ಭಾರತದಲ್ಲಿ ಅತ್ಯಾಧುನಿಕ ಟೆಕ್ನಿಕಲ್ ಸೆಂಟರ್ ಆರಂಭಿಸಿದ ಪಿಎಸ್ಎ ಗ್ರೂಪ್

ಫ್ರೆಂಚ್ ಜನಪ್ರಿಯ ಆಟೋ ಉತ್ಪಾದನಾ ಸಂಸ್ಥೆಯಾಗಿರುವ ಪಿಎಸ್ಎ ಗ್ರೂಪ್ ಮೊದಲ ಬಾರಿಗೆ ಭಾರತದಲ್ಲಿ ತನ್ನ ಸಿಟ್ರನ್ ಬ್ರಾಂಡ್ ಕಾರು ಮಾರಾಟವನ್ನು ಆರಂಭಿಸುತ್ತಿದ್ದು, ತನ್ನ ಉದ್ಯೋಗಿಗಳಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ತರಬೇತಿ ಕಾರ್ಯಾಗಾರ ನಡೆಸಲು ಅತ್ಯಾಧುನಿಕ ತಂತ್ರಜ್ಞಾನ ಪ್ರೇರಿತ ಟೆಕ್ನಿಕಲ್ ಸೆಂಟರ್ ಆರಂಭಿಸಿದೆ.

ಭಾರತದಲ್ಲಿ ಅತ್ಯಾಧುನಿಕ ಟೆಕ್ನಿಕಲ್ ಸೆಂಟರ್ ಆರಂಭಿಸಿದ ಪಿಎಸ್ಎ ಗ್ರೂಪ್

ಯುರೋಪಿನ್ ಮಾರುಕಟ್ಟೆಗಳಲ್ಲಿ ಅತ್ಯಧಿಕ ಕಾರು ಮಾರಾಟ ಸಂಸ್ಥೆಯಾಗಿ ಹೊರಹೊಮ್ಮಿರುವ ಪಿಎಸ್‌ಎ ಗ್ರೂಪ್ ಅಂಗಸಂಸ್ಥೆಯಾಗಿರುವ ಸಿಟ್ರನ್ ಇದೇ ಮೊದಲ ಬಾರಿಗೆ ಭಾರತದಲ್ಲಿ ಕಾರು ಮಾರಾಟವನ್ನು ಆರಂಭಿಸುತ್ತಿದ್ದು, 2020ರ ಆರಂಭದಲ್ಲಿ ಕಾರು ಮಾರಾಟಕ್ಕೆ ಅಧಿಕೃತ ಚಾಲನೆ ನೀಡಲಿರುವ ಸಿಟ್ರನ್ ಸಂಸ್ಥೆಯು ಅದಕ್ಕೂ ಮುನ್ನ ತನ್ನ ಉದ್ಯೋಗಿಗಳಿಗೆ ಗುಣಮಟ್ಟದ ತರಬೇತಿ ಕಾರ್ಯಾಗಾರ ನಡೆಸಲು ಚೆನ್ನೈನಲ್ಲಿ ಅತಿದೊಡ್ಡ ಟೆಕ್ನಿಕಲ್ ಟ್ರೈನಿಂಗ್ ಸೆಂಟರ್ ಆರಂಭಿಸಿದೆ.

ಭಾರತದಲ್ಲಿ ಅತ್ಯಾಧುನಿಕ ಟೆಕ್ನಿಕಲ್ ಸೆಂಟರ್ ಆರಂಭಿಸಿದ ಪಿಎಸ್ಎ ಗ್ರೂಪ್

ಕಳೆದ ತಿಂಗಳ ಹಿಂದಷ್ಟೇ ಭಾರತದಲ್ಲಿ ಬಿಡುಗಡೆ ಮಾಡಲಿರುವ ತನ್ನ ಮೊದಲ ಕಾರಿನ ಕುರಿತಾಗಿ ಮಾಹಿತಿ ಹಂಚಿಕೊಂಡಿರುವ ಸಿಟ್ರನ್ ಸಂಸ್ಥೆಯು ಸದ್ಯ ಕಾರು ಉತ್ಪಾದನಾ ಘಟಕ ನಿರ್ಮಾಣ, ಸಿಬ್ಬಂದಿ ನೇಮಕ, ಮಾರುಕಟ್ಟೆ ಅಧ್ಯಯನ ಮತ್ತು ಕಾರು ಮಾರಾಟಕ್ಕೆ ಅನುಕೂಲ ಪ್ರದೇಶಗಳಲ್ಲಿ ಅಧಿಕೃತ ಮಾರಾಟ ಮಳಿಗೆಗಳನ್ನು ತೆರೆಯುತ್ತಿದೆ.

ಭಾರತದಲ್ಲಿ ಅತ್ಯಾಧುನಿಕ ಟೆಕ್ನಿಕಲ್ ಸೆಂಟರ್ ಆರಂಭಿಸಿದ ಪಿಎಸ್ಎ ಗ್ರೂಪ್

ಇದೀಗ ಸಿಬ್ಬಂದಿ ನೇಮಕಾತಿ ಪೂರ್ಣಗೊಳಿಸಲಾಗಿದ್ದು, ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ತರಬೇತಿ ನೀಡುವ ಸಂಬಂಧ ಭಾರೀ ಪ್ರಮಾಣ ಹೂಡಿಕೆಯೊಂದಿಗೆ ಟೆಕ್ನಿಕಲ್ ಟ್ರೈನಿಂಗ್ ಸೆಂಟರ್ ಆರಂಭಿಸಿದೆ. ಇನ್ನು ಭಾರತೀಯ ಮಾರುಕಟ್ಟೆಯಲ್ಲಿ ಈಗಾಗಲೇ ಹಲವು ಸುತ್ತಿನ ಮಾರುಕಟ್ಟೆ ಅಧ್ಯಯನ ನಡೆಸಿರುವ ಪಿಎಸ್ಎ ಗ್ರೂಪ್ ಸಂಸ್ಥೆಯು ಮೊದಲ ಹಂತದಲ್ಲಿ ಸಿಟ್ರನ್ ಸಿ5 ಏರೋಕ್ರಾಸ್ ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸಿದೆ.

ಭಾರತದಲ್ಲಿ ಅತ್ಯಾಧುನಿಕ ಟೆಕ್ನಿಕಲ್ ಸೆಂಟರ್ ಆರಂಭಿಸಿದ ಪಿಎಸ್ಎ ಗ್ರೂಪ್

ವಿನೂತನ ವಿನ್ಯಾಸ ಮತ್ತು ವಿಶೇಷ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಸಿಟ್ರನ್ ಎಸ್‌ಯುವಿ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುವುವ ನೀರಿಕ್ಷೆಯಲ್ಲಿದ್ದು, ಸಿ5 ಏರೋಕ್ರಾಸ್ ಬಿಡುಗಡೆ ನಂತರ ಫ್ರೆಂಚ್ ಮಾರುಕಟ್ಟೆಯಲ್ಲಿರುವ ಮತ್ತಷ್ಟು ಜನಪ್ರಿಯ ಕಾರುಗಳನ್ನು ಭಾರತದಲ್ಲೂ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಇದಕ್ಕಾಗಿಯೇ ಮೊದಲ ಹಂತವಾಗಿ ಬ್ರಾಂಡ್ ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಭಾರತೀಯ ಗ್ರಾಹಕರನ್ನು ಸೆಳೆಯಲು ಸಿಟ್ರನ್ ಕಾರುಗಳನ್ನು ಆಮದು ಮಾಡಿಕೊಳ್ಳುತ್ತಿರುವ ಪಿಎಸ್ಎ ಗ್ರೂಪ್ ಸಂಸ್ಥೆಯು ಜಾಹೀರಾತು ಮತ್ತು ಆಸಕ್ತ ಗ್ರಾಹಕರಿಗಾಗಿ ಟೆಸ್ಟ್ ಡ್ರೈವ್‌ಗಳನ್ನು ಕಲ್ಪಿಸಿ ಹೊಸ ಬ್ರಾಂಡ್ ಪರಿಚಯಿಸುತ್ತಿದೆ.

ಭಾರತದಲ್ಲಿ ಅತ್ಯಾಧುನಿಕ ಟೆಕ್ನಿಕಲ್ ಸೆಂಟರ್ ಆರಂಭಿಸಿದ ಪಿಎಸ್ಎ ಗ್ರೂಪ್

ಮೂಲಗಳ ಪ್ರಕಾರ, ಪಿಎಸ್ಎ ಗ್ರೂಪ್‌ನ ಸಿಟ್ರನ್ ಸಿಟ್ರನ್ ಸಿ5 ಏರೋಕ್ರಾಸ್ ಮತ್ತು ಸಿ84 ಎಸ್‌ಯುವಿ ಕಾರುಗಳನ್ನು ಮೊದಲ ಹಂತದಲ್ಲಿ ಬಿಡುಗಡೆಯಾಗಲಿದ್ದು, ಮಧ್ಯಮ ಗಾತ್ರದ ಐಷಾರಾಮಿ ಮಾದರಿಗಳಾದ ಜೀಪ್ ಕಂಪಾಸ್, ಹ್ಯುಂಡೈ ಟಕ್ಸನ್ ಮತ್ತು ಸ್ಕೋಡಾ ಕರೋಕ್ ಎಸ್‌ಯುವಿಗಳಿಗೆ ಇವು ತ್ರೀವ ಪೈಪೋಟಿ ನೀಡುವ ನೀರಿಕ್ಷೆಯಲ್ಲಿವೆ.

ಭಾರತದಲ್ಲಿ ಅತ್ಯಾಧುನಿಕ ಟೆಕ್ನಿಕಲ್ ಸೆಂಟರ್ ಆರಂಭಿಸಿದ ಪಿಎಸ್ಎ ಗ್ರೂಪ್

ಹೋಂಡಾ ಸಿಟಿ ಮತ್ತು ಮಾರುತಿ ಸುಜುಕಿ ಸಿಯಾಜ್‌ಗೆ ಟಕ್ಕರ್ ನೀಡುತ್ತಿರುವ ಟೊಯೊಟಾ ಯಾರಿಸ್ ಖರೀದಿಗೆ ಈಗಲೇ ಟೆಸ್ಟ್ ಡ್ರೈವ್ ಮಾಡಿ..!

ಸದ್ಯ ಅನಾವರಣಗೊಳಿಸಲಾಗಿರುವ ಸಿ5 ಏರೋಕ್ರಾಸ್ ಕಾರು ಮಾದರಿಯು 1.5-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯನ್ನು ಹೊಂದಿರಲಿದ್ದರೆ ಡೀಸೆಲ್ ಎಂಜಿನ್ ಮಾದರಿಯಲ್ಲಿ 1.5-ಲೀಟರ್ ಮತ್ತು ಪರ್ಫಾಮೆನ್ಸ್ ಉದ್ದೇಶಕ್ಕಾಗಿ 2.0-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿರಲಿದೆ.

ಭಾರತದಲ್ಲಿ ಅತ್ಯಾಧುನಿಕ ಟೆಕ್ನಿಕಲ್ ಸೆಂಟರ್ ಆರಂಭಿಸಿದ ಪಿಎಸ್ಎ ಗ್ರೂಪ್

ಜೊತೆಗೆ ಹೊಸ ಕಾರುಗಳನ್ನು ಪರಿಚಯಿಸುವುದಕ್ಕೂ ಮುನ್ನ ದೇಶದ 80 ಪ್ರಮುಖ ನಗರಗಳಲ್ಲಿ 'ಎಕ್ಸ್‌ಪಿರೆನ್ಸ್ ಸ್ಟೋರ್'ಗಳನ್ನು ತೆರೆಯಲಿದ್ದು, ಈ ಮೂಲಕ ಗ್ರಾಹಕರನ್ನು ಹೊಸ ಕಾರ್ ಬ್ರಾಂಡ್‌ನತ್ತ ಸೆಳೆಯುವ ಮಾರುಕಟ್ಟೆ ತಂತ್ರಗಳನ್ನು ಬಳಸುತ್ತಿದೆ.

ಭಾರತದಲ್ಲಿ ಅತ್ಯಾಧುನಿಕ ಟೆಕ್ನಿಕಲ್ ಸೆಂಟರ್ ಆರಂಭಿಸಿದ ಪಿಎಸ್ಎ ಗ್ರೂಪ್

ಇದಲ್ಲದೇ ಬೆಲೆಗಳಲ್ಲಿ ತುಸು ದುಬಾರಿ ಎನ್ನಿಸಲಿರುವ ಪಿಎಸ್ಎ ಗ್ರೂಪ್ ಕಾರುಗಳ ಬೆಲೆಯನ್ನು ತಗ್ಗಿಸುವ ಉದ್ದೇಶದಿಂದ ಚೆನ್ನೈನಲ್ಲಿ ಅಸೆಂಬ್ಲಿ ಯೂನಿಟ್ ಅನ್ನು ಸಹ ತೆರೆಯಲಾಗಿದ್ದು, ಸ್ಥಳೀಯವಾಗಿ ಲಭ್ಯವಾಗುವ ಸುಮಾರು ಶೇ.90ರಷ್ಟು ತಾಂತ್ರಿಕ ಬಿಡಿಭಾಗಗಳನ್ನು ಬಳಕೆ ಮಾಡಿಕೊಂಡು ಲಾಭಾಂಶ ಮತ್ತು ಕಾರಿನ ಬೆಲೆ ಇಳಿಕೆಗೆ ಸಹಕಾರಿಯಾಗುವಂತೆ ಯೋಜನೆ ಹಮ್ಮಿಕೊಂಡಿದೆ.

ಭಾರತದಲ್ಲಿ ಅತ್ಯಾಧುನಿಕ ಟೆಕ್ನಿಕಲ್ ಸೆಂಟರ್ ಆರಂಭಿಸಿದ ಪಿಎಸ್ಎ ಗ್ರೂಪ್

ಇದರಲ್ಲದೇ ಭಾರತದಲ್ಲಿ ಪಿಎಸ್‌ಎ ಗ್ರೂಪ್‌ನ ಮತ್ತೊಂದು ಅಂಗಸಂಸ್ಥೆಯಾದ ಪ್ಯೂಜೊ ಕೂಡಾ ಈಗಾಗಲೇ ತನ್ನ ವಾಣಿಜ್ಯ ಚಟುವಟಿಕೆಗಳನ್ನು ಆರಂಭಗೊಳಿಸಿದ್ದು, 2020ರ ಮಧ್ಯಂತರದಲ್ಲಿ ಹೊಸ ಕಾರುಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸುವ ಮೂಲಕ ಗ್ರಾಹಕರನ್ನು ಸೆಳೆಯುವ ಪ್ರಯತ್ನದಲ್ಲಿದೆ.

Most Read Articles

Kannada
English summary
Groupe PSA Sets Up Technical Centre In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X