ಹೋಂಡಾ ಅಮೇಜ್ ಕಾರು ಮಾರಾಟದಲ್ಲಿ ಹೊಸ ದಾಖಲೆ - ಖರೀದಿ ಮೇಲೆ ಪಡೆಯಿರಿ ಡಿಸ್ಕೌಂಟ್
ಹೋಂಡಾ ಸಂಸ್ಥೆಯು ಮೇ 2018ರಲ್ಲಿ ತಮ್ಮ ಎರಡನೆಯ ತಲೆಮಾರಿನ ಅಮೇಜ್ ಸೆಡಾನ್ ಕಾರುಗಳನ್ನು ಬಿಡುಗಡೆ ಮಾಡಲಾಗಿದ್ದು, ಮಾರುಕಟ್ಟೆಯಲ್ಲಿ ಉತ್ತಮವಾದ ಪ್ರದರ್ಶನವನ್ನು ಕಾಣುತ್ತಿದೆ. ಬಿಡುಗಡೆಗೊಂಡ ಸುಮಾರು 13 ತಿಂಗಳಿನಲ್ಲಿ 1 ಲಕ್ಷಕ್ಕು ಹೆಚ್ಚಿನ ಅಮೇಜ್ ಕಾರುಗಳು ಮರಾಟವಾಗಿದ್ದು, ಇದೇ ಸಂಭ್ರಮದಲ್ಲಿ ಸಂಸ್ಥೆಯು ಈ ಕಾರಿನ ಮತ್ತೊಂದು ಹೊಸ ವೇರಿಯಂಟ್ ಅನ್ನು ಬಿಡುಗಡೆ ಮಾಡಲಾಗಿತ್ತು.

ಮಾರಾಟದಲ್ಲಿ ಮುನ್ನುಗ್ಗುತ್ತಿರುವ ಹೋಂಡಾ ಅಮೇಜ್ ಕಾರುಗಳಾ ಮೇಲೆ ಸಂಸ್ಥೆಯು ಇನ್ನಷ್ಟು ಮಾರಾಟದ ಸಂಖ್ಯೆಯನ್ನು ಕಾಣಲು ಈ ಕಾರಿನ ಮೇಲೆ ವಿಶೇಷ ರಿಯಾಯಿತಿಯನ್ನು ನೀಡುತ್ತಿದೆ. ಹೊಸ ಹೋಂಡಾ ಅಮೇಜ್ ಕಾರಿನ ಖರೀದಿ ಮೇಲೆ ಸಂಸ್ಥೆಯು ಸುಮಾರು 42000 ಸಾವಿರದ ನಗದು ರಿಯಾಯಿತಿಯನ್ನು ನೀಡುತ್ತಿದ್ದು, ಇದು ಹೊಸ ಸೆಡಾನ್ ಕಾರು ಖರೀದಿ ಮಾಡುವವರಿಗೆ ಸುವರ್ಣಾವಕಾಶವಾಗಿದೆ.

ಮೇ 18, 2018ರಂದು ಬಿಡುಗಡೆಗೊಂಡ ಹೋಂಡಾ ಅಮೇಜ್ ಕಾರುಗಳು ಮೊದಲ ಮೂರು ತಿಂಗಳಿನಲ್ಲಿ 30000 ಮಾರಾಟ ಮತ್ತು 5 ತಿಂಗಳಿನಲ್ಲಿ 50000 ಸಂಖ್ಯೆಯಲ್ಲಿ ಮಾರಾಟವಾಗಿದೆ. ಇನ್ನು 11 ತಿಂಗಳಿನಲ್ಲಿ 85000 ಬುಕ್ಕಿಂಗ್ ಪದೆದು ಹೋಂಡಾ ಸಂಸ್ಥೆಯಲ್ಲಿ ಅತೀ ಕಡಿಮೆ ಗಡುವಿನಲ್ಲಿ ಹೆಚ್ಚು ಮಾರಾಟವಾದ ಕಾರು ಎಂಬ ಹೆಗ್ಗಳಿಕೆಯನ್ನು ಸಹ ಈ ಕಾರು ಪಡೆದಿದೆ.

ಹೋಂಡಾ ಅಮೇಜ್ ಕಾರುಗಳು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ.5.95ರ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು, ಇನ್ನು ಉನ್ನತ್ತ ಮಟ್ಟದ ಆವೃತ್ತಿಯ ಬೆಲೆಯನ್ನು ರೂ.9.80 ಲಕ್ಷಕ್ಕೆ ಮಾರಾಟಗೊಳ್ಳುತ್ತಿದೆ ಮತ್ತು ಮಾರುತಿ ಸುಜುಕಿ ಡಿಜೈರ್, ಹ್ಯುಂಡೈ ಎಕ್ಸ್ಸೆಂಟ್ ಮತ್ತು ಟಾಟಾ ಟಿಗೋರ್ ಕಾರುಗಳಿಗೆ ತ್ರೀವ ಪೈಪೋಟಿ ನೀಡುತ್ತಿದೆ.

ಹೋಂಡಾ ಸಂಸ್ಥೆಯು ಬಿಡುಗಡೆ ಮಾಡಿರುವ ಅಮೇಜ್ ಕಾರುಗಳು ಒಟ್ಟು ನಾಲ್ಕು ಮಾದರಿಯಲ್ಲಿ ಖರೀದಿ ಲಭ್ಯವಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಇ, ಎಸ್, ವಿ ಮತ್ತು ವಿಎಕ್ಸ್ ವೆರಿಯೆಂಟ್‌ಗಳನ್ನು ಆಯ್ಕೆ ಮಾಡಬಹುದಾಗಿದೆ. ಹೀಗಾಗಿ ವೇರಿಯೆಂಟ್‌ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ನಿಗದಿ ಮಾಡಲಾಗಿದೆ.

ಸ್ಪೋರ್ಟಿ ಲುಕ್ ಹೊಂದಿರುವ ಅಮೇಜ್ ಕಾರುಗಳು ಎರಡನೇ ತಲೆಮಾರಿನ ಶಾರ್ಪರ್ ಆಂಗಲ್ಸ್, ಬೋಲ್ಡರ್ ಡಿಸೈನ್ ಹಾಗೂ ಆಂಗ್ಯೂಲರ್ ಹೆಡ್‍ಲ್ಯಾಂಪ್‍ಗಳನ್ನು ಪಡೆದುಕೊಂಡಿದ್ದು, 15 ಇಂಚಿನ ಅಲಾಯ್ ವೀಲ್‍ಗಳು, ಹಿಂಭಾಗದ ವಿನ್ಯಾಸದಲ್ಲಿ ಹೊಸ ಪ್ರೇರಣೆಯ ಕ್ರೋಮ್ ಸ್ಟ್ರಿಪ್, ಸಿ ಟೈಪ್ ಟೈಲ್ ಲೈಟ್ಸ್ ಗಳನ್ನು ಪಡೆದಿದಿರುವುದು ಆಕರ್ಷಕವಾಗಿದೆ.

ಎಂಜಿನ್ ವೈಶಿಷ್ಟ್ಯತೆಗಳು
ಹೊಸ ಅಮೇಜ್ ಕಾರುಗಳು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನಲ್ಲಿ ಖರೀದಿಸಬಹುದಾಗಿದ್ದು, ಪೆಟ್ರೋಲ್ ಆವೃತ್ತಿಯು 89-ಬಿಎಚ್‌ಪಿ, 110-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ ಡಿಸೇಲ್ ಆವೃತ್ತಿಯು 99-ಬಿಎಚ್‌ಪಿ, 200-ಎನ್ಎಂ ಉತ್ಪಾದನೆ ಮಾಡಬಲ್ಲವು.

ಇದಲ್ಲದೇ ಹೊಸ ಕಾರುಗಳಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿದ್ದು, ಮ್ಯಾನುವಲ್‌ಗಿಂತ ಡಿಸೇಲ್ ಆವೃತ್ತಿಗಿಂತ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರುವ ಡಿಸೇಲ್ ಆವೃತ್ತಿಯು 79-ಬಿಎಚ್‌ಪಿ ಮತ್ತು 160-ಎನ್ಎಂ ಟಾರ್ಕ್ ಮಾತ್ರ ಉತ್ಪಾದಿಸಲಿವೆಯೆಂತೆ.

ಕಾರಿನ ಒಳವಿನ್ಯಾಸ
ಹೊಸ ಅಮೇಜ್ ಕಾರುಗಳು ಎಲ್ಇಡಿ ಡಿಎಲ್‍ಆರ್, ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್, ಆಪಲ್ ಕಾರ್ ಪ್ಲೇ ಹಾಗೂ ಆಂಡ್ರಾಯ್ಡ್ ಆಟೋ ಅನ್ನು ಒಳಗೊಂಡ ಟಚ್ ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಕ್ಲೈಮೆಟ್ ಕಂಟ್ರೋಲರ್, ಸ್ಟೀರಿಂಗ್ ಮೌಟೆಂಡ್ ಕಂಟ್ರೋಲರ್ ಮತ್ತು ಪೆಡಲ್ ಶಿಫ್ಟರ್ಸ್ ಅನ್ನು ಅಳವಡಿಸಲಾಗಿದೆ.

ಜೊತೆಗಗೆ ಕೀ ಲೇಸ್ ಎಂಟ್ರಿ, ಎಬಿಎಸ್, ಇಬಿಡಿ, ಸೆಂಟ್ರಲ್ ಲಾಕಿಂಗ್, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಕ್ರೂಸ್ ಕಂಟ್ರೋಲರ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ ಜೊತೆ ಸೆನ್ಸಾರ್ ಒದಗಿಸಲಾಗಿದ್ದು, ಮಾರುತಿ ಡಿಜೈರ್, ಹ್ಯುಂಡೈ ಎಕ್ಸ್ಸೆಂಟ್ ಮತ್ತು ಟಾಟಾ ಟಿಗೋರ್ ಕಾರುಗಳಿಗೆ ತ್ರೀವ ಪೈಪೋಟಿ ನೀಡುತ್ತಿದೆ.


Click it and Unblock the Notifications