ದುಬಾರಿ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ನೆಕ್ಸ್ಟ್ ಜನರೇಷನ್ ಸಿಟಿ ಸೆಡಾನ್ ಕಾರು ಭಾರತದಲ್ಲಿ 2020ರ ಫೆಬ್ರುವರಿ ಅಂತ್ಯಕ್ಕೆ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಎಂಜಿನ್ ಆಯ್ಕೆಯಲ್ಲಿ ಹೊಸ ಕಾರು ಮಹತ್ವದ ಬದಲಾವಣೆ ಪಡೆದುಕೊಂಡಿರುವ ಹೊಸ ಕಾರು ಬೆಲೆಯಲ್ಲೂ ತುಸು ದುಬಾರಿ ಎನ್ನಿಸಲಿದೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಹೋಂಡಾ ಬಹುನೀರಿಕ್ಷಿತ ಸಿಟಿ ನೆಕ್ಸ್ಟ್ ಜನರೇಷನ್ ಕಾರು ಬಿಡುಗಡೆಗೆ ದಿನಗಣನೆ ಶುರುವಾಗಿದ್ದು, ಹೊಸ ಕಾರಿನ ಪೆಟ್ರೋಲ್ ಆವೃತ್ತಿಯ ಬೆಲೆಗಳ ಕುರಿತಾಗಿ ಮಾಹಿತಿ ಲಭ್ಯವಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರಿಗಿಂತಲೂ ನೆಕ್ಸ್ ಜನರೇಷನ್ ಪೆಟ್ರೋಲ್ ಕಾರಿನ ಬೆಲೆಯು ರೂ.10 ಸಾವಿರದಿಂದ 15 ಸಾವಿರದಷ್ಟು ದುಬಾರಿಯಾಗಲಿದ್ದರೆ ಡೀಸೆಲ್ ಕಾರು ಆವೃತ್ತಿಯ ಬೆಲೆಯು ಪ್ರಸ್ತುತ ಮಾರುಕಟ್ಟೆಯಲ್ಲಿ ಬೆಲೆಗಿಂತಲೂ ಒಂದು ಲಕ್ಷಕ್ಕೂ ಅಧಿಕ ಬೆಲೆಯೊಂದಿಗೆ ರಸ್ತೆಗಿಳಿಯಲಿದೆ ಎನ್ನಲಾಗಿದೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಹೋಂಡಾ ಸಂಸ್ಥೆಯು ಇದೇ ಮೊದಲ ಬಾರಿಗೆ ಸಿಟಿ ಸೆಡಾನ್‌ನಲ್ಲಿ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಮಾದರಿಯನ್ನು ಕೂಡಾ ಬಿಡುಗಡೆಗೊಳಿಸುತ್ತಿದ್ದು, ಹೈಬ್ರಿಡ್ ಎಂಜಿನ್‌ನಿಂದಾಗಿ ಹೊಸ ಕಾರಿನ ಮೈಲೇಜ್ ಪ್ರಮಾಣವು ಸಾಮಾನ್ಯ ಪೆಟ್ರೋಲ್ ಕಾರಿಗಿಂತಲೂ ಶೇ.33 ರಷ್ಟು ಹೆಚ್ಚು ಮೈಲೇಜ್ ಹಿಂದಿರುಗಿಸಲಿದೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಕಳೆದ ಮಾರ್ಚ್‌ನಲ್ಲಿ ಸಿವಿಕ್ ಬಿಡುಗಡೆಯ ನಂತರ ಸಿಟಿ ಸೆಡಾನ್ ಕಾರಿನ ಮೇಲೆ ಹೆಚ್ಚಿನ ಗಮನಹರಿಸಿರುವ ಹೋಂಡಾ ಸಂಸ್ಥೆಯು 2020ರ ಫೆಬ್ರುವರಿ 7ರಿಂದ 14ರ ತನಕ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಹೊಸ ಕಾರನ್ನು ಪ್ರದರ್ಶನ ಮಾಡಿದ ನಂತರವಷ್ಟೇ ಬಿಡುಗಡೆ ಮಾಡಲಿದೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸಿಟಿ ಕಾರಿಗಿಂತಲೂ ಹೊಸ ತಲೆಮಾರಿನ ಆವೃತ್ತಿಯು ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿದ್ದು, 2014ರಲ್ಲಿ 4ನೇ ತಲೆಮಾರಿನ ಸಿಟಿ ಸೆಡಾನ್ ಕಾರು ಬಿಡುಗಡೆ ಮಾಡಿದ ಬಳಿಕ ಯಾವುದೇ ಬದಲಾವಣೆ ತರದ ಹೋಂಡಾ ಸಂಸ್ಥೆಯು ಇದೇ ಮೊದಲ ಬಾರಿಗೆ ಹೈಬ್ರಿಡ್ ಎಂಜಿನ್ ಪರಿಚಯಿಸುತ್ತಿದೆ.

5ನೇ ತಲೆಮಾರಿನ ಸಿಟಿ ಸೆಡಾನ್ ಕಾರು ಪ್ರಸ್ತುತ ಮಾದರಿಗಿಂತಲೂ ತುಸು ದೊಡ್ಡ ಗಾತ್ರವನ್ನು ಹೊಂದಿದ್ದು, ಬೂಟ್ ಸ್ಪೆಸ್ ಜೊತೆಗೆ ಹಿಂಬದಿಯ ಸವಾರರಿಗೆ ವಿಸ್ತರಿತ ಲೆಗ್ ರೂಂ ಮತ್ತು ಹೆಡ್ ರೂಂ ನೀಡಿರುವುದು ಮತ್ತಷ್ಟು ಆರಾಮದಾಯಕ ಪ್ರಯಾಣಕ್ಕೆ ಅನುಕೂಲಕರವಾಗಲಿದೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಸದ್ಯ ಥೈಲ್ಯಾಂಡ್‌ನಲ್ಲಿ ಹೊಸ ತಲೆಮಾರಿನ ಕಾರಿನ ಟೆಸ್ಟಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವ ಹೋಂಡಾ ಸಂಸ್ಥೆಯು ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಹೊಸ ಕಾರಿನ ಎಂಜಿನ್ ಅನ್ನು ಅಲ್ಲಿಯೇ ಅಭಿವೃದ್ಧಿಪಡಿಸಿದೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಥೈಲ್ಯಾಂಡ್‌ನಲ್ಲಿರುವ ಹೋಂಡಾ ಕಾರು ಉತ್ಪಾದನಾ ಘಟಕವು ಏಷ್ಯಾದ ಅತಿದೊಡ್ಡ ಕಾರು ಉತ್ಪಾದನಾ ಘಟಕ ಎಂಬ ಹೆಗ್ಗಳಿಕೆ ಹೊಂದಿದ್ದು, ಇಲ್ಲಿಂದಲೇ ಹೊಸ ಸಿಟಿ ಸೆಡಾನ್ ಕಾರು ಅಂತಿಮ ರೂಪ ಪಡೆದುಕೊಂಡು ಭಾರತಕ್ಕೆ ಪ್ರವೇಶಿಸಲಿದೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಹೊಸ ಸಿಟಿ ಸೆಡಾನ್ ಕಾರಿನಲ್ಲಿ ಈ ಬಾರಿ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಮಾರುತಿ ಸುಜುಕಿ ಸಿಯಾಜ್ ಮತ್ತು ಹ್ಯುಂಡೈ ವೆರ್ನಾ ಕಾರಿಗೆ ಮಾತ್ರವಲ್ಲದೇ ಟೊಯೊಟಾ ಕರೊಲ್ಲಾ ಆಟ್ಲಿಸ್ ಕಾರಿಗೂ ಇದು ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಎಂಜಿನ್ ಸಾಮರ್ಥ್ಯ

ಹೊಸ ತಲೆಮಾರಿನ ಹೋಂಡಾ ಕಾರು ಈ ಬಾರಿ ಸಾಮಾನ್ಯ ಮಾದರಿಯ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನಲ್ಲಿ ಮಾತ್ರವಲ್ಲದೇ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಯು ಪರ್ಫಾಮೆನ್ಸ್ ಪ್ರಿಯರನ್ನು ಮತ್ತಷ್ಟು ಸೆಳೆಯಲಿದೆ.

ದುಬಾರಿ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಜೊತೆಗೆ 2020ರ ಏಪ್ರಿಲ್ 1ರಿಂದ ಬಿಎಸ್-6 ನಿಯಮ ಜಾರಿಗೆ ಹಿನ್ನೆಲೆಯಲ್ಲಿ ಹೊಸ ವಾಹನ ಎಂಜಿನ್‌ನಲ್ಲಿ ಸಾಕಷ್ಟು ಬದಲಾವಣೆ ಕಂಡುಬರುತ್ತಿದ್ದು, ಈ ಹಿಂದಿಗಿಂತಲೂ ಶೇ.25 ರಷ್ಟು ಹೊಗೆ ಉಗುಳುವ ಪ್ರಮಾಣ ಕಡಿಮೆಯಾದಲ್ಲಿ, ಮೈಲೇಜ್ ಪ್ರಮಾಣದಲ್ಲೂ ಹೆಚ್ಚಳವಾಗಲಿದೆ.

Source:autocarindia

Most Read Articles

Kannada
Read more on ಹೋಂಡಾ honda
English summary
Honda city bs6 petrol car expected price details. Read in Kannada.
Story first published: Saturday, November 16, 2019, 20:36 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X