಾಮಿಕ್ ಕಾರು ಮಾರುಕಟ್ಟೆಗೆ ಲಗ್ಗೆಯಿಡಲಿದ್ದು, 1.5-ಲೀಟರ್ ಪೆಟ್ರೋಲ್ ಮತ್ತು 1.6-ಲೀಟರ್ ಡೀಸೆಲ್ ಎಂಜಿನ್ ಹೊಂದಲಿರುವ ಕಾಮಿಕ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.15 ಲಕ್ಷ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

Article Published On: Monday, August 12, 2019, 16:36 [IST]
English summary
Five big challengers of Tata Harrier launching soon. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+