ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ದೇಶಿಯ ವಾಹನ ತಯಾರಕ ಸಂಸ್ಥೆಯಾದ ಮಹೀಂದ್ರಾ ತಾವು ಮಾರುಕಟ್ಟೆಗೆ ಪರಿಚಯಿಸಲಿರುವ ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಬಿಡುಗಡೆಯ ಬಗ್ಗೆ ಮಾಹಿತಿಯನ್ನು ಹೊರಹಾಕಿದ್ದು, ಫೆಬ್ರವರಿ 15ರಂದು ಸಂಸ್ಥೆಯು ಫೋರ್ಡ್ ಇಕೊಸ್ಪೋರ್ಟ್, ಟಾಟಾ ನೆಕ್ಸಾನ್ ಮತ್ತು ಹ್ಯುಂಡೈ ಕ್ರೆಟಾ ಕಾರುಗಳಿಗೆ ಪೈಪೋಟಿ ನೀಡಲು ಬಿಡುಗಡೆಗೊಳಿಸಲಿದೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ಮಹೀಂದ್ರಾ ಸಂಸ್ಥೆಯು ದಕ್ಷಿಣ ಕೊರಿಯಾದ ಐಷಾರಾಮಿ ಕಾರು ಉತ್ಪಾದನಾ ಸಂಸ್ಥೆಯಾದ ಸ್ಯಾಂಗ್‌ಯಾಂಗ್ ಜೊತೆಗೂಡಿ ಹೊಸ ನಮೂನೆಯ ಕಾರು ಉತ್ಪನ್ನಗಳನ್ನು ಅಭಿವೃದ್ಧಿ ಪಡೆಸುತ್ತಿದ್ದು, ಸ್ಯಾಂಗ್‌ಯಾಂಗ್ ನಿರ್ಮಾಣದ ಟಿವೊಲಿ ಕಾರಿನ ಮಾದರಿಯಲ್ಲೇ ಹೊಸ ಎಕ್ಸ್‌ಯುವಿ300 ಕಾರನ್ನು ಭಾರತೀಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ನಿರ್ಮಾಣ ಮಾಡಲಾಗಿದೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ಮಹೀಂದ್ರಾ ಸಂಸ್ಥೆಯು ಈಗಾಗಲೆ ಕಾರಿನ ಅಧಿಕೃತ ಚಿತ್ರಗಳನ್ನು ಬಹಿರಂಗಗೊಳಿಸಿದ್ದು, ಹಲವಾರು ಬಾರಿ ಈ ಕಾರು ಸ್ಪಾಟ್ ಟೆಸ್ಟಿಂಗ್ ವೇಳೆ ಕೂಡಾ ಕಾಣಿಸಿಕೊಂಡಿದೆ. ಅಷ್ಟೆ ಅಲ್ಲದೇ ಮಹೀಂದ್ರಾ ಸಂಸ್ಥೆಯ ಡೀಲರ್‍‍ಗಳು ಹೊಸ ಕಾರಿನ ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಕೂಡಾ ಪ್ರಾರಂಭಿಸಿದ್ದು, ಆಸಕ್ತ ಗ್ರಾಹಕರು ರೂ. 11,000 ಮುಂಗಡವಾಗಿ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳನ್ನು ಹೊಂದಿರುವ ಎಕ್ಸ್‌ಯುವಿ300 ಕಾರು 5 ಆಸನವುಳ್ಳ ಕಾರು ಮಾದರಿಯಾಗಿದ್ದು, ಎಸ್‌ಯುವಿ ಕಾರು ಪ್ರಿಯರನ್ನು ಸೆಳೆಯಬಲ್ಲ ಬಹುತೇಕ ಪ್ರೀಮಿಯಂ ಸೌಲಭ್ಯಗಳನ್ನು ಈ ಕಾರಿನಲ್ಲಿವೆ ಎಂದ್ರೆ ತಪ್ಪಾಗುವುದಿಲ್ಲ.

ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ಈ ಕಾರಿನಲ್ಲಿ ಗ್ರಾಹಕರು ನಿರೀಕ್ಷಿಸಬಹುದಾದ ವೈಶಿಷ್ಟ್ಯತೆಗಳನ್ನು ಅಳವಡಿಸಲಾಗಿದ್ದು, ಮೊದಲಿಗೆ ಕಾರಿನ ಒಳಭಾಗವನು ಡ್ಯುಯಲ್ ಟೋನ್ ಬಣ್ಣದಿಂದ ಸಜ್ಜುಗೊಳಿಸಲಾಗಿದೆ. ಮತ್ತು ಕಾರಿನಲ್ಲಿನ ಡ್ಯಾಶ್‍‍ಬೋರ್ಡ್, ಇನ್ಫೋಟೈನ್ಮೆಂಟ್ ಸಿಸ್ಟಂ, ಎಸಿ ವೆಂಟ್ಸ್ ಮತ್ತು ಸ್ಟೀರಿಂಗ್ ವ್ಹೀಲ್‍ನ ಮೇಲೆ ಸಿಲ್ವರ್ ಆಕ್ಸೆಂಟ್‍‍ಗಳನ್ನು ನೀಡಲಾಗಿದೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ಡ್ಯುಯಲ್ ಟೋನ್ ಇಂಟೀರಿಯರ್ ಅನ್ನು ಹೊರತುಪಡಿಸಿ ಮಹೀಂದ್ರಾ ಎಕ್ಸ್‌ಯುವಿ300 ಕಾರಿನಲ್ಲಿ ದೊಡ್ಡದಾದ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ನೀಡಲಾಗಿದ್ದು, ಇದು ಆಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಆಯ್ಕೆಯನ್ನು ಪಡೆಯಬಹುದಾಗಿದೆ. ಇಷ್ಟೆ ಅಲ್ಲದೇ ಪಾರ್ಕಿಂಗ್ ಕ್ಯಾಮೆರಾ ಮತ್ತು ಸೆನ್ಸಾರ್‍‍ಗಳನ್ನು ಸಹ ಅಳವಡಿಸಲಾಗಿದೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ಜೊತೆಗೆ ಮಹೀಂದ್ರಾ ಎಕ್ಸ್‌ಯುವಿ300 ಕಾರು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಸೆಂಟ್ರಲ್ ಮಲ್ಟಿ ಇನ್ಫಾರ್ಮೇಷನ್ ಡಿಸ್ಪ್ಲೇ ಹೊಂದಿರುವ ಇನ್ಸ್ಟ್ರೂಮೆಂಟ್ ಕ್ಲಸ್ಟರ್, ಸ್ಟಾರ್ಟ್/ಸ್ಟಾಪ್ ಬಟನ್ ಮತ್ತು ಕ್ರೂಸ್ ಕಂಟ್ರೋಲ್ ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿರಲಿದೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ಇವುಗಳ ಜೊತೆಗೆ ಮಹೀಂದ್ರಾ ಎಕ್ಸ್‌ಯುವಿ300 ಕಾಂಪ್ಯಾಕ್ಟ್ ಎಸ್‍ಯುವಿ ಕಾರಿನಲ್ಲಿ ಸನ್‍‍ರೂಫ್ ಕೂಡಾ ಬಳಸಲಾಗಿದ್ದು, ಹಿಂಬದಿಯ ಸವಾರರ ಸೀಟ್‍‍ಗಳಿಗೆ ಸೆಂಟ್ರಲ್ ಆರ್ಮ್‍ರೆಸ್ಟ್ ಅನ್ನು ನೀಡಲಾಗಿದೆ. ಆದರೆ ಹಿಂಬದಿಯ ಸವಾರರಿಗೆ ಎಸಿವೆಂಟ್ಸ್ ಅನ್ನು ನೀಡಲಿದೆಯೆ ಎಂದು ಮತ್ತಷ್ಟು ಮಾಹಿತಿಗಳು ಹೊರ ಬಂದ ಮೇಲೆ ತಿಳಿಯಬೇಕಿದೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ಮಹೀಂದ್ರಾ ಸಂಸ್ಥೆಯು ದಕ್ಷಿಣ ಕೊರಿಯಾದ ಐಷಾರಾಮಿ ಕಾರು ಉತ್ಪಾದನಾ ಸಂಸ್ಥೆಯಾದ ಸ್ಯಾಂಗ್‌ಯಾಂಗ್ ಜೊತೆಗೂಡಿ ಹೊಸ ನಮೂನೆಯ ಕಾರು ಉತ್ಪನ್ನಗಳನ್ನು ಅಭಿವೃದ್ಧಿ ಪಡೆಸುತ್ತಿದ್ದು, ಸ್ಯಾಂಗ್‌ಯಾಂಗ್ ನಿರ್ಮಾಣದ ಟಿವೊಲಿ ಕಾರಿನ ಮಾದರಿಯಲ್ಲೇ ಹೊಸ ಎಕ್ಸ್‌ಯುವಿ300 ಕಾರನ್ನು ನಿರ್ಮಾಣ ಮಾಡಲಾಗಿದೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ಜೊತೆಗೆ ಹೊಸ ಕಾರಿನಲ್ಲಿರುವ ಸುರಕ್ಷಾ ಸೌಲಭ್ಯಗಳನ್ನು ಸಹ ಪ್ರಮುಖ ಆಕರ್ಷಣೆಯಾಗಿದ್ದು, 17-ಇಂಚಿನ ಅಲಾಯ್ ವೀಲ್ಹ್‌ನೊಂದಿಗೆ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಮೊದಲ ಬಾರಿಗೆ ನೀಡಲಾಗಿರುತ್ತಿರುವ 7 ಏರ್‌ಬ್ಯಾಗ್ ಸೌಲಭ್ಯ ಎಕ್ಸ್‌ಯುವಿ300 ಕಾರಿನಲ್ಲಿರಲಿವೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ಎಂಜಿನ್ ಸಾಮರ್ಥ್ಯ

ಹೊಸ ಎಕ್ಸ್‌ಯುವಿ300 ಕಾರು ಡಿಸೇಲ್ ಮತ್ತು ಪೆಟ್ರೋಲ್ ಎರಡು ಮಾದರಿಯಲ್ಲೂ ಖರೀದಿಗೆ ಲಭ್ಯವಾಗಲಿದ್ದು, ಡಿಸೇಲ್ ಕಾರುಗಳು 1.5-ಲೀಟರ್( 1,500ಸಿಸಿ) ಎಂಜಿನ್‌ನೊಂದಿಗೆ 121-ಬಿಎಚ್‌ಪಿ ಮತ್ತು 320-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿರಲಿವೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ಹಾಗೆಯೇ ಪೆಟ್ರೋಲ್ ಮಾದರಿಯು ಸಹ 1.2-ಲೀಟರ್ ಎಂಜಿನ್‌ನೊಂದಿಗೆ ಬಿಡುಗಡೆಗೊಳ್ಳುವ ಸಾಧ್ಯತೆಗಳಿದ್ದು, ಡಿಸೇಲ್ ವರ್ಷನ್ ಕಾರುಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು ಪೆಟ್ರೋಲ್ ವರ್ಷನ್‌ ಕಾರುಗಳಲ್ಲಿ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಒದಗಿಸಲಿದೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ಮಹೀಂದ್ರಾ ಸಂಸ್ಥೆಯು ನೀಡಿರುವ ಮಾಹಿತಿ ಪ್ರಕಾರ, ಸದ್ಯಕ್ಕೆ ಡೀಸೆಲ್ ವರ್ಷನ್‌ಗಳಲ್ಲಿ ಮಾತ್ರ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಪ್ರೇರಿತ ಕಾರನ್ನು ಮೊದಲು ಬಿಡುಗಡೆ ಮಾಡಿ ನಂತರವಷ್ಟೇ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡುವುದಾಗಿ ಸುಳಿವು ನೀಡಿದೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ಕಾರಿನ ಬೆಲೆಗಳು(ಅಂದಾಜು)

ಮಾರುಕಟ್ಟೆಯಲ್ಲಿ ಲಭ್ಯವಿರುವ ಕಂಪ್ಯಾಕ್ಟ್ ಎಸ್‌ಯುವಿಗಳಿಂತೂ ತಾಂತ್ರಿಕವಾಗಿ ಬಲಿಷ್ಠವಾಗಿರುವ ಎಕ್ಸ್‌ಯುವಿ300 ಕಾರುಗಳ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.99 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ. 13 ಲಕ್ಷ ಬೆಲೆ ನಿಗದಿಯಾಗುವ ಸಾಧ್ಯತೆಗಳಿವೆ.

ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ಪ್ರತಿಸ್ಪರ್ಧಿ ಕಾರುಗಳು

ಎಕ್ಸ್‌ಯುವಿ300 ಕಾರುಗಳು ಉತ್ತಮ ಎಂಜಿನ್ ಜೊತೆಗೆ ತಾಂತ್ರಿಕವಾಗಿಯೂ ಗಮನಸೆಳೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ಕ್ರೆಟಾ, ಟಾಟಾ ನೆಕ್ಸಾನ್, ಫೋರ್ಡ್ ಇಕೋ ಸ್ಪೋರ್ಟ್ ಮತ್ತು ಬಿಡುಗಡೆಯಾಗಲಿರುವ ನಿಸ್ಸಾನ್ ಕಿಕ್ಸ್, ಟಾಟಾ ಹ್ಯಾರಿಯರ್ ಕಾರುಗಳಿಗೂ ಇದು ಪೈಪೋಟಿ ನೀಡಬಲ್ಲದು.

ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ಒಟ್ಟಿನಲ್ಲಿ ಸ್ಯಾಂಗ್‌ಯಾಂಗ್ ಕಾರು ಸಂಸ್ಥೆಯ ಜೊತೆಗೂಡಿ ಹಲವು ಗೇಮ್‌ಚೆಂಜರ್ ಕಾರುಗಳನ್ನು ಬಿಡುಗಡೆ ಮಾಡುತ್ತಿರುವ ಮಹೀಂದ್ರಾ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ಹೊಸ ಬದಲಾವಣೆ ಕಾರಣವಾಗುತ್ತಿದ್ದು, ಅಲ್ಟುರಾಸ್ ಜಿ4 ನಂತರ ಎಕ್ಸ್‌ಯುವಿ300 ನಿರ್ಮಾಣ ಮಾಡಿರುವುದು ಮುಂಬರುವ ದಿನಗಳಲ್ಲಿ ಇನ್ನಷ್ಟು ಹೊಸ ಕಾರು ಉತ್ಪನ್ನಗಳನ್ನು ಎದುರುನೋಡಬಹುದಾಗಿದೆ.

More from DriveSpark

Article Published On: Saturday, January 5, 2019, 10:10 [IST]
English summary
Here Is The Full Deatails About New Mahindra XUV300. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+