ಬಿಡುಗಡೆಯಾಯ್ತು ಹೋಂಡಾ ಕಂಪನಿಯ ಮೊದಲ ಬಿಎಸ್-6 ಎಂಜಿನ್ ಕಾರು
ಹೋಂಡಾ ಕಂಪನಿಯು ಭಾರತದಲ್ಲಿ ಬಿಎಸ್-6 ಪೆಟ್ರೋಲ್ ಎಂಜಿನ್ ಹೊಂದಿರುವ ಸಿಟಿ ಕಾರ್ ಅನ್ನು ಬಿಡುಗಡೆಗೊಳಿಸಿದೆ. ಹೋಂಡಾ ಸಿಟಿ ಮಾದರಿಯು ಹೋಂಡಾ ಕಂಪನಿಯ ಸರಣಿಯ ಕಾರುಗಳಲ್ಲಿ ಹಲವು ವರ್ಷಗಳಿಂದ ಹೆಚ್ಚು ಮಾರಾಟವಾಗುವ ಕಾರ್ ಆಗಿದೆ.

ಬಿಎಸ್-6 ಹೋಂಡಾ ಸಿಟಿ ಕಾರಿನ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.9.91 ಲಕ್ಷಗಳಾಗಿದೆ. ಹೋಂಡಾ ಕಂಪನಿಯ ಸರಣಿಯಲ್ಲಿ ಬಿಡುಗಡೆಯಾದ ಮೊದಲ ಬಿಎಸ್-6 ಎಂಜಿನ್ ಹೊಂದಿರುವ ಕಾರು ಹೋಂಡಾ ಸಿಟಿಯಾಗಿದೆ. ಹೋಂಡಾ ಸಿಟಿ ಕಾರು ಭಾರತದ ಮಾರುಕಟ್ಟೆಯಲ್ಲಿ ಮಾರುತಿ ಸಿಯಾಜ್ ಮತ್ತು ಹ್ಯುಂಡೈ ವರ್ನಾ ಕಾರುಗಳಿಗೆ ಪೈಪೋಟಿ ನೀಡುತ್ತದೆ.

ಹೊಸ ಹೋಂಡಾ ಸಿಟಿ ಕಾರು ಶಾರ್ಪರ್ ಹೆಡ್‍ಲ್ಯಾಂಪ್‍ಗಳನ್ನು ಹೊಂದಿರಲಿದೆ. ಇನ್ನೂ ಈ ಕಾರಿನ ಮುಂಭಾಗ ಮತ್ತು ಹಿಂಭಾಗದಲ್ಲಿ ಎಲ್‍ಇಡಿ ಯುನಿಟ್‍ಗಳು, ಹೋಂಡಾ ಸಿಗ್ನೇಚರ್ ಕ್ರೋಮ್ ಬಾರ್, ಕೂಪ್ ಸ್ಟೈಲ್ ಸ್ಲೋಪಿಂಗ್ ರೂಫ್‍ಲೈನ್ ಮತ್ತು ದೊಡ್ಡ ಒಆರ್‍ವಿಎಂಗಳಿವೆ.

ಹೊಸ ಹೋಂಡಾ ಸಿಟಿ ಕಾರಿಗೆ ಡೈಮಂಡ್ ಕಟ್ ಅಲಾಯ್ ವ್ಹೀಲ್‍ಗಳು ವಿಶೇಷ ಲುಕ್ ನೀಡಿವೆ. ಟೇಲ್‍ಲೈಟಿನಲ್ಲಿ ಎಲ್‍ಇಡಿ ಲ್ಯಾಂಪ್‍ಗಳನ್ನು ಅಳವಡಿಸಲಾಗಿದೆ. ಬಂಪರ್ ಸಿಸ್ಟಂಗಳು ವಿಶೇಷವಾಗಿದ್ದು ಬಲಶಾಲಿಯಾಗಿವೆ.

ಪೀಚರ್ಸ್
ಹೊಸ ಹೋಂಡಾ ಸಿಟಿ ಕಾರಿನ ಇಂಟಿರಿಯರ್‍ನಲ್ಲಿ ಡ್ಯುಯಲ್ ಟೋನ್ ಸಿಸ್ಟಂ, ಅಡ್ಜಸ್ಟ್ ಮಾಡಬಹುದಾದ ಹಿಂಭಾಗದ ಹೆಡ್‍ರೆಸ್ಟ್, ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್, ಹೊಸ 7 ಇಂಚಿನ ಟಚ್‍ಸ್ಕ್ರೀನ್ ಇನ್ಪೋಟೇನ್‍ಮೆಂಟ್ ಸಿಸ್ಟಂಗಳಿವೆ. ಅ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಸಿಸ್ಟಂ ಅನ್ನು ಅಳವಡಿಸಲಾಗಿದೆ.

ಇನ್ನೂ ಸ್ಯಾಟಲೈಟ್-ಲಿಂಕ್ಡ್ ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಲೈವ್ ಟ್ರಾಫಿಕ್ ಸಂಪೋರ್ಟ್ ಯುಎಸ್‌ಬಿ ವೈ-ಫೈ ರಿಸೀವರ್, ವಾಯ್ಸ್ ಕಾಮಂಡ್, ಬ್ಲೂಟೂತ್ ಹ್ಯಾಂಡ್‌ಫ್ರೀ ಟೆಲಿಫೋನಿ ಮತ್ತು ಆಡಿಯೊ ಮತ್ತು ವೈರ್‌ಲೆಸ್ ಇನ್ಫ್ರಾರೆಡ್ ರಿಮೋಟ್‍ಗಳನ್ನು ಹೊಂದಿದೆ.

ಸುರಕ್ಷತಾ ಫೀಚರ್ಸ್
ಹೊಸ ಹೋಂಡಾ ಸಿಟಿ ಕಾರಿನಲ್ಲಿ ಸುರಕ್ಷತೆಗಾಗಿ 6 ಏರ್‍ಬ್ಯಾಗ್, ಮಲ್ಟಿ ಆಂಗಲ್ ರೇರ್ ವೀವ್ ಕ್ಯಾಮರಾ, ಹಿಲ್ ಸ್ಟಾರ್ಟ್ ಅಸಿಸ್ಟ್, ವೆಹಿಕಲ್ ಸ್ಟಾಬಿಲಿಟಿ ಮ್ಯಾನೇಜ್‍ಮೆಂಟ್ ಸಿಸ್ಟಂ ಹಾಗೂ ಎಬಿಎಸ್ ಬ್ರೇಕಿಂಗ್ ಸಿಸ್ಟಂ ಸೇರಿದಂತೆ ಹಲವಾರು ಸುರಕ್ಷಾ ಫೀಚರ್‍ಗಳನ್ನು ನೀಡಲಾಗುವುದು.
MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಹೊಸ ಸಿಟಿ ಕಾರಿನಲ್ಲಿ 1.5 ಲೀಟರ್ 4 ಸಿಲಿಂಡರ್, ವಾಟರ್ ಕೂಲ್ಡ್, ಎಸ್‍ಇಹೆಚ್‍ಸಿ, ಬಿಎಸ್-6 ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 119 ಬಿಹೆಚ್‍ಪಿ ಪವರ್ ಮತ್ತು 145 ಎನ್‍ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ಮತ್ತು ಸಿವಿಟಿ ಆಯ್ಕೆಯನ್ನು ನೀಡಲಾಗಿದೆ. ಇದರೊಂದಿಗೆ 7 ಸ್ಪೀಡ್ ಪ್ಯಾಡಲ್ ಶಿಫ್ಟರ್ ಆಫರ್ ಕೂಡ ಇದೆ. ಸಿವಿಟಿ ಆವೃತ್ತಿಯು ಪ್ರತಿ ಲೀಟರಿಗೆ 17.4 ಕಿ.ಮೀ ಮೈಲೇಜ್ ನೀಡುತ್ತದೆ.
MOST READ: ಪ್ರತಿ ಲೀಟರ್ ನೀರಿಗೆ 35 ಕಿ.ಮಿ ಮೈಲೇಜ್ ನೀಡುವ ಕಾರ್ ಎಂಜಿನ್ ಸಿದ್ದಪಡಿಸಿದ 21 ವರ್ಷದ ಯುವಕ

ಡ್ರೈವ್‍ಸ್ಪಾರ್ಕ್ ಅಭಿಪ್ರಾಯ
2020ರ ಏಪ್ರಿಲ್ 1ರಿಂದ ಬಿಎಸ್-6 ನಿಯಮ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಹೊಸ ವಾಹನದ ಎಂಜಿನ್‌ನಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ಹೊಸ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಈ ಕಾರಿನ ಎಂಜಿನ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಹೋಂಡಾ ಕಂಪನಿಯು ಹೊಸ ಬಿಎಸ್-6 ಕಾರ್ ಅನ್ನು ಬಿಡುಗಡೆ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ.


Click it and Unblock the Notifications








