ವಾಹನಗಳ ಕಳ್ಳತನಕ್ಕೆ ಬ್ರೇಕ್ ಹಾಕಲು ಹೊಸ ರೂಲ್ಸ್ ಜಾರಿ ಮಾಡಿದ ಕೇಂದ್ರ ಸರ್ಕಾರ..!

ವಾಹನಗಳ ಸುರಕ್ಷೆತೆಗಾಗಿ ಕೆಲವು ಕಡ್ಡಾಯ ಸುರಕ್ಷಾ ಕ್ರಮಗಳನ್ನು ಜಾರಿಗೆ ತರುತ್ತಿರುವ ಕೇಂದ್ರ ಸರ್ಕಾರವು ಏಪ್ರಿಲ್ 1, 2019ರಿಂದಲೇ ಅನ್ವಯವಾಗುವಂತೆ ಹೊಸ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ.

ವಾಹನಗಳ ಕಳ್ಳತನಕ್ಕೆ ಬ್ರೇಕ್ ಹಾಕಲು ಹೊಸ ರೂಲ್ಸ್ ಜಾರಿ ಮಾಡಿದ ಕೇಂದ್ರ ಸರ್ಕಾರ..!

ಸುಮಾರು ಒಂದು ದಶಕ ಹಿಂದೆಯೇ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳನ್ನು ಜಾರಿ ತರಲಾಗಿದ್ದರೂ ಸಹ ಇದುವರೆಗೆ ಹಲವಾರು ರಾಜ್ಯಗಳಲ್ಲಿ ಇದು ಕಡ್ಡಾಯವಾಗಿರಲಿಲ್ಲ. ಹೀಗಾಗಿ ವಾಹನಗಳ ಸುರಕ್ಷತೆಗಾಗಿ ಇದೀಗ ಮಹತ್ವದ ನಿರ್ಣಯ ಕೈಗೊಂಡಿರುವ ಕೇಂದ್ರ ಸರ್ಕಾರವು ಏಪ್ರಿಲ್ 1ರಿಂದ ನೋಂದಣಿಯಾಗುವ ಪ್ರತಿಯೊಂದು ವಾಹನವು ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಹೊಂದಿರಬೇಕೆಂದು ಸುತ್ತೊಲೆ ಹೊರಡಿಸಿದೆ.

ವಾಹನಗಳ ಕಳ್ಳತನಕ್ಕೆ ಬ್ರೇಕ್ ಹಾಕಲು ಹೊಸ ರೂಲ್ಸ್ ಜಾರಿ ಮಾಡಿದ ಕೇಂದ್ರ ಸರ್ಕಾರ..!

ಇದರ ಜೊತೆಗೆ ಕೇಂದ್ರ ಸರ್ಕಾರ ಹೊಸ ಸುರಕ್ಷಾ ನೀತಿ ಪ್ರಕಾರ, ಇಷ್ಟು ದಿನಗಳ ಕಾಲ ಕಾರು ಮಾಲೀಕರೇ ಆಯ್ಕೆ ಮಾಡುತ್ತಿದ್ದ ನಂಬರ್ ಪ್ಲೇಟ್‌ಗಳನ್ನು ಇನ್ಮುಂದೆ ಕಾರು ಉತ್ಪಾದಕರೇ ಪೂರೈಕೆ ಮಾಡಬೇಕಿದ್ದು, ಈ ಮೂಲಕ ಎಂಟ್ರಿ ಲೆವೆಲ್ ಕಾರುಗಳ ಜೊತೆಗೆ ಹೈ ಎಂಡ್ ಕಾರುಗಳಲ್ಲೂ ಏಕರೂಪದ ನಂಬರ್ ಪ್ಲೇಟ್‌ಗಳಿರಲಿವೆ.

ವಾಹನಗಳ ಕಳ್ಳತನಕ್ಕೆ ಬ್ರೇಕ್ ಹಾಕಲು ಹೊಸ ರೂಲ್ಸ್ ಜಾರಿ ಮಾಡಿದ ಕೇಂದ್ರ ಸರ್ಕಾರ..!

ಹೀಗಾಗಿ ಕಾರು ಮಾಲೀಕರು ಇನ್ಮುಂದೆ ಕಾರು ಉತ್ಪಾದಕರು ಪೂರೈಸುವ ನಂಬರ್ ಪ್ಲೇಟ್‌ಗಳನ್ನೇ ಉಪಯೋಗಿಸಬೇಕಿದ್ದು, ಹೊಸ ಕಾರು ಪೂರೈಕೆಯ ಸಂದರ್ಭದಲ್ಲೇ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್‌ಗಳನ್ನು ಸಹ ನೀಡಬೇಕಿದೆ.

ವಾಹನಗಳ ಕಳ್ಳತನಕ್ಕೆ ಬ್ರೇಕ್ ಹಾಕಲು ಹೊಸ ರೂಲ್ಸ್ ಜಾರಿ ಮಾಡಿದ ಕೇಂದ್ರ ಸರ್ಕಾರ..!

ಇನ್ನೊಂದು ಪ್ರಮಖ ವಿಚಾರ ಅಂದ್ರೆ, ಕಾರು ಉತ್ಪಾದನಾ ಸಂಸ್ಥೆಗಳು ಪೂರೈಸುವ ನಂಬರ್ ಪ್ಲೇಟ್‌ಗಳು ಹೊಸ ಸುರಕ್ಷಾ ನೀತಿ ಅಡಿಯಲ್ಲಿ ಅಭಿವೃದ್ಧಿಪಡಿಸಲಾದ ಉತ್ಪನ್ನವಾಗಿದ್ದು, ಇದು ಕೇಂದ್ರ ಸರ್ಕಾರದ ಸಾರಿಗೆ ಇಲಾಖೆಯಿಂದ ಪ್ರಮಾಣಿಕೃತಗೊಂಡಿರುತ್ತದೆ. ಹೀಗಾಗಿ ವಾಹನಗಳಿಗೆ ಗರಿಷ್ಠ ಭದ್ರತೆ ದೊರೆಯಲಿದ್ದು, ಮುಖ್ಯವಾಗಿ ವಾಹನಗಳ ಕಳ್ಳತನಕ್ಕೆ ಬ್ರೇಕ್ ಹಾಕಲಿದೆ.

ವಾಹನಗಳ ಕಳ್ಳತನಕ್ಕೆ ಬ್ರೇಕ್ ಹಾಕಲು ಹೊಸ ರೂಲ್ಸ್ ಜಾರಿ ಮಾಡಿದ ಕೇಂದ್ರ ಸರ್ಕಾರ..!

ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್‌ನಲ್ಲಿ ಅಳವಡಿಸಲಾಗಿರುವ ಕ್ರೋಮಿಯಮ್ ಹಾಲೋಗ್ರಾಮ್ ತಂತ್ರಜ್ಞಾನವನ್ನು ಸ್ಟಾಂಪ್ ಮಾದರಿಯಲ್ಲಿ ಅಳವಡಿಸಲಾಗಿದ್ದು, ಲೇಸರ್ ರೀಡರ್ ಮೂಲಕ ವಾಹನದ ಪೂರ್ಣ ಪ್ರಮಾಣದ ಮಾಹಿತಿಯನ್ನು ಇದರಿಂದ ತಿಳಿದುಕೊಳ್ಳಬಹುದಾಗಿದೆ.

ವಾಹನಗಳ ಕಳ್ಳತನಕ್ಕೆ ಬ್ರೇಕ್ ಹಾಕಲು ಹೊಸ ರೂಲ್ಸ್ ಜಾರಿ ಮಾಡಿದ ಕೇಂದ್ರ ಸರ್ಕಾರ..!

ವಾಹನದ ನೋಂದಣಿ, ಮಾಲೀಕರ ವಿಳಾಸ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಮೂಲಕ ತಿಳಿದುಕೊಳ್ಳಲು ಸಾಧ್ಯವಿದ್ದು, ಹೊಸ ಮಾದರಿಯ ನಂಬರ್ ಪ್ಲೇಟ್‌ಗಳಿಗೆ ಕೇಂದ್ರ ಸರ್ಕಾರವು 15 ವರ್ಷಗಳ ವಾರಂಟಿ ನೀಡುತ್ತಿದೆ.

MOST READ: ಕಾನೂನು ಬಾಹಿರ ಮಾಡಿಫೈ ಮಾಡಿಸಿದ ಕಾರು ಮಾಲೀಕನಿಗೆ ಬರೋಬ್ಬರಿ 5 ಲಕ್ಷ ದಂಡ..!

ವಾಹನಗಳ ಕಳ್ಳತನಕ್ಕೆ ಬ್ರೇಕ್ ಹಾಕಲು ಹೊಸ ರೂಲ್ಸ್ ಜಾರಿ ಮಾಡಿದ ಕೇಂದ್ರ ಸರ್ಕಾರ..!

ಜೊತೆಗೆ ಕಾರುಗಳ ನಕಲಿ ನಂಬರ್ ಪ್ಲೇಟ್‌ಗಳ ಹಾವಳಿಗೂ ಬ್ರೇಕ್ ಬೀಳಲಿದ್ದು, ಈ ಮೂಲಕ ಪೂರ್ಣ ಪ್ರಮಾಣದ ಸುರಕ್ಷೆ ಸಿಗಲಿದೆ ಎನ್ನುವುದು ಕೇಂದ್ರ ಸಾರಿಗೆ ಇಲಾಖೆಯ ಅಭಿಪ್ರಾಯವಾಗಿದೆ. ಜೊತೆಗೆ ಹೊಸ ಕಾರುಗಳಿಗಾಗಿ ನಂಬರ್ ಪ್ಲೇಟ್‌ಗಳನ್ನು ಖರೀದಿಸಲು ಹೆಚ್ಚುವರಿ ಬೆಲೆ ತೆರಬೇಕಾಗಿದ್ದ ಕಾರು ಮಾಲೀಕರಿಗೂ ಇದರಿಂದ ಕೊಂಚ ರಿಲೀಫ್ ಸಿಗಲಿದೆ.

ವಾಹನಗಳ ಕಳ್ಳತನಕ್ಕೆ ಬ್ರೇಕ್ ಹಾಕಲು ಹೊಸ ರೂಲ್ಸ್ ಜಾರಿ ಮಾಡಿದ ಕೇಂದ್ರ ಸರ್ಕಾರ..!

ಇನ್ನು ಕಾರಿನ ಮೂಲ ಬೆಲೆಯಲ್ಲೇ ನಂಬರ್ ಪ್ಲೇಟ್ ಬೆಲೆಯು ಒಳಗೊಂಡಿರುತ್ತವೆ. ಹೀಗಾಗಿ ಕಾರು ಖರೀದಿಸುವ ಗ್ರಾಹಕರು ನಂಬರ್ ಪ್ಲೇಟ್‌ಗಾಗಿ ಹೆಚ್ಚುವರಿ ಹಣ ತೆರಬೇಕಾದ ಅವಶ್ಯಕತೆ ಇಲ್ಲಾ ಎನ್ನಬುಹುದು.

MOST READ: ವಿವಿಧ ಬಣ್ಣಗಳನ್ನು ಹೊಂದಿರುವ ನಂಬರ್ ಪ್ಲೇಟ್‌ಗಳು ಏನನ್ನು ಸೂಚಿಸುತ್ತವೆ ಗೊತ್ತಾ?

ವಾಹನಗಳ ಕಳ್ಳತನಕ್ಕೆ ಬ್ರೇಕ್ ಹಾಕಲು ಹೊಸ ರೂಲ್ಸ್ ಜಾರಿ ಮಾಡಿದ ಕೇಂದ್ರ ಸರ್ಕಾರ..!

ಸದ್ಯ ಮಾರುಕಟ್ಟೆಯಲ್ಲಿ ಸಾಮಾನ್ಯ ನಂಬರ್ ಪ್ಲೇಟ್ ಒಂದಕ್ಕೆ ರೂ.900ರಿಂದ ಫ್ಯಾನ್ಸಿ ನಂಬರ್ ಪ್ಲೇಟ್‌ಗಳಿಗೆ ರೂ.40 ಸಾವಿರ ತನಕ ಬೆಲೆಯಿದ್ದು, ಇದನ್ನೇ ಬಂಡವಾಳ ಮಾಡಿಕೊಂಡು ವಾಹನ ಮಾಲೀಕರನ್ನು ಸುಲಿಗೆ ಮಾಡುತ್ತಿದ್ದ ಏಜೆನ್ಸಿಗಳಿಗೂ ಇದರಿಂದ ಹೊಡೆತ ಬೀಳಲಿದೆ ಎನ್ನಬಹುದು.

Most Read Articles

Kannada
English summary
New Vehicles To Now Come With High Security Registration Plates — Mandatory Rule From April-2019. Read in Kannada.
Story first published: Thursday, April 4, 2019, 17:10 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X